Breaking News

Daily Archives: ಅಕ್ಟೋಬರ್ 8, 2026

2 ಸಾವಿರ ರೂ. ಕಳ್ಳತನಕ್ಕೆ ಎರಡು ಲಕ್ಷದ ಕಾರಿನಲ್ಲಿ ಬಂದ ಅಂತರ ಜಿಲ್ಲಾ ಕಳ್ಳರು ಲಾಕ್!

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹಾಳದಕಟ್ಟಾದ ಮನೆಯಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಸಿದ್ದಾಪುರ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಭೇದಿಸಿದ್ದಾರೆ. ಅಂತರ ಜಿಲ್ಲಾ ಕಳ್ಳರ ಗ್ಯಾಂಗ್‌ನ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಘಟನೆ ಏನು? ಹಾಳದಕಟ್ಟಾ ಗ್ರಾಮದ ರಾಜು ತಂದೆ ಉಮೇಶ ಜಾಧವ್ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ರಾಜು ಜಾಧವ್ ಅವರು ಸಿದ್ದಾಪುರದ ಹಾಳದಕಟ್ಟಾದಲ್ಲಿರುವ ತಮ್ಮ ಮೂಲ ಮನೆಯಲ್ಲಿ ವಯಸ್ಸಾದ ತಾಯಿ ಹಾಗೂ ಮಾನಸಿಕ …

Read More »

ಮನ್‌ಮುಲ್ ಹಾಲಿನ ಪುಡಿ ಕಲಬೆರಕೆ ಹಗರಣ – ಸಿಬಿಐ ತನಿಖೆಗೆ ಆಗ್ರಹಿಸಿ ಬಿಜೆಪಿ ಬೃಹತ್ ಪ್ರತಿಭಟನೆ

ಮಂಡ್ಯ: ಮಂಡ್ಯ ಜಿಲ್ಲಾ ಹಾಲು ಒಕ್ಕೂಟದ  ಬಹುಕೋಟಿ ಹಾಲಿನ ಪುಡಿ ಕಲಬೆರಕೆ  ಪ್ರಕರಣ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಪ್ರಕರಣದ ನಿಷ್ಪಕ್ಷಪಾತ ತನಿಖೆಗಾಗಿ ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಗೆಜ್ಜಲಗೆರೆಯಲ್ಲಿರುವ ಮನ್‌ಮುಲ್ ಆವರಣದ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಿದರು. ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಹಾಗೂ ಮಾಜಿ ಸಚಿವ ಕೆ.ಸಿ. ನಾರಾಯಣಗೌಡ ಅವರ ನೇತೃತ್ವದಲ್ಲಿ ನಡೆದ ಈ ಹೋರಾಟದಲ್ಲಿ ನೂರಾರು ಕಾರ್ಯಕರ್ತರು ಭಾಗವಹಿಸಿ ಸರ್ಕಾರದ ವಿರುದ್ಧ ತೀವ್ರ …

Read More »

ಜಯನಗರ ಪೊಲೀಸ್ ಠಾಣೆಗೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಭೇಟಿ

ಬೆಂಗಳೂರು: ಜಯನಗರ ಕ್ಷೇತ್ರದಲ್ಲಿ ವೋಟರ್ ಐಡಿ (ಮತದಾರರ ಪಟ್ಟಿ) ಪರಿಶೀಲನೆಗೆ ಸಂಬಂಧಿಸಿದಂತೆ ಬಿಜೆಪಿ ಕಾರ್ಯಕರ್ತರ ಮೇಲೆ ದಾಖಲಾಗಿರುವ ಸುಳ್ಳು ಎಫ್‌ಐಆರ್ ಅನ್ನು ಖಂಡಿಸಿ ಹಾಗೂ ಇದನ್ನು ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿ, ಪ್ರತಿಭಟನೆ ನಡೆಸಿದರು. ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಜಯನಗರ ಕ್ಷೇತ್ರದ ಶಾಸಕ ಸಿ.ಕೆ.ರಾಮಮೂರ್ತಿ ಅವರ ನೇತೃತ್ವದಲ್ಲಿ ಜಯನಗರ ಪೊಲೀಸ್ ಠಾಣೆಗೆ ಭೇಟಿ ನೀಡಿ, ಮನವಿ ಸಲ್ಲಿಸಲಾಯಿತು ಪ್ರಮುಖ ಮುಖಂಡರ ಭೇಟಿ ಹಾಗೂ ಆಕ್ರೋಶ: ಜಯನಗರ ಪೊಲೀಸ್ ಠಾಣೆಗೆ …

