Breaking News

Monthly Archives: ಸೆಪ್ಟೆಂಬರ್ 2026

ಚಿಕ್ಕೋಡಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕೋಡಿ: ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದ ಹಾಲತವಾಡಿಯಲ್ಲಿ ಸಭೆ ನಡೆಸಿದ್ದ ಸ್ಥಳದಲ್ಲಿ ಬಿಜೆಪಿ ನಾಯಕರು ಹೋಮ-ಹವನ ನಡೆಸಿ, ಸ್ಥಳವನ್ನು ಶುದ್ಧೀಕರಣ ಮಾಡಿರುವ ಕೃತ್ಯವನ್ನು ಖಂಡಿಸಿ ಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು. ಪಟ್ಟಣದ ಸಂಸದರ ಕಚೇರಿ ಬಳಿಯಿಂದ ಇಂದಿರಾನಗರ ಸರ್ಕಲ್ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ನಿಪ್ಪಾಣಿ ಮುಧೋಳ ರಸ್ತೆ ತಡೆದು, ಮಾನವ ಸರಪಳಿ ನಿರ್ಮಿಸುವ ಮೂಲಕ ಕೇಂದ್ರದ ಬಿಜೆಪಿ …

Read More »

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟಿಸಿದ ಮಾಜಿ ಸೈನಿಕರು

ಬೆಳಗಾವಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಮಾಜಿ ಸೈನಿಕರು ಪ್ರತಿಭಟಿಸಿ ಆಕ್ರೋಶ ಹೊರ ಹಾಕಿದ್ದಾರೆ. ಇಂದು ಬೆಳಗಾವಿ ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಮಾಜಿ ಸೈನಿಕರ ಸಂಘಟನೆಗಳ ಮಹಾ ಸಂಘದ ಜಿಲ್ಲಾಧ್ಯಕ್ಷ ಜಗದೀಶ ಪೂಜಾರಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ ಮಾಜಿ ಸೈನಿಕರು, ಬೆಳಗಾವಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ರಾಜ್ಯ ಸರ್ಕಾರಿ ನೌಕರಿಯಲ್ಲಿ 10ರಷ್ಟು ಮೀಸಲಾತಿ ಕೊಡಬೇಕು, ಬೆಳಗಾವಿಯಲ್ಲಿ ಸೈನಿಕರ ಭವನ …

Read More »

ಬೆಳಗಾವಿ ಪೊಲೀಸ್ ಕಮೀಷನರ್ ವರ್ಗಾವಣೆ ಸರ್ಕಾರದ ನಿರ್ಧಾರ: ಸತೀಶ್ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ನಗರ ಪೊಲೀಸ್ ಆಯುಕ್ತರ ವರ್ಗಾವಣೆ ಕುರಿತು ನಡೆಯುತ್ತಿರುವ ಚರ್ಚೆ ಇದೀಗ ರಾಜಕೀಯ ಬಣ್ಣ ಪಡೆದುಕೊಂಡಿದ್ದು, ಈ ವಿಚಾರವನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತಂದು ಚರ್ಚಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಇಂದು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಗರ ಪೊಲೀಸ್ ಆಯುಕ್ತರು ಅಧಿಕಾರ ವಹಿಸಿಕೊಂಡು ಕೇವಲ 12-13 ತಿಂಗಳು ಮಾತ್ರ ಕಳೆದಿದೆ. ಹೀಗಾಗಿ ಕನಿಷ್ಠ ವಿಧಾನಮಂಡಲ ಅಧಿವೇಶನ ನಡೆಯುವವರೆಗೆ ಆಯುಕ್ತರನ್ನು ಮುಂದುವರಿಸಬೇಕು ಎಂಬ …

Read More »

ಹಬ್ಬಗಳ ಮಧ್ಯೆ ʻಸ್ವೀಟ್‌ ಬಾಂಬ್‌ʼ ಸ್ಫೋಟ – ಬಿಕಾನೇರ್ ಸ್ವೀಟ್ಸ್ ತಯಾರಿಕಾ ಘಟಕ ಜಪ್ತಿ

ಬೆಂಗಳೂರು: ನಗರದ ಬಿಕಾನೇರ್ ಸ್ವೀಟ್ಸ್‌ಗೆ  ಸಿಹಿತಿಂಡಿಗಳನ್ನ ತಯಾರಿಸಿ ಸರಬರಾಜು ಮಾಡುತ್ತಿದ್ದ ತಯಾರಿಕಾ ಘಟಕವನ್ನ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (FDA) ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಘಟಕದಲ್ಲಿ ಅನೈರ್ಮಲ್ಯಕರ ಪರಿಸ್ಥಿತಿ ಹಾಗೂ ಸಿಹಿ ಖಾದ್ಯಗಳ ಲೇಬಲಿಂಗ್‌ಗೆ ಸಂಬಂಧಿಸಿದ ಗಂಭೀರ ಲೋಪಗಳು ಪತ್ತೆಯಾದ ಹಿನ್ನೆಲೆ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ. ಈ ತಯಾರಿಕಾ ಘಟಕದಲ್ಲಿ ಸುಮಾರು 60 ಮಾದರಿಯ ಸಿಹಿತಿಂಡಿ ಖಾದ್ಯಗಳನ್ನ ತಯಾರಿಸಲಾಗುತ್ತಿತ್ತು ಎನ್ನಲಾಗಿದೆ. ಬೆಂಗಳೂರಿನಲ್ಲಿರುವ  ಬಿಕಾನೇರ್ ಸ್ವೀಟ್ಸ್‌ ಬೇಕರಿ ಹಾಗೂ …

