ಆಯುಧ ಪೂಜೆಯ ಸಂಭ್ರಮದಲ್ಲಿದ್ದ ಕುಟುಂಬದಲ್ಲಿ ಕ್ಷಣಾರ್ಧದಲ್ಲಿ ಸೂತಕದ ಛಾಯೆ ಆವರಿಸಿದೆ. ವಾಹನಗಳಿಗೆ ಪೂಜೆ ಸಲ್ಲಿಸಿದ ಬಳಿಕ ಕಾರನ್ನು ಬೇರೆಡೆಗೆ ಸ್ಥಳಾಂತರಿಸುವಾಗ ಮೂರು ವರ್ಷದ ಬಾಲಕ ಕಾರಿನ ಚಕ್ರಕ್ಕೆ ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಹಬ್ಬದ ಸಂಭ್ರಮದಲ್ಲಿದ್ದ ಮನೆಯಲ್ಲಿ ಪುಟ್ಟ ಕಂದನ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಯರಗನಹಳ್ಳಿ ಗ್ರಾಮದ ಸಂಪತ್ ಕುಮಾರ್ ಪುತ್ರ ಕಂದನ್ ಎಸ್. ಗೌಡ (3) ಮೃತಪಟ್ಟ ಬಾಲಕ. ಆಯುಧ ಪೂಜೆಯ ಹಿನ್ನೆಲೆಯಲ್ಲಿ ಮನೆಯಲ್ಲಿ …
Read More »Daily Archives: ಅಕ್ಟೋಬರ್ 21, 2026
ಗೃಹ ಕಚೇರಿಯಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಅವರಿಂದ ಆಯುಧ ಪೂಜೆ
ಬೆಳಗಾವಿ: ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಳವಾರ ತಮ್ಮ ಗೃಹ ಕಚೇರಿಯಲ್ಲಿ ಆಯುಧ ಪೂಜೆ ನೆರವೇರಿಸಿ, ನಾಡಿನ ಸಮಸ್ತ ಜನತೆಗೆ ಆಯುಧ ಪೂಜೆಯ ಹಾರ್ದಿಕ ಶುಭಾಶಯಗಳನ್ನು ಕೋರಿದರು. ಹಿಂದೂ ಸಂಸ್ಕೃತಿ ಮತ್ತು ಸಂಪ್ರದಾಯದಲ್ಲಿ ಆಯುಧಗಳಿಗೆ ದೈವಸ್ವರೂಪದ ಸ್ಥಾನ ನೀಡಲಾಗಿದ್ದು, ಅವುಗಳನ್ನು ಪೂಜಿಸುವುದು ವಿಶೇಷ ಮಹತ್ವ ಹೊಂದಿದೆ. ಈ ಪವಿತ್ರ ಸಂದರ್ಭದಲ್ಲಿ ನಾಡದೇವತೆ ಶ್ರೀ ಚಾಮುಂಡೇಶ್ವರಿ ಅಮ್ಮನವರ ದಿವ್ಯ ಕೃಪೆ ಎಲ್ಲರ ಮೇಲಿರಲಿ ಎಂದು ಪ್ರಾರ್ಥಿಸಿದ ಲಕ್ಷ್ಮೀ ಹೆಬ್ಬಾಳಕರ್, …
Read More »ಎಂ. ಕೆ. ಹುಬ್ಬಳ್ಳಿಯ ಶ್ರೀ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಕಬ್ಬು ನುರಿಸುವ ಹಂಗಾಮಿಗೆ ಚಾಲನೆ
ಎಂ. ಕೆ. ಹುಬ್ಬಳ್ಳಿ: ಇಲ್ಲಿನ ಶ್ರೀ ಮಲಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ 2026-27ನೇ ಸಾಲಿನ ಕಬ್ಬು ನುರಿಸುವ ಹಂಗಾಮಿನ ಶುಭಾರಂಭ ಮಂಗಳವಾರ ಧಾರ್ಮಿಕ ವಿಧಿವಿಧಾನಗಳು ಹಾಗೂ ಪೂಜ್ಯರ ದಿವ್ಯ ಸಾನ್ನಿಧ್ಯದಲ್ಲಿ ನೆರವೇರಿತು. ಕಾರ್ಖಾನೆಯ ಚೇರಮನ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಕಾರ್ಖಾನೆಯ ಆವರಣದಲ್ಲಿ ನಡೆದ ಬಾಯ್ಲರ್ ಪ್ರದೀಪನ ಪೂಜಾ ಕಾರ್ಯಕ್ರಮವನ್ನು ನೆರವೇರಿಸಿ, ನೂತನ ಹಂಗಾಮಿಗೆ ಶುಭಾರಂಭ ಮಾಡಿದರು. ಪೂಜ್ಯ ಶ್ರೀಗಳ ದಿವ್ಯ ಸಾನ್ನಿಧ್ಯ ಹಾಗೂ ಆಶೀರ್ವಾದದೊಂದಿಗೆ …
