Breaking News

Daily Archives: ಅಕ್ಟೋಬರ್ 2, 2026

ಚುನಾವಣಾ ಆಯೋಗದ ಕಚೇರಿ ಮೆಟ್ಟಿಲಲ್ಲೇ ಸಿಎಂ, ಸಚಿವರ ಧರಣಿ; ಎಫ್‌ಐಆರ್‌ಗೆ ಪಟ್ಟು

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಅರ್ಹರ ಹೆಸರುಗಳನ್ನು ಕಾನೂನುಬಾಹಿರವಾಗಿ ಕೈಬಿಡಲಾಗುತ್ತಿದೆ ಎಂದು ಆರೋಪಿಸಿ, ಮುಖ್ಯಮಂತ್ರಿ ಡಿಕೆ ಶಿವಕುಮಾರ್‌  ಹಾಗೂ ಸಚಿವರು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ  ಕಚೇರಿಯಲ್ಲೇ ಧರಣಿ ಕುಳಿತ ಹಿನ್ನೆಲೆಯಲ್ಲಿ ತೀವ್ರ ರಾಜಕೀಯ ಹೈಡ್ರಾಮಾ ಸೃಷ್ಟಿಯಾಗಿದೆ. ನಕಲಿ ‘ಫಾರ್ಮ್-7’ ಸಲ್ಲಿಸಿ ಮತದಾರರ ಹೆಸರು  ಡಿಲೀಟ್ ಮಾಡಲು ಯತ್ನಿಸಿದವರ ವಿರುದ್ಧ ತಕ್ಷಣವೇ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿಗಳು ಕಚೇರಿಯ ಮೆಟ್ಟಿಲುಗಳ ಮೇಲೆ ಕುಳಿತು ಧರಣಿ ಆರಂಭಿಸಿದ್ದಾರೆ. ಮುಖ್ಯಮಂತ್ರಿಗಳ ಜೊತೆಗೆ ಉಪಮುಖ್ಯಮಂತ್ರಿ, ಸಚಿವರಾದ …

Read More »

ಬಾಲಕೃಷ್ಣನ ಜೊತೆ ಸೈಕಲ್ ತಳ್ಳಿಕೊಂಡೇ 40 ಸಾವಿರ ಕಿಮೀ ಪಾದಯಾತ್ರೆ ಮಾಡಿದ ಗೀತಾ ಮಾತಾಜಿ!

ಚಿಕ್ಕಮಗಳೂರು: ಬೆಂಗಳೂರಿನ  ನೆಲಮಂಗಲ ಮೂಲದ ಗೀತಾ ಮಾತಾಜಿಯವರು  ಕಳೆದ ನಾಲ್ಕು ವರ್ಷಗಳಿಂದ ಬಾಲಕೃಷ್ಣನ ಜೊತೆ ಸೈಕಲ್ ತಳ್ಳಿಕೊಂಡು ದೇಶ-ಧರ್ಮಕ್ಕೆ ಒಳಿತಾಗಲೆಂದು 40 ಸಾವಿರಕ್ಕೂ ಅಧಿಕ ಕಿ.ಮೀ. ಪಾದಯಾತ್ರೆ ನಡೆಸುತ್ತಿದ್ದಾರೆ. ಗೀತಾ ಮಾತಾಜಿಯವರ ಈ ಅಪರೂಪದ ಭಕ್ತಿ ಪಯಣಕ್ಕೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ  ತಾಲೂಕಿನ ಕೊಟ್ಟಿಗೆಹಾರದ ಜನ ಕೂಡ ಕೈ ಮುಗಿದು ಅಭಿನಂದನೆ ಸಲ್ಲಿಸಿದ್ದಾರೆ. ಗೀತಾ ಮಾತಾಜಿ ಕಳೆದ ನಾಲ್ಕು ವರ್ಷಗಳಿಂದ ನಿರಂತರವಾಗಿ ಪಾದಯಾತ್ರೆಯ ಮೂಲಕವೇ ಪ್ರಸಿದ್ಧ ಪುಣ್ಯ ಕ್ಷೇತ್ರಗಳಿಗೆ ತೆರಳಿ …

Read More »

