ದುಷ್ಕರ್ಮಿಗಳು ವಕೀಲರೊಬ್ಬರಿಗೆ ಗುಂಡಿಟ್ಟು ಹತ್ಯೆಗೈದಿರುವ ಘೋರ ಘಟನೆಯೊಂದು ನಡೆದಿದೆ. ಬೆಂಗಳೂರಿನ ವೈಟ್ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಘಟನೆ ಬಳಿಕ ಸುತ್ತಮುತ್ತಲಿನ ಪ್ರದೇಶದ ಜನರು ಬೆಚ್ಚಿ ಬಿದ್ದಿದ್ದಾರೆ. ಮಂಜುನಾಥ್ ಮೃತಪಟ್ಟ ವಕೀಲರು. ಮಂಜುನಾಥ್ ಅವರ ಮನೆಯಲ್ಲಿ ಬಾಡಿಗೆಗೆ ಇದ್ದ ಬಿಹಾರ ಮೂಲದ ವ್ಯಕ್ತಿಗಳಿಂದಲೇ ಘಟನೆ ನಡೆದಿದೆ ಎಂದು ಪ್ರಾಥಮಿಕ ಮಾಹಿತಿಯಲ್ಲಿ ತಿಳಿದುಬಂದಿದೆ. ಅಲ್ಲದೇ ಬಾಡಿಗೆ ವಿಚಾರಕ್ಕೆ ಕಿರಿಕ್ ಆಗಿದೆ ಅನ್ನೋ ಶಂಕೆಯೂ ಇದೆ. ಪಟ್ಟಂದೂರು ಅಗ್ರಹಾರದಲ್ಲಿ ವಕೀಲ …
Read More »Daily Archives: ಅಕ್ಟೋಬರ್ 19, 2026
ದಸರಾ ರೀಲ್ಸ್ ಮಾಡಿ ಬಹುಮಾನ ಗೆಲ್ಲಿ: ಟಾಪ್ 100 ರೀಲ್ಸ್ಗೆ ಡಿಕೆಶಿ ವಿಶೇಷ ಆಫರ್!
ಮೈಸೂರು ದಸರಾ ಸಂಭ್ರಮವನ್ನು ರೀಲ್ಸ್ ಮೂಲಕ ಹಂಚಿಕೊಳ್ಳುವ ಯುವಜನರಿಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿಶೇಷ ಬಹುಮಾನದ ಆಫರ್ ಘೋಷಿಸಿದ್ದಾರೆ. ದಸರಾ ದೀಪಾಲಂಕಾರ, ಜಂಬೂಸವಾರಿ, ಆಹಾರ ಮೇಳ ಸೇರಿದಂತೆ ಹಬ್ಬದ ಯಾವುದೇ ಸಂಭ್ರಮದ ಕುರಿತು ರೀಲ್ಸ್ ಮಾಡಿ ಕಳುಹಿಸಿ. ಉತ್ತಮವಾದ 100 ರೀಲ್ಸ್ ಆಯ್ಕೆ ಮಾಡಿ ಬಹುಮಾನ ನೀಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ. ಮೈಸೂರಿನಲ್ಲಿ ದಸರಾ ಕಂಬಳ ಓಟಕ್ಕೆ ಚಾಲನೆ ನೀಡಿದ ಸಂದರ್ಭದಲ್ಲಿ ಡಿ.ಕೆ. ಶಿವಕುಮಾರ್ ಈ ಘೋಷಣೆ ಮಾಡಿದ್ದಾರೆ. ಸಾಮಾಜಿಕ …
Read More »ರಾಜ್ಯದಾದ್ಯಂತ ಮುಂದಿನ 7 ದಿನ ಭಾರಿ ಮಳೆ ಮುನ್ಸೂಚನೆ
ರಾಜ್ಯದಲ್ಲಿ ಇಂದಿನಿಂದ ಮುಂದಿನ ಏಳು ದಿನಗಳ ಕಾಲ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದ್ದು, ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ವಿವಿಧ ಜಿಲ್ಲೆಗಳಿಗೆ ಎಚ್ಚರಿಕೆ ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದೆ. ಅಕ್ಟೋಬರ್ 18ರಂದು ಗುಡುಗು ಮತ್ತು …
