Breaking News

Daily Archives: ಅಕ್ಟೋಬರ್ 3, 2026

ಜ್ಞಾನೇಶ್ ಕುಮಾರ್ ರಿಸೈನ್‌ ಮಾಡದಿದ್ದರೆ ಮೋದಿ ರಾಜೀನಾಮೆಗೆ ದೇಶವ್ಯಾಪಿ ಹೋರಾಟ: ಅಭಿಜಿತ್‌ ದೀಪ್ಕೆ

ಮುಂಬೈ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಕ್ಷಣವೇ ರಾಜೀನಾಮೆ ನೀಡಬೇಕು, ಒಂದು ವೇಳೆ ಅವರು ರಾಜೀನಾಮೆ ನೀಡದಿದ್ದರೆ ಮುಂದಿನ ದಿನಗಳಲ್ಲಿ ನಾವು ನೇರವಾಗಿ ನರೇಂದ್ರ ಮೋದಿ i ಅವರ ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ಹೋರಾಟವನ್ನು ತೀವ್ರಗೊಳಿಸುತ್ತೇವೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಹೇಳಿದ್ದಾರೆ. ಮುಂಬೈ ಶಿವಾಜಿ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ದೇಶದಲ್ಲಿ ಸುಮಾರು 13 ಕೋಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಜ್ಞಾನೇಶ್ ಕುಮಾರ್ …

Read More »

ಫ್ಲೈದುಬೈ ವಿಮಾನದಲ್ಲಿ ನಡೆದ ಘಟನೆ ಭಯೋತ್ಪಾದಕ ಕೃತ್ಯ: ಸ್ಮಿತ್ ಮಚ್ಚರ್ ಸಾಹಸಕ್ಕೆ ಯುಎಇ ಶ್ಲಾಘನೆ

ದುಬೈ: ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ  ವಿಮಾನದ ಕಾಕ್‌ಪಿಟ್‌ನಲ್ಲಿ ನಡೆದ ಹಲ್ಲೆಯ ಘಟನೆಯನ್ನು ಯುನೈಟೆಡ್ ಅರಬ್ ಎಮಿರೇಟ್ಸ್  ಅಧಿಕೃತವಾಗಿ ಭಯೋತ್ಪಾದಕ ಕೃತ್ಯ ಎಂದು ಕರೆದಿದೆ. ಘಟನೆಯ ಉದ್ದೇಶ ಹಾಗೂ ಹಿನ್ನೆಲೆಯ ಕುರಿತು ಅಧಿಕಾರಿಗಳು ತನಿಖೆ ಮುಂದುವರಿಸಿರುವ ಬೆನ್ನಲ್ಲೇ, ಗಂಭೀರ ಅಪಾಯದ ನಡುವೆಯೂ ಪರಿಸ್ಥಿತಿಯನ್ನು ನಿಯಂತ್ರಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರ ಸಾಹಸ ಮತ್ತು ಜವಾಬ್ದಾರಿಯನ್ನು ಯುಎಇ ಅಧ್ಯಕ್ಷರ ಸಲಹೆಗಾರ ಅನ್ವರ್ ಗರ್ಗಾಶ್ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ …

Read More »

ಗುಜರಾತ್‌ ಏಕರೂಪ ನಾಗರಿಕ ಸಂಹಿತೆಗೆ ಮುರ್ಮು ಸಹಿ – ಬುಡಕಟ್ಟು ಸಮುದಾಯಕ್ಕೆ ವಿನಾಯಿತಿ

ಗಾಂಧಿನಗರ: ಉತ್ತರಾಖಂಡದ ಬೆನ್ನಲ್ಲೇ ದೇಶದಲ್ಲೇ ಎರಡನೇ ರಾಜ್ಯವಾಗಿ ಗುಜರಾತ್ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಸಜ್ಜಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಗುಜರಾತ್ ಏಕರೂಪ ನಾಗರಿಕ ಸಂಹಿತೆ ಮಸೂದೆ, 2026ಕ್ಕೆ ತಮ್ಮ ಅಂಕಿತ ಹಾಕಿದ್ದಾರೆ. ರಾಜ್ಯ ಸರ್ಕಾರವು ನಿಯಮಾವಳಿಗಳ ಅಧಿಸೂಚನೆ  ಹೊರಡಿಸಿದ ನಂತರ ಈ ನೂತನ ಕಾಯ್ದೆ ಸಂಪೂರ್ಣವಾಗಿ ಜಾರಿಗೆ ಬರಲಿದೆ. ಪರಿಶಿಷ್ಟ ಪಂಗಡಗಳ  ಸಮುದಾಯವನ್ನು ಈ ಕಾಯ್ದೆಯ ವ್ಯಾಪ್ತಿಯಿಂದ ಹೊರಗಿಡಲಾಗಿದೆ. ಗುಜರಾತ್ ವಿಧಾನಸಭೆಯಲ್ಲಿ ಸುಮಾರು ಏಳು ಮುಕ್ಕಾಲು …

Read More »

