ಬಹುತೇಕ ಮನೆಗಳಲ್ಲಿ ಬೆಳಗ್ಗೆ ಮತ್ತು ಸಂಜೆ ಚಹಾ ತಯಾರಿಸುವುದು ಸಾಮಾನ್ಯ. ಚಹಾ ಸೋಸಿದ ಬಳಿಕ ಉಳಿಯುವ ಟೀ ಪುಡಿಯನ್ನು ಸಾಮಾನ್ಯವಾಗಿ ಕಸಕ್ಕೆ ಎಸೆಯಲಾಗುತ್ತದೆ. ಆದರೆ ಒಮ್ಮೆ ಬಳಸಿದ ಟೀ ಪುಡಿಯನ್ನು ಕೆಲವು ಸರಳ ವಿಧಾನಗಳ ಮೂಲಕ ಮನೆಯ ಸ್ವಚ್ಛತೆಗೆ ಬಳಸಬಹುದು. ಕನ್ನಡಿ, ಕಿಟಕಿ, ಮರದ ಪೀಠೋಪಕರಣಗಳು ಹಾಗೂ ಅಡುಗೆ ಮನೆಯ ಕೆಲವು ವಸ್ತುಗಳನ್ನು ಸ್ವಚ್ಛಗೊಳಿಸಲು ಇದನ್ನು ಬಳಸಬಹುದು. ಮೊದಲು ಟೀ ಪುಡಿಯನ್ನು ಚೆನ್ನಾಗಿ ತೊಳೆಯಿರಿ ಬಳಸಿದ ಟೀ ಪುಡಿಯನ್ನು ನೇರವಾಗಿ …
Read More »Daily Archives: ಅಕ್ಟೋಬರ್ 3, 2026
ಒಂದೇ ತಿಂಗಳಲ್ಲಿ 3 ಬಾರಿ ಲಘು ಭೂಕಂಪ: ಬೆಚ್ಚಿಬಿದ್ದ ವಿಜಯಪುರ ಜನ
ವಿಜಯಪುರ: ಜಿಲ್ಲೆಯಲ್ಲಿ ಮತ್ತೆ ಭೂಕಂಪನದ ವಾತಾವರಣ ಮನೆ ಮಾಡಿದೆ. ಕಳೆದ ಹಲವು ವರ್ಷಗಳಿಂದ ವಿಜಯಪುರ ಜಿಲ್ಲೆಯ ವಿವಿಧ ಭಾಗಗಳಲ್ಲಿ ಉಂಟಾಗುತ್ತಿದ್ದ ಭೂಕಂಪನದ ಅನುಭವ ಇದೀಗ ಮತ್ತೆ ಶುರುವಾಗಿದೆ. ಒಂದೇ ತಿಂಗಳಲ್ಲಿ ಮೂರು ಬಾರಿ ಭೂಮಿ ಕಂಪಿಸಿರುವುದು ರಿಕ್ಟರ್ ಮಾಪನದಲ್ಲಿ ದಾಖಲಾಗಿದ್ದು, ಜನರು ಭಯಗೊಳ್ಳುವಂತೆ ಮಾಡಿದೆ. ಒಂದೇ ತಿಂಗಳಲ್ಲೇ ಮೂರು ಬಾರಿ ಭೂಕಂಪನ ಕಳೆದ ಕೆಲ ವರ್ಷಗಳಿಂದ ವಿಜಯಪುರ ಜಿಲ್ಲೆಯ ತಿಕೋಟಾ, ಕೊಲ್ಹಾರ, ನಿಡಗುಂದಿ, ಬಸವನಬಾಗೇವಾಡಿ ತಾಲೂಕಿನ ಭಾಗಗಳಲ್ಲಿ ಭೂಕಂಪನವಾಗಿರುವ ವರದಿಯಾಗಿದೆ. …
Read More »ಸಂಪುಟ ಸಭೆ ಮುಂದೂಡಿ ಧರಣಿ ನಡೆಸಿದ್ದು ಕರಾಳ ಇತಿಹಾಸ: ರಾಜ್ಯ ಸರ್ಕಾರದ ವಿರುದ್ಧ ಜೋಶಿ ವಾಗ್ದಾಳಿ
ಹುಬ್ಬಳ್ಳಿ: “ರಾಹುಲ್ ಗಾಂಧಿಯನ್ನು ಸಂಪ್ರೀತಗೊಳಿಸಲು ಮತ್ತು ಸಿಎಂ ಕುರ್ಚಿ ಉಳಿಸಿಕೊಳ್ಳಲು ಡಿಕೆ ಶಿವಕುಮಾರ್ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಧರಣಿಯ ಪ್ರಹಸನ ನಡೆಸಿದ್ದಾರೆ” ಎಂದು ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ ಜೋಶಿ ಟೀಕಿಸಿದರು. ಹುಬ್ಬಳ್ಳಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವರು, ರಾಜ್ಯ ಸಚಿವ ಸಂಪುಟ ಸಭೆಯನ್ನೇ ಮುಂದೂಡಿ ಹೀಗೆ ಧರಣಿ ನಡೆಸಿರುವುದು ದೇಶದಲ್ಲೇ ಒಂದು ಕರಾಳ ಇತಿಹಾಸವಾಗಿದೆ ಎಂದರು. ಸಿಎಂ ಡಿಕೆಶಿ ಮತ್ತವರ ಸಂಪುಟದ ಸಚಿವರು ಪೂರ್ವಾನುಮತಿ ಪಡೆಯದೆ …
