ನವದೆಹಲಿ: ಕಾಂಗ್ರೆಸ್ ನೇತೃತ್ವದಲ್ಲಿ ವಿರೋಧ ಪಕ್ಷಗಳು ಸುಪ್ರೀಂ ಕೋರ್ಟ್ ಚಲೋ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ, ಭದ್ರತಾ ದೃಷ್ಟಿಯಿಂದ ಕೇಂದ್ರ ದೆಹಲಿಯ ಪ್ರಮುಖ ಆರು ಮೆಟ್ರೋ ನಿಲ್ದಾಣಗಳ ಪ್ರವೇಶ ಹಾಗೂ ನಿರ್ಗಮನ ದ್ವಾರಗಳನ್ನು ಸೋಮವಾರ ಬೆಳಗ್ಗೆ 6 ರಿಂದ ಸಂಜೆ 4 ಗಂಟೆಯವರೆಗೆ ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ ವೇಳೆ 45 ಮೆಟ್ರೋ ನಿಲ್ದಾಣಗಳನ್ನು ಮುಚ್ಚಿದ ಕೇವಲ ಎರಡು ದಿನಗಳ ಬೆನ್ನಲ್ಲೇ ದೆಹಲಿ ಮೆಟ್ರೋ ರೈಲು …
Read More »Daily Archives: ಅಕ್ಟೋಬರ್ 12, 2026
ಸೌದಿ ವಿಮಾನ ನಿಲ್ದಾಣದ ಮೇಲೆ ಮತ್ತೆ ಹೌತಿ ಕ್ಷಿಪಣಿ ದಾಳಿ: ಹೈದರಾಬಾದ್ ಮೂಲದ ವ್ಯಕ್ತಿ ದುರ್ಮರಣ
ರಿಯಾದ್/ಹೈದರಾಬಾದ್: ಸೌದಿ ಅರೇಬಿಯಾದ ರಾಜಧಾನಿ ರಿಯಾದ್‌ನಲ್ಲಿರುವ ಕಿಂಗ್ ಖಾಲಿದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಯೆಮೆನ್‌ನ ಹೌತಿ ಬಂಡುಕೋರರು ನಡೆಸಿದ ಕ್ಷಿಪಣಿ ದಾಳಿಯಲ್ಲಿ ಹೈದರಾಬಾದ್ ಮೂಲದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಹೈದರಾಬಾದ್‌ನ ಮೆಹದಿಪಟ್ನಂ ನಿವಾಸಿಯಾದ ಮೊಹಮ್ಮದ್ ಯೂಸುಫ್ ಅಲಿ ಶನಿವಾರ (ಅ. 10) ನಡೆದ ಮೊದಲ ದಾಳಿಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಅವರ ಓರ್ವ ಪುತ್ರನಿಗೆ ಮೊಣಕಾಲು ಶಸ್ತ್ರಚಿಕಿತ್ಸೆ ನಡೆಯುತ್ತಿದ್ದು, ಮತ್ತೋರ್ವ ಪುತ್ರನ ಕಾಲಿನ ಮೂರು ಬೆರಳುಗಳು ಕತ್ತರಿಸಿಹೋಗಿವೆ. ಯೂಸುಫ್ ಅವರ ಪತ್ನಿ …
Read More »ಪ್ರಜ್ವಲ್ ರೇವಣ್ಣ ಬೆಳಗಾವಿ ಜೈಲಿಗೆ ಶಿಫ್ಟ್ ಹೈಡ್ರಾಮಾ: ತುಮಕೂರಿನವರೆಗೂ ಕರೆದೊಯ್ದು ಮತ್ತೆ ವಾಪಸ್
ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣಗಳ ಅಪರಾಧಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬೆಳಗಾವಿಯ ಹಿಂಡಲಗಾ ಜೈಲಿಗೆ ಸ್ಥಳಾಂತರಿಸುವ ಪ್ರಕ್ರಿಯೆಯಲ್ಲಿ ಭಾರೀ ಹೈಡ್ರಾಮಾ ನಡೆದಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬೆಳಗಾವಿಗೆ ಕರೆದೊಯ್ಯುತ್ತಿದ್ದ ಪೊಲೀಸರು, ಮಾರ್ಗಮಧ್ಯೆ ತುಮಕೂರಿನ ತನಕ ತಲುಪಿದ ಬಳಿಕ ದಿಢೀರ್ ವಾಪಸ್ ಬೆಂಗಳೂರಿಗೆ ಮರಳಿದ್ದಾರೆ. ಶನಿವಾರ ಸಂಜೆ ಸಿಎಆರ್ ಎಸ್ಕಾರ್ಟ್ ಪೊಲೀಸರು ಬಿಗಿ ಭದ್ರತೆಯೊಂದಿಗೆ ಪ್ರಜ್ವಲ್ ರೇವಣ್ಣ ಅವರನ್ನು ಬೆಳಗಾವಿ ಹಿಂಡಲಗಾ ಜೈಲಿಗೆ ಕರೆದೊಯ್ಯುತ್ತಿದ್ದರು. ವಾಹನ …