ನೈಸ್‌ ವಿಚಾರವಾಗಿ ಡಿಕೆಶಿ ಭೇಟಿಯಾಗಿದ್ದು ಸತ್ಯ – ಸಿದ್ದಲಿಂಗ ಮಹಾಸ್ವಾಮಿಗಳಿಂದ ಸ್ಪಷ್ಟನೆ

ತುಮಕೂರು: ನೈಸ್ ರಸ್ತೆ  ವಿಚಾರವಾಗಿ ಸಿಎಂ ಡಿ.ಕೆ.ಶಿವಕುಮಾರ್  ಅವರನ್ನು ಭೇಟಿಯಾಗಿದ್ಧು ಸತ್ಯ ಎಂದು ಸಿದ್ದಗಂಗಾ ಮಠಾಧ್ಯಕ್ಷ ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳು  ಸ್ಪಷ್ಟನೆ ನೀಡಿದ್ದಾರೆ. ನೈಸ್ ವಿಚಾರ ಮತ್ತು ಬಿಡಿಎ ವಿಚಾರ ಇಟ್ಟುಕೊಂಡು ಹೋಗಿದ್ವಿ, ಅದು ಕ್ಯಾಬಿನೆಟ್‌ಲ್ಲಿ ತೀರ್ಮಾನ ಆಗಬೇಕಿತ್ತು ಹಾಗಾಗಿ ಸಿಎಂ ಅವರನ್ನು ಭೇಟಿ ಮಾಡಿದ್ದೇವೆ. ಅದಕ್ಕೆ ಸಿಎಂ ತುಂಬಾ ಸಂಸ್ಕಾರಯುತವಾಗಿ ʻಬುದ್ದಿ, ನೀವು ಯಾಕೇ ಬಂದ್ರಿ. ನಾನೇ ಅಲ್ಲಿಗೆ ಬರ್ತಿದ್ನಲ್ಲಾʼ ಎಂದರು. ನೈಸ್ ರಸ್ತೆಗೆ ನಮ್ಮ ಆಕ್ಷೇಪ ಇಲ್ಲ, …

Read More »

ಕೆಪಿಎಸ್‌ಸಿ ನೇಮಕಾತಿ ಅಕ್ರಮ- ಎಸ್‌ಐಟಿ ರಚನೆಗೆ ಸುಪ್ರೀಂ ತಡೆ

ನವದೆಹಲಿ: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಕೆಪಿಎಸ್‌ಸಿ  ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಮಹತ್ವದ ಆದೇಶಕ್ಕೆ ಸುಪ್ರೀಂ ಕೋರ್ಟ್  ಮಧ್ಯಂತರ ತಡೆ ನೀಡಿದೆ. ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸುವಂತೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಇಂದು ನಡೆಸಿತು. ರಾಜ್ಯ ಸರ್ಕಾರದ ಪರವಾಗಿ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿ, ಪ್ರಕರಣ …

Read More »

ಶಾಲೆಗಳಲ್ಲಿದ್ದ ಉರ್ದು ಈಗ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಬಂದು ಬಿಟ್ಟಿದೆ: ಛಲವಾದಿ

ಬೆಂಗಳೂರು: ಶಾಲೆಗಳಲ್ಲಿದ್ದ ಉರ್ದು ಈಗ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಬಂದು ಬಿಟ್ಟಿದೆ ಎಂದು ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ  ಹೇಳೀದ್ದಾರೆ. ವಿಧಾನಸೌಧದಲ್ಲಿ ಉರ್ದು ಹಬ್ಬ ಆಚರಣೆಗೆ ವಿಧಾನ ಪರಿಷತ್ ಛಲವಾದಿ ನಾರಾಯಣಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿ ಮಾತಾಡಿದ ಅವರು, ಎಂದೂ ಇಲ್ಲದ ಈ ಪದ್ದತಿಯನ್ನು ಯಾಕೆ ಮಾಡುತ್ತಿದ್ದೀರಿ? ಇದು ಓಲೈಕೆ ರಾಜಕಾರಣ ಅಲ್ಲವೇ?ವೋಟ್ ಬ್ಯಾಂಕ್‌ಗಾಗಿ ಕಾಂಗ್ರೆಸ್ ಕರ್ನಾಟಕದ ಗೌರವ ಕಳೆಯುವ ಕೆಲಸ ಮಾಡುತ್ತಿದೆ‌ ಅಂತ ಕಿಡಿಕಾರಿದರು. ಕಾಂಗ್ರೆಸ್ ಸರ್ಕಾರ ಎಂದರೆ …

Read More »

