ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ 2022ರಲ್ಲಿ ನಡೆದ ಭಾರತ್ ಜೋಡೋ ಯಾತ್ರೆ ಕರ್ನಾಟಕ ಪ್ರವೇಶಿಸಿದ ದಿನದ ಹಿನ್ನೆಲೆಯಲ್ಲಿ ‘ಭಾರತ್ ಜೋಡೋ-2’ ಪಾದಯಾತ್ರೆ ನಡೆಸಲು ಕೆಪಿಸಿಸಿ ನಿರ್ಧರಿಸಿದೆ. ಸೆಪ್ಟೆಂಬರ್ 30ರಿಂದ ಈ ಯಾತ್ರೆ ಆರಂಭವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ತಿಳಿಸಿದ್ದಾರೆ 2022ರ ಸೆಪ್ಟೆಂಬರ್ 30ರಂದು ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಚಾಮರಾಜನಗರದ ಗುಂಡ್ಲುಪೇಟೆ ಮೂಲಕ ಕರ್ನಾಟಕ ಪ್ರವೇಶಿಸಿತ್ತು. ಈ ಸಂದರ್ಭದಲ್ಲಿ ರಾಜ್ಯದ 11 …
Read More »Monthly Archives: ಸೆಪ್ಟೆಂಬರ್ 2026
ರೈತರ ಬಗ್ಗೆ ಹಗುರವಾಗಿ ಮಾತನಾಡಿದ ಸಿಎಂ ಕ್ಷಮೆಯಾಚಿಸಲಿ: ಎ.ಎಸ್.ಪಾಟೀಲ್ ನಡಹಳ್ಳಿ
ಬೆಂಗಳೂರು: ವಿಶೇಷ ಅಧಿವೇಶನದಲ್ಲಿ ರೈತರ ಕುರಿತು ಹಗುರವಾಗಿ ಮಾತನಾಡಿರುವ ಮುಖ್ಯಮಂತ್ರಿಗಳು ರಾಜ್ಯದ ಜನರ ಕ್ಷಮೆಯಾಚಿಸಬೇಕು ಎಂದು ಮಾಜಿ ಶಾಸಕ ಹಾಗೂ ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಎ.ಎಸ್. ಪಾಟೀಲ್ ನಡಹಳ್ಳಿ ಅವರು ಆಗ್ರಹಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿನ ಬರದ ಕುರಿತು ಚರ್ಚೆಗೆ ನಡೆಸಿದ ವಿಶೇಷ ಅಧಿವೇಶನ ಕೇವಲ ನಾಮಕಾವಸ್ತೆಗೆ ನಡೆಯಿತು. ಯಾವುದೇ ಗಂಭೀರತೆ ಮುಖ್ಯಮಂತ್ರಿ ಸೇರಿ ಶಾಸಕರಲ್ಲಿ ಇರಲಿಲ್ಲ. ರಾಜ್ಯದಲ್ಲಿ ಭೀಕರ …
Read More »ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಚಿಕ್ಕೋಡಿಯಲ್ಲಿ ಪ್ರತಿಭಟನೆ
ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು ಪ್ರತಿಭಟನೆಯಲ್ಲಿ ಭಾಗವಹಿಸಿದೆ ಮಾತನಾಡಿದಕ್ಕೆ ಕೊಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಲಕ್ಷ್ಮಣ್ ರಾವ್ ಚಿಗಳೆ ಕೇಂದ್ರ ಸರ್ಕಾರ ಹಾಗೂ ಕೇಂದ್ರ ಚುನಾವಣಾ ಆಯುಕ್ತರ ವಿರುದ್ಧ ವಾಗ್ದಾಳಿ ನಡೆಸಿದರು ಎಸ್ ಐಆರ್ ಕುರಿತು ಕಾಂಗ್ರೆಸ್ ಪಕ್ಷದ ನಿಲುವನ್ನು ಫಸ್ಟ್ ಪಡಿಸಿದ ಅಧ್ಯಕ್ಷರು ಮುಂದುಬರು ದಿನಗಳಲ್ಲಿ ಇದನ್ನು ತೀವ್ರ ಹೋರಾಟ ಹಾಗೂ ಮತದಾನದ ಹಕ್ಕನ್ನು ಪುನಸ್ಥಾಪಿಸುವವರೆಗೂ ನಮ್ಮ ಹೋರಾಟ …
Read More »ಮೊಬೈಲ್ ಅಂಗಡಿ ಬೀಗ ಮುರಿದು ಕಳ್ಳತನ – ನಾಲ್ವರು ಶಾಲಾ ವಿದ್ಯಾರ್ಥಿಗಳು ಅರೆಸ್ಟ್
ಕಾರವಾರ: ಮೊಬೈಲ್ ಅಂಗಡಿ ಬೀಗ ಮುರಿದು ಕಳ್ಳತನ ಮಾಡಿದ ನಾಲ್ವರು ಶಾಲಾ ವಿದ್ಯಾರ್ಥಿಗಳನ್ನು ಉತ್ತರ ಕನ್ನಡ ಜಿಲ್ಲೆಯ ಮಂಡಗೋಡು ಠಾಣೆ ಪೊಲೀಸರು ಬಂಧಿಸಿ ವಿವಿಧ ಕಂಪನಿಯ ಮೊಬೈಲ್ ಸೇರಿದಂತೆ ಎಲಕ್ಟ್ರಾನಿಕ್ ಗೆಜೆಟ್ಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರು ವಸತಿ ಶಾಲೆಯೊಂದರಲ್ಲಿ 10ನೇ ತರಗತಿ ವಿದ್ಯಭ್ಯಾಸ ಮಾಡುತ್ತಿದ್ದರು. ನಾಲ್ವರು ವಿದ್ಯಾರ್ಥಿಗಳು ರಾತ್ರಿ ಸುಮಾರು 1 ಗಂಟೆ ಸುಮಾರಿಗೆ ವಸತಿ ನಿಲಯದಿಂದ ಸುಮಾರು ಎರಡು ಕಿಮೀ ದೂರದಲ್ಲಿರುವ ಮುಂಡಗೋಡು ಪಟ್ಟಣಕ್ಕೆ ಬಂದಿದ್ದು ಮೊದಲು ಯಲ್ಲಾಪುರ …