Read More »

ಸೆ.6ಕ್ಕೆ ಬೆಂಗಳೂರಲ್ಲಿ ಅಹಿಂದ ಸಮಾವೇಶ; ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಬಳಿಕ ನಡೆಯುತ್ತಿರೋ ಸಮಾವೇಶ

ಬೆಂಗಳೂರು: ಸೆಪ್ಟೆಂಬರ್ 6ರಂದು ಬೆಂಗಳೂರಲ್ಲಿ ಅಹಿಂದ ಸಮಾವೇಶ ನಡೆಯಲಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ  ಭಾಗಿಯಾಗಲಿದ್ದಾರೆ. ಹಿಂದುಳಿದ ವರ್ಗಗಳ ಒಕ್ಕೂಟದ ವತಿಯಿಂದ ಈ ಸಮಾವೇಶ ಆಯೋಜಿಸಲಾಗಿದೆ. ಸಿದ್ದರಾಮಯ್ಯ ಅವರು ರಾಜೀನಾಮೆ ಕೊಟ್ಟ ಬಳಿಕ ನಡೆಯುತ್ತಿರುವ ಸಮಾವೇಶ ಇದಾಗಿದ್ದು, ಕಾಂಗ್ರೆಸ್‌ನ ಅಹಿಂದ ನಾಯಕರಿಗೂ ಸಮಾವೇಶಕ್ಕೆ ಆಹ್ವಾನ ನೀಡಲಾಗಿದೆ. ಈ ಮಧ್ಯೆ ಕೆಲ ನಾಯಕರಿಗೆ ಸಮಾವೇಶಕ್ಕೆ ಹೋಗ್ಬೇಕಾ..? ಬೇಡ್ವಾ..? ಎಂಬ ಗೊಂದಲ ಕೂಡ ಎದುರಾಗಿದೆ. ಇನ್ನು ಸಮಾವೇಶದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಜಾತಿಗಣತಿ, ಒಳಮೀಸಲಾತಿ ವಿಚಾರಗಳ …

Read More »

ವೇದಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆಯಲ್ಲಿ ಬಿರುಕು – ಜನರಲ್ಲಿ ಹೆಚ್ಚಿದ ಅತಂಕ

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕೋನಿಗರಹಳ್ಳಿ ಬಳಿ ವೇದಾವತಿ ನದಿಗೆ  ಅಡ್ಡಲಾಗಿ ನಿರ್ಮಿಸಲಾಗಿರುವ ಹಳೆಯ ಸೇತುವೆ ಬಿರುಕು ಬಿಟ್ಟಿದ್ದು, ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಸುಮಾರು 4 ದಶಕಗಳ ಹಿಂದೆ ನಿರ್ಮಾಣವಾಗಿರುವ ಈ ಸೇತುವೆ, ಹಲವು ದಿನಗಳಿಂದ ಶಿಥಿಲಾವಸ್ಥೆಯಲ್ಲಿದ್ದರೂ ಇದುವರೆಗೂ ಸಮರ್ಪಕವಾಗಿ ದುರಸ್ತಿಗೊಳಿಸದಿರುವುದಕ್ಕೆ ಸ್ಥಳೀಯರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋನಿಗರಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಹತ್ತಾರು ಗ್ರಾಮಗಳಿಗೆ ಚಳ್ಳಕೆರೆ ಪಟ್ಟಣದೊಂದಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಸೇತುವೆ ಇದಾಗಿದೆ. ಪ್ರತಿನಿತ್ಯ ಸಾವಿರಾರು …

Read More »

