ಚಿಕ್ಕೋಡಿ: ಟಿಪ್ಪರ್‌ಗೆ ಕೆಎಸ್‌ಆರ್‌ಟಿಸಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ಮೃತಪಟ್ಟಿದ್ದು, 12 ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಅಪಘಾತದಲ್ಲಿ ಬಸ್ ಚಾಲಕ ಸಂಗಪ್ಪ ತಳವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಚಾಲಕ ಗದಗ ಜಿಲ್ಲೆಯ ರೋಣ ತಾಲೂಕಿನ ಸವದಿ ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಗಂಗಾವತಿಯಿಂದ ಬೆಳಗಾವಿ ಮಾರ್ಗವಾಗಿ ಕೊಲ್ಲಾಪುರಕ್ಕೆ ತೆರಳುತ್ತಿದ್ದ ಬಸ್ ಸಂಕೇಶ್ವರ …
Read More »Daily Archives: ಅಕ್ಟೋಬರ್ 9, 2026
ಮೈಸೂರು ದಸರಾ | ರಾಜ್ಯಾದ್ಯಂತ ಹೆಚ್ಚುವರಿ 3,000 KSRTC ಬಸ್ ವ್ಯವಸ್ಥೆ – ವಿಶೇಷ ಪ್ಯಾಕೇಜ್‌ಗಳೂ ಲಭ್ಯ
ಮೈಸೂರು: ರಾಜ್ಯಾದ್ಯಂತ ಮೈಸೂರು ದಸರಾ ಹಿನ್ನೆಲೆ 3000 ಕೆಎಸ್‌ಆರ್‌ಟಿಸಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದ್ದು, ಇದರೊಂದಿಗೆ ವಿಶೇಷ ಪ್ಯಾಕೇಜ್‌ಗಳ ಸೌಲಭ್ಯ ಮಾಡಲಾಗಿದೆ. ಅ.16ರಿಂದ ಅ.27ರವರೆಗೆ ರಾಜ್ಯಾದ್ಯಂತ ಹೆಚ್ಚುವರಿ 3,000 ಕೆಎಸ್‌ಆರ್‌ಟಿಸಿ ಬಸ್‌ಗಳು ಕಾರ್ಯನಿರ್ವಹಿಸಲಿವೆ. ಜೊತೆಗೆ ಬೆಂಗಳೂರಿನಿಂದ ಮೈಸೂರಿಗೆ 700 ದಸರಾ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಇನ್ನೂ ಮೈಸೂರಿನಿಂದ ಒಂದು ದಿನದ ಕೆಎಸ್‌ಆರ್‌ಟಿಸಿ ಪ್ಯಾಕೇಜ್ ವ್ಯವಸ್ಥೆ ಮಾಡಲಾಗಿದೆ. ಗಿರಿದರ್ಶಿನಿ, ಜಲದರ್ಶಿನಿ ಹಾಗೂ ದೇವದರ್ಶಿನಿ ಎಂಬ ಮೂರು ಪ್ಯಾಕೇಜ್‌ಗಳ ವ್ಯವಸ್ಥೆ ಮಾಡಲಾಗಿದೆ. ಗಿರಿದರ್ಶಿನಿ ಪ್ಯಾಕೇಜ್‌ನಲ್ಲಿ …
Read More »ಫಾರ್ಮ್-7 ದುರ್ಬಳಕೆ ಆರೋಪ – ಆಧಾರವಿಲ್ಲದೇ ಆರೋಪ ಮಾಡೋದು ಸರಿಯಲ್ಲ: ಯದುವೀರ್ ಕಿಡಿ
