Breaking News

Monthly Archives: ಸೆಪ್ಟೆಂಬರ್ 2026

ಮಣ್ಣಲ್ಲಿ ಮಣ್ಣಾದ ಕಟ್ಟಡಗಳು, ಮೂಲಸೌಕರ್ಯ; ನೇಪಾಳ ಭೀಕರ ಪ್ರವಾಹಕ್ಕೆ ಎಲ್ಲವೂ ನಾಮಾವಶೇಷ

ಕಠ್ಮಂಡು: ನೇಪಾಳದಲ್ಲಿ  ಸಂಭವಿಸಿದ ಭೀಕರ ಜಲಪ್ರಳಯದ ಹೊಡೆತಕ್ಕೆ ಸಿಲುಕಿ ಜನವಸತಿ, ಬೃಹತ್‌ ಕಟ್ಟಡಗಳೆಲ್ಲವೂ ನಾಮಾವಶೇಷವಾಗಿವೆ. ಟಿಬೆಟ್-ನೇಪಾಳ ಗಡಿಯಲ್ಲಿರುವ ಗೈರಾಂಗ್ ಗಡಿ ಠಾಣೆಯು ಪ್ರವಾಹದ ಮಣ್ಣು, ಕಲ್ಲು ಮತ್ತು ಶಿಲಾಖಂಡರಾಶಿಗಳಿಂದ ಕಣ್ಮರೆಯಾಗಿದೆ. ಜಲಪ್ರಳಯ ನಂತರದ ಹೊಸ ವೈಮಾನಿಕ ದೃಶ್ಯಾವಳಿಗಳನ್ನು ನೋಡಿದರೆ, ಅಲ್ಲಿ ಒಂದು ಕಾಲದಲ್ಲಿ ಪ್ರಮುಖ ಗಡಿ ನೆಲೆ ಇದ್ದಿತ್ತೆಂದು ಊಹಿಸುವುದು ಕಷ್ಟ ಎನ್ನುವಂತಾಗಿದೆ. ಸಂಶೋಧಕ ಇಯಾನ್ ಕ್ಯಾಮರೂನ್ ಹಂಚಿಕೊಂಡ ಡ್ರೋನ್ ಚಿತ್ರಣದಲ್ಲಿ ವಿನಾಶವು ಸ್ಪಷ್ಟವಾಗಿ ಗೋಚರಿಸಿದೆ. ಆಗಸ್ಟ್ 26 ರಂದು …

Read More »

ಬೀಳೂರು ಅಜ್ಜನ ಶಿಕ್ಷಣ ಸೇವೆ ಇಂದಿಗೂ ಆದರ್ಶ: ಡಾ. ಕಟಗಿಹಳ್ಳಿಮಠ

ಬಾಗಲಕೋಟೆ : ಜನರಲ್ಲಿ ಶಿಕ್ಷಣ, ಸಂಸ್ಕಾರ, ಸದಾಚಾರ ಹಾಗೂ ಸಾಮಾಜಿಕ ಜಾಗೃತಿ ಮೂಡಿಸುವಲ್ಲಿ ಮಠಗಳ ಪರಂಪರೆ ಪ್ರಮುಖವಾಗಿದ್ದು, ಶಿಕ್ಷಣ ಕ್ರಾಂತಿಯಲ್ಲಿ ಬೀಳೂರು ಗುರುಬಸವ ಮಹಾಸ್ವಾಮಿಗಳ ಶ್ರಮ ಸ್ಮರಣೀಯವಾಗಿದೆ ಎಂದು ಬಿವ್ಹಿವ್ಹಿ ಸಂಘದ ಆಡಳಿತಾಧಿಕಾರಿಗಳಾದ ಡಾ. ವ್ಹಿ.ಎಸ್. ಕಟಗಿಹಳ್ಳಿಮಠ ಹೇಳಿದರು. ನಗರದ ಬಸವೇಶ್ವರ ಕಲಾ ಮಹಾವಿದ್ಯಾಲಯದಲ್ಲಿ ಎನ್‌‌.ಎಸ್‌.ಎಸ್ ಹಾಗೂ ಎನ್‌ಸಿಸಿ ಘಟಕಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬಿವಿವಿ ಸಂಘದ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮವನ್ನು ಬೀಳೂರು ಗುರುಬಸವ ಮಹಾಸ್ವಾಮೀಜಿಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವುದರ ಮೂಲಕ …

Read More »