Read More »

ನೀರಿನ ಸಂಪಿನಲ್ಲಿ ಬಿದ್ದು 6 ವರ್ಷದ ಬಾಲಕ ಸಾವು

ಹುಬ್ಬಳ್ಳಿ: ನೀರಿನ ಸಂಪಿನಲ್ಲಿ ಬಿದ್ದು 6 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ  ನಡೆದಿದೆ. ಹುಬ್ಬಳ್ಳಿ ಉಣಕಲ್ ಗ್ರಾಮದ ಗಣೇಶ್ ಕಾಲೋನಿ ನಿವಾಸಿ ಸಿದ್ಧಾರ್ಥ್ ಮೃತ ದುರ್ದೈವಿ. ಸಿದ್ಧಾರ್ಥ್ 1ನೇ ತರಗತಿ ಓದುತ್ತಿದ್ದ. ಬೆಳಗ್ಗೆ 9 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ. ನೀರು ತೆಗೆಯಲು ತೆರೆದಿದ್ದ ಸಂಪಿನಲ್ಲಿ ಆಯತಪ್ಪಿ ಬಾಲಕ ಬಿದ್ದಿದ್ದಾನೆ. ಬಾಲಕ ಬಿದ್ದಿದ್ದನ್ನು ಗಮನಿಸಿದ ತಂದೆ ನಾಗಪ್ಪ ರಕ್ಷಣೆಗೆ ಯತ್ನಿಸಿದ್ದು, ಕೂಡಲೇ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಆಸ್ಪತ್ರೆಗೆ …

Read More »

ಮಕ್ಕಳಾಗದ ವಿಚಾರಕ್ಕೆ ಗಲಾಟೆ; ತವರಿನಿಂದ ಹಣ ತರಲು ನಿರಾಕರಿಸಿದ ಪತ್ನಿಯನ್ನೇ ಕೊಲೆಗೈದ ಪತಿ

ಕಲಬುರಗಿ: ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ ಮಾಡಿ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಕಲಬುರಗಿಯ ಚಿಂಚೋಳಿ ಪಟ್ಟಣದಲ್ಲಿ ನಡೆದಿದೆ. ಪತ್ನಿಯನ್ನು ಕೊಲೆ ಮಾಡಿದ ಬಳಿಕ ಆತ್ಮಹತ್ಯೆ ಮಾಡಿಕೊಂಡಂತೆ ಬಿಂಬಿಸಲು ಪತಿ ಮುಂದಾಗಿದ್ದ. ಚಿಂಚೋಳಿ ಪಟ್ಟಣದ ಪ್ರಿಯಾಂಕಾ ಹಡಪದ್ (30) ಮೃತಪಟ್ಟ ಮಹಿಳೆ. ಸೂರ್ಯಕಾಂತ್ ವಕೀಲ ವೃತ್ತಿ ಮಾಡಿಕೊಂಡಿದ್ದ ಎನ್ನಲಾಗಿದೆ. ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಸೂರ್ಯಕಾಂತ್ ಪತ್ನಿಗೆ …

Read More »