ಕಾವೇರಿ ನೀರು ಹರಿವು 2,000 ಕ್ಯೂಸೆಕ್‌ ಇಳಿಸಲು CWMAಗೆ ಕರ್ನಾಟಕ ಮನವಿ: ಚಲುವರಾಯಸ್ವಾಮಿ

ಬೆಂಗಳೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ತಲೆದೋರಿರುವ ತೀವ್ರ ಬರ ಪರಿಸ್ಥಿತಿ ಹಾಗೂ ಜಲಾಶಯಗಳಲ್ಲಿ ನೀರಿನ ಅಭಾವದ ಹಿನ್ನೆಲೆಯಲ್ಲಿ, ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ  ಸೆಪ್ಟೆಂಬರ್ 24, 2026ರಂದು ನಡೆದ 58ನೇ ಸಭೆಯಲ್ಲಿ ನೀಡಿದ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಕರ್ನಾಟಕ ಸರ್ಕಾರ ಇಂದು ಪ್ರಾಧಿಕಾರಕ್ಕೆ ಅಧಿಕೃತ ಮನವಿ ಸಲ್ಲಿಸಿದೆ ಎಂದು ಜಲ ಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ಸಭೆಯಲ್ಲಿ ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಪ್ರತಿದಿನ 4,000 …

Read More »

ಪೂವಮ್ಮಗೆ ಮಂಗಳೂರಿನಲ್ಲಿ ಅದ್ಧೂರಿ ಸ್ವಾಗತ – ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ

ಮಂಗಳೂರು: ಏಷ್ಯನ್ ಗೇಮ್ಸ್ ರಿಲೇಯಲ್ಲಿ ಚಿನ್ನದ ಪದಕ ಗೆದ್ದಿರುವ ಕರ್ನಾಟಕದ ಕ್ರೀಡಾಪಟು ಎಂ.ಆರ್. ಪೂವಮ್ಮ  ಮಂಗಳೂರಿಗೆ ಆಗಮಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೂವಮ್ಮ ಅವರಿಗೆ ಅಭಿಮಾನಿಗಳು ಹಾಗೂ ಕ್ರೀಡಾಭಿಮಾನಿಗಳಿಂದ ಅದ್ಧೂರಿ ಸ್ವಾಗತ ದೊರೆಯಿತು. ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಎಂ.ಆರ್. ಪೂವಮ್ಮ, ದೇಶಕ್ಕೆ ಮೆಡಲ್ ತಂದುಕೊಟ್ಟಿರುವುದು ನನಗೆ ತುಂಬಾ ಖುಷಿ ನೀಡಿದೆ. ಆದರೆ, ರಾಜ್ಯ ಸರ್ಕಾರದಿಂದ ನಿರೀಕ್ಷಿತ ಪ್ರೋತ್ಸಾಹ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ …

Read More »

ಕಬ್ಬು ಬೆಳೆಗಾರರ ಸಭೆಗೆ ಹತ್ತು ದಿನ ಮೊದಲೇ ಸಿಎಂಗೆ ಆಹ್ವಾನ; ಜೋಶಿಯಿಂದ ಡಿಕೆಶಿಗೆ ಪತ್ರ

ನವದೆಹಲಿ: ಕರ್ನಾಟಕದ ಕಬ್ಬು ಬೆಳೆಗಾರರ ಬೇಡಿಕೆ-ಸಮಸ್ಯೆಗಳ ಬಗ್ಗೆ ಮುಕ್ತವಾಗಿ ಚರ್ಚಿಸಲು ಅ.12ರಂದು ದೆಹಲಿಯಲ್ಲಿ ನಡೆಯಲಿರುವ ಮಹತ್ವದ ಸಭೆಗೆ ಆಗಮಿಸುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರಿಗೆ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್‌ ಜೋಶಿ ಹತ್ತು ದಿನಗಳ ಮೊದಲೇ ಪತ್ರ ಬರೆದು ಆಹ್ವಾನಿಸಿದ್ದಾರೆ. 2026–27ರ ಕಬ್ಬು ನುರಿಸುವ ಋತುವಿನಲ್ಲಿ ರಾಜ್ಯದ ಕಬ್ಬು ಬೆಳೆಗಾರರಿಗೆ ಕಬ್ಬಿನ ದರಕ್ಕೆ ಸಂಬಂಧಿಸಿದಂತೆ ಮಹತ್ತರ ಚರ್ಚೆ ನಡೆಸಲು ನವದೆಹಲಿಯ ಕೃಷಿ ಭವನದಲ್ಲಿ ಅ.12ರಂದು ಮಧ್ಯಾಹ್ನ …

Read More »