ಮಡಿಕೇರಿ: ಯಾವುದೇ ಸಾಕ್ಷಿ ಆಧಾರವಿಲ್ಲದೇ ಫಾರ್ಮ್-7 ದುರ್ಬಳಕೆ ಆರೋಪ ಮಾಡೋದು ಸರಿಯಲ್ಲ. ವಿಪಕ್ಷಗಳು ಎಸ್‌ಐಆರ್ ಪ್ರಕ್ರಿಯೆ ನಡೆಯುತ್ತಿರುವ ಹೊತ್ತಿನಲ್ಲಿ, ಅರ್ಧಸತ್ಯ ಮಾತನಾಡುತ್ತಾ, ಅಪಪ್ರಚಾರ ಮಾಡುತ್ತಾ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿವೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮಡಿಕೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಫಾರ್ಮ್-7 ವಿಚಾರದಲ್ಲೂ ಬಿಜೆಪಿ ಕಚೇರಿಯಿಂದ ನಾವು ಆಯ್ಕೆ ಮಾಡಿರುವವರು ಅಥವಾ ನೇಮಕ ಮಾಡಿರುವವರು ಅರ್ಜಿಗಳನ್ನು ಸಲ್ಲಿಸಿದ್ದಾರೆ …
Read More »ಅಂಬಾರಿ ತೂಕ ತಡೆಯಲಾಗದೇ ತಾಲೀಮು ಅರ್ಧಕ್ಕೆ ಮೊಟಕು – ಬಹುತೇಕ ಕ್ಯಾಪ್ಟನ್ ರೇಸ್‌ನಿಂದ ಮಹೇಂದ್ರ ಔಟ್
ಮೈಸೂರು: ಈ ಬಾರಿ ದಸರಾದಲ್ಲಿ ಅಂಬಾರಿ ಹೊರುವ ಆನೆ ಯಾವುದು ಅನ್ನೋದು ಇನ್ನೂ ಕುತೂಹಲವಾಗಿಯೇ ಇದೆ. ಇದರ ನಡುವೆ ಅಂಬಾರಿ ಹೊತ್ತು ತಾಲೀಮಿನ ವೇಳೆ ಮತ್ತೆ ವಿಘ್ನ ಎದುರಾಗಿದೆ. ಮರದ ಅಂಬಾರಿ ಹೊತ್ತು ತಾಲೀಮು ನಡೆಸುವ ವೇಳೆ ತೂಕ ತಡೆಯಲು ಆಗದೇ ಮಹೇಂದ್ರ ಅರ್ಧದಾರಿಯಲ್ಲೇ ಆಯುರ್ವೇದಿಕ ವೃತ್ತದಲ್ಲಿ ನಿಂತುಬಿಟ್ಟಿದ್ದಾನೆ. ಇದಕ್ಕೂ ಮುನ್ನ, ಮೊದಲ ದಿನವೂ ಮಹೇಂದ್ರ ಅರಮನೆಯ ಬಲರಾಮ ದ್ವಾರದ ಬಳಿಯೇ ನಿಂತುಬಿಟ್ಟಿದ್ದ. ಇಂದಿನ ತಾಲೀಮಿನಲ್ಲೂ ಅರ್ಧಕ್ಕೆ ಸುಸ್ತಾಗಿದ್ದಾನೆ. ತಕ್ಷಣ …
Read More »ಮೂಡಿಗೆರೆ ತಾಲೂಕಿನಲ್ಲಿ ಭಾರೀ ಮಳೆ – ಗಾಳಿಗೆ ಹಾರಿ ಹೋದ ಶಾಲೆಯ ಹೆಂಚುಗಳು
ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಿಂಗಾರು ಮಳೆ ಅಬ್ಬರ ಜೋರಾಗಿದೆ. ಮೂಡಿಗೆರೆ ತಾಲೂಕು ಸೇರಿದಂತೆ ಮಲೆನಾಡಿನ ಹಲವು ಭಾಗಗಳಲ್ಲಿ ಬಿರುಗಾಳಿಯೊಂದಿಗೆ ಧಾರಾಕಾರ ಮಳೆ ಸುರಿಯುತ್ತಿದೆ. ಮೂಡಿಗೆರೆ ತಾಲೂಕಿನ ಜಾಣಿಗೆ ಗ್ರಾಮದಲ್ಲಿ ಬಿರುಗಾಳಿ, ಮಳೆಯ ಆರ್ಭಟಕ್ಕೆ ಸರ್ಕಾರಿ ಪ್ರಾಥಮಿಕ ಶಾಲೆಯ ನೂರಾರು ಹೆಂಚುಗಳು ಹಾರಿ ಹೋಗಿವೆ. ಭಾರೀ ಗಾಳಿಯ ರಭಸಕ್ಕೆ ಶಾಲೆಯ ಮೇಲ್ಛಾವಣಿಯ ಹೆಂಚುಗಳು ಕಿತ್ತುಹೋಗಿವೆ. ಮೂಡಿಗೆರೆ ತಾಲೂಕು, ಕೊಟ್ಟಿಗೆಹಾರ ಹಾಗೂ ಚಾರ್ಮಾಡಿ ಘಾಟ್ ವ್ಯಾಪ್ತಿಯಲ್ಲೂ ಮಳೆಯ ಅಬ್ಬರ ಮುಂದುವರಿದಿದೆ. ಬಿರುಗಾಳಿಯೊಂದಿಗೆ …
