ಬೀಜಿಂಗ್: ಚೀನಾದ ಟಿಬೆಟ್ ಪ್ರದೇಶದಲ್ಲಿ 7.0 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಘಟನೆಯಲ್ಲಿ 18 ಮಂದಿ ಸಾವನ್ನಪ್ಪಿದ್ದು, 46 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ 11 ಜನರ ಸ್ಥಿತಿ ಗಂಭೀರವಾಗಿದೆ. ಭೂಕಂಪದ ತೀವ್ರತೆಗೆ ಹಲವು ಕಟ್ಟಡಗಳು ಕುಸಿದಿದ್ದು, ಮನೆಗಳಿಗೆ ವ್ಯಾಪಕ ಹಾನಿಯಾಗಿದೆ. ಜನರು ಅಂಗಡಿ, ರೆಸ್ಟೋರೆಂಟ್ಗಳಿಂದ ಹೊರಗೆ ಓಡಿಬಂದಿದ್ದಾರೆ. ಸದ್ಯ ಭೂಕಂಪ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆಗಳು ಮುಂದುವರಿದಿವೆ. ಟಿಬೆಟ್ನ ಪರ್ವತ ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದು ಪ್ರಾದೇಶಿಕ ರಾಜಧಾನಿ ಲಾಸಾದಿಂದ …
Read More »Daily Archives: ಅಕ್ಟೋಬರ್ 23, 2026
ಪವಿತ್ರಾ ಗೌಡಗೆ ಬಿಗ್ಡೇ – ಬ್ಯಾರಕ್ ಬದಲಾವಣೆ ಬಗ್ಗೆ ಇಂದು ಕೋರ್ಟ್ ನಿರ್ಧಾರ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ) ಇದ್ದ ಬ್ಯಾರಕ್ ಬದಲಾವಣೆ ವಿಚಾರವಾಗಿ ಇಂದು ನ್ಯಾಯಾಲಯ (Court) ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ. ಬ್ಯಾರಕ್ ಬದಲಾವಣೆ ಕೋರಿ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯ ವಾದ-ಪ್ರತಿವಾದ ಆಲಿಸಿ ಆದೇಶ ಕಾಯ್ದಿರಿಸಿದೆ. ಮಹಿಳಾ ಬ್ಯಾರಕ್ಗಳನ್ನು ಪರಿಶೀಲಿಸಲು ನ್ಯಾಯಾಧೀಶರೇ ಜೈಲಿಗೆ ಭೇಟಿ ನೀಡಬೇಕು ಎಂದು ಪವಿತ್ರಾ ಗೌಡ ಪರ ವಕೀಲರು ಮನವಿ ಮಾಡಿದ್ದಾರೆ. ಈ …
Read More »SSLC, PUC ಪಬ್ಲಿಕ್ ಪರೀಕ್ಷೆ ಮುಂದೂಡಿಕೆ ಸಾಧ್ಯತೆ
