Breaking News

Daily Archives: ಅಕ್ಟೋಬರ್ 1, 2026

ಬೆಳಗಾವಿ ಪಾಲಿಕೆಯಲ್ಲಿ ಐತಿಹಾಸಿಕ ಕ್ಷಣ| ಕರ್ನಾಟಕದ ಅವಿಭಾಜ್ಯ ಅಂಗ, ಮಹಾಜನ್ ವರದಿಯೇ ಅಂತಿಮ – ಮಹತ್ವದ ನಿರ್ಣಯ ಪಾಸ್

ಬೆಳಗಾವಿ: ಗಡಿ ವಿಚಾರವಾಗಿ ಸದಾ ಒಂದಿಲ್ಲೊಂದು ವಿವಾದಗಳಿಂದ ಸದ್ದು ಮಾಡುತ್ತಿದ್ದ ಕುಂದಾನಗರಿ ಬೆಳಗಾವಿ ಇಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿದೆ. ಬೆಳಗಾವಿ ಮಹಾನಗರ ಪಾಲಿಕೆಯು ‘ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ’ ಹಾಗೂ ‘ಮಹಾಜನ್ ವರದಿಯೇ ಅಂತಿಮ’ ಎಂದು ಸ್ಪಷ್ಟಪಡಿಸುವ ಅಧಿಕೃತ ಹಾಗೂ ಮಹತ್ವದ ನಿರ್ಣಯವನ್ನು ಬಹುಮತದಿಂದ ಅಂಗೀಕರಿಸಿದೆ. ಪಾಲಿಕೆಯ ಸಾಮಾನ್ಯ ಸಭೆಯ ಅಂತ್ಯದಲ್ಲಿ ಕನ್ನಡಪರ ನಿರ್ಣಯದ ಕುರಿತು ಪ್ರಸ್ತಾಪಿಸಲಾಯಿತು. ಈ ವೇಳೆ ಪಾಲಿಕೆ ಆಯುಕ್ತ ಕಾರ್ತಿಕ್ ಎಂ. ಅವರು 1988ರ ಕರ್ನಾಟಕ …

Read More »

ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ: ಸಿಎಂ ಅಣಕು ಶವಯಾತ್ರೆಗೆ ಪೊಲೀಸರ ತಡೆ

ಬೆಳಗಾವಿ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಚನ್ನಮ್ಮ ವೃತ್ತದಲ್ಲಿ ಮುಖ್ಯಮಂತ್ರಿ ಅವರ ಅಣಕು ಶವಯಾತ್ರೆ ನಡೆಸಲು ಮುಂದಾದ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದ ಘಟನೆ ನಡೆಯಿತು. ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾರ್ಯಕರ್ತರು ಖಾಲಿ ಚಂಬುಗಳು ಹಾಗೂ ವಿವಿಧ ಬಿತ್ತಪತ್ರಗಳನ್ನು ಪ್ರದರ್ಶಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆಯ ಭಾಗವಾಗಿ ಸಿಎಂ ಅಣಕು ಶವಯಾತ್ರೆ …

Read More »

ತಿಗಡಿಯಲ್ಲಿ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಕಟ್ಟಡಕ್ಕೆ ಅಡಿಗಲ್ಲು

ಬೈಲಹೊಂಗಲ: ತಾಲೂಕಿನ ತಿಗಡಿ ಗ್ರಾಮದಲ್ಲಿ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ನೂತನ ಕಟ್ಟಡ ನಿರ್ಮಾಣಕ್ಕೆ ಅಡಿಗಲ್ಲು ಸಮಾರಂಭ ನೆರವೇರಿತು. ವಿಧಾನ ಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ ಅವರು ಅಡಿಗಲ್ಲು ಸಮಾರಂಭದ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ದೇವಸ್ಥಾನದ ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.ಗ್ರಾಮಸ್ಥರ ಧಾರ್ಮಿಕ ಭಾವನೆ ಹಾಗೂ ಬಹುದಿನಗಳ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ದೇವಸ್ಥಾನದ ಅಭಿವೃದ್ಧಿಗೆ ಅಗತ್ಯ ಸಹಕಾರ ನೀಡುವುದಾಗಿ ಚನ್ನರಾಜ ಹಟ್ಟಿಹೊಳಿ ಅವರು ಈ ಸಂದರ್ಭದಲ್ಲಿ ಭರವಸೆ ನೀಡಿದರು. ದೇವಸ್ಥಾನದ ಕಟ್ಟಡ …

Read More »

ಬಾಚಿ, ಸುಳಗಾ ಗ್ರಾಮಗಳಿಗೆ ಆಟದ ಮೈದಾನ, ಕೆರೆ: ಲಕ್ಷ್ಮೀ ಹೆಬ್ಬಾಳಕರ್ ಮಹತ್ವದ ಹೆಜ್ಜೆ

ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಲಾ ಮಕ್ಕಳು, ಯುವಕರು ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಕ್ಷೇತ್ರದ ಶಾಸಕಿ ಹಾಗೂ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಗ್ರಾಮಸ್ಥರ ಬಹುಕಾಲದ ಬೇಡಿಕೆಗಳಿಗೆ ಸ್ಪಂದಿಸಿರುವ ಅವರು, ಬಾಚಿ ಹಾಗೂ ಸುಳಗಾ ಗ್ರಾಮಗಳಲ್ಲಿ ಆಟದ ಮೈದಾನ ಮತ್ತು ಸಾರ್ವಜನಿಕ ಕೆರೆ ನಿರ್ಮಾಣಕ್ಕೆ ಅಗತ್ಯವಿರುವ ಸರ್ಕಾರಿ ಜಮೀನು ಮಂಜೂರು ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಬುಧವಾರ ಬೆಳಗಾವಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ …

Read More »

ಬೆಳಗಾವಿ ಪಾಲಿಕೆಯಲ್ಲಿ ಕನ್ನಡ ಪರ ನಿರ್ಣಯ: ಸಂಘಟನೆಗಳಿಂದ ವಿಜಯೋತ್ಸವ

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ಕನ್ನಡ ಪರ ಮಹತ್ವದ ಗೊತ್ತುವಳಿ ಅಂಗೀಕಾರವಾದ ಹಿನ್ನೆಲೆಯಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ನಗರದಲ್ಲಿ ವಿಜಯೋತ್ಸವ ಆಚರಿಸಿದರು. ಮಹಾನಗರ ಪಾಲಿಕೆ ಕಚೇರಿ ಮುಂಭಾಗ ಹಾಗೂ ಚನ್ನಮ್ಮ ವೃತ್ತದಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚಿಕೊಂಡು ಸಂಭ್ರಮಿಸಿದರು. ಸರ್ಕಾರದ ಪರ ಘೋಷಣೆಗಳನ್ನು ಕೂಗಿ ಪಾಲಿಕೆಯ ನಿರ್ಧಾರವನ್ನು ಸ್ವಾಗತಿಸಿದರು. 1988ರಲ್ಲಿ ವಿಧಾನಸಭೆಯಲ್ಲಿ ಅಂಗೀಕರಿಸಲಾದ ಮಹಾಜನ್ ವರದಿಯ ನಿರ್ಣಯದಂತೆ ಮುಂದುವರಿಯುವ ಕುರಿತು ಪಾಲಿಕೆ ಸಭೆಯಲ್ಲಿ ಗೊತ್ತುವಳಿ …

Read More »

ಬೆಳಗಾವಿ ಪಾಲಿಕೆಯಲ್ಲಿ ಕನ್ನಡ ಪರ ನಿರ್ಣಯ ಪಾಸ್

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಯ ಅಂತಿಮ ಹಂತದಲ್ಲಿ ಕನ್ನಡ ಭಾಷೆ ಹಾಗೂ ಬೆಳಗಾವಿಯ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ನಿರ್ಣಯವನ್ನು ಬಹುಮತದಿಂದ ಅಂಗೀಕರಿಸಲಾಯಿತು. ಸಭೆಯಲ್ಲಿ ಸರ್ಕಾರದಿಂದ ಪಾಲಿಕೆಗೆ ಬಂದಿದ್ದ ಪತ್ರವನ್ನು ಆಯುಕ್ತ ಕಾರ್ತಿಕ ಎಂ. ಅವರು ಸದಸ್ಯರ ಮುಂದೆ ಓದಿ, ಸರ್ಕಾರದ ಸೂಚನೆಗಳನ್ನು ಸಭೆಯ ಗಮನಕ್ಕೆ ತಂದರು. 1988ರಲ್ಲಿ ಪಾಲಿಕೆ ಸದನದಲ್ಲಿ ಕೈಗೊಂಡಿದ್ದ ನಿರ್ಣಯದಂತೆ ಮುಂದುವರಿಯುವಂತೆ ಸರ್ಕಾರ ಸೂಚಿಸಿರುವುದನ್ನು ಆಯುಕ್ತರು ವಿವರಿಸಿದರು. ಇದರ ಬೆನ್ನಲ್ಲೇ ಮಹಾಜನ್ ವರದಿಯೇ …

Read More »

ಕೆಲಸ ಬಿಡಲು ಸಿದ್ಧ, ಆದರೆ ಅವರನ್ನು ಬಿಡುವುದಿಲ್ಲ” ಎಂದ ಉಪ ಆಯುಕ್ತೆ

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಕೌನ್ಸಿಲ್ ಸಭೆಯ ಬಳಿಕ ಅಧಿಕಾರಿ ಹಾಗೂ ಪಾಲಿಕೆ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿದ್ದು, ಕೆಲಕಾಲ ಪಾಲಿಕೆ ಆವರಣದಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಯಿತು. ಪಾಲಿಕೆ ಅಭಿವೃದ್ಧಿ ಶಾಖೆಯ ಉಪ ಆಯುಕ್ತೆ ಲಕ್ಷ್ಮೀ ನಿಪ್ಪಾಣಕರ್ ಅವರು ಎಂಐಎಂ ಪಾಲಿಕೆ ಸದಸ್ಯ ಶಾಹಿದ್ ಖಾನ್ ಪಠಾಣ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅಭಿವೃದ್ಧಿ ಕಾಮಗಾರಿಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯುತ್ತಿದ್ದ ವೇಳೆ, ಶಾಹಿದ್ ಖಾನ್ ಅವರು ಅಧಿಕಾರಿಯ …

Read More »