ಸ್ಟಿಂಗ್ ಆಪರೇಷನ್, ಪೆನ್‌ಡ್ರೈವ್ ಪಿತಾಮಹ ಕುಮಾರಸ್ವಾಮಿ: ಬಾಲಕೃಷ್ಣ

ಬೆಂಗಳೂರು: ಸ್ಟಿಂಗ್ ಆಪರೇಷನ್, ಪೆನ್‌ಡ್ರೈವ್ ಪಿತಾಮಹ ಕುಮಾರಸ್ವಾಮಿ  ಅಂತಾ ಸಚಿವ ಹೆಚ್‌. ಸಿ ಬಾಲಕೃಷ್ಣ  ವ್ಯಂಗ್ಯವಾಡಿದ್ದಾರೆ. ಹೈಕಮಾಂಡ್‌ಗೆ ಸ್ಟಿಂಗ್ ಆಪರೇಷನ್  ವೀಡಿಯೋ ಕೊಟ್ಟು ಡಿಕೆಶಿ  ಸಿಎಂ ಆಗಿದ್ದಾರೆ ಎಂಬ ಕೇಂದ್ರ ಸಚಿವ ಹೆಚ್‌.ಡಿ ಕುಮಾರಸ್ವಾಮಿ ಆರೋಪಕ್ಕೆ ಬಾಲಕೃಷ್ಣ ಪ್ರತಿಕ್ರಿಯಿಸಿ, ಡಿ.ಕೆ ಶಿವಕುಮಾರ್ ಅವರು ನಿನ್ನೆ ನಡೆದ ಕ್ಯಾಬಿನೆಟ್ ಸಭೆಯಲ್ಲಿ ಸಚಿವರಿಗೆ ಎಚ್ಚರಿಕೆ ನೀಡಿದ್ದಾರೆ. ಹುಷಾರಾಗಿರಿ, ಎಚ್ಚರದಿಂದ ಇರಿ ಎಂದು ಹೇಳಿದ್ದಾರೆ. ಆದರೆ, ಕುಮಾರಸ್ವಾಮಿಗೆ ಹೆದರಿಕೊಳ್ಳಿ ಎಂದು ಸಿಎಂ ಹೇಳಿಲ್ಲ ಎಂದು …

Read More »

ಸಿಎಂ ಆಗಲು ಡಿಕೆಶಿಯಿಂದಲೇ ಸ್ಟಿಂಗ್ ಆಪರೇಷನ್: ಹೆಚ್‌ಡಿಕೆ ಬಾಂಬ್

ಬೆಂಗಳೂರು: ಹೈಕಮಾಂಡ್‌ಗೆ ಸ್ಟಿಂಗ್ ಆಪರೇಷನ್  ವೀಡಿಯೋ ಕೊಟ್ಟು ಡಿಕೆಶಿ  ಸಿಎಂ ಆಗಿದ್ದಾರೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ  ಹೊಸ ಬಾಂಬ್ ಸಿಡಿಸಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಡಿಕೆಶಿ ಸಚಿವರಿಗೆ ಎಚ್ಚರಿಕೆ ಕೊಟ್ಟ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಎಚ್ಚರಿಕೆ ಕೊಟ್ಟಿದ್ದಾರೆ ಅಂತೆ. ಸಿಎಂ ಆಗೋಕೆ ಕಾರಣ ಹೈಕಮಾಂಡ್‌ಗೆ ಸ್ಟಿಂಗ್ ಆಪರೇಷನ್ ವೀಡಿಯೋ ಕೊಟ್ಟು ಸಿಎಂ ಆಗಿದ್ದಾರೆ ಅಂತ ಕಾಂಗ್ರೆಸ್‌ನವರು ಹೇಳುತ್ತಾರೆ. ಈ ಸಿಎಂಗೆ ಸ್ಟಿಂಗ್ ಆಪರೇಷನ್ ಮಾಡೋದೆ …

Read More »

ಹರಿಗೆ ಗ್ರಾಮದಲ್ಲಿ ಬೀಗರೂಟ ಬ್ಯಾನ್ – ಊಟ ಹಾಕಿಸಿದ್ರೆ 1 ಲಕ್ಷ, ಊಟ ಮಾಡಿದ್ರೆ 50 ಸಾವಿರ ದಂಡ

ಶಿವಮೊಗ್ಗ: ರಾಜ್ಯದಲ್ಲಿ ತೀವ್ರ ಬರಗಾಲಕ್ಕೆ  ರೈತರು, ಬಡ ಕುಟುಂಬಗಳು ಸಂಕಷ್ಟಕ್ಕೆ ಸಿಲುಕಿದ ಹಿನ್ನೆಲೆ ಶಿಕಾರಿಪುರ  ತಾಲೂಕಿನ ಹರಿಗೆ ಗ್ರಾಮಸ್ಥರು ಬೀಗರೂಟಕ್ಕೆ  ನಿಷೇಧ ಹೇರಿದ್ದಾರೆ. ಗ್ರಾಮಸ್ಥರು ಸಂಪ್ರದಾಯ ಬದಿಗಿರಿಸಿ, ಆರ್ಥಿಕ ಶಿಸ್ತಿಗೆ ಮಹತ್ವ ನೀಡಿದ್ದಾರೆ. ಬಿಗರೂಟ ಹಾಕಿದರೆ 1 ಲಕ್ಷ ರೂ. ದಂಡ ಹಾಗೂ ಊಟ ಮಾಡಿದ್ರೆ 50 ಸಾವಿರ ರೂ. ದಂಡ ಹಾಕಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ಇದರಿಂದ ಬಡವರು ಹಾಗೂ ಮಧ್ಯಮ ವರ್ಗದವರ ಆರ್ಥಿಕ ಹೊರೆ ಭಾರೀ ಇಳಿಕೆಯಾಗಲಿದೆ. ಇತ್ತೀಚೆಗೆ …

