Breaking News

Daily Archives: ಅಕ್ಟೋಬರ್ 14, 2026

KSRTC ಬಸ್‌ನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣ – ಒಂದೇ ತಿಂಗಳಲ್ಲಿ 8.4 ಲಕ್ಷ ದಂಡ ವಸೂಲಿ

ಬೆಂಗಳೂರು: ಕೆಎಸ್‌ಆರ್‌ಟಿಸಿ  ಬಸ್‌ನಲ್ಲಿ ಟಿಕೆಟ್ ರಹಿತವಾಗಿ ಪ್ರಯಾಣಿಸಿದವರಿಂದ ಅಧಿಕಾರಿಗಳು ದಂಡ ವಸೂಲಿ ಮಾಡಿದ್ದು, ಒಟ್ಟು 8.4 ಲಕ್ಷ ಸಂಗ್ರಹವಾಗಿದೆ. ಸೆಪ್ಟೆಂಬರ್ ಒಂದೇ ತಿಂಗಳಲ್ಲಿ 42,784 ವಾಹನಗಳ ತಪಾಸಣೆ ಮಾಡಲಾಗಿದ್ದು, ಇದರಲ್ಲಿ 4310 ಪ್ರಕರಣಗಳನ್ನು ತನಿಖಾಧಿಕಾರಿಗಳು ಪತ್ತೆಹಚ್ಚಿದ್ದಾರೆ. ಒಟ್ಟು ಟಿಕೆಟ್ ಇಲ್ಲದೇ ಸಂಚರಿಸಿದ 4382 ಪ್ರಯಾಣಿಕರಿಂದ ಒಟ್ಟು 8,45,034 ರೂ. ದಂಡವನ್ನು ವಸೂಲಿ ಮಾಡಿದ್ದಾರೆ.  ಈ ಮೂಲಕ ನಿಗಮದ ಆದಾಯದಲ್ಲಿ ಸೋರಿಕೆ ಆಗುತ್ತಿದ್ದ 1,12,019 ರೂ. ತನಿಖಾಧಿಕಾರಿಗಳು ಪತ್ತೆ ಹಚ್ಚಿದ್ದು, ತಪ್ಪಿತಸ್ಥರ …

Read More »

ಭಾರತೀಯ ಸೇನೆಗೆ 1.25 ಲಕ್ಷ ಮೆಟ್ರಿಕ್ ಟನ್ ಭಾರತ್ ರೈಸ್ ಮೀಸಲು

ನವದೆಹಲಿ: ಭಾರತೀಯ ಯೋಧರಿಗೆ ಗುಣಮಟ್ಟದ ಅಕ್ಕಿ ಪೂರೈಸುವ ಉದ್ದೇಶದಿಂದ ಕೇಂದ್ರ ಆಹಾರ ಇಲಾಖೆ 1.25 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ಪ್ರತ್ಯೇಕವಾಗಿ ಮೀಸಲಿಟ್ಟಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ್‌ ಜೋಶಿ  ತಿಳಿಸಿದ್ದಾರೆ. ದೆಹಲಿಯಲ್ಲಿ ಸೋಮವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಸಮ್ಮುಖದಲ್ಲಿ ಭಾರತೀಯ ಸೇನೆಗೆ ಗುಣಮಟ್ಟದ ‘ಭಾರತ್ ರೈಸ್’  ಪೂರೈಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಜೋಶಿ, ಯೋಧರಿಗೆ ಉತ್ತಮ ಗುಣಮಟ್ಟದ ಆಹಾರ ಪೂರೈಸಲು ಆಹಾರ …

Read More »

ರಾಹುಲ್ ಗಾಂಧಿ ಅವರು ನನ್ನನ್ನು ತಳ್ಳಲಿಲ್ಲ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

