Breaking News

Daily Archives: ಅಕ್ಟೋಬರ್ 6, 2026

ಲಾರಿಗೆ ಕಾರು ಡಿಕ್ಕಿ – ಮೂವರು ದುರ್ಮರಣ, ಇಬ್ಬರಿಗೆ ಗಾಯ

ಚಿತ್ರದುರ್ಗ: ಲಾರಿಗೆ  ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಕೆಆರ್ ಹಳ್ಳಿ ಗೇಟ್ ಬಳಿ ನಡೆದಿದೆ. ಘಟನೆಯಲ್ಲಿ ಕಾರಲ್ಲಿದ್ದ ಕುಷ್ಟಗಿ ಮೂಲದ ಶಶಿಧರ್ (22), ಮಂಜುನಾಥ್ (22) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಿರಿಯೂರು ಆಸ್ಪತ್ರೆಗೆ ಸಾಗಿಸುವ ವೇಳೆ ಬಸವರಾಜ್ (21) ಮೃತಪಟ್ಟಿದ್ದಾರೆ. ಕಾರಲ್ಲಿದ್ದ ಇಬ್ಬರು ಗಾಯಗೊಂಡಿದ್ದು, ಹಿರಿಯೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಲಾರಿ ಟೈರ್ ಸಿಡಿದು ಧಿಡೀರ್ ಎಡಕ್ಕೆ …

Read More »

ಕಲಬುರಗಿಯಲ್ಲಿ ತರಬೇತಿ ವಿಮಾನ ತುರ್ತು ಭೂಸ್ಪರ್ಶ – ತೊಗರಿ ಹೊಲದಲ್ಲಿ ಲ್ಯಾಂಡಿಂಗ್‌

ಕಲಬುರಗಿ: ತಾಂತ್ರಿಕ ದೋಷದಿಂದ ತರಬೇತಿ ವಿಮಾನವೊಂದು ರೈತರ ಜಮೀನಿನಲ್ಲಿ ತುರ್ತು ಭೂಸ್ಪರ್ಶ ಆಗಿರುವ ಘಟನೆ ಕಲಬುರಗಿ  ವಿಮಾನ ನಿಲ್ದಾಣದ ಸಮೀಪ ನಡೆದಿದೆ. ತೊಗರಿ ಹೊಲದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಲಾಗಿದ್ದು, ವಿಮಾನದಲ್ಲಿದ್ದ ಇಬ್ಬರು ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ. ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಿಬ್ಬಂದಿ ಸಮಯಪ್ರಜ್ಞೆ ಮೆರೆದು ವಿಮಾನವನ್ನು ಜಮೀನಿನಲ್ಲಿ ಸುರಕ್ಷಿತವಾಗಿ ಇಳಿಸಿದ್ದಾರೆ. ಇದರಿಂದ ಭಾರಿ ಅನಾಹುತ ತಪ್ಪಿದೆ.  ಘಟನೆ ವಿಶ್ವವಿದ್ಯಾಲಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಮಾಹಿತಿ ತಿಳಿದು …

Read More »

ನೇಮಕಾತಿ ಅಕ್ರಮ ಕೇಸ್‌; ಶಾಂತ ಹೊಸಮನಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ಹೈಕೋರ್ಟ್ ನಕಾರ

ಬೆಂಗಳೂರು: ಕೆಪಿಎಸ್‌ಸಿಯ  384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತ ಹೊಸಮನಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಲು ಹೈಕೋರ್ಟ್‌ ನಿರಾಕರಿಸಿದೆ. ಶಾಂತ ಹೊಸಮನಿ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ ಮೊರೆ ಹೋಗಿದ್ದರು. ಹೈಕೋರ್ಟ್ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಪ್ರಕರಣದಲ್ಲಿ ಶಾಂತ ಅವರು ಎರಡನೇ ಆರೋಪಿ ಎಂದು ಸರ್ಕಾರದ ಪರ ವಕೀಲ ಬಿ.ಎನ್.ಜಗದೀಶ್ ವಾದಿಸಿದರು. ಅಭ್ಯರ್ಥಿಗಳಿಗೆ ಅಂಕ ನೀಡಿರುವ ವಿಚಾರಕ್ಕೆ …