Read More »ಸ್ಟಿಂಗ್ ಆಪರೇಷನ್ ಮಾಡಿದವರನ್ನು ಒದ್ದು ಒಳಗೆ ಹಾಕಬೇಕು: ಸಚಿವ ಎಂ.ಬಿ.ಪಾಟೀಲ್ ಆಕ್ರೋಶ
ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಿರುವ ಸ್ಟಿಂಗ್ ಆಪರೇಷನ್ ವಿವಾದದ ಬಗ್ಗೆ ಸಚಿವ ಎಂ.ಬಿ.ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಬಿ.ಪಾಟೀಲ್, ಸ್ಟಿಂಗ್ ಆಪರೇಷನ್ ನಮ್ಮ ರಾಜ್ಯಕ್ಕೆ ಒಂದು ಶಾಪ ಎಂದು ತಿಳಿಸಿದ್ದಾರೆ. ಸ್ಟಿಂಗ್ ಆಪರೇಷನ್ಗಳ ಮೂಲಕ ಗುರಿಯಾಗಿಸುವ ಸಾಧ್ಯತೆಯ ಬಗ್ಗೆ ಕಳವಳ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಸಚಿವರು ಎಚ್ಚರಿಕೆಯಿಂದ ಇರಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಚಿವ ಸಂಪುಟ ಸಭೆಯಲ್ಲಿ ಸಲಹೆ ನೀಡಿದ್ದರು ಎಂದರು. ಸ್ಟಿಂಗ್ ಆಪರೇಷನ್ …
Read More »ಎರಡು ತಲೆ, ಒಂದೇ ದೇಹ*: *ಜನಿಸಿದ ವಾರದಲ್ಲೇ ಸಯಾಮಿ ಅವಳಿ ಶಿಶುಗಳ ಸಾವು
ಎರಡು ತಲೆಗಳು, ಒಂದೇ ದೇಹದೊಂದಿಗೆ ಜನಿಸಿದ್ದ ಅಪರೂಪದ ಸಯಾಮಿ ಅವಳಿ ಗಂಡು ಶಿಶುಗಳು ಜನಿಸಿದ ಕೇವಲ ಒಂದು ವಾರದಲ್ಲೇ ಮೃತಪಟ್ಟಿವೆ. ಒಡಿಶಾದ ಬೆರ್ಹಾಂಪುರದ ಸರ್ಕಾರಿ ಎಂಕೆಸಿಜಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ತಜ್ಞ ವೈದ್ಯರು ಚಿಕಿತ್ಸೆ ನೀಡಿದರೂ ಶಿಶುಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ. ಈ ಘಟನೆ ಅಪರೂಪದ ವೈದ್ಯಕೀಯ ಸ್ಥಿತಿಯ ಸವಾಲುಗಳನ್ನು ಮತ್ತೊಮ್ಮೆ ಮುನ್ನೆಲೆಗೆ ತಂದಿದೆ. ಕಂಧಮಾಲ್ ಜಿಲ್ಲೆಯ ತುಮುಡಿಬಂಧ ಪ್ರದೇಶದ 22 ವರ್ಷದ ದಿನಗೂಲಿ ಕಾರ್ಮಿಕ ಮಹಿಳೆ ಅಕ್ಟೋಬರ್ 11ರಂದು ಸಿಸೇರಿಯನ್ …
Read More »ಸೋದರ ಸಂಬಂಧಿ ಜೊತೆಯೇ ಪತ್ನಿಯ ಅನೈತಿಕ ಸಂಬಂಧ*: ಮನನೊಂದ ಪತಿ ಆತ್ಮಹತ್ಯೆ