ಜನ್ಮಾಷ್ಟಮಿಯಂದು ಶ್ರೀಕೃಷ್ಣನಿಗೆ ಈ ನೈವೇದ್ಯಗಳನ್ನು ಅರ್ಪಿಸಲೇಬೇಕು

ಗೋಕುಲಾಷ್ಟಮಿ, ಕೃಷ್ಣಾಷ್ಟಮಿ ಎಂಬಿತ್ಯಾದಿ ಹೆಸರುಗಳಿಂದ ಕರೆಯಲಾಗುವ ಕೃಷ್ಣ ಜನ್ಮಾಷ್ಟಮಿಯನ್ನುಪ್ರತಿವರ್ಷ ಭಾದ್ರಪದ ಮಾಸದ ಕೃಷ್ಣ ಪಕ್ಷದ ಅಷ್ಟಮಿ ತಿಥಿಯಂದು  ಬಹಳ ವಿಜೃಂಭನೆಯಿಂದ ಆಚರಿಸಲಾಗುತ್ತದೆ. ಜನ್ಮಾಷ್ಟಮಿಯಂದು ಶ್ರೀಕೃಷ್ಣನ ದೇವಾಲಯಗಳಲ್ಲಿ 56 ಬಗೆಯ ನೈವೇದ್ಯಗಳನ್ನು ಅರ್ಪಿಸಲಾಗುತ್ತದೆ. ಅದೇ ರೀತಿ ಭಕ್ತರು ಮನೆಯಲ್ಲಿ ವಿವಿಧ ಖಾದ್ಯಗಳನ್ನು ತಯಾರಿಸಿ ಕೃಷ್ಣನಿಗೆ ನೈವೇದ್ಯವಾಗಿ ಅರ್ಪಿಸುತ್ತಾರೆ. ಈ ಬಾರಿ ಸೆಪ್ಟೆಂಬರ್‌ 5 ರಂದು ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತಿದ್ದು, ಕಷ್ಟಗಳೆಲ್ಲಾ ಕಳೆದು ಇಷ್ಟಾರ್ಥಗಳೆಲ್ಲಾ ಈಡೆರಲು, ಮನೆಯಲ್ಲಿ ಶಾಂತಿ ಸಮೃದ್ಧಿ, ಸಕಾರಾತ್ಮಕತೆ ನೆಲೆಸಲು …

Read More »

ಕಲಬುರಗಿಯಲ್ಲಿ ಭೀಕರ ಅಪಘಾತ – ತಾಯಿಯೊಂದಿಗೆ 3 ತಿಂಗಳ ಮಗು ಸ್ಥಳದಲ್ಲೇ ಸಾವು

ಕಲಬುರಗಿ: ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣ ಹೊರವಲಯದಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿತಾಯಿಯೊಂದಿಗೆ ಮೂರು ತಿಂಗಳ ಮಗು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಆಟೋ – ಲಾರಿ ಮಧ್ಯೆ ಭೀಕರ ಅಪಘಾತ ನಡೆದು ಶರಣಮ್ಮ (30) ಎಂಬ ಮಹಿಳೆ ಮತ್ತು ಆಕೆಯ 3 ತಿಂಗಳ ಮಗು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ. ವಾಡಿ ಪಟ್ಟಣಕ್ಕೆ ಆಗಮಿಸುವ ವೇಳೆ ಆಟೋಗೆ ಲಾರಿ ಡಿಕ್ಕಿಯಾಗಿ ದುರಂತ ಸಂಭವಿಸಿದೆ. ತಾಯಿ ಮತ್ತು ಮಗು ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಅತ್ತೆ ಸಾಬಮ್ಮ, …

Read More »

200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗು ಜನನ – ರಥದಲ್ಲಿ ಕೂರಿಸಿ ಅದ್ದೂರಿ ಸ್ವಾಗತ

ಮುಂಬೈ: ಹೆಣ್ಣು ಮಗು ಬೇಡ ಎಂದು ಭ್ರೂಣ ಹತ್ಯೆ ಮಾಡಿಸುವ ಈ ಕಾಲದಲ್ಲಿ ಹೆಣ್ಣು ಮಗು ಜನಿಸಿದೆ ಎಂದು ಕುಟುಂಬವೊಂದು ರಥದಲ್ಲಿ ಕೂರಿಸಿ ಅದ್ದೂರಿಯಾಗಿ ಸ್ವಾಗತಿಸಿರುವ ಘಟನೆ ಮಹಾರಾಷ್ಟ್ರದ ಬೀಡ್‌ನಲ್ಲಿ ನಡೆದಿದೆ. ಹೌದು, ಈ ಕುಟುಂಬದಲ್ಲಿ ಸುಮಾರು 200 ವರ್ಷಗಳ ಅಂದರೆ ನಾಲ್ಕು ತಲೆಮಾರುಗಳ ಬಳಿಕ ಹೆಣ್ಣು ಮಗು ಜನಿಸಿದೆ. ಹೆರಿಗೆಯಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಕುಟುಂಬಸ್ಥರು ಮಗು ಹಾಗೂ ತಾಯಿಯನ್ನು ರಥದಲ್ಲಿ ಕೂರಿಸಿ, ತಾಳ-ವಾದ್ಯಗಳು ಹಾಗೂ ನೃತ್ಯದೊಂದಿಗೆ …