Read More »ರಾಣಿ ಚನ್ನಮ್ಮಾಜಿ ಪುತ್ಥಳಿಯ ಮುರಿದ ಕೈ ತಾತ್ಕಾಲಿಕ ದುರಸ್ತಿ
ಬೆಳಗಾವಿ: ಕಿತ್ತೂರು ಉತ್ಸವ ಆರಂಭಕ್ಕೆ ಕ್ಷಣಗಣನೆ ನಡೆಯುತ್ತಿರುವ ಬೆನ್ನಲ್ಲೇ ರಾಣಿ ಚನ್ನಮ್ಮಾಜಿಯವರ ಪುತ್ಥಳಿಯ ಖಡ್ಗ ಹಿಡಿದ ಬಲಗೈ ಮುರಿದು ಬಿದ್ದ ಘಟನೆಗೆ ತಾಲೂಕು ಆಡಳಿತ ಹಾಗೂ ಪಟ್ಟಣ ಪಂಚಾಯಿತಿ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಿದ್ದಾರೆ. ಘಟನೆ ಬೆಳಕಿಗೆ ಬಂದ ಕೆಲವೇ ಗಂಟೆಗಳಲ್ಲಿ ರಾತ್ರೋರಾತ್ರಿ ದುರಸ್ತಿ ಕಾರ್ಯ ಕೈಗೊಂಡು, ಮುರಿದು ಬಿದ್ದಿದ್ದ ಕೈಯನ್ನು ತಾತ್ಕಾಲಿಕವಾಗಿ ಜೋಡಿಸಿದ್ದಾರೆ. ಐತಿಹಾಸಿಕ ಮಹತ್ವ ಹೊಂದಿರುವ ರಾಣಿ ಚನ್ನಮ್ಮಾಜಿಯವರ ಪುತ್ಥಳಿಯ ಬಲಗೈ ತುಂಡಾಗಿ ಬಿದ್ದಿರುವುದು ಸಾರ್ವಜನಿಕರು ಹಾಗೂ ಚನ್ನಮ್ಮಾಜಿಯ …
Read More »ಆರ್ಎಸ್ಎಸ್ ಪಥಸಂಚಲನಕ್ಕೆ ಮಾಹಿತಿ ಸಾಕಾಗಲ್ಲ, ಅನುಮತಿ ಪಡೆಯಿರಿ: ಪ್ರಿಯಾಂಕ್ ಖರ್ಗೆ ಸೂಚನೆ
ವಿಜಯದಶಮಿಯಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಪಥಸಂಚಲನ ನಡೆಸಲು ನಿಗದಿತ ಅರ್ಜಿ ಸಲ್ಲಿಸಿ, ಅಧಿಕೃತ ಅನುಮತಿ ಪಡೆಯುವಂತೆ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ. ಪೊಲೀಸ್ ಇಲಾಖೆಗೆ ಕೇವಲ ಮಾಹಿತಿ ನೀಡುವುದು ಅಥವಾ ಅಗತ್ಯ ವ್ಯವಸ್ಥೆ ಮಾಡುವಂತೆ ಮನವಿ ಸಲ್ಲಿಸುವುದು ಅನುಮತಿ ಪಡೆದಂತೆ ಆಗುವುದಿಲ್ಲ ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಸ್ಪಷ್ಟಪಡಿಸಿದ್ದಾರೆ. ಎಲ್ಲ ಸಂಘಟನೆಗಳಿಗೂ ಅನ್ವಯಿಸುವ ನಿಯಮದಂತೆ ಅರ್ಜಿ ಸಲ್ಲಿಸಿ, ಸಂಬಂಧಪಟ್ಟ ಅಧಿಕಾರಿಗಳ ಅನುಮೋದನೆಗಾಗಿ ಕಾಯಬೇಕು ಎಂದು ಹೇಳಿದ್ದಾರೆ. …
Read More »ಹಿಂಗಾರು ಮಳೆ ಉತ್ತಮವಾಗಲಿದೆ: ರೈತರಲ್ಲಿ ಆಶಾಭಾವನೆ ಮೂಡಿಸಿದ ಕೋಡಿಮಠ ಶ್ರೀಗಳ ಭವಿಷ್ಯವಾಣಿ