ಸೋದರ ಸಂಬಂಧಿ ಜೊತೆಯೇ ಪತ್ನಿ ಅನೈತಿಕ ಸಂಬಂಧ ಹೊಂದಿ, ಎರಡನೇ ಮಗುವಿಗೆ ತಾಯಿಯಾಗುತ್ತಿರುವುದನ್ನು ತಿಳಿದು ಮನನೊಂದ ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಪತ್ನಿಯ ಕೃತ್ಯಕ್ಕೆ ಬೇಸತ್ತು ಪತಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದು, ಮುನಿಕೃಷ್ಣ (35) ಎಂದು ಗುರುತಿಸಲಾಗಿದೆ. ಈ ಘಟನೆ ಬೆಂಗಳೂರು ಹೊರವಲಯದಲ್ಲಿ ನಡೆದಿದೆ. ಆನೇಕಲ್ ತಾಲ್ಲೂಕಿನ ನೆರಿಗಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆಟೋ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಮುನಿಕೃಷ್ಣ 10 ವರ್ಷಗಳ ಹಿಂದೆ …
Read More »ಸ್ಟಿಂಗ್ ಆಪರೇಷನ್ ಒಳ್ಳೇದು; ಮನೆಯಲ್ಲಿರುವ ಹೆಣ್ಣುಮಕ್ಕಳಿಗೆ ಗೌರವ ಜಾಸ್ತಿ ಆಗುತ್ತೆ ಎಂದ ಶಾಸಕ
ರಾಜ್ಯದಲ್ಲಿ ಸದ್ಯ ಸ್ಟಿಂಗ್ ಆಪರೇಷನ್ ವಿಚಾರ ಭಾರಿ ಚರ್ಚೆಗೆ ಕಾರಣವಾಗಿದ್ದು, ಈ ಬಗ್ಗೆ ಚೆನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಸ್ಟಿಂಗ್ ಆಪರೇಷನ್ ಒಳ್ಳೆಯದು ಎಂದಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಶಿವಗಂಗಾ ಬಸವರಾಜ್, ಸ್ಟಿಂಗ್ ಆಪರೇಷನ್ ಒಂದು ರೀತಿ ಒಳ್ಳೆಯದು. ಸ್ಟಿಂಗ್ ಆಪರೇಷನ್ ನಿಂದ ಮನೆಯಲ್ಲಿರುವ ಹೆಣ್ಣು ಮಕ್ಕಳಿಗೆ ಗೌರವ ಜಾಸ್ತಿ ಆಗುತ್ತೆ, ಯಾರು ಎಲ್ಲೂ ಹೋಗದಂತೆ ಮನೆಕಡೆ ಗಮನ ಹರಿಸುತ್ತಾರೆ. ಈ ರೀತಿ ಮಾಡೋದೂ ಒಂದು ತರಹ ಒಳ್ಳೆಯದು ಅನ್ನಿಸುತ್ತೆ ಎಂದಿದ್ದಾರೆ. …
Read More »ಟೈಗರ್ ಶ್ರಾಫ್ ಕಾರಿನ ಮೇಲೆ ಗುಂಡಿನ ದಾಳಿ, ಸಲ್ಮಾನ್ ಖಾನ್ಗೆ ಮತ್ತೆ ಬೆದರಿಕೆ
ಬಾಲಿವುಡ್ ನಟ ಟೈಗರ್ ಶ್ರಾಫ್ ಕಾರಿನ ಮೇಲೆ ನಡೆದ ಗುಂಡಿನ ದಾಳಿಯ ಬೆನ್ನಲ್ಲೇ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಹೆಸರು ಮತ್ತೆ ಮುನ್ನೆಲೆಗೆ ಬಂದಿದೆ. ಈ ದಾಳಿಯ ಹೊಣೆ ಹೊತ್ತಿರುವುದಾಗಿ ಹೇಳಿಕೊಂಡಿರುವ ವ್ಯಕ್ತಿಗಳು, ಸಲ್ಮಾನ್ ಖಾನ್ಗೆ ಕ್ಷಮೆಯಾಚಿಸುವಂತೆ ಒತ್ತಾಯಿಸಿ ಮತ್ತೊಂದು ಬೆದರಿಕೆ ಹಾಕಿದ್ದಾರೆ. ಸಲ್ಮಾನ್ ಜೊತೆ ಕೆಲಸ ಮಾಡುವವರನ್ನೂ ಗುರಿಯಾಗಿಸುವುದಾಗಿ ಎಚ್ಚರಿಕೆ ನೀಡಿರುವುದರಿಂದ ಬಾಲಿವುಡ್ನಲ್ಲಿ ಆತಂಕ ಹೆಚ್ಚಿದೆ. ಆದರೆ, ಬಿಷ್ಣೋಯ್ ಗ್ಯಾಂಗ್ನ ನೇರ ಭಾಗವಹಿಸುವಿಕೆಯನ್ನು ಮುಂಬೈ ಪೊಲೀಸರು ಇನ್ನೂ ಅಧಿಕೃತವಾಗಿ ದೃಢಪಡಿಸಿಲ್ಲ. …