ಸಚಿವ ಬಾಲಕೃಷ್ಣ ನಕಲಿ ದಾಖಲೆ ಸೃಷ್ಟಿಸಿ 36 ಎಕರೆ ಜಾಗ ಕಬಳಿಸಿದ್ದಾರೆ: ಮಂಜುನಾಥ್

ಬೆಂಗಳೂರು: ಸಚಿವ ಬಾಲಕೃಷ್ಣ  ಸರ್ಕಾರಿ ಜಮೀನು ನಕಲಿ ದಾಖಲೆ ಸೃಷ್ಟಿ ಮಾಡಿ 36 ಎಕರೆ ಜಾಗ ಲೂಟಿ ಮಾಡಿದ್ದಾರೆ ಅಂತ ಮಾಜಿ ಶಾಸಕ ಮಾಗಡಿ ಮಂಜುನಾಥ್ ದಾಖಲಾತಿ ಸಮೇತ ಆರೋಪ ಮಾಡಿದ್ದಾರೆ. ಜೆಪಿ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತಾಡಿದ ಅವರು, ಸಚಿವ ಬಾಲಕೃಷ್ಣ ತಾವರೆಕೆರೆ ಕುರುಬಹಳ್ಳಿ ಬಳಿ 36 ಎಕರೆ ಜಮೀನು ಕಬಳಿಸಿದ್ದಾರೆ. ಅವರ ಹೆಂಡತಿ ಹೆಸರಿಗೆ 10 ಎಕರೆ ಮಾಡಿಸಿದ್ದಾರೆ. 26 ಎಕರೆ ಅವರ ಜೊತೆ ಇರೋ ವ್ಯಕ್ತಿ …

Read More »

ಕೊಡಗಿನಲ್ಲಿ ಮತ್ತೆ ಮಳೆಯ ಅಬ್ಬರ; ಗುಡುಗು-ಸಿಡಿಲಿನೊಂದಿಗೆ ಧಾರಾಕಾರ ಮಳೆ, ಹಲವೆಡೆ ಹಾನಿ

ಮಡಿಕೇರಿ: ಹಲವು ದಿನಗಳಿಂದ ಬಿಡುವು ನೀಡಿದ್ದ ಮಳೆ  ಇದೀಗ ಕೊಡಗು ಜಿಲ್ಲೆಯಲ್ಲಿ  ಮತ್ತೆ ಆರ್ಭಟಿಸಿದೆ. ಇಂದು ಮಧ್ಯಾಹ್ನದಿಂದ ಮಡಿಕೇರಿ, ಕುಶಾಲನಗರ, ವಿರಾಜಪೇಟೆ, ಸುಂಟಿಕೊಪ್ಪ, ಮುರ್ನಾಡು ಸೇರಿದಂತೆ ಜಿಲ್ಲೆಯ ಹಲವು ಭಾಗಗಳಲ್ಲಿ ಗುಡುಗು-ಸಿಡಿಲಿನೊಂದಿಗೆ ಧಾರಾಕಾರ ಮಳೆಯಾಗಿದೆ. ಕೂಡಿಗೆ ಸುತ್ತಮುತ್ತ ಭಾರೀ ಮಳೆಯಾಗಿದ್ದು, ದಿಢೀರ್ ಸುರಿದ ಮಳೆಯಿಂದ ಕೆಲಕಾಲ ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವು ರಸ್ತೆಗಳ ಮೇಲೆ ಮಳೆ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು. ಕೆಲವೆಡೆ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿದೆ. ಮಳೆಯ …

Read More »