Read More »

ಮೈಸೂರಿನಲ್ಲಿ ಮತ್ತೊಂದು ʻಗೋಲ್ಡ್ ಸ್ಕ್ಯಾಮ್ʼ – 80ಕ್ಕೂ ಹೆಚ್ಚು ಜನರಿಗೆ ಉಂಡೆನಾಮ!

ಮೈಸೂರು: ನಗರದಲ್ಲಿ ಚಿನ್ನತಂಬಿ ಚಿನ್ನ ವಂಚನೆ ಪ್ರಕರಣ ಮಾಸುವ ಮುನ್ನವೆ ಮತ್ತೊಂದು ಗೋಲ್ಡ್ ಸ್ಕ್ಯಾಮ್ ನಡೆದಿದೆ. ಚಿನ್ನದ ಅಂಗಡಿ ಮಾಲೀಕ ಜನರಿಗೆ ಚಿನ್ನ ಕೊಡುವುದಾಗಿ ಮಾಸಿಕ ಕಂತು ಕಟ್ಟಿಸಿಕೊಂಡು ಉಂಡೆನಾಮ ಹಾಕಿರುವ ಪ್ರಕರಣ ಬೆಳಕಿಗೆ ಬಂದಿದೆ 80 ಕ್ಕೂ ಹೆಚ್ಚು ಜನ ಚಿನ್ನದ ಆಸೆಗೆ ಮಾಸಿಕ ಕಂತು ಕಟ್ಟಿ ಈಗ ಹಣ ಕಳೆದುಕೊಂಡಿದ್ದಾರೆ. ಮೋಹನ್ ಜ್ಯುವೆಲರಿ ಹೆಸರಿನ ಚಿನ್ನದಂಗಡಿಯಲ್ಲಿ ಈ ವಂಚನೆ ನಡೆದಿದೆ. ಮೈಸೂರು ನಗರದ ವಿವೇಕಾನಂದ ವೃತ್ತದಲ್ಲಿನ ಮೋಹನ್‌ …

Read More »

ಸಾಲ ತೀರಿಸಲು ಹಣ ಕೊಟ್ಟಿಲ್ಲವೆಂದು ರಾಡ್‌ನಿಂದ ಹೊಡೆದು ತಂದೆಯನ್ನೇ ಕೊಂದ ಮಗ

ಕೋಲಾರ: ಸಾಲ (Debt) ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಮಗ ಕೊಂದಿರುವ ಘಟನೆ ಕೋಲಾರದಲ್ಲಿ  ನಡೆದಿದೆ. ಇನ್ನೂ ಘಟನೆ ಸಂಬಂಧ 24 ಗಂಟೆಯೊಳಗೆ ಪ್ರಕರಣ ಭೇದಿಸಿ ಆರೋಪಿಯನ್ನ ಬಂಧಿಸಲಾಗಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಸಾಲ ತೀರಿಸಲು ತಂದೆ ಹಣ ನೀಡಲಿಲ್ಲ ಎಂಬ ಕಾರಣಕ್ಕೆ ಕೋಪಗೊಂಡ ಮಗನೇ ತಂದೆಯನ್ನು ಕಬ್ಬಿಣದ ರಾಡ್‌ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಇದಾಗಿದೆ. ಬಂಗಾರಪೇಟೆ ಪಟ್ಟಣದ ವಿಜಯನಗರ …

Read More »