Read More »ಪ್ರಲ್ಹಾದ ಜೋಶಿಯವರ ನೇತೃತ್ವದಲ್ಲಿ ಕಬ್ಬು ಬೆಳೆಗಾರ ರೈತರೊಂದಿಗೆ ಸಭೆ
ಹುಬ್ಬಳ್ಳಿಯ ಪ್ರವಾಸಿ ಮಂದಿರದಲ್ಲಿ ನಿನ್ನೆ ರಾತ್ರಿ ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ ಜೋಶಿಯವರ ನೇತೃತ್ವದಲ್ಲಿ ಹೋರಾಟ ನಿರತ ಕಬ್ಬು ಬೆಳೆಗಾರ ರೈತರೊಂದಿಗೆ ನಡೆದ ಸಭೆಯು ಅತ್ಯಂತ ಫಲಪ್ರದವಾಗಿದೆ. ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜೀ ಅವರ ನೇತೃತ್ವದ ಕೇಂದ್ರ ಸರ್ಕಾರವು ಸದಾಕಾಲ ರೈತರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿದ್ದು, ರೈತರ ಬೇಡಿಕೆಗಳ ಕುರಿತು ಸಮಿತಿಯ ತಜ್ಞರೊಂದಿಗೆ ಚರ್ಚಿಸಿ ಶೀಘ್ರದಲ್ಲಿಯೇ ಉತ್ತಮ ಪರಿಹಾರ ಕಂಡುಕೊಳ್ಳುವ ಭರವಸೆ ನೀಡಲಾಯಿತು. ಮನವಿಗೆ ಸ್ಪಂದಿಸಿ ಸಹಕರಿಸಿದ ರೈತ ಮುಖಂಡರಾದ …
Read More »ಕೆ.ಎಸ್.ಈಶ್ವರಪ್ಪಗೆ ಜೀವ ಬೆದರಿಕೆ ಕರೆ: ಶಿವಮೊಗ್ಗ ಎಸ್ಪಿಗೆ ದೂರು ನೀಡಿದ ಮಾಜಿ ಡಿಸಿಎಂ
ಶಿವಮೊಗ್ಗ: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪಗೆ ಜೀವ ಬೆದರಿಕೆ ಕರೆ ಬಂದಿದ್ದು, ಈ ಸಂಬಂಧ ಶಿವಮೊಗ್ಗ ಎಸ್ಪಿ ನಿಖಿಲ್ಗೆ ಅವರು ದೂರು ನೀಡಿದ್ದಾರೆ. ಅಕ್ಟೋಬರ್ 17ರ ರಾತ್ರಿ 8.49ಕ್ಕೆ ರಿಜ್ವಾನ್ ಬೇಗ್ ಎಂಬುವವನಿಂದ ಈಶ್ವರಪ್ಪಗೆ ಕರೆ ಬಂದಿತ್ತು. ಬಳಿಕ ರಾತ್ರಿ 10.49ಕ್ಕೆ ಫರಾನ್ ರಶೀದ್ ಎಂಬಾತ ಬೆದರಿಕೆ ಕರೆ ಮಾಡಿದ್ದ. ಇಬ್ಬರೂ ಮಾಜಿ ಡಿಸಿಎಂನ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ಪ್ರಾಣ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಹೀಗಾಗಿ ಘಟನೆಯಿಂದ ತಮಗೂ ಹಾಗೂ …
Read More »
Laxmi News 24×7