ರೈತರಿಗೆ 25 ಸಾವಿರ ಪರಿಹಾರ ಕೊಟ್ಟರೆ ಮಾತ್ರ ಸರ್ವಪಕ್ಷ ನಿಯೋಗದಲ್ಲಿ ಭಾಗಿ- ಛಲವಾದಿ

ಬೆಂಗಳೂರು: ರೈತರಿಗೆ  25 ಸಾವಿರ ರೂ. ಪರಿಹಾರ ಕೊಟ್ಟರೆ ಮಾತ್ರ ಸರ್ವಪಕ್ಷ ನಿಯೋಗದಲ್ಲಿ ನಾವು ಹೋಗ್ತೀವಿ ಅಂತ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ  ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತಾಡಿದ ಅವರು, ಸರ್ಕಾರ ಶ್ವೇತ ಪತ್ರ ಬಿಡುಗಡೆ ಮಾಡಲು ತಯಾರಿಲ್ಲ.ಸರ್ಕಾರ ಸಮಯ ಕಳೆಯುವ ಕೆಲಸ ಮಾಡುತ್ತಿದೆ ಅಷ್ಟೇ. ಸಿಎಂ ರೈತರಿಗೆ 25 ಸಾವಿರ ರೂ. ಬರ ಪರಿಹಾರ ಕೊಡುತ್ತೇವೆ ಎಂದು ಘೋಷಣೆ ಮಾಡಿ. ಅಂದರೆ ಮಾತ್ರ ನಾವು ನಿಯೋಗದಲ್ಲಿ ಬರುತ್ತೇವೆ …

Read More »

ವಿಧಾನಸೌಧದ ಮೆಟ್ಟಿಲ ಮೇಲೆ ಉರ್ದು ಭಾಷಾ ಹಬ್ಬ ಇಲ್ಲ: ಸಿಎಂ ಕಚೇರಿ

ಬೆಂಗಳೂರು: ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಉರ್ದು ಭಾಷಾ ಹಬ್ಬ ಆಯೋಜಿಸಲಾಗುತ್ತಿದೆ ಎಂಬ ವರದಿಗಳನ್ನು ಮುಖ್ಯಮಂತ್ರಿಗಳ ಸಚಿವಾಲಯ  ಸ್ಪಷ್ಟವಾಗಿ ತಳ್ಳಿಹಾಕಿದೆ. ವಿಧಾನಸೌಧದ ಮೆಟ್ಟಿಲುಗಳ ಮೇಲೆ ಯಾವುದೇ ಸರ್ಕಾರಿಯೇತರ ಅಥವಾ ಖಾಸಗಿ ಕಾರ್ಯಕ್ರಮಗಳಿಗೆ ಅವಕಾಶವಿಲ್ಲ ಎಂದು ಸಿಎಂ ಕಚೇರಿ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ. ಮಾಧ್ಯಮಗಳಲ್ಲಿ ಖಾಸಗಿ ಕಾರ್ಯಕ್ರಮ ನಡೆಯಲಿದೆ ಎಂದು ಬಿಂಬಿಸುತ್ತಿರುವುದು ಸಂಪೂರ್ಣ ಸತ್ಯಕ್ಕೆ ದೂರವಾದ ಮಾತು. ಸರ್ಕಾರ ಅಂತಹ ಯಾವುದೇ ಅನುಮತಿಯನ್ನು ನೀಡಿಲ್ಲ ಎಂದು ಮುಖ್ಯಮಂತ್ರಿಗಳ ಕಚೇರಿ ಅಧಿಕೃತ ಮಾಧ್ಯಮ ಪ್ರಕಟಣೆ …

Read More »

ಲಾರಿ, KSRTC ಬಸ್‌ ನಡುವೆ ಮುಖಾಮುಖಿ ಡಿಕ್ಕಿ – ಮಗು ಸಾವು, 10 ಮಂದಿಗೆ ಗಾಯ

ಕಾರವಾರ: ಲಾರಿ ಹಾಗೂ ಕೆಎಸ್‌ಆರ್‌ಟಿಸಿ ಬಸ್  ನಡುವೆ ಸಂಭವಿಸಿದ ಅಪಘಾತದಲ್ಲಿ  ಒಂದೂವರೆ ವರ್ಷದ ಗಂಡು ಮಗು ಸಾವನ್ನಪ್ಪಿದ ಘಟನೆ ಅಂಕೋಲಾ  ತಾಲೂಕಿನ ಬೆಳಸೆ ಗ್ರಾಮದಲ್ಲಿ ನಡೆದಿದೆ. ಕುಮಟಾದಿಂದ ಅಂಕೋಲಾಕ್ಕೆ ತೆರಳುತಿದ್ದ ಬಸ್‌ ಹಾಗೂ ಅಂಕೋಲಾ ಕಡೆಯಿಂದ ಬರುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಪರಿಣಾಮ ಬಸ್‌ನಲ್ಲಿದ್ದ ಒಂದೂವರೆ ವರ್ಷದ ಗಂಡು ಮಗು ಸ್ಥಳದಲ್ಲೇ ಸಾವನ್ನಪ್ಪಿದೆ. ಅಪಘಾತದಲ್ಲಿ 10 ಮಂದಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರನ್ನು ಕಾರವಾರದ …

Read More »