ಬೆಂಗಳೂರು: ಜನಗಣತಿ ಹಿನ್ನೆಲೆಯಲ್ಲಿ ಎಸ್ಎಸ್ಎಲ್ಸಿ ತ್ತು ಪಿಯುಸಿ ಪಬ್ಲಿಕ್ ಪರೀಕ್ಷೆ ಮುಂದೂಡಿಕೆ ಸಾಧ್ಯತೆ ಇದೆ. ಜನವರಿಯಿಂದ ಕೇಂದ್ರ ಸರ್ಕಾರದ ಜನಗಣತಿ 2ನೇ ಹಂತ ಪ್ರಾರಂಭವಾಗಲಿದೆ. ಹೀಗಾಗಿ, ಎಸ್ಎಸ್ಎಲ್ಸಿ, ಪಿಯುಸಿ ಪಬ್ಲಿಕ್ ಪರೀಕ್ಷೆ ಮುಂದೂಡಿಕೆಗೆ ಶಾಲಾ ಶಿಕ್ಷಣ ಇಲಾಖೆಗೆ ಕೇಂದ್ರ ಜನಗಣತಿ ಕಾರ್ಯಾಚರಣೆ ನಿರ್ದೇಶನಾಲಯ ಪತ್ರ ಬರೆದಿದೆ. ಪರೀಕ್ಷೆ ಮುಂದೂಡುವಂತೆ ಶಾಲಾ ಶಿಕ್ಷಣ ಇಲಾಖೆಗೆ ಪತ್ರ ಬರೆಯಲಾಗಿದೆ. ಕೇಂದ್ರದ ಎರಡನೇ ಸುತ್ತಿನ ಜನಗಣತಿ ಜನವರಿ 25ರಿಂದ ಫೆಬ್ರವರಿ 28ರವರೆಗೆ ನಡೆಯಲಿದೆ. ಮಾರ್ಚ್ …
Read More »ಪೊಲೀಸರು ಅವ್ರ ಡ್ಯೂಟಿ ಮಾಡಿದ್ದಾರೆ, ಅದರಲ್ಲಿ ತಪ್ಪೇನಿದೆ: ಡಿಸಿಎಂ ರಿಯಾಕ್ಷನ್
ಬೆಂಗಳೂರು: ದಸರಾದಲ್ಲಿ ನಂದಿಧ್ವಜ ಪೂಜೆಗೆ ಮುಖ್ಯಮಂತ್ರಿಗಳೊಂದಿಗೆ ತೆರಳುತ್ತಿದ್ದ ಸಚಿವರನ್ನು ಎಸ್ಪಿ ತಡೆದಿರುವ ಘಟನೆಗೆ ಸಂಬಧಿಸಿದಂತೆ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಪ್ರತಿಕ್ರಿಯಿಸಿ, ಮೇಲಾಧಿಕಾರಿಗಳ ಸೂಚನೆ ಪೊಲೀಸರು ಪಾಲಿಸಿರುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ. ಮೈಸೂರು ದಸರಾ ಸಂದರ್ಭದಲ್ಲಿ ಸಚಿವರನ್ನು ಎಸ್ಪಿ ತಡೆದಿರುವ ವಿಡಿಯೋ ವೈರಲ್ ಆಗಿರುವ ಕುರಿತು ಮಾತನಾಡಿದ ಅವರು, ಸಿಎಂ ವಿಚಾರದಲ್ಲಿ ಕೆಲವೊಂದು ಶಿಷ್ಟಾಚಾರ ಇರುತ್ತೆ, ಅದನ್ನ ಪಾಲಿಸಬೇಕಾಗುತ್ತೆ ಎಂದು ಹೇಳಿದ್ದಾರೆ. ಈ ಕುರಿತು ಬಿಜೆಪಿ ಮಾಡಿರುವ ಆರೋಪಗಳಿಗೆ ಡಿಸಿಎಂ ಪ್ರತಿಕ್ರಿಯಿಸಿ, …
Read More »ಆರ್ಎಸ್ಎಸ್ ಬಗ್ಗೆ ಪ್ರಿಯಾಂಕ್ ಖರ್ಗೆ ತಮ್ಮ ತಂದೆಯಿಂದ ತಿಳಿದುಕೊಳ್ಳಲಿ: ಛಲವಾದಿ ತಿರುಗೇಟು
ಬೆಂಗಳೂರು: ಆರ್ಎಸ್ಎಸ್ (RSS) ಬಗ್ಗೆ ಪ್ರಿಯಾಂಕ್ ಖರ್ಗೆ ಅವರು ಅವರ ತಂದೆ ಮಲ್ಲಿಕಾರ್ಜುನ ಖರ್ಗೆ ಅವರಿಂದ ತಿಳಿದುಕೊಳ್ಳಲಿ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿರುಗೇಟು ನೀಡಿದ್ದಾರೆ. RSS ಪಥ ಸಂಚಲನಕ್ಕೆ ಅನುಮತಿ ಪಡೆಯಬೇಕು ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, RSS ವಿಚಾರದಲ್ಲಿ ನಾನು ಜಾಸ್ತಿ ಹೇಳಲ್ಲ. 100 ವರ್ಷಗಳ ಹಾದಿಯಲ್ಲಿ ಹೇಗೆ ಇತ್ತೋ ಹಾಗೆ ಇರಬೇಕು. ಇದಕ್ಕೆ ಸರ್ಕಾರಗಳು ಸಹಕಾರ …