ಮುಂಗಾರು ಮಳೆಯ ಕೊರತೆಯಿಂದ ಕಂಗೆಟ್ಟಿರುವ ರೈತರಿಗೆ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಆಶಾದಾಯಕ ಭವಿಷ್ಯ ನುಡಿದಿದ್ದಾರೆ. ಈ ಬಾರಿ ಹಿಂಗಾರು ಮಳೆಯಾಗಲಿದ್ದು, ಜನರಿಗೆ ಸುಭಿಕ್ಷೆ ಮತ್ತು ನೆಮ್ಮದಿ ಸಿಗಲಿದೆ ಎಂದು ಹೇಳಿದ್ದಾರೆ. ಧಾರವಾಡದಲ್ಲಿ ಮಾತನಾಡಿದ ಶ್ರೀಗಳು, ಮಳೆ-ಬೆಳೆ ಉತ್ತಮವಾಗಿ ಆಗಬೇಕು, ಜನರ ಬದುಕಿನಲ್ಲಿ ಶಾಂತಿ ನೆಲೆಸಬೇಕು ಎಂಬ ಆಶಯ ವ್ಯಕ್ತಪಡಿಸಿದ್ದಾರೆ. ಈ ಹೇಳಿಕೆ ಬರದಿಂದ ಸಂಕಷ್ಟ ಎದುರಿಸುತ್ತಿರುವ ರೈತರಲ್ಲಿ ಹೊಸ ನಿರೀಕ್ಷೆ ಮೂಡಿಸಿದೆ. ಈ ಹಿಂದೆ ಮುಂಗಾರು …
Read More »ದರ್ಶನ್ ಹೆಸರು ದುರ್ಬಳಕೆ ಮಾಡಬೇಡಿ: ವಿಜಯಲಕ್ಷ್ಮಿ ಖಡಕ್ ಎಚ್ಚರಿಕೆ
ನಟ ದರ್ಶನ್ ಹೆಸರಿನಲ್ಲಿ ವಿವಾದ ಸೃಷ್ಟಿಸುವವರಿಗೆ ಮತ್ತು ಸ್ವಹಿತಾಸಕ್ತಿಗಾಗಿ ಡಿ ಬಾಸ್ ಹೆಸರನ್ನು ಬಳಸಿಕೊಳ್ಳುವವರಿಗೆ ಪತ್ನಿ ವಿಜಯಲಕ್ಷ್ಮಿ ನೇರ ಸಂದೇಶ ರವಾನಿಸಿದ್ದಾರೆ. ದರ್ಶನ್ ಜೊತೆಗಿನ ಹಳೆಯ ಫೋಟೋ ಹಂಚಿಕೊಂಡು, ಅಭಿಮಾನಿಗಳು ಮತ್ತು ಸಾರ್ವಜನಿಕರು ಹೆಸರನ್ನು ಗೌರವದಿಂದ ಬಳಸಬೇಕು ಎಂದು ಮನವಿ ಮಾಡಿದ್ದಾರೆ. ಮತ್ತೊಂದೆಡೆ, ಚಾಮರಾಜನಗರದ ಕಾರ್ಯಕ್ರಮದಲ್ಲಿ ನಟ ಧನ್ವೀರ್ ಗೌಡ ದರ್ಶನ್ ಪರವಾಗಿ ಮಾತನಾಡಿದ್ದು, ವೇದಿಕೆಯಲ್ಲಿ ಆಡಿದ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿವೆ. ವಿಜಯಲಕ್ಷ್ಮಿ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ದರ್ಶನ್ …
Read More »ಕಬ್ಬು ಬೆಳೆಗಾರರ ಹೋರಾಟಕ್ಕೆ ಮಹತ್ವದ ತಿರುವು: ಬೆಳಗಾವಿಯಲ್ಲಿ ಸಿಎಂ ಸಭೆ ಫಿಕ್ಸ್
ಬೆಳಗಾವಿ: ಕಬ್ಬಿಗೆ ಪ್ರತಿ ಟನ್ಗೆ ₹5,500 ದರ ನಿಗದಿಪಡಿಸುವಂತೆ ಆಗ್ರಹಿಸಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಹೋರಾಟಕ್ಕೆ ಮಹತ್ವದ ತಿರುವು ಸಿಕ್ಕಿದೆ. ಕಬ್ಬು ಬೆಳೆಗಾರರ ಬೇಡಿಕೆಗಳ ಕುರಿತು ಚರ್ಚಿಸಲು ಅಕ್ಟೋಬರ್ 26ರಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಅವರ ನೇತೃತ್ವದಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಹತ್ವದ ಸಭೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ ತಿಳಿಸಿದ್ದಾರೆ. ಈ ಕುರಿತು ಚೂನಪ್ಪ ಪೂಜಾರಿ ಅವರು …
