Breaking News

Daily Archives: ಅಕ್ಟೋಬರ್ 18, 2026

ದಲಿತ ನಾಯಕರ ಏಳಿಗೆ ಸಹಿಸಲು ಬಿಜೆಪಿಗೆ ಆಗುತ್ತಿಲ್ಲ- ಜಾರಕಿಹೊಳಿ ಪರ ಡಿಕೆಶಿ ಬ್ಯಾಟಿಂಗ್‌

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿರುವ ದಾಳಿ ರಾಜಕೀಯ ಪ್ರೇರಿತ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸತೀಶ್ ಜಾರಕಿಹೊಳಿ ಪ್ರಭಾವಿ ದಲಿತ ನಾಯಕ. ಅವರ ಬೆಳವಣಿಗೆಯನ್ನು ಬಿಜೆಪಿಯವರಿಗೆಸಹಿಸಿಕೊಳ್ಳಲು ಆಗುತ್ತಿಲ್ಲ. ಈ ಹಿಂದೆ ನನ್ನ ಮೇಲೂ ದಾಳಿ ನಡೆಸಿ ಜೈಲಿಗೆ ಹಾಕಿದ್ದರು. ಈಗ ಕಾಂಗ್ರೆಸ್ ನಾಯಕರನ್ನೇ ಗುರಿಯಾಗಿಸಿಕೊಂಡು ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನಲ್ಲಿ …

Read More »

ಕಾಶ್ಮೀರಿ ಪಂಡಿತರಿಗೆ ಉದ್ಯೋಗ ತೊರೆಯಲು ಉಗ್ರರ ಬೆದರಿಕೆ

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಕೆಲಸ ಮಾಡುತ್ತಿರುವ ಕಾಶ್ಮೀರಿ ಪಂಡಿತ  ಸಮುದಾಯದ ಸರ್ಕಾರಿ ನೌಕರರಿಗೆ ಉಗ್ರ ಸಂಘಟನೆಗಳಿಂದ ಮತ್ತೊಮ್ಮೆ ಬೆದರಿಕೆ ಬಂದಿದೆ. ಲಷ್ಕರ್-ಎ-ತಯ್ಬಾ ಜೊತೆಗೆ ಸಂಪರ್ಕ ಹೊಂದಿರುವ ಯುನೈಟೆಡ್ ಲಿಬರೇಷನ್ ಕೌನ್ಸಿಲ್ ಪ್ರಧಾನ ಮಂತ್ರಿ ಪ್ಯಾಕೇಜ್ ಅಡಿ ನೇಮಕಗೊಂಡಿರುವ ಕಾಶ್ಮೀರಿ ಪಂಡಿತ ನೌಕರರಿಗೆ ಕೆಲಸ ತೊರೆಯುವಂತೆ ಎಚ್ಚರಿಕೆ ನೀಡಿದೆ. ಕೆಲಸ ಮುಂದುವರಿಸಿದರೆ ಜೀವಕ್ಕೆ ಅಪಾಯ ಎದುರಾಗಲಿದೆ ಎಂದು ಬೆದರಿಕೆ ಹಾಕಲಾಗಿದೆ. ಮಾಹಿತಿಯ ಪ್ರಕಾರ, ಸುಮಾರು 7 ಸಾವಿರ ಕಾಶ್ಮೀರಿ ಪಂಡಿತ ಉದ್ಯೋಗಿಗಳು ಉಗ್ರರ …

Read More »

ವಿದ್ಯಾರ್ಥಿಗೆ ನೋಟಿಸ್‌ ನೀಡಲು ಎಷ್ಟು ಧೈರ್ಯ? – ನೋಯ್ಡಾ ಮ್ಯಾಜಿಸ್ಟ್ರೇಟ್‌ ಕ್ರಮಕ್ಕೆ ಸುಪ್ರೀಂ ಕೆಂಡಾಮಂಡಲ