Read More »

ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಬಂಧನ

ಬೆಂಗಳೂರು: ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌  ಅವರನ್ನು ಜಾರಿ ನಿರ್ದೇಶನಾಲಯ  ಅಧಿಕಾರಿಗಳು ಬಂಧಿಸಿದ್ದಾರೆ. ಕೆಪಿಎಸ್‌ಸಿ ಹಗರಣ ಪ್ರಕರಣ ಸಂಬಂಧ 2ನೇ ಬಾರಿಗೆ ಶಿವಶಂಕರಪ್ಪ ಅವರ ಮನೆ ಮೇಲೆ ಇ.ಡಿ ದಾಳಿ ಮಾಡಿತ್ತು. ಅದರ ಬೆನ್ನಲ್ಲೇ ಅವರನ್ನು ಬಂಧಿಸಲಾಗಿದೆ. ಡಾಲರ್ಸ್ ಕಾಲೋನಿಯಲ್ಲಿರುವ ಮನೆ ಮೇಲೆ ದಾಳಿ ನಡೆಸಿ, ಕೆಪಿಎಸ್‌ಸಿ ಸದಸ್ಯೆ ಗೀತಾ ಅವರನ್ನು ವಶಕ್ಕೆ ಪಡೆಯಲಾಗಿದೆ. ಅಭ್ಯರ್ಥಿಗಳ ಜೊತೆ ನೇರ ಸಂಪರ್ಕ ಹೊಂದಿದ್ದ ಆರೋಪ ಇವರ ಮೇಲಿತ್ತು. ತಪ್ಪೊಪ್ಪಿಗೆ ಮಾಡಿಕೊಂಡಿದ್ದ …

Read More »

ರಾಜ್ಯದ ಜನತೆಗೆ ಬಿಗ್‌ ಶಾಕ್‌ – ಹಾಲಿನ ದರ 8 ರೂ. ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ

ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರ ಬಿಗ್‌ ಶಾಕ್‌ ಕೊಟ್ಟಿದೆ. ಹಾಲಿನ  ದರ 8 ರೂ. ಹೆಚ್ಚಳಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಇದರ ಜೊತೆಗೆ ಬಸ್‌ ಟಿಕೆಟ್‌ ದರ ಹೆಚ್ಚಳಕ್ಕೂ ಒಪ್ಪಿಗೆ ಸೂಚಿಸಲಾಗಿದೆ. ಬಹುತೇಕ ನವೆಂಬರ್ 1 ರಿಂದ ಹಾಲಿನ ದರ ಹೆಚ್ಚಳವಾಗುವ ಸಾಧ್ಯತೆ ಇದೆ. 80:20 ರಂತೆ ದರ ಏರಿಕೆ ತೀರ್ಮಾನಕ್ಕೆ ಸರ್ಕಾರ ಬಂದಿದೆ. ಅಂದರೆ, 8 ರೂ. ಏರಿಕೆಯಾದರೆ 6 ರೂ. ರೈತರಿಗೆ ಮತ್ತು 2 ರೂ. …

Read More »