Read More »ರಜನಿಕಾಂತ್ ಅವರ ಜೈಲರ್-2 ಸಿನಿಮಾ ನೋಡಲು ಇಡೀ ಥಿಯೇಟರ್ ನ್ನೇ ಬುಕ್ ಮಾಡಿದ ಸಂಜು ಸ್ಯಾಮ್ಸನ್
ಸೂಪರ್ ಸ್ಟಾರ್ ರಜನಿಕಾಂತ್ ಅವರ ಬಹುನಿರೀಕ್ಷಿತ ಜೈಲರ್ 2 ಸಿನಿಮಾ ಬಿಡುಗಡೆಯಾಗಿದ್ದು, ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನ ಕಾಣುತ್ತಿದೆ. ರಜನಿಕಾಂತ್ ಅಭಿಮಾನಿಯಾಗಿರುವ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್, ಜೈಲರ್ ಸಿನಿಮಾ ನೋಡಲು ಇಡೀ ಥಿಯೇಟರ್ ನ್ನೇ ಬುಕ್ ಮಾಡಿದ್ದಾರೆ. ತಮ್ಮ ಪತ್ನಿ, ಕುಟುಂಬ ಸದಸ್ಯರು ಹಾಗೂ ಸ್ನೇಹಿತರ ಜೊತೆ ಕುಳಿತು ಸಿನಿಮಾ ನೋಡಲು ಸಂಜು ಸ್ಯಾಮ್ಸನ್ ಇಡೀ ಚಿತ್ರಮಂದಿರವನ್ನೇ ಬುಕ್ ಮಾಡಿ, ವಿಶೇಷ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಸಂಜು …
Read More »ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ಇಲ್ಲಿದೆ ಮಹತ್ವದ ಮಾಹಿತಿ*: *ಟಿಕೆಟ್ ಬುಂಕಿಂಗ್ ನಿಯಮಗಳಲ್ಲಿ ಬದಲಾವಣೆ
ದೀಪಾವಳಿ ಹಬ್ಬದ ಸಂದರ್ಭದಲ್ಲೇ ಭಾರತೀಯ ರೈಲ್ವೆ ಇಲಾಖೆ ಸಾಮಾನ್ಯ ಪ್ರಯಾಣಿಕರಿಗೆ ಮಹತ್ವದ ಸೌಲಭ್ಯ ಕಲ್ಪಿಸಲು ಮುಂದಾಗಿದೆ. ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ರೈಲ್ವೆ ಟಿಕೆಟ್ ಬುಕಿಂಗ್ ನಿಯಮಗಳಲ್ಲಿ ಪ್ರಮುಖ ಬದಲಾವಣೆಗಳು ಜಾರಿಯಾಗುತ್ತಿವೆ. ಇನ್ಮುಂದೆ ಆನ್ಲೈನ್ ರೈಲ್ವೆ ಟಿಕೆಟ್ಗಳಂತೆ ರೈಲ್ವೆ ನಿಲ್ದಾಣಗಳ ಕೌಂಟರ್ಗಳಲ್ಲಿ ಪಡೆಯುವ ಸಾಮಾನ್ಯ ಟಿಕೆಟ್ಗಳಿಗೂ ಪ್ರಯಾಣ ವಿಮೆ ಸೌಲಭ್ಯ ವಿಸ್ತರಣೆಯಾಗಲಿದೆ. ಅಕ್ಟೋಬರ್ 27ರ ಒಳಗೆ ಈ ಕುರಿತು ಅಧಿಕೃತ ಅಧಿಸೂಚನೆ ಹೊರಡಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ …
Read More »
Laxmi News 24×7