ನವದೆಹಲಿ: ನೀಟ್‌ ಪ್ರತಿಭಟನೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಸ್ಪಷ್ಟ ಆದೇಶವಿದ್ದರೂ ವಿದ್ಯಾರ್ಥಿಯೊಬ್ಬನಿಗೆ ನೋಟಿಸ್ ನೀಡಿದ ಗ್ರೇಟರ್ ನೋಯ್ಡಾ ಮ್ಯಾಜಿಸ್ಟ್ರೇಟ್ ಕ್ರಮಕ್ಕೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. “ನಮ್ಮ ಆದೇಶವನ್ನು ಉಲ್ಲಂಘಿಸಿ ನೋಟಿಸ್ ನೀಡಲು ಮ್ಯಾಜಿಸ್ಟ್ರೇಟ್‌ಗೆ ಎಷ್ಟು ಧೈರ್ಯ? ವಿದ್ಯಾರ್ಥಿಗಳ ವಿರುದ್ಧ ಯಾವುದೇ ದಂಡನಾತ್ಮಕ ಕ್ರಮ ಕೈಗೊಳ್ಳಬಾರದು ಎಂದು ನಾವು ಮೊದಲೇ ಆದೇಶ ನೀಡಿದ್ದೇವೆ. ದೇಶದ ಯುವಜನರ ವಿರುದ್ಧ ಇಂತಹ ಕ್ರಮ ಕೈಗೊಳ್ಳುವ …

Read More »

ತಮಿಳುನಾಡಿಗೆ ನೀರು ಹರಿಸುವ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ

ಬೆಂಗಳೂರು: ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ  ಹಾಗೂ ಪ್ರಾಧಿಕಾರ ನೀಡಿರುವ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಸುಪ್ರೀಂ ಕೋರ್ಟ್  ಮೆಟ್ಟಿಲೇರಲು ಸಜ್ಜಾಗಿದೆ ಎಂದು ಜಲ ಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ವಿಚಾರವಾಗಿ ಮುಖ್ಯಮಂತ್ರಿಗಳ ಜೊತೆ ಸುದೀರ್ಘ ಚರ್ಚೆ ನಡೆಸಲಾಗಿದೆ. ಕಾನೂನು ತಜ್ಞರ ತಂಡದೊಂದಿಗೆ ಸಮಾಲೋಚಿಸಿ ನಾಳೆಯೇ ಸುಪ್ರೀಂ ಕೋರ್ಟ್‌ಗೆ …

Read More »

ಪರಪ್ಪನ ಅಗ್ರಹಾರ ಪೊಲೀಸರಿಂದ ಪ್ರಜ್ವಲ್ ರೇವಣ್ಣಗೆ ಡ್ರಿಲ್

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ  ಬಳಿ ಮೊಬೈಲ್ ಪತ್ತೆ ಪ್ರಕರಣದ ತನಿಖೆ ಚುರುಕುಗೊಂಡಿದೆ. ಮೊಬೈಲ್, ಸಿಮ್ ಹಾಗೂ ಪೆನ್‌ಡ್ರೈವ್ ಸರಬರಾಜು ಮಾಡಿದ ಆರೋಪದಡಿ ಐವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಆರೋಪಿಗಳನ್ನು ಎದುರುಬದುರು ಕೂರಿಸಿ ವಿಚಾರಣೆ ನಡೆಸಿದ್ದು, ಪ್ರಜ್ವಲ್ ರೇವಣ್ಣಗೆ ಪೊಲೀಸರು ಡ್ರಿಲ್ ನಡೆಸಿದ್ದಾರೆ. ಜೈಲಿನ ಸೆಲ್‌ನಲ್ಲಿ ಮೊಬೈಲ್ ಬಳಕೆ ಮಾಡಿದ್ದ ಪ್ರಕರಣದಲ್ಲಿ ಇದೀಗ ತನಿಖೆ ಚುರುಕಾಗಿದೆ. ಜೈಲಿನಲ್ಲಿ ನಡೆದ ಸಿಸಿಬಿ ದಾಳಿ ವೇಳೆ …

Read More »

ವೀಡಿಯೋ ವೈರಲ್ ಬಳಿಕ ತಂದೆ, ಸಹೋದರನಿಂದ ಯುವತಿಯ `ಮರ್ಯಾದಾ ಹತ್ಯೆ’ – ಅಪಘಾತದಂತೆ ಬಿಂಬಿಸಲು ಯತ್ನ

ಅಹಮದಾಬಾದ್: ಯುವಕನೊಂದಿಗಿನ ವೀಡಿಯೋ ವೈರಲ್  ಆದ ಬಳಿಕ ತಂದೆ ಹಾಗೂ ಸಹೋದರ ಸೇರಿಕೊಂಡು 22 ವರ್ಷದ ಯುವತಿಯನ್ನು ಹತ್ಯೆ ಮಾಡಿ, ಬಳಿಕ ಅದನ್ನು ರಸ್ತೆ ಅಪಘಾತದಂತೆ ಬಿಂಬಿಸಿದ ಘಟನೆ ಅಹಮದಾಬಾದ್‌ನಲ್ಲಿ  ನಡೆದಿದೆ. ಸೋಫಿಯಾ ಹತ್ಯೆಯಾದ ಯುವತಿ. ಸೋಫಿಯಾ ಆಸ್ಪತ್ರೆಯಲ್ಲಿ ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ಸುಮಾರು ಒಂದು ತಿಂಗಳ ಹಿಂದೆ ನಡೆದ ಈ ಘಟನೆ ಆರಂಭದಲ್ಲಿ ಹಿಟ್ & ರನ್ ಪ್ರಕರಣ ಎಂದು ದಾಖಲಾಗಿತ್ತು. ಆದರೆ ಪೊಲೀಸರು ನಡೆಸಿದ ತನಿಖೆಯಲ್ಲಿ …