Read More »ಬರ ಪರಿಹಾರಕ್ಕಾಗಿ ಸರ್ವಪಕ್ಷ ನಿಯೋಗ ಕರೆದೊಯ್ಯುವುದು ರಾಜ್ಯದ ಹಿತದೃಷ್ಟಿಯಿಂದ ಅಗತ್ಯ: ಪರಮೇಶ್ವರ್
ಬೆಂಗಳೂರು: ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯದ ಜನರಿಗೆ ಕೇಂದ್ರ ಸರ್ಕಾರದಿಂದ ಪರಿಹಾರ ದೊರಕಿಸಿಕೊಡುವುದು ನಮ್ಮ ಆದ್ಯತೆಯಾಗಿದೆ. ಇದಕ್ಕಾಗಿ ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕರೆದೊಯ್ಯಲು ನಿರ್ಧರಿಸಿದ್ದೇವೆ ಎಂದು ಉಪ ಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ್ ಅವರು ಹೇಳಿದರು. ಇಂದು ಸದಾಶಿವನಗರದ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿಗಳು, ಕೇಂದ್ರ ಗೃಹ ಸಚಿವರು ಹಾಗೂ ಕೇಂದ್ರ ಕೃಷಿ ಸಚಿವರ ಭೇಟಿಗೆ ಮೊದಲು ಸಮಯಾವಕಾಶ ಪಡೆಯಬೇಕಾಗುತ್ತದೆ. ಅವರ ಭೇಟಿಗೆ ಅವಕಾಶ ದೊರೆತ …
Read More »ಟ್ರ್ಯಾಕ್ಟರ್ ಹರಿದು ಏಳು ವರ್ಷದ ಬಾಲಕ ದಾರುಣ ಸಾವು – ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಕೋಲಾರ: ಟ್ರ್ಯಾಕ್ಟರ್ ಹರಿದು ಏಳು ವರ್ಷದ ಬಾಲಕ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ. ಮೋಹನ್ (7) ಮೃತ ಬಾಲಕ. ಕೋಲಾರದ ಇಟಿಸಿಎಂ ಆಸ್ಪತ್ರೆ ಮುಂದೆ ಈ ಘಟನೆ ನಡೆದಿದ್ದು, ಟ್ರ್ಯಾಕ್ಟರ್ನಲ್ಲಿ ಕುಳಿತಿದ್ದ ಬಾಲಕ ಕೆಳಗೆ ಬಿದ್ದಿದ್ದು, ಬಾಲಕನ ಮೇಲೆಯೇ ಟ್ರ್ಯಾಕ್ಟರ್ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನು ಈ ಭೀಕರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಕೋಲಾರ ತಾಲೂಕಿನ ವೇಮಗಲ್ ಗ್ರಾಮದ ಮಂಜೇಶ್ ಹಾಗೂ ತಮ್ಮ ವಾಸು …
Read More »ದಸರೆಯಲ್ಲಿ ಸಚಿವರನ್ನು ತಡೆದ ವಿವಾದಕ್ಕೆ ಶಾಸಕ ಪ್ರದೀಪ್ ಈಶ್ವರ್ ಎಂಟ್ರಿ – ದಲಿತ ಸಚಿವರ ಪರ ಬ್ಯಾಟಿಂಗ್!