ಪ್ರದೋಷ್‌ ಮಾಫಿ ಸಾಕ್ಷಿ ಸಂಬಂಧ ದರ್ಶನ್‌ ಸಲ್ಲಿಸಿದ್ದ 2 ಅರ್ಜಿಗಳು ವಜಾ

ಬೆಂಗಳೂರು: ಪ್ರದೋಷ್ ಮಾಫಿ ಸಾಕ್ಷಿ ಸಂಬಂಧ ದರ್ಶನ್  ಸಲ್ಲಿಸಿದ್ದ ಎರಡು ಅರ್ಜಿಗಳನ್ನ ಸೆಷನ್ಸ್ ಕೋರ್ಟ್ ವಜಾ ಮಾಡಿದೆ. ಜೈಲಿಂದ ಪ್ರದೋಷ್ ಕರೆತರುವಾಗ ಯಾರೊಂದಿಗೂ ಮಾತನಾಡಲು ಅವಕಾಶ ನೀಡಬಾರದು ಅಂತಾ ಸಿಆರ್ ಪಿಸಿ ಸೆಕ್ಷನ್ 267 ಮತ್ತು ಬಿಎನ್‌ಎಸ್‌ಎಸ್ ಸೆಕ್ಷನ್ 302ರ ಅಡಿಯಲ್ಲಿ ಸಲ್ಲಿಸಿದ್ದ ಒಂದು ಅರ್ಜಿ, ಎವಿಡೆನ್ಸ್ ಆ್ಯಕ್ಟ್ ಸೆಕ್ಷನ್ 137 ಮತ್ತು 138 ಅಡಿಯಲ್ಲಿ ಸಲ್ಲಿಸಿದ್ದ ಮತ್ತೊಂದು ಅರ್ಜಿ ವಜಾಗೊಂಡಿದೆ. ಮಾಫಿ ಸಾಕ್ಷಿ ದಾಖಲು ವೇಳೆ ನಿನ್ನೆ ಮರೆತಿದ್ದೆ …

Read More »

ಕೇಂದ್ರದಿಂದ 2 ಮಹತ್ವದ ನಿರ್ಧಾರ; ಸಾರಿಗೆಗೆ ಹೊಸ ಪ್ರಾಧಿಕಾರ, ಸಣ್ಣ ಉದ್ಯಮಗಳಿಗೆ 10 ಸಾವಿರ ಕೋಟಿ ರೂ. ನಿಧಿ

ನವದೆಹಲಿ: ಸಾರಿಗೆ ಮತ್ತು ಸಣ್ಣ ಹಾಗೂ ಮಧ್ಯಮ ಉದ್ಯಮಗಳ ಕ್ಷೇತ್ರಕ್ಕೆ ಉತ್ತೇಜನ ನೀಡಲು ಕೇಂದ್ರ ಸಚಿವ ಸಂಪುಟ ಎರಡು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ. ಸಮಗ್ರ ಸಾರಿಗೆ ಮತ್ತು ಸರಕು ಸಾಗಣೆ ಪ್ರಾಧಿಕಾರ ಸ್ಥಾಪನೆಗೆ ಹಾಗೂ 10,000 ಕೋಟಿ ಮೊತ್ತದ ಎಸ್‌ಎಂಇ ಬೆಳವಣಿಗೆ ನಿಧಿ (SGF) ಸ್ಥಾಪನೆಗೆ ಸಂಪುಟ ಅನುಮೋದನೆ ನೀಡಿದೆ. ಸಾರಿಗೆ ಮತ್ತು ಸರಕು ಸಾಗಣೆ ಕ್ಷೇತ್ರದಲ್ಲಿ ಸಂಶೋಧನೆ, ಯೋಜನೆ, ಯೋಜನೆಗಳ ಮೌಲ್ಯಮಾಪನ, ಮೇಲ್ವಿಚಾರಣೆ ಹಾಗೂ ಪರಿಣಾಮದ ಅಂದಾಜುಗಳನ್ನು ಸಮನ್ವಯಗೊಳಿಸುವುದು …

Read More »

ಉಡುಪಿ: 18 ವರ್ಷಗಳಿಂದ ಕೋರ್ಟ್‌ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಅರೆಸ್ಟ್‌