Read More »ಕೇಂದ್ರದ 3 ತಂಡಗಳು ರಾಜ್ಯಕ್ಕೆ, ಬರ ಪರಿಸ್ಥಿತಿಯ ಅಧ್ಯಯನ: ಪರಮೇಶ್ವರ್
ಬೆಂಗಳೂರು: ರಾಜ್ಯ ಸರ್ಕಾರದ ಮನವಿ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಮೂರು ತಂಡಗಳು ಕರ್ನಾಟಕಕ್ಕೆ ಆಗಮಿಸಿ ಬರ ಪರಿಸ್ಥಿತಿಯ ಕುರಿತು ಅಧ್ಯಯನ ನಡೆಸಲಿವೆ. ತುಮಕೂರು, ಚಿತ್ರದುರ್ಗ, ದಾವಣಗೆರೆ ಭಾಗದಲ್ಲಿ ಒಂದು ತಂಡ, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮತ್ತೊಂದು ತಂಡ ಹಾಗೂ ಮಂಡ್ಯ, ಮೈಸೂರು, ಚಾಮರಾಜನಗರ ಸೇರಿದಂತೆ ಮೈಸೂರು ಭಾಗದಲ್ಲಿ ಮೂರನೇ ತಂಡ ಅಧ್ಯಯನ ನಡೆಸಲಿದೆ ಎಂದು ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ್ ( ಅವರು ತಿಳಿಸಿದರು. ಸದಾಶಿವನಗರದ ನಿವಾಸದ ಬಳಿ …
Read More »ಉಜ್ಜಯಿನಿಯಲ್ಲಿ ರಸ್ತೆ ಅಗಲೀಕರಣಕ್ಕೆ ಮಸೀದಿಯ ಭಾಗ ತೆರವು: ಪೊಲೀಸರ ಮೇಲೆ ಕಲ್ಲು, ಲಾಠಿಚಾರ್ಜ್
ಭೋಪಾಲ್: ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಸೋಮವಾರ ಅಭಿವೃದ್ಧಿ ಕಾಮಗಾರಿ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ತೀವ್ರ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಸಂಘರ್ಷ ನಡೆದಿದೆ. ರಸ್ತೆ ಅಗಲೀಕರಣ ಕಾಮಗಾರಿಯ ಅಂಗವಾಗಿ ಐತಿಹಾಸಿಕ ಶಾಹಿ ಮಸೀದಿಯ ಒಂದು ಭಾಗವನ್ನು ತೆರವುಗೊಳಿಸುತ್ತಿದ್ದ ವೇಳೆ ಕೆಲವರು ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಅಶ್ರುವಾಯು ಪ್ರಯೋಗ ಮತ್ತು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಸದ್ಯ ಮುನ್ನೆಚ್ಚರಿಕಾ ಕ್ರಮವಾಗಿ ಶಾಹಿ ಮಸೀದಿ …
Read More »ಬಾಕಿ ಟ್ರಾಫಿಕ್ ಚಲನ್ ವಸೂಲಿಗೆ ವಿದ್ಯುತ್ ಬಿಲ್ ಲಿಂಕ್ ಮಾಡಿ: ಸುಪ್ರೀಂ ಕೋರ್ಟ್
ನವದೆಹಲಿ: ಸಂಚಾರ ನಿಯಮ ಉಲ್ಲಂಘನೆಯ ಬಾಕಿ ಇ-ಚಲನ್ ದಂಡವನ್ನು ವಸೂಲಿ ಮಾಡಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಬಾಕಿ ಚಲನ್ಗಳನ್ನು ವಿದ್ಯುತ್ ಬಿಲ್ಗಳೊಂದಿಗೆ ಜೋಡಿಸುವ ಸಾಧ್ಯತೆಯನ್ನು ಪರಿಶೀಲಿಸಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ ಮಹತ್ವದ ಸಲಹೆ ನೀಡಿದೆ. ಟ್ರಾಫಿಕ್ ಉಲ್ಲಂಘನೆಗಳ ಎಲೆಕ್ಟ್ರಾನಿಕ್ ಜಾರಿ ಹಾಗೂ ಬಾಕಿ ಉಳಿದಿರುವ ದಂಡದ ವಸೂಲಾತಿಗೆ ಸಂಬಂಧಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಬಿ. ಪಾರ್ದೀವಾಲಾ ಮತ್ತು ನ್ಯಾಯಮೂರ್ತಿ ಕೆ.ವಿ. ವಿಶ್ವನಾಥನ್ ಅವರಿದ್ದ ಪೀಠವು ಈ …
Read More »ಮೈಸೂರು ದಸರಾ – ಯತೀಂದ್ರ ಅಬ್ಬರಕ್ಕೆ ಡಿಕೆಶಿ ಬ್ರೇಕ್!
ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಆರಂಭದ ಹೊಸ್ತಿಲಲ್ಲೇ ಆಡಳಿತಾರೂಢ ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಫೋಟಗೊಂಡಂತೆ ಕಾಣುತ್ತಿದೆ. ಈ ಬಾರಿಯ ದಸರಾ ಆಚರಣೆಗೆ ಸರ್ಕಾರ ಕೈಗೊಂಡಿರುವ ದಿಢೀರ್ ನಿರ್ಧಾರವೊಂದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಅವರ ಪ್ರಾಬಲ್ಯಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಂತ್ರ ರೂಪಿಸಿ ಬ್ರೇಕ್ ಹಾಕಿದ್ದಾರಾ ಎಂಬ ಚರ್ಚೆಗಳು ರಾಜಕೀಯ ವಲಯದಲ್ಲಿ ಆರಂಭವಾಗಿದೆ. ಮೈಸೂರು …
Read More »ದರ್ಶನ್ಗೆ ಬಿಗ್ ಶಾಕ್- ಮುಚ್ಚಿದ ಕೊಠಡಿಯಲ್ಲಿ ಪ್ರದೋಷ್ ಮಾಫಿ ಸಾಕ್ಷ್ಯ ದಾಖಲು
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಇತರ ಆರೋಪಿಗಳಿಗೆ ಭಾರೀ ಕಾನೂನು ಸಂಕಷ್ಟ ಎದುರಾಗಿದೆ. ಪ್ರಕರಣದ 14ನೇ ಆರೋಪಿ (A-14) ಪ್ರದೋಷ್ ಸೋಮವಾರ ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಅಧಿಕೃತವಾಗಿ ಮಾಫಿ ಸಾಕ್ಷ್ಯ ಹೇಳಿಕೆ ದಾಖಲಿಸಿದ್ದಾರೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಗಿ ಪೊಲೀಸ್ ಭದ್ರತೆಯಲ್ಲಿ ಪ್ರದೋಷ್ ಅವರನ್ನು ಸೆಷನ್ಸ್ ಕೋರ್ಟ್ಗೆ ಕರೆತಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಯಿತು. ಈ ಸಂದರ್ಭದಲ್ಲಿ ದರ್ಶನ್ ಪರ ವಕೀಲರು …
Read More »ಡಿಜೆ ಬಳಕೆಗೆ ಅನುಮತಿ ನೀಡದ್ದಕ್ಕೆ ಆಕ್ರೋಶ; ಗಣೇಶ ವಿಸರ್ಜನೆ ಅರ್ಧಕ್ಕೆ ನಿಲ್ಲಿಸಿ ಮರುಪ್ರತಿಷ್ಠಾಪನೆ
ಹಾವೇರಿ: ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಡಿಜೆ ಬಳಕೆಗೆ ಪೊಲೀಸರು ಅನುಮತಿ ನೀಡದಿದ್ದಕ್ಕೆ ಆಕ್ರೋಶಗೊಂಡ ಯುವಕರು, ವಿಸರ್ಜನಾ ಮೆರವಣಿಗೆಯನ್ನು ಅರ್ಧದಲ್ಲೇ ನಿಲ್ಲಿಸಿ ಗಣೇಶ ಮೂರ್ತಿಯನ್ನು ವಾಪಸ್ ತಂದು ಮರುಪ್ರತಿಷ್ಠಾಪನೆ ಮಾಡಿದ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ನಡೆದಿದೆ. ಚಿಕ್ಕೇರೂರು ಗ್ರಾಮದ ಬನಶಂಕರಿ ಗಜಾನನ ಯುವಕ ಸಂಘದ ವತಿಯಿಂದ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಲಾಗಿತ್ತು. ಬಳಿಕ ವಿಸರ್ಜನೆಗಾಗಿ ಮೆರವಣಿಗೆ ಆರಂಭಿಸಲಾಗಿತ್ತು. ಆದರೆ, ನಿಯಮಗಳ ಕಾರಣ ನೀಡಿ ಪೊಲೀಸರು ಡಿಜೆ ಬಳಕೆಗೆ …
Read More »
Laxmi News 24×7