ನವದೆಹಲಿ: ದೆಹಲಿಯಲ್ಲಿ ನಡೆದ ಎಸ್‌ಐಆರ್ ಪ್ರತಿಭಟನೆ ವೇಳೆ ರಾಹುಲ್ ಗಾಂಧಿ  ಅವರು ನನ್ನನ್ನು ತಳ್ಳಲಿಲ್ಲ. ಪ್ರತಿಭಟನಾಕಾರರು ಹೆಚ್ಚಾಗಿದ್ದರಿಂದ‌ ಹಿಂದೆ ಬರುತ್ತಿದ್ದ ವಾಹನದಲ್ಲಿ ಹತ್ತುವಂತೆ ಸಲಹೆ ನೀಡಿ ನನ್ನ‌ ಬಗ್ಗೆ ಕಾಳಜಿ ತೋರಿದರು ಎಂದು ಸಿಎಂ ಡಿ.ಕೆ.ಶಿವಕುಮಾರ್  ಸ್ಪಷ್ಟನೆ‌ ನೀಡಿದ್ದಾರೆ. ದೆಹಲಿಯಲ್ಲಿ‌ ಮಾಧ್ಯಮ ಕೇಳಿದ ಪ್ರಶ್ನೆಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ದೆಹಲಿ ಚಲೋ ಪ್ರತಿಭಟನೆ ವೇಳೆ ರಾಹುಲ್ ಗಾಂಧಿ ಅವರು ನಿಮ್ಮನ್ನು ತಳ್ಳಿದ್ದಾರೆ ಎಂದು ಬಿಜೆಪಿ ನಾಯಕರು ಆರೋಪ …

Read More »

ಕೇಂದ್ರ ಸಚಿವ ಸ್ಥಾನಕ್ಕೆ ಎಲ್.ಮುರುಗನ್ ರಾಜೀನಾಮೆ

ನವದೆಹಲಿ: ಮಾಹಿತಿ ಮತ್ತು ಪ್ರಸಾರ ಹಾಗೂ ಸಂಸದೀಯ ವ್ಯವಹಾರಗಳ ಖಾತೆಯ ರಾಜ್ಯ ಸಚಿವ ಸ್ಥಾನಕ್ಕೆ ಎಲ್.ಮುರುಗನ್  ರಾಜೀನಾಮೆ ನೀಡಿದ್ದಾರೆ. ಅಲ್ಲದೇ, ರಾಜ್ಯಸಭಾ ಸದಸ್ಯತ್ವವನ್ನೂ ತೊರೆದಿದ್ದಾರೆ. ತಮಿಳುನಾಡಿನಲ್ಲಿ ತಳಮಟ್ಟದಿಂದ ಪಕ್ಷವನ್ನು ಬಲಪಡಿಸುವ ಕಾರ್ಯದಲ್ಲಿ ಪೂರ್ಣಾವಧಿಯಾಗಿ ತೊಡಗಿಸಿಕೊಳ್ಳಲು ಅನುಕೂಲವಾಗುವಂತೆ, ರಾಜ್ಯ ಸಚಿವ ಹಾಗೂ ರಾಜ್ಯಸಭಾ ಸದಸ್ಯ ಸ್ಥಾನಗಳಿಂದ ತಮ್ಮನ್ನು ಬಿಡುಗಡೆಗೊಳಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಅವರು ಮನವಿ ಮಾಡಿದ್ದರು ಎಂದು ಮೂಲಗಳು ತಿಳಿಸಿವೆ. ‘ಎಕ್ಸ್’ (X) ನಲ್ಲಿನ ಪೋಸ್ಟ್ ಒಂದರಲ್ಲಿ ಮುರುಗನ್ …

Read More »

SIR ಇತ್ತೀಚಿನದ್ದು.. ರಾಹುಲ್‌ ನೇತೃತ್ವದಲ್ಲಿ ಕಾಂಗ್ರೆಸ್‌ ಚುನಾವಣೆಗಳಲ್ಲಿ ಸೋಲುತ್ತಲೇ ಬಂದಿದೆ: ಅಮಿತ್‌ ಶಾ ವಾಗ್ದಾಳಿ