Read More »KRS ಬೃಂದಾವನದಲ್ಲಿ ಕಾವೇರಿ ಆರತಿ ಕಾರ್ಯಕ್ರಮದ ದಿನಾಂಕ ಬದಲಾವಣೆ
ಮಂಡ್ಯ: ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಅಂಗವಾಗಿ ಕೆಆರ್‌ಎಸ್ ಬೃಂದಾವನ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಕಾವೇರಿ ಆರತಿ’ ಕಾರ್ಯಕ್ರಮದ ದಿನಾಂಕವನ್ನ ಅನಿವಾರ್ಯ ಕಾರಣಗಳಿಂದ ಬದಲಾವಣೆ ಮಾಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ಅವರು ತಿಳಿಸಿದ್ದಾರೆ. ಈ ಮೊದಲು ಅಕ್ಟೋಬರ್ 11 ರಿಂದ 16ರ ವರೆಗೆ ನಿಗದಿಯಾಗಿದ್ದ ಕಾವೇರಿ ಆರತಿ ಕಾರ್ಯಕ್ರಮವನ್ನ ಇದೀಗ ಅಕ್ಟೋಬರ್ 16 ರಿಂದ 21 ರವರೆಗೆ ಕೆಆರ್‌ಎಸ್ …
Read More »ಕರ್ನಾಟಕಕ್ಕೆ ಮತ್ತೆ ಶಾಕ್ – 15 ದಿನ ತಮಿಳುನಾಡಿಗೆ ಹರಿಯಲಿದೆ 3 ಸಾವಿರ ಕ್ಯೂಸೆಕ್
ನವದೆಹಲಿ: 15 ದಿನಗಳ ಅವಧಿಗೆ ಪ್ರತಿದಿನ 3,000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ಆದೇಶಿಸಿದೆ. ಇಂದು ಬೆಳಗ್ಗೆ ಸಭೆ ನಡೆಸಿಸಿದ್ದ ಕಾವೇರಿ ನೀರು ನಿಯಂತ್ರಣ ಸಮಿತಿ ಪ್ರತಿದಿನ 3 ಸಾವಿರ ಕ್ಯೂಸೆಕ್ ನಂತೆ ಒಟ್ಟು 15 ದಿನಗಳ ಕಾಲ 3.91 ಟಿಎಂಸಿ ನೀರನ್ನು ಹರಿಸುವಂತೆ ಶಿಫಾರಸು ಮಾಡಿತ್ತು. ಈ ಶಿಫಾರಸನ್ನು ಪಾಲಿಸುವಂತೆ ಕರ್ನಾಟಕಕ್ಕೆ ಸೂಚಿಸಿದೆ. ರಾಜ್ಯದಲ್ಲಿ ಮಳೆ ಕಡಿಮೆಯಾಗಿರುವುದರಿಂದ ಹಾಗೂ ಕೆಆರ್‌ಎಸ್, ಹೇಮಾವತಿ, …
Read More »ಬೆಂಗ್ಳೂರಿನಿಂದ ಬೈಕ್ ಖರೀದಿಸಿ ಬೀದರ್‌ಗೆ ಬರುತ್ತಿದ್ದಾಗ ಭೀಕರ ಅಪಘಾತ – ಇಬ್ಬರು ಸ್ನೇಹಿತರು ದುರ್ಮರಣ
ಬೀದರ್: ಬೆಂಗಳೂರಿನಿಂದ ಬೈಕ್ ಖರೀದಿಸಿ ಬೀದರ್‌ಗೆ ಬರುತ್ತಿದ್ದಾಗ ಭೀಕರ ಅಪಘಾತ ಸಂಭವಿಸಿ ಸ್ನೇಹಿತರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಸಂಗಾರೆಡ್ಡಿಯ 9ನೇ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಬೀದರ್ ತಾಲೂಕಿನ ಯರನಳ್ಳಿ ಗ್ರಾಮದ ಸಾಯಿಕಿರಣ ಜೀತಪ್ಪ ಜೋಶಿ (25) ಮತ್ತು ನಾಗೇಶ್ ಮಾಣಿಪ್ಪ ಅಣ್ಣಾ (24) ಸಾವನಪ್ಪಿದ ಇಬ್ಬರು ಸ್ನೇಹಿತರು ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಇಬ್ಬರು ಸ್ನೇಹಿತರು ಬೈಕ್‌ವೊಂದನ್ನು ಖರೀದಿಸಿ, ಬೀದರ್‌ಗೆ ಬರುತ್ತಿದ್ದರು. ಈ ವೇಳೆ ಲಾರಿಯೊಂದು ವೇಗವಾಗಿ ಬಂದು ಡಿಕ್ಕಿ …
Read More »ಸ್ಟಿಂಗ್ ಆಪರೇಷನ್ ಬಗ್ಗೆ ಯಾರಿಗೆ ಹೆಚ್ಚು ಜ್ಞಾನ ಇದೆ ಅನ್ನೋದು ಜಗತ್ತಿಗೆ ಗೊತ್ತಿದೆ: ನಿಖಿಲ್
ಹಾಸನ: ಸ್ಟಿಂಗ್ ಆಪರೇಷನ್ ಬಗ್ಗೆ ಯಾರಿಗೆ ಹೆಚ್ಚು ಜ್ಞಾನ ಇದೆ ಅನ್ನೋದು ಜಗತ್ತಿಗೆ ಗೊತ್ತಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಹಾಸನ ಜಿಲ್ಲೆ, ಚನ್ನರಾಯಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನದ ಒಳಗೆ ಯರ‍್ಯಾರು ಸ್ಟಿಂಗ್‌ನ ಬಗ್ಗೆ ಸ್ವಪಕ್ಷದ ಹಿರಿಯ ಸಚಿವರು, ಬಹಳಷ್ಟು ಬಾರಿ ವಿಧಾನಸೌಧದ ಮೆಟ್ಟಿಲನ್ನು ಹತ್ತಿರುವವರು ಆತಂಕ ವ್ಯಕ್ತಪಡಿಸಿರುವುದನ್ನು ನೋಡಿದ್ದೀರಿ. ಸದನದ ಒಳಗೆ ರೆಕಾರ್ಡ್ ಇದೆ. ಇದನ್ನು ಜನಕ್ಕೆ ಬಿಟ್ಟು ಬಿಡೋಣ ಎಂದರು. …
Read More »ಭಾರತೀಯರ ಮತಗಳನ್ನು ರಕ್ಷಣೆ ಮಾಡುವುದು ಕೇಂದ್ರ ಸರ್ಕಾರದ ಕರ್ತವ್ಯ: ಸಿಎಂ ಡಿಕೆಶಿ
ನವದೆಹಲಿ: ಬಾಂಗ್ಲಾದೇಶ ಹಾಗೂ ಬೇರೆಡೆಗಳಿಂದ ಬಂದು ಜನರು ಇಲ್ಲಿದ್ದಾರೆ ಎಂದು ಬಿಜೆಪಿಯವರು ಹೇಳುತ್ತಾರೆ. ಹಾಗಿದ್ದರೆ ದೇಶದ ಗಡಿಯಲ್ಲಿ ಬಾಂಗ್ಲಾದೇಶದಿಂದ ನುಸುಳಿಕೋರರನ್ನು ತಡೆಗಟ್ಟುವುದು ಕೇಂದ್ರ ಸರ್ಕಾರದ ಕರ್ತವ್ಯವಲ್ಲವೇ? ಹೀಗಾಗಿ ಭಾರತೀಯರ ಮತಗಳನ್ನು ರಕ್ಷಣೆ ಮಾಡುವುದು ಕೇಂದ್ರ ಸರ್ಕಾರದ ಕರ್ತವ್ಯ ಎಂದು ಸಿಎಂ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ. ನವದೆಹಲಿಯಲ್ಲಿ ಎಸ್‌ಐಆರ್ (SIR) ಬಗ್ಗೆ ಮಾತನಾಡಿದ ಅವರು, ಬಿಜೆಪಿಯ ಸಂಸದರು ಹಾಗೂ ಶಾಸಕರು, ನಾವು ಬಾಂಗ್ಲಾದೇಶದವರನ್ನು ಮತಪಟ್ಟಿಯಿಂದ ತೆಗೆಯಲು ಅರ್ಜಿ ಸಲ್ಲಿಸಿದ್ದೇವೆ ಎಂದಿದ್ದಾರೆ. …
Read More »
Laxmi News 24×7