ಉಡುಪಿ: ಮಣಿಪಾಲ ಪೊಲೀಸ್ ಠಾಣೆಯ ಪ್ರಕರಣವೊಂದರಲ್ಲಿ ಕಳೆದ 18 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಾರೆಂಟ್ ಆರೋಪಿಗಳಾದ ಮುಹಮ್ಮದ್ ಹನೀಫ್ ಮತ್ತು ಫಯಾಜ್ ಮಹಮ್ಮದ್ ಬಂಧಿತ ಆರೋಪಿಗಳು. ಮಣಿಪಾಲ ಠಾಣಾ ಸಿಬ್ಬಂದಿ ಚೇತನ್ ಮತ್ತು ಮಂಜುನಾಥ ಆರೋಪಿಗಳನ್ನು ಉಳ್ಳಾಲ ಮತ್ತು ತಲಪಾಡಿಯಲ್ಲಿ ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದರು. ನ್ಯಾಯಾಲಯವು ಆರೋಪಿಗಳಿಗೆ ತಲಾ 10,000 ರೂ. ದಂಡ ವಿಧಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿದೆ. ಕಾರ್ಕಳ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದ …

Read More »

ಲಾರಿಗೆ ಕಾರು ಡಿಕ್ಕಿ – ಮೂವರು ದುರ್ಮರಣ, ಇಬ್ಬರಿಗೆ ಗಾಯ

ಚಿತ್ರದುರ್ಗ: ಲಾರಿಗೆ  ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಚಿತ್ರದುರ್ಗ  ಜಿಲ್ಲೆ ಹಿರಿಯೂರು  ತಾಲೂಕಿನ ಕೆಆರ್ ಹಳ್ಳಿ ಗೇಟ್ ಬಳಿ ನಡೆದಿದೆ. ಘಟನೆಯಲ್ಲಿ ಕಾರಲ್ಲಿದ್ದ ಕುಷ್ಟಗಿ ಮೂಲದ ಶಶಿಧರ್ (22), ಮಂಜುನಾಥ್ (22) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಿರಿಯೂರು ಆಸ್ಪತ್ರೆಗೆ ಸಾಗಿಸುವ ವೇಳೆ ಬಸವರಾಜ್ (21) ಮೃತಪಟ್ಟಿದ್ದಾರೆ. ಕಾರಲ್ಲಿದ್ದ ಇಬ್ಬರು ಗಾಯಗೊಂಡಿದ್ದು, ಹಿರಿಯೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಲಾರಿ ಟೈರ್ ಸಿಡಿದು ಧಿಡೀರ್ ಎಡಕ್ಕೆ …

Read More »

ಖಾನಾಪುರದಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಗೃಹಲಕ್ಷ್ಮಿ ಪುನರ್‌ಪರಿಶೀಲನೆ ತರಬೇತಿ

ಖಾನಾಪುರ: ಗೃಹಲಕ್ಷ್ಮಿ ಯೋಜನೆಯ ಪುನರ್‌ಪರಿಶೀಲನೆ ಹಾಗೂ ಕೆವೈಸಿ ಪ್ರಕ್ರಿಯೆ ಕುರಿತು ಅಂಗನವಾಡಿ ಕಾರ್ಯಕರ್ತೆಯರಿಗೆ ಒಂದು ದಿನದ ತರಬೇತಿ ಕಾರ್ಯಕ್ರಮ ಮಂಗಳವಾರ ಖಾನಾಪುರ ನಗರದ ಶಿವಸ್ಮಾರಕ ಭವನದಲ್ಲಿ ನಡೆಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬಾಲ ಅಭಿವೃದ್ಧಿ ಯೋಜನಾ ಕಚೇರಿ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಂಚ ಹಮೀ ಯೋಜನೆಗಳ ತಾಲೂಕು ಅಧ್ಯಕ್ಷ ಸೂರ್ಯಕಾಂತ ಕುಲಕರ್ಣಿ ವಹಿಸಿದ್ದರು. ತರಬೇತಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪುನರ್‌ಪರಿಶೀಲನೆ, ಕೆವೈಸಿ ಮಾಡುವುದು ಹಾಗೂ ಯೋಜನೆಗೆ …

Read More »