ಬಸವರಾಜ್ ಹೇಳಿದಂತೆ ಕೆಲಸ ಮಾಡಿದ್ದೇನೆ – ಸಿಐಡಿ ಮುಂದೆ ಗ್ಯಾನೇಂದ್ರ ತಪ್ಪೊಪ್ಪಿಗೆ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ  ಪಶುವೈದ್ಯಾಧಿಕಾರಿ ನೇಮಕ ಅಕ್ರಮ ಪ್ರಕರಣಕ್ಕೆ ತನಿಖೆ ತೀವ್ರಗೊಂಡಿದ್ದು, ಸಿಐಡಿ ಅಧಿಕಾರಿಗಳ ಮುಂದೆ ಐಎಎಸ್ ಅಧಿಕಾರಿ ಗ್ಯಾನೇಂದ್ರ ಹಗರಣದಲ್ಲಿನ ತಮ್ಮ ಪಾತ್ರದ ಬಗ್ಗೆ ಸ್ಫೋಟಕ ಸತ್ಯಗಳನ್ನು ಬಿಚ್ಚಿಟ್ಟಿದ್ದಾರೆ. ಮತ್ತೊಂದೆಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಅಭ್ಯರ್ಥಿಗಳೇ ಸಾಕ್ಷಿಗಳಾಗಲು ಮುಂದಾಗಿದ್ದು ಕಿಂಗ್‌ಪಿನ್‌ಗಳಿಗೆ ಸಂಕಷ್ಟ ಎದುರಾಗಿದೆ. ಈ ಇಡೀ ಹಗರಣಕ್ಕೆ ಬಸವರಾಜ್ ಕನ್ನಾಳಿ ಪ್ರಮುಖ ರೂವಾರಿ. ಆತ ಹೇಳಿದಂತೆಯೇ ನಾನು ಕೆಲಸ ಮಾಡಿದ್ದೇನೆ. ನಾನು ಯಾವುದೇ ಅಭ್ಯರ್ಥಿಗಳ ಜೊತೆ ನೇರವಾಗಿ ಮಾತನಾಡಿಲ್ಲ …

Read More »

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರತಿಭಟನೆ – ವಿದ್ಯಾರ್ಥಿಗಳ ಮೇಲಿದ್ದ ಎಲ್ಲಾ ಎಫ್‌ಐಆರ್ ರದ್ದು

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಶೈಕ್ಷಣಿಕ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಕಾಕ್ರೋಚ್ ಜನತಾ ಪಾರ್ಟಿ  ನೇತೃತ್ವದಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ದೆಹಲಿ, ಬಿಹಾರ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗಳನ್ನು  ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರ ಹಾಗೂ ಆಯಾ ರಾಜ್ಯ ಸರ್ಕಾರಗಳು ಪ್ರಕರಣಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಗಳನ್ನು ಪುರಸ್ಕರಿಸಿದ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜಾಯ್‌ಮಾಲ್ಯ ಬಾಗ್ಚಿ …

Read More »

ಡಿಸಿಪಿ ಮೇಲೆಯೇ ಯೂತ್ ಕಾಂಗ್ರೆಸ್ ಅಧ್ಯಕ್ಷನಿಂದ ಹಲ್ಲೆ- ಎಫ್‌ಐಆರ್ ದಾಖಲಿಸಲು ಪೊಲೀಸರ ಹಿಂದೇಟು

ಬೆಂಗಳೂರು: ಪ್ರತಿಭಟನೆ ವೇಳೆ ಕರ್ತವ್ಯದಲ್ಲಿದ್ದ ಡಿಸಿಪಿ ಮೇಲೆಯೇ ಯುವ ಕಾಂಗ್ರೆಸ್ ಮುಖಂಡ  ಗೂಂಡಾವರ್ತನೆ ತೋರಿ ಹಲ್ಲೆ ನಡೆಸಿದ್ದರೂ, ಪೊಲೀಸರು ಇನ್ನೂ ಎಫ್‌ಐಆರ್ ದಾಖಲಿಸದೆ ಇರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಭಾನುವಾರ ಸಂಜೆ ನೀಟ್ ಪರೀಕ್ಷಾ ಅಕ್ರಮ ಖಂಡಿಸಿ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿ ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಯತ್ನ ನಡೆಸಿದ್ದರು. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಸ್ಥಳದಲ್ಲಿದ್ದ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ಲಾಠಿ ಚಾರ್ಜ್ ನಡೆಸಿದ್ದರು. ಲಾಠಿ ಚಾರ್ಜ್ ಸಂದರ್ಭದಲ್ಲಿ …

Read More »

ಸಿಗರೇಟ್ ಸೇದುವ ವಿಚಾರಕ್ಕೆ ಯುವಕನ ಬರ್ಬರ ಹತ್ಯೆ: 8 ಮಂದಿ ಜೀವಾವಧಿ ಶಿಕ್ಷೆ

ಬೆಂಗಳೂರು: ಸಿಗರೇಟ್ ಸೇದುವ ವಿಚಾರಕ್ಕೆ ಗಲಾಟೆ ನಡೆದು ಯುವಕನ ಬರ್ಬರ ಹತ್ಯೆಗೈದ  8 ಮಂದಿಗೆ ಕೋರ್ಟ್‌ ಜೀವಾವಧಿ ಶಿಕ್ಷೆ ವಿಧಿಸಿದೆ ಬೆಂಗಳೂರಿನ ಶಾಂತಿನಗರ ವ್ಯಾಪ್ತಿಯಲ್ಲಿ 2017ರಲ್ಲಿ ಸಿಗರೇಟ್ ಸೇದುವ ವಿಚಾರವಾಗಿ ಹರೀಶ್ ಎಂಬ ಯುವಕನೊಂದಿಗೆ ಗಲಾಟೆ ನಡೆದಿತ್ತು. ಮಾತಿಗೆ ಮಾತು ಬೆಳೆದು ಆರೋಪಿಗಳ ಗುಂಪು ಹರೀಶ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿತ್ತು. ಘಟನೆ ಸಂಬಂಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡ …

Read More »