ಚಿಕ್ಕಬಳ್ಳಾಪುರ: ಮೈಸೂರು ದಸರಾ ಕಾರ್ಯಕ್ರಮದ ವೇಳೆ ದಲಿತ ಸಮುದಾಯದ ಸಚಿವರನ್ನ ತಡೆದ ವಿವಾದಕ್ಕೆ ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಎಂಟ್ರಿಯಾಗಿದ್ದಾರೆ. ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಅವರು, ದಲಿತ ಸಮುದಾಯದ ಸಚಿವರ ಪರವಾಗಿ ಸೋಷಿಯಲ್ ಮೀಡಿಯಾ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡು ಬೆಂಬಲ ವ್ಯಕ್ತಪಡಿಸಿದ್ದಾರೆ. ಮೈಸೂರು ದಸರಾ ಸಂದರ್ಭದಲ್ಲಿ ನಡೆದ ಈ ಘಟನೆ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ದಲಿತ ಸಮುದಾಯದ ಸಚಿವರ ವಿಚಾರವಾಗಿ ಶಾಸಕ ಪ್ರದೀಪ್ ಈಶ್ವರ್ …
Read More »ಆರ್ಎಸ್ಎಸ್, ಹಿಂದೂ ಅಂದ್ರೆ ಪ್ರಿಯಾಂಕ್ ಖರ್ಗೆಗೆ ಅಲರ್ಜಿ – ಯತ್ನಾಳ್
ಬೆಂಗಳೂರು: ಆರ್ಎಸ್ಎಸ್, ಹಿಂದೂ ಅಂದ್ರೆ ಪ್ರಿಯಾಂಕ್ ಖರ್ಗೆಗೆ ಅಲರ್ಜಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕಿಡಿಕಾರಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಹಿತಿ ಕೊಟ್ರೆ ಅಷ್ಟೇ ಅಲ್ಲ, ಅನುಮತಿ ಕೇಳಬೇಕು ಎಂದು ಪ್ರಿಯಾಂಕ್ ಖರ್ಗೆ ಹೇಳ್ತಾರೆ. ಮೊನ್ನೆ ಈದ್ ಮಿಲಾದ್ ಆಯಿತು ಆಗ ಪರ್ಮಿಷನ್ ತೆಗೆದುಕೊಂಡ್ರಾ? ಆರ್ಎಸ್ಎಸ್ ಮತ್ತು ಹಿಂದೂ ಅಂದ್ರೆ ಖರ್ಗೆ ಅವರಿಗೆ ಅಲರ್ಜಿ. ಖರ್ಗೆ ಅವರ ಬಳಿ ಸಾಕಷ್ಟು ಹಣ ಇದೆ. ಅಧಿಕಾರ ಸಹ …
Read More »ಲಾರಿಗೆ KSRTC ಬಸ್ ಡಿಕ್ಕಿ – ಚಾಲಕ, ಪ್ರಯಾಣಿಕ ದುರ್ಮರಣ
ಚಿತ್ರದುರ್ಗ: ಲಾರಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ಹಾಗೂ ಪ್ರಯಾಣಿಕ ಸಾವನ್ನಪ್ಪಿದ್ದು, 15ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗ ತಾಲೂಕಿನ ಮಲ್ಲಾಪುರ \ಗ್ರಾಮದ ಬಳಿ ನಡೆದಿದೆ. ಭೀಕರ ಅಪಘಾತದಲ್ಲಿ ಬಸ್ ಚಾಲಕ ಬಾಪು ಪಾಟೀಲ್ (36), ಪ್ರಯಾಣಿಕ ಗಗನ್ (14) ಮೃತಪಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 13ರಲ್ಲಿ ಅಪಘಾತ ನಡೆದಿದ್ದು, ಘಟನೆಯಲ್ಲಿ ಬಸ್ನಲ್ಲಿದ್ದ 15ಕ್ಕೂ ಹೆಚ್ಚು ಜನ ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಪೈಕಿ ಐವರಿಗೆ …
Read More »
Laxmi News 24×7