ರಾಹುಲ್ ಗಾಂಧಿ ಸಾರ್ವಕರ್‌ರನ್ನ ಮುಸ್ಲಿಮರ ದ್ವೇಷಿಯಂತೆ ಬಿಂಬಿಸಿದ್ದಾರೆ: ಸಂಬಂಧಿ

ಮುಂಬೈ: ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ ಸಾವರ್ಕರ್ ಅವರು ಮುಸ್ಲಿಮರನ್ನು ದ್ವೇಷಿಸುತ್ತಿರಲಿಲ್ಲ. ಬದಲಿಗೆ ಅವರ ಪ್ರಗತಿಗೆ ಅಗತ್ಯವಾದ ಮಾರ್ಗಗಳನ್ನು ತಮ್ಮ ಬರಹಗಳಲ್ಲಿ ವಿವರಿಸಿದ್ದರು ಎಂದು ಸಾವರ್ಕರ್ ಅವರ ಮೊಮ್ಮಗನ ಮಗ ಸತ್ಯಕಿ ಸಾವರ್ಕರ್ ಪುಣೆ ನ್ಯಾಯಾಲಯಕ್ಕೆ  ತಿಳಿಸಿದ್ದಾರೆ. 2023ರಲ್ಲಿ ಲಂಡನ್‌ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿದ್ದ ಭಾಷಣಕ್ಕೆ ಸಂಬಂಧಿಸಿದಂತೆ ಸತ್ಯಕಿ ಸಾವರ್ಕರ್ ದಾಖಲಿಸಿರುವ ಮಾನಹಾನಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಈ ಪ್ರಕರಣದಲ್ಲಿ ಸತ್ಯಕಿ ಅವರು ಸಾಕ್ಷ್ಯ ಹೇಳಿಕೆ ನೀಡುತ್ತಿದ್ದು, …

Read More »

ಭೂ ಮಂಜೂರಾತಿಗಾಗಿ ಮಾಜಿ ಯೋಧ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ದೇಶಕ್ಕಾಗಿ ಕಾರ್ಗಿಲ್ ಯುದ್ಧದಲ್ಲಿ ಹೋರಾಡಿ, ಶತ್ರುಗಳ ವಿರುದ್ಧ ಹೋರಾಟದ ವೇಳೆ ಕಾಲಿಗೆ ಗಾಯ ಮಾಡಿಕೊಂಡಿದ್ದ ಮಾಜಿ ಯೋಧರೊಬ್ಬರು  ಸರ್ಕಾರದ ನಿರ್ಲಕ್ಷ್ಯ ಧೋರಣೆಯಿಂದ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಕಾರ್ಗಿಲ್ ಯುದ್ಧದಲ್ಲಿ  ಭಾಗಿಯಾಗಿದ್ದ ಶಿವಾನಂದ ರೆಡ್ಡಿ ಆತ್ಮಹತ್ಯೆಗೆ ಯತ್ನಿಸಿರುವ ಮಾಜಿ ಯೋಧ. ಶಿವಾನಂದ ರೆಡ್ಡಿ ಎಂಎಲ್‌ಐ-ಮರಾಠ ಲೈಟ್ ಇನ್ಫೆಂಟ್ರಿ ರೆಜಿಮೆಂಟ್‌ನಲ್ಲಿ ಸೇವೆ ಸಲ್ಲಿಸಿದ್ದರು. ಯುದ್ಧದ ಸಂದರ್ಭದಲ್ಲಿ ಕಾಲಿಗೆ ಗಾಯಗೊಂಡಿದ್ದ ಶಿವಾನಂದ ರೆಡ್ಡಿ ನಿವೃತ್ತಿಯ ಬಳಿಕ ಸರ್ಕಾರದಿಂದ …

Read More »

ತರಗತಿ ನಡೆಯುತ್ತಿದ್ದಗಲೇ ಕೊಠಡಿಯ ಮೇಲ್ಛಾವಣಿ ಕುಸಿತ – ನಾಲ್ವರು ಮಕ್ಕಳಿಗೆ ಗಾಯ

ಬಾಗಲಕೋಟೆ: ತರಗತಿಯಲ್ಲಿ ಶಿಕ್ಷಕರಿಂದ ಮಕ್ಕಳು ಪಾಠ ಕೇಳುತ್ತಿದ್ದ ವೇಳೆಯಲ್ಲೇ ಕೊಠಡಿಯ ಮೇಲ್ಛಾವಣಿಯ ಕಾಂಕ್ರೀಟ್ ದಿಢೀರ್ ಕುಸಿದು ಬಿದ್ದ ಪರಿಣಾಮ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ತಾಂಡಾದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ  ನಡೆದಿದೆ. ದಿನನಿತ್ಯದಂತೆ ತರಗತಿ ನಡೆಯುತ್ತಿದ್ದ ಸಂದರ್ಭದಲ್ಲಿ ಮೇಲ್ಛಾವಣಿಯ ಪ್ಲಾಸ್ಟರಿಂಗ್ ಹಾಗೂ ಕಾಂಕ್ರೀಟ್ ಚೂರುಗಳು ಏಕಾಏಕಿ ಮಕ್ಕಳ ಮೇಲೆ ಬಿದ್ದಿವೆ. ಘಟನೆಯಿಂದ ನಾಲ್ವರು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಗೊಂಡ ವಿದ್ಯಾರ್ಥಿಗಳನ್ನು …

Read More »