ನವದೆಹಲಿ: ಎಸ್‌ಐಆರ್‌ ಇತ್ತೀಚಿನದ್ದು. ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಚುನಾವಣೆಗಳಲ್ಲಿ ಸೋಲುತ್ತಲೇ ಬಂದಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ  ವಾಗ್ದಾಳಿ ನಡೆಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಅಮಿತ್ ಶಾ, ಗುಜರಾತ್‌ನ ಗಾಂಧಿನಗರ ಮತ್ತು ಇತರ ಸ್ಥಳಗಳಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿಗೆ …

Read More »

ಆನೆ ದಾಳಿಗೆ ರೈತ ಬಲಿ

ಚಾಮರಾಜನಗರ: ಆನೆ ದಾಳಿಗೆ ರೈತ ಬಲಿಯಾಗಿರುವ ಘಟನೆ ಓಂಕಾರ ಅರಣ್ಯ ವಲಯ ವ್ಯಾಪ್ತಿಯಲ್ಲಿ ನಡೆದಿದೆ. ರೈತ ಶಿವಕುಮಾರ್ ಆನೆ ದಾಳಿಯಿಂದ ಸಾವನ್ನಪ್ಪಿದ ವ್ಯಕ್ತಿ. ನಂಜನಗೂಡು ತಾಲೂಕಿನ ಹಂಚೀಪುರ ಗ್ರಾಮದಲ್ಲಿ ನಸುಕಿನ ಜಾವ ಘಟನೆ ನಡೆದಿದೆ ಗ್ರಾಮದ ಜಮೀನಿನಲ್ಲಿ ಏಕಾಏಕಿ ಆನೆ ದಾಳಿ ನಡೆಸಿ ವ್ಯಕ್ತಿಯನ್ನು ಬಲಿ ಪಡೆದಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Read More »

ನೋಡುಗರ ಕಣ್ಮನ ಸೆಳೆಯುತ್ತಿವೆ ಈ ದಸರಾ ಗೊಂಬೆಗಳು

ಚಾಮರಾಜನಗರ: ಗೊಂಬೆ ಕೂರಿಸುವುದು ದಸರಾ ಹಬ್ಬದ ಪ್ರಮುಖ ಆಚರಣೆಗಳಲ್ಲೊಂದು. ಹಳೇ ಮೈಸೂರು ಭಾಗದ ಜಿಲ್ಲೆಗಳಲ್ಲಿ ನವರಾತ್ರಿ ಸಂದರ್ಭದಲ್ಲಿ ದಸರಾ ಗೊಂಬೆ ಕೂರಿಸುವ ಆಚರಣೆ ಅನೂಚಾನವಾಗಿ ನಡೆದುಕೊಂಡು ಬರುತ್ತಿದೆ. ನೋಡುಗರ ಕಣ್ಮನ ಸೆಳೆಯುತ್ತಾ ಅತ್ಯಾಕರ್ಷಕವಾಗಿದೆ ಈ ದಸರಾ ಗೊಂಬೆ ಪ್ರದರ್ಶನ. ಮಹಿಷಾಸುರನನ್ನು ದುರ್ಗಾದೇವಿ ಸಂಹರಿಸಲು ದೇವಾನುದೇವೆತೆಗಳು ತಮ್ಮ ಶಕ್ತಿಯನ್ನು ನೀಡಿ ಶಕ್ತಿಹೀನರಾಗಿ ಪ್ರತಿಮೆಗಳಾದರು ಎಂಬ ಪುರಾಣವಿದೆ. ದೇವಾನುದೇವತೆಗಳ ಈ ತ್ಯಾಗವನ್ನು ಸ್ಮರಿಸಲು ಗೊಂಬೆ ಕೂರಿಸುವ ಪದ್ದತಿಯನ್ನು ವಿಜಯನಗರ ಸಾಮ್ರಾಜ್ಯದ ಕಾಲದಿಂದಲು ಆಚರಿಸಿಕೊಂಡು …