Read More »ನಂದಿನಿ ಮಿಲ್ಕ್ ಪೌಡರ್ ಸೇಫ್ – ಆಹಾರ ಸುರಕ್ಷತಾ ಇಲಾಖೆ ವರದಿ
ಬೆಂಗಳೂರು: ನಂದಿನಿ ಮಿಲ್ಕ್ ಪೌಡರ್ ಕಲಬೆರಕೆ ಆಗಿದೆ ಎಂಬ ಆರೋಪದ ಬಳಿಕ ಇದೀಗ ಲ್ಯಾಬ್ ವರದಿ ಹೊರಬಂದಿದ್ದು, ಇದು ಸಂಪೂರ್ಣವಾಗಿ ಸುರಕ್ಷಿತ (ಸೇಫ್) ಎಂದು ತಿಳಿದುಬಂದಿದೆ. ಈ ಹಿಂದೆ ನಂದಿನಿ ಮಿಲ್ಕ್ ಪೌಡರ್‌ನಲ್ಲಿ ಕಲಬೆರಕೆ ಆಗ್ತಿದೆ ಅನ್ನೋ ಗಂಭೀರ ಆರೋಪ ಇತ್ತು. ಇದರ ಬೆನ್ನಲ್ಲೇ ಮಿಲ್ಕ್ ಪೌಡರ್ ಗುಣಮಟ್ಟ ಟೆಸ್ಟ್ ಮಾಡಿಸಲು ಆರೋಗ್ಯ ಸಚಿವರು ಸೂಚನೆ ನೀಡಿದ್ದರು. ಬಳಿಕ ಸೆಪ್ಟೆಂಬರ್ 26ರಂದು ಕೆಎಂಎಫ್ ಡೈರಿಗಳಿಂದ ಮಿಲ್ಕ್ ಪೌಡರ್ ಸ್ಯಾಂಪಲ್ ಸಂಗ್ರಹ …
Read More »ಬ್ಯಾಂಕಿಂಗ್ ಕಾಯ್ದೆ ಉಲ್ಲಂಘನೆ ಆರೋಪ – ಖಂಡ್ರೆ ಸಹೋದರನಿಗೆ ಹೈಕೋರ್ಟ್ ನೋಟಿಸ್
ಬೀದರ್: ಬ್ಯಾಂಕಿಂಗ್ ಕಾಯ್ದೆ ಉಲ್ಲಂಘನೆ ಆರೋಪದ ಮೇಲೆ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಸಹೋದರ ಅಮರ್ ಖಂಡ್ರೆಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಡಿಸಿಸಿ ಬ್ಯಾಂಕ್ ಸದಸ್ಯರಾದ ಅತಿವಾಳ ಕಪಲಾಪುರ, ಶಿವರಾಜ್ ವೀರಶೆಟ್ಟಿ ಎಂಬುವರು ಅಮರ್ ಖಂಡ್ರೆ ರಾಜಕೀಯ ಪ್ರಭಾವದಿಂದಾಗಿ ನಿಯಮ ಬಾಹಿರವಾಗಿ ಮೂರನೇ ಬಾರಿಗೆ ಅಧ್ಯಕ್ಷರಾಗಿ ಮುಂದುವರೆಯುತ್ತಿದ್ದಾರೆ. ಆದರೆ ಬ್ಯಾಂಕಿಂಗ್ ರೆಗ್ಯೂಲೇಶನ್ ಕಾಯ್ದೆ ಮತ್ತು ಆರ್‌ಬಿಐ (RBI) ತಿದ್ದುಪಡಿ ಗವರ್ನರ್ 2026ರ ಪ್ರಕಾರ ಒಬ್ಬರು ಮೂರನೇ ಅವಧಿಗೆ …
Read More »ಮಂಡ್ಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುದುರೆ ಗಾಡಿ ರೇಸ್