Read More »ಬೀಡಾಡಿ ದನವನ್ನು ಕಾರಿಗೆ ತುಂಬಿಕೊಂಡು ಪರಾರಿ: ಪ್ರಮುಖ ಆರೋಪಿ ಬಂಧನ
ಉಡುಪಿ: ರಸ್ತೆ ಬದಿಯಲ್ಲಿದ್ದ ಬೀಡಾಡಿ ದನವನ್ನು ಹಿಂಸಾತ್ಮಕವಾಗಿ ಎಳೆದುಕೊಂಡು ಹೋಗಿ ಕಾರಿನಲ್ಲಿ ತುಂಬಿಕೊಂಡು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕೊಲ್ಲೂರು ಪೊಲೀಸರು ಬಂಧಿಸಿದ್ದಾರೆ. ಕುಂದಾಪುರ ತಾಲೂಕಿನ ಗುಲ್ವಾಡಿ ಗ್ರಾಮದ ತೋಟದ ಮನೆಯ ಮೊಹಮ್ಮದ್ ಸಿನಾನ್ (20) ಬಂಧಿತ ಆರೋಪಿ. ಕೃತ್ಯಕ್ಕೆ ಬಳಸಿದ್ದ ಕಾರನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೆ.29 ರಂದು ಮಧ್ಯಾಹ್ನ 1:30ರ ಸುಮಾರಿಗೆ ಬಿಳಿ ಬಣ್ಣದ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಬಂದಿದ್ದ ಅಪರಿಚಿತರು, ರಸ್ತೆ ಬದಿಯಲ್ಲಿದ್ದ ಬೀಡಾಡಿ …
Read More »ಭಾರತ – ಪಾಕ್ ಗಡಿಯಲ್ಲಿ ಇಬ್ಬರು ನುಸುಳುಕೋರರನ್ನು ಹೊಡೆದುರುಳಿಸಿದ ಭದ್ರತಾ ಪಡೆ
ಚಂಡೀಗಢ: ಪಂಜಾಬ್‌ನ ತರನ್‌ತಾರನ್ ಜಿಲ್ಲೆಯ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯಲ್ಲಿ ಒಳನುಸುಳುವಿಕೆಗೆ ಯತ್ನಿಸಿದ ಇಬ್ಬರು ನುಸುಳುಕೋರರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಗಡಿ ಸಮೀಪದ ರಾಜೋಕೆ ಗ್ರಾಮದ ಬಳಿ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಲು ಇಬ್ಬರು ನುಸುಳುಕೋರರು ಯತ್ನಿಸಿದ್ದರು. ಈ ವೇಳೆ ಬಿಎಸ್‌ಎಫ್ ಸಿಬ್ಬಂದಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಶುಕ್ರವಾರ ಮುಂಜಾನೆ ರಾಜೋಕೆ ಪ್ರದೇಶದ ಗಡಿ ಭಾಗದಲ್ಲಿ ಅನುಮಾನಾಸ್ಪದವಾಗಿ ಮೂವರು ಓಡಾಡುತ್ತಿದ್ದರು. ಇದನ್ನು ಗಮನಿಸಿದ BSF ಸಿಬ್ಬಂದಿ ಎಚ್ಚರಿಕೆ ನೀಡಿದ್ದಾರೆ. ಆದರೆ ಅವರು ಹಿಂದಕ್ಕೆ …
Read More »ಜಾಮೀನಿನ ಮೇಲೆ ಹೊರಬಂದ ಬೆನ್ನಲ್ಲೇ ಮತ್ತೆ ಅಕ್ರಮ ಗರ್ಭಪಾತ ದಂಧೆ?
ಬಾಗಲಕೋಟೆ: ಅಕ್ರಮ ಗರ್ಭಪಾತ ಹಾಗೂ ಹೆಣ್ಣು ಭ್ರೂಣಹತ್ಯೆ ಪ್ರಕರಣದಲ್ಲಿ ಜೈಲು ಸೇರಿ ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಹೊರಬಂದಿದ್ದ ನಕಲಿ ವೈದ್ಯೆಯೊಬ್ಬಳು, ಮತ್ತೆ ಅದೇ ಕರಾಳ ದಂಧೆಯಲ್ಲಿ ಸಕ್ರಿಯವಾಗಿರುವ ಗಂಭೀರ ಶಂಕೆ ವ್ಯಕ್ತವಾಗಿದೆ. ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಮಹಾಲಿಂಗಪುರ ಪಟ್ಟಣದಲ್ಲಿ ಈ ಘಟನೆ ಬೆಳಕಿಗೆ ಬಂದಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ಆಕೆಯ ಮನೆಗೆ ಭೇಟಿ ನೀಡಿ ಕಠಿಣ ಎಚ್ಚರಿಕೆಯ ನೋಟಿಸ್ ಅಂಟಿಸಿದ್ದಾರೆ. ಮಹಾಲಿಂಗಪುರ ಪಟ್ಟಣದ ನಿವಾಸಿ ಕವಿತಾ ಬಾಡನವರ ಈ ಹಿಂದೆ …
Read More »ಮಾಂಜಾ ದಾರ ಸಿಲುಕಿ ಬೈಕ್ ಸವಾರ ಸಾವು – ಕಠಿಣ ಕ್ರಮಕ್ಕೆ ಮುಂದಾದ ಪಾಲಿಕೆ
ಬೆಳಗಾವಿ: ಗಾಳಿಪಟದ ಮಾಂಜಾ ದಾರ ಸಿಲುಕಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಮಹಾಂತೇಶ್ ನಗರದ ನಿವಾಸಿ ದ್ರುವ ಸಂತೋಷ ಕರ್ಜಗಿ (19) ಮೃತ ದುರ್ದೈವಿ. ಬೆಳಗಾವಿ ಬಿಮ್ಸ್ ಆಸ್ಪತ್ರೆಯಲ್ಲಿ ಮೃತ ದ್ರುವ ಮರಣೋತ್ತರ ಪರೀಕ್ಷೆ ನಡೆದಿದೆ. ಇದ್ದ ಒಬ್ಬ ಮಗನನ್ನೂ ಕಳೆದುಕೊಂಡ ಪೋಷಕರ ಆಕ್ರಂದನ ಶವಾಗಾರದ ಬಳಿ ಮುಗಿಲುಮುಟ್ಟಿತ್ತು. ಮಾಂಜಾ ದಾರವನ್ನು ಬ್ಯಾನ್ ಮಾಡಲಾಗಿದ್ದರೂ ಪೊಲೀಸರು, ಪಾಲಿಕೆ ಅಧಿಕಾರಿಗಳು ಯಾವ ಕ್ರಮವನ್ನು ಕೈಗೊಂಡಿಲ್ಲ ಎಂದು ಕುಟುಂಬಸ್ಥರು ಆಕ್ರೋಶ …
Read More »ಶ್ರೀನಿವಾಸ ಸಾಗರ ಡ್ಯಾಮ್‌ನಲ್ಲಿ ಮುಳುಗಿ ತಾಯಿ, ಮಗ ದುರ್ಮರಣ – ತಂದೆ, ಮಗಳು ಪಾರು