Read More »

ಮಾಜಿ ಸಂಸದ ಪ್ರತಾಪ್ ಸಿಂಹಗೆ ಬಂಧನ ಭೀತಿ

ಮೈಸೂರು: ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹಗೆ ಬಂಧನ ಭೀತಿ ಎದುರಾಗಿದೆ. ಮೈಸೂರಿನ ಟಿ.ನರಸೀಪುರದಲ್ಲಿ ಗಣೇಶ ಕೂರಿಸುವ ವಿಚಾರವಾಗಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ಕೋರ್ಟ್ ವಜಾಗೊಳಿಸಿದೆ. ಟಿ.ನರಸೀಪುರ ಕೇಸ್‌ನಲ್ಲಿ ಪ್ರತಾಪ್ ಸಿಂಹ ವಿರುದ್ಧ 2 ಕೇಸ್ ದಾಖಲಾಗಿತ್ತು. ಈಗಾಗಲೇ ಒಂದು ಕೇಸ್‌ನಲ್ಲಿ ಪ್ರತಾಪ್ ಸಿಂಹಗೆ ಜಾಮೀನು ಸಿಕ್ಕಿದೆ. ಆದರೆ, ಪ್ರಚೋದನಾಕಾರಿ ಭಾಷಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ರದ್ದಾಗಿರುವುದರಿಂದ ಸಂಸದ ಪ್ರತಾಪ್ ಸಿಂಹಗೆ ಸಂಕಷ್ಟ …

Read More »

ಬೆಳಗಾವಿ:ರೈತರ ಹೋರಾಟಕ್ಕೆ ಕರವೇ ಬೆಂಬಲ

ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಬೆಳಗಾವಿ ಜಿಲ್ಲೆಯ ವಿವಿಧ ಟೋಲ್‌ಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ರೈತರ ಹೋರಾಟಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಟಿ.ಎ. ನಾರಾಯಣಗೌಡ ಬಣದ ಕಾರ್ಯಕರ್ತರು ಬೆಂಬಲ ಸೂಚಿಸಿದ್ದಾರೆ. ಹತ್ತರಗಿ ಟೋಲ್‌ಗೆ ಆಗಮಿಸಿದ ಕರವೇ ಕಾರ್ಯಕರ್ತರು ರೈತರ ಪ್ರತಿಭಟನೆಗೆ ಕೈಜೋಡಿಸಿ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರೈತರ ಬೇಡಿಕೆಗಳಿಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಕರವೇ ಜಿಲ್ಲಾಧ್ಯಕ್ಷ ದೀಪಕ್ ಹುಡುನಟ್ಟ ಹಾಗೂ ರಾಜ್ಯ ಸಂಚಾಲಕ …

Read More »

ಬೆಳಗಾವಿ: ಟೋಲ್ ಪ್ಲಾಜಾ ಏರಿ ಜಿಗಿಯಲು ಯತ್ನಿಸಿದ ರೈತ

ಬೆಳಗಾವಿ: ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ರೈತರು ನಡೆಸುತ್ತಿರುವ ಹೋರಾಟದ ನಡುವೆಯೇ, ಹತ್ತರಗಿ ಟೋಲ್ ಪ್ಲಾಜಾ ಬಳಿ ರೈತರೊಬ್ಬರು ಏಕಾಏಕಿ ಮೇಲೇರಲು ಯತ್ನಿಸಿದ್ದು, ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಟೋಲ್ ಪ್ಲಾಜಾ ಮೇಲೆ ಹತ್ತಿದ ರೈತ ಜಿಗಿಯಲು ಮುಂದಾಗುತ್ತಿದ್ದಂತೆ, ಅಲ್ಲಿದ್ದ ಪ್ರತಿಭಟನಾಕಾರರು …

Read More »