Read More »

ಬೆಂಗಳೂರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ತಾಯಿ, 3 ವರ್ಷದ ಮಗು ಸಾವು

ಬೆಂಗಳೂರು: ನಾಯಂಡಹಳ್ಳಿಯ ವಿನಾಯಕ ಲೇಔಟ್‌ನಲ್ಲಿ ನಡೆದ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಹಾಗೂ ಮಗು ಮೃತಪಟ್ಟಿದ್ದಾರೆ. ರಾಯಚೂರು ಮೂಲದ ಕರಿಲಿಂಗಪ್ಪ ಅವರ ಕುಟುಂಬ ವಿನಾಯಕ ಲೇಔಟ್‌ನಲ್ಲಿ ಕಳೆದ 25 ವರ್ಷಗಳಿಂದ ವಾಸವಾಗಿತ್ತು. ಕೂಲಿ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಿಸುತ್ತಿದ್ದ ಈ ಕುಟುಂಬ ಬಾಡಿಗೆ ಮನೆಯಲ್ಲಿ ವಾಸವಾಗಿತ್ತು. ನಿನ್ನೆ ಬೆಳಗ್ಗೆ ಸುಮಾರು 6:20ರ ವೇಳೆಗೆ ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿತ್ತು. ಬಾಗಿಲು ತೆಗೆದು ಅಡುಗೆ ಮಾಡಲು ಸ್ಟೌವ್ …

Read More »

ತಲೆಮರೆಸಿಕೊಂಡ ರೇಪ್‌ ಆರೋಪಿಗೆ ಠಾಣೆಯ ಮಾಹಿತಿ ರವಾನೆ – ಕಾನ್ಸ್‌ಟೇಬಲ್ ಸಸ್ಪೆಂಡ್‌

ಚಿಕ್ಕಮಗಳೂರು: ತಲೆಮರೆಸಿಕೊಂಡಿರುವ ಅತ್ಯಾಚಾರ ಆರೋಪಿ ಜೊತೆ ನಿರಂತರ ಸಂಪರ್ಕದಲ್ಲಿದ್ದುಕೊಂಡು ಸೂಕ್ಷ್ಮ ಮಾಹಿತಿ ರವಾನಿಸುತ್ತಿದ್ದ ಎನ್‌.ಆರ್‌ ಪುರ ಠಾಣೆಯ ಕಾನ್ಸ್‌ಟೇಬಲ್‌ ಒಬ್ಬನನ್ನು ಎಸ್‌ಪಿ ಜಿತೇಂದ್ರ ಕುಮಾರ್ ದಯ್ಮಾ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಎನ್.ಆರ್.ಪುರ ಠಾಣೆಯ ಕಾಂತೇಶ್ ಅಮಾನತಾದ ಪೇದೆ. ಅತ್ಯಾಚಾರ ಪ್ರಕರಣದ ಆರೋಪಿ ಸತೀಶ್ ಪಾತ್ರಿ ಕುಟುಂಬದ ಜೊತೆ ಕಾಂತೇಶ್‌ ನಿರಂತರ ಸಂಪರ್ಕದಲ್ಲಿದ್ದ. ಕಳೆದ ಒಂದು ತಿಂಗಳಿನಿಂದ ತಲೆಮರೆಸಿಕೊಂಡಿರುವ ಆರೋಪಿ ಸತೀಶ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಆದರೆ ಆರೋಪಿಗೆ ಠಾಣೆಯ …

Read More »