ಚಿಕ್ಕಬಳ್ಳಾಪುರ: ಶ್ರೀನಿವಾಸ ಸಾಗರ ಡ್ಯಾಮ್‌ಗೆ ಪ್ರವಾಸಕ್ಕೆ ಬಂದಿದ್ದ ತಾಯಿ, ಮಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಇದೇ ವೇಳೆ ಮುಳುಗುತ್ತಿದ್ದ ತಂದೆ ಹಾಗೂ ಮಗಳನ್ನು ಸ್ಥಳೀಯರು ರಕ್ಷಿಸಿದ್ದಾರೆ. ರೇಖಾ (39) ಹೇಮಂತ್ (19) ಮೃತ ದುರ್ದೈವಿಗಳು. ರಾಜು ಹಾಗೂ ಮಗಳು ದೀಪ ಅಪಾಯದಿಂದ ಪಾರಾಗಿದ್ದಾರೆ. ಆಟೋ ಚಾಲಕರಾಗಿರುವ ರಾಜು, ಮಕ್ಕಳಿಗೆ ಗಾಂಧಿ ಜಯಂತಿ ರಜೆ ಇದ್ದಿದ್ದರಿಂದ ಕುಟುಂಬ ಸಮೇತ ಜಲಾಶಯಕ್ಕೆ ಬಂದಿದ್ದರು. ಈ ವೇಳೆ, ಜಲಾಶಯದ ನೀರಿನಲ್ಲಿ ಆಟ ಆಡಲು ನೀರಿನಲ್ಲಿ …
Read More »ಬಾಲಿ ಟ್ರಿಪ್ ವೇಳೆ ಅಪಘಾತ; ಬೆನ್ನು ಮೂಳೆ ಮುರಿದುಕೊಂಡ ಬಾಲಿವುಡ್ ನಟಿ ನುಸ್ರತ್
ಮುಂಬೈ: ಖ್ಯಾತ ಬಾಲಿವುಡ್ ನಟಿ ನುಸ್ರತ್ ಭರುಚಾಗೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಅವರ ಬೆನ್ನುಮೂಳೆ ಮುರಿದುಕೊಂಡಿದ್ದಾರೆ. ಸದ್ಯ ನುಸ್ರತ್ ಬಾಲಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಸಿನಿಮಾ ತಂಡದ ಪ್ರಚಾರಕಿ ಸಂಚಿತಾ ತ್ರಿವೇದಿ ಮಾಹಿತಿ ನೀಡಿದ್ದು, ಹೆಚ್ಚಿನ ವೈದ್ಯಕೀಯ ಪರೀಕ್ಷೆಗಳ ಬಳಿಕ ನುಸ್ರತ್ ಅವರ ಬೆನ್ನುಮೂಳೆಯ ಶಸ್ತ್ರಚಿಕಿತ್ಸೆ ನಡೆಸಲು ವೈದ್ಯರು ನಿರ್ಧರಿಸಿದ್ದಾರೆ ಎಂದು ತಿಳಿಸಿದ್ದಾರೆ. ಚಿಕಿತ್ಸೆಗಾಗಿ ಅವರನ್ನು ಬಾಲಿಯಿಂದ ಮುಂಬೈಗೆ ವಿಮಾನದ ಮೂಲಕ ಕರೆತರಲು ಸಿದ್ಧತೆ ನಡೆಯುತ್ತಿದ್ದು, …
Read More »ಒಂದೇ ದಿನ 6 ಚಿನ್ನ ಸೇರಿ 10 ಪದಕ – 5ನೇ ಸ್ಥಾನಕ್ಕೆ ಭಾರತ ಹೈಜಂಪ್
ನಗೋಯ: ಏಷ್ಯನ್ ಗೇಮ್ಸ್‌ನಲ್ಲಿ ಇಂದು ಭಾರತ ಒಂದೇ ದಿನ 6 ಚಿನ್ನದ ಪದಕವನ್ನು ಪಡೆಯುವ ಮೂಲಕ ಪದಕ ಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಜಿಗಿದಿದೆ. ಗುರುವಾರ ಭಾರತ 10 ಚಿನ್ನ, 23 ಬೆಳ್ಳಿ, 33 ಕಂಚಿನ ಪದಕವನ್ನು ಸೇರಿ ಒಟ್ಟು 66 ಪದಕ ಪಡೆಯುವ ಮೂಲಕ 8ನೇ ಸ್ಥಾನದಲ್ಲಿತ್ತು. ಆದರೆ ಇಂದು 6 ಚಿನ್ನ, 2 ಬೆಳ್ಳಿ, 2 ಕಂಚಿನ ಪದಕ ಸೇರಿ ಒಟ್ಟು 10 ಪದಕ ಪಡೆದಿದೆ. ಇಂದು ಬಾಕ್ಸಿಂಗ್‌ನಲ್ಲಿ …
Read More »
Laxmi News 24×7