ಬಿಜೆಪಿ ಕಾರ್ಯಕರ್ತರ ವಿರುದ್ಧ ಪ್ರಕರಣ: ಡಾ. ಸೋನಾಲಿ ಸರ್ನೋಬತ್ ಖಂಡನೆ

ಬೆಳಗಾವಿ: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ  ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿರುವುದನ್ನು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಡಾ. ಸೋನಾಲಿ ಸರ್ನೋಬತ್ ಖಂಡಿಸಿದ್ದಾರೆ.ಈ ಕುರಿತು ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಬಿಜೆಪಿ ಕಾರ್ಯಕರ್ತರ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ. ಅನರ್ಹ ಮತದಾರರ ಹೆಸರುಗಳನ್ನು ಪರಿಶೀಲಿಸಿ, ನಿಯಮಾನುಸಾರ ಮತದಾರರ ಪಟ್ಟಿಯಿಂದ ತೆಗೆದುಹಾಕುವಂತೆ ಬಿಜೆಪಿ …

Read More »

ಉದ್ಯಮ ಸಿದ್ಧ ಪ್ರತಿಭೆ ನಿರ್ಮಾಣಕ್ಕೆ ಕೆಎಲ್ಎಸ್ ಜಿಐಟಿ ಮತ್ತು ಕ್ಯೂಎನ್‌ಎಕ್ಸ್ ಸಹಯೋಗ

ಬೆಳಗಾವಿ: QNX GIT Leadership Meet ಪ್ರಕಾರ, ಕೆಎಲ್ಎಸ್ ಗೊಗಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ  ಸಂಸ್ಥೆಯು QNX Everywhere Initiative ಅಂಗವಾಗಿ QNX ನಾಯಕತ್ವ ತಂಡದೊಂದಿಗೆ ಸಂವಾದ ಕಾರ್ಯಕ್ರಮವನ್ನು ಆಯೋಜಿಸಿತು. ಈ ಕಾರ್ಯಕ್ರಮದ ಉದ್ದೇಶವು ಉದ್ಯಮ ಮತ್ತು ಶೈಕ್ಷಣಿಕ ಕ್ಷೇತ್ರಗಳ ನಡುವಿನ ಸಹಯೋಗವನ್ನು ಬಲಪಡಿಸುವುದು ಹಾಗೂ ಆಟೋಮೊಟಿವ್, ಎಂಬೆಡೆಡ್ ಮತ್ತು ರಿಯಲ್-ಟೈಮ್ ತಂತ್ರಜ್ಞಾನಗಳ ಕ್ಷೇತ್ರದಲ್ಲಿ ಉದಯೋನ್ಮುಖ ಅವಕಾಶಗಳ ಕುರಿತು ಜಾಗೃತಿ ಮೂಡಿಸುವುದಾಗಿತ್ತು. ಕಾರ್ಯಕ್ರಮದಲ್ಲಿ ವೆಂಕಟಸದಾಶಿವ ರಾವ್ ಪೇರಂ, ನಿರ್ದೇಶಕರು (ಮಾರಾಟ), …

Read More »

₹2.15 ಲಕ್ಷ ಮೌಲ್ಯದ ಹೆರಾಯಿನ್ ಜಪ್ತಿ; ಬೆಳಗಾವಿ ಪೊಲೀಸರಿಂದ ಓರ್ವನ ಬಂಧನ

ಬೆಳಗಾವಿ: ನಗರದಲ್ಲಿ ಅಕ್ರಮವಾಗಿ ಹೆರಾಯಿನ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಓರ್ವನನ್ನು ಬಂಧಿಸಿದ್ದಾರೆ. ಬಂಧಿತನಿಂದ ₹2.15 ಲಕ್ಷ ಮೌಲ್ಯದ ಹೆರಾಯಿನ್ ಸೇರಿದಂತೆ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಬಂಧಿತನನ್ನು ಸಂದೀಪ ವಿಜಯ ಅನಗೋಳಕರ (27) ಎಂದು ಗುರುತಿಸಲಾಗಿದೆ. ಬೆಳಗಾವಿ ನಗರದ ಬಸವನಗಲ್ಲಿಯ ಸಾರ್ವಜನಿಕ ಸ್ಥಳದಲ್ಲಿ ಹೆರಾಯಿನ್ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ 10.77 ಗ್ರಾಂ …

Read More »

ಶಾಸಕ ಅಭಯ್ ಪಾಟೀಲ್ ವಿರುದ್ಧ ಕಾಂಗ್ರೆಸ್ ದೂರು

ಬೆಳಗಾವಿ: ದಕ್ಷಿಣ ಮತಕ್ಷೇತ್ರದ 2,598 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವಂತೆ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಶಾಸಕ ಅಭಯ್ ಪಾಟೀಲ್ ವಿರುದ್ಧ ಕಾಂಗ್ರೆಸ್ ನಗರ ಘಟಕ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಈ ಕುರಿತು ಶಾಹಾಪುರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿರುವ ಕಾಂಗ್ರೆಸ್ ಮುಖಂಡರು, ಅಭಯ್ ಪಾಟೀಲ್ ಅವರು 2,598 ಮತದಾರರನ್ನು ನಕಲಿ ಮತದಾರರೆಂದು ಗುರುತಿಸಿ, ಅವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವಂತೆ ಮನವಿ ಮಾಡಿದ್ದಾರೆ …

Read More »