ಮಂಡ್ಯ: ಕಟ್ಟುನಿಟ್ಟಿನ ನಿಯಮಗಳಿರಬೇಕಾದ ರಾಷ್ಟ್ರೀಯ ಹೆದ್ದಾರಿಯಲ್ಲೇ ಕೆಲ ಕಿಡಿಗೇಡಿಗಳು ಕಾನೂನನ್ನು ಗಾಳಿಗೆ ತೂರಿದ್ದಾರೆ. ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ-75 ಅನ್ನು ರೇಸ್ ಟ್ರಾಕ್ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್‌ನಿಂದ ಕದಬಳ್ಳಿ ಟೋಲ್ ಗೇಟ್‌ವರೆಗಿನ ಹೆದ್ದಾರಿ ರಸ್ತೆಯಲ್ಲಿ ನಿನ್ನೆ ಸಂಜೆ ಕುದುರೆ ಗಾಡಿ ರೇಸ್ ಜೋರಾಗಿಯೇ ನಡೆದಿದೆ. ಪೊಲೀಸ್ ಇಲಾಖೆಯ ಅಥವಾ ಕಾನೂನಿನ ಯಾವುದೇ ಭಯವಿಲ್ಲದೇ, ಹೆದ್ದಾರಿಯ ಮಧ್ಯದಲ್ಲೇ ಕುದುರೆ …
Read More »ರಾಮಾಪುರದಲ್ಲಿ ಹೊನಲು ಬೆಳಕಿನ ಕಬ್ಬಡ್ಡಿ ಪಂದ್ಯಾವಳಿಗೆ ಚನ್ನರಾಜ ಚಾಲನೆ
ಖಾನಾಪುರ: ತಾಲ್ಲೂಕಿನ ಭೂರಣಕಿ ಗ್ರಾಪಂ ವ್ಯಾಪ್ತಿಯ ರಾಮಾಪುರ ಗ್ರಾಮದಲ್ಲಿ ಭಾನುವಾರ ನವರಾತ್ರಿ ಅಂಗವಾಗಿ ಗ್ರಾಮಸ್ಥರು ಆಯೋಜಿಸಿದ್ದ ಹೊನಲು ಬೆಳಕಿನ ಕಬ್ಬಡ್ಡಿ ಪಂದ್ಯಾವಳಿಯನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, “ಚಿನ್ನಿ ದಾಂಡು, ಲಗೋರಿ,ಖೋಖೋ, ಕುಸ್ತಿ, ಕಬಡ್ಡಿ, ಪಂದ್ಯಾವಳಿಗಳು ಇಂದಿನ ಯುಗದಲ್ಲಿ ನಶಿಸಿ ಹೋಗುವ ಸ್ಥಿತಿಗೆ ತಲುಪಿವೆ. ಗ್ರಾಮೀಣ ಪ್ರದೇಶದ ಯುವಕರು ಗ್ರಾಮೀಣ ಕ್ರೀಡೆಗಳಲ್ಲಿ ಉತ್ಸಾಹದಿಂದ ಭಾಗವಹಿಸಬೇಕು ಎಂದರು. ಭಾಗ್ಯಲಕ್ಷ್ಮೀ ಸಕ್ಕರೆ ಕಾರ್ಖಾನೆ ಮಾಜಿ ಅಧ್ಯಕ್ಷ …
Read More »ದಸರಾ ರಜೆ ಹೊತ್ತಲ್ಲೇ ಪದವಿ ಪರೀಕ್ಷೆ- ಮಂಗಳೂರಿನ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿಗಳ ಪ್ರತಿಭಟನೆ
ಮಂಗಳೂರು: ದಸರಾ ಸಂಭ್ರಮದ ನಡುವೆಯೇ ಕಾಲೇಜು ಆಡಳಿತ ಮಂಡಳಿಯು ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ನಿಗದಿಪಡಿಸಿರುವುದನ್ನು ವಿರೋಧಿಸಿ, ನಗರದ ಖ್ಯಾತ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿಗಳು ಪರೀಕ್ಷೆ ಬಹಿಷ್ಕರಿಸಿ ಕಾಲೇಜು ಗೇಟ್ ಎದುರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಮಂಗಳೂರಿನ ಬೆಂದೂರ್‌ವೆಲ್ ಬಳಿಯಿರುವ ಸೈಂಟ್ ಆಗ್ನೆಸ್ ಕಾಲೇಜಿನಲ್ಲಿ ಇಂದಿನಿಂದ ಅಕ್ಟೋಬರ್ 28ರವರೆಗೆ ಪದವಿ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆಗಳನ್ನು ಆಯೋಜಿಸಲಾಗಿದೆ. ಮಂಗಳೂರು ದಸರಾ ಕರಾವಳಿಯ ಪ್ರಮುಖ ಹಬ್ಬವಾಗಿದ್ದು, ಎಲ್ಲೆಡೆ ಸಂಭ್ರಮ ಮನೆಮಾಡಿದೆ. ಆದರೆ ಕಾಲೇಜು …
Read More »
Laxmi News 24×7