Read More »

ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯಕ್ಕೆ ಹೊಸ ಅತಿಥಿಗಳ ಆಗಮನ

ಶಿವಮೊಗ್ಗ: ಕೇಂದ್ರ ಮೃಗಾಲಯ ಪ್ರಾಧಿಕಾರದ ಅನುಮೋದನೆ ಹಾಗೂ ಮಾರ್ಗದರ್ಶನದಲ್ಲಿ ನಡೆದಿರುವ ಪ್ರಾಣಿ ವಿನಿಮಯ ಯೋಜನೆಯಡಿ  ಬಿಹಾರದ ಪಾಟ್ನಾದಲ್ಲಿರುವ ಸಂಜಯ್ ಗಾಂಧಿ ಜೈವಿಕ ಉದ್ಯಾನವನದಿಂದ  8 ತೋಳ ಹಾಗೂ 4 ಘರಿಯಾಲ್‌ಗಳನ್ನು ಶಿವಮೊಗ್ಗ ನಗರ ಹೊರವಲಯದ ತ್ಯಾವರೆಕೊಪ್ಪದಲ್ಲಿರುವ ಹುಲಿ-ಸಿಂಹ ಧಾಮಕ್ಕೆ  ಕರೆತರಲಾಗಿದ್ದು, ಈ ಮೂಲಕ ಶಿವಮೊಗ್ಗ ಮೃಗಾಲಯಕ್ಕೆ ಹೊಸ ಅತಿಥಿಗಳ ಆಗಮನವಾಗಿದೆ. ಪ್ರಾಣಿಗಳ ವಿನಿಮಯದ ಭಾಗವಾಗಿ ಶಿವಮೊಗ್ಗ ಮೃಗಾಲಯದಿಂದಲೂ ಎರಡು ಗಂಡು ಕಾಡುಕೋಣಗಳನ್ನು ಪಾಟ್ನಾ ಮೃಗಾಲಯಕ್ಕೆ ರವಾನಿಸಲಾಗಿದೆ. ಪಾಟ್ನಾದಿಂದ ಆಗಮಿಸಿದ ತೋಳಗಳ …

Read More »

ಕರ್ನಾಟಕಕ್ಕೆ ಚತುಷ್ಪಥ ರೈಲು ಯೋಜನೆ ನೀಡಿಲ್ಲ ಎಂಬುದು ತಪ್ಪು; ಎಂ.ಬಿ ಪಾಟೀಲ್ ಆರೋಪಕ್ಕೆ ವಿ. ಸೋಮಣ್ಣ ತಿರುಗೇಟು

ನವದೆಹಲಿ: ಕರ್ನಾಟಕಕ್ಕೆ ಕೇಂದ್ರ ಸರ್ಕಾರ ರೈಲ್ವೆ ಕ್ಷೇತ್ರದಲ್ಲಿ ಯಾವುದೇ ಆದ್ಯತೆ ನೀಡುತ್ತಿಲ್ಲ ಎಂಬ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಅವರ ಆರೋಪಕ್ಕೆ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣತಿರುಗೇಟು ನೀಡಿದ್ದಾರೆ. ರೈಲು ಮಾರ್ಗಗಳ ಚತುಷ್ಪಥೀಕರಣವನ್ನು ರಾಜ್ಯವಾರು ಅಥವಾ ರಾಜಕೀಯ ಆಧಾರದ ಮೇಲೆ ಅಲ್ಲ, ಹೈ ಡೆನ್ಸಿಟಿ ನೆಟ್‌ವರ್ಕ್ ಹಾಗೂ ತಾಂತ್ರಿಕ ಮಾನದಂಡಗಳ ಆಧಾರದಲ್ಲಿ ನಿರ್ಧರಿಸಲಾಗುತ್ತದೆ ಎಂದು ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ದೇಶದಲ್ಲಿ ತಾಂತ್ರಿಕ …

Read More »