ಬೆಂಗಳೂರು: ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ವೆಚ್ಚ ಮಾತ್ರವಲ್ಲದೆ ಇನ್ಮುಂದೆ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ನೀಡಲಾಗದ ‘ಶೆಡ್ಯೂಲ್ಡ್ ಔಷಧ’ಗಳ ದರಪಟ್ಟಿಯನ್ನೂ ಸಾರ್ವಜನಿಕರಿಗೆ ಕಾಣುವಂತೆ ಪ್ರದರ್ಶಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಖಾಸಗಿ ಆಸ್ಪತ್ರೆಗಳು ಮತ್ತು ನರ್ಸಿಂಗ್ ಹೋಮ್ಗಳ ಸಂಘಟನೆ (PHANA – ಫನಾ) ಪದಾಧಿಕಾರಿಗಳೊಂದಿಗೆ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮಹತ್ವದ ಸಭೆ ನಡೆಸಿದ ಆರೋಗ್ಯ ಸಚಿವ ಯು.ಟಿ. ಖಾದರ್ ಆಸ್ಪತ್ರೆಗಳ ಸುಲಿಗೆ ಪ್ರವೃತ್ತಿ ಮತ್ತು ಅತಿಯಾದ ದರ …
Read More »Daily Archives: ಅಕ್ಟೋಬರ್ 23, 2026
ಪುಲಕೇಶಿನಗರದಲ್ಲಿ ಸ್ಫೋಟ – ನಿಗೂಢ ರಹಸ್ಯ ಬೇಧಿಸಲು ಎನ್ಐಎ ಎಂಟ್ರಿ
ಬೆಂಗಳೂರು: ನಗರದ ಪುಲಕೇಶಿನಗರ ಠಾಣಾ ವ್ಯಾಪ್ತಿಯ ಫ್ರೇಜರ್ ಟೌನ್ನಲ್ಲಿ ನಿರ್ಮಾಣ ಹಂತದ ಕಟ್ಟಡವೊಂದರಲ್ಲಿ ಸಂಭವಿಸಿದ ಅನುಮಾನಾಸ್ಪದ ಸ್ಫೋಟ ಪ್ರಕರಣದ ತನಿಖೆ ತೀವ್ರ ಚುರುಕುಗೊಂಡಿದೆ. ಕೃತ್ಯದಲ್ಲಿ ಸುಧಾರಿತ ಸ್ಫೋಟಕ ಸಾಧನ ಬಳಕೆಯಾಗಿರುವ ಬಲವಾದ ಶಂಕೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕೃತವಾಗಿ ಪ್ರವೇಶಿಸಿದ್ದು, ಸ್ಥಳೀಯ ಪೊಲೀಸರಿಂದ ಸಮಗ್ರ ತನಿಖಾ ವರದಿಯನ್ನು ಕೋರಿದೆ. ಘಟನೆ ಸಂಬಂಧ ಈಗಾಗಲೇ ಪುಲಕೇಶಿನಗರ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ ಹಾಗೂ ಸ್ಫೋಟಕ ವಸ್ತುಗಳ ಕಾಯ್ದೆಯಡಿ ಎಫ್ಐಆರ್ ದಾಖಲಾಗಿದ್ದು, …
Read More »ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಜನ ಅಸ್ವಸ್ಥ: THO ಕಾರ್ಯವೈಖರಿಗೆ ದುರ್ಯೋಧನ ಐಹೊಳೆ ತರಾಟೆ
ಚಿಕ್ಕೋಡಿ:ತಾಲೂಕಿನ ಜೋಡಟ್ಟಿ ಗ್ರಾಮದ ಶೇಲವ್ವಾ ದೇವಿ ದೇವಸ್ಥಾನದ ಪ್ರಸಾದ ಸೇವಿಸಿ 100ಕ್ಕೂ ಹೆಚ್ಚು ಭಕ್ತರು ಆಹಾರ ವಿಷಪೂರಿತಗೊಂಡು ಅಸ್ವಸ್ಥಗೊಂಡು ಕಬ್ಬೂರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ. ರೋಗಿಗಳ ಪರಾಮರ್ಶೆಗೆ ಆಗಮಿಸಿದ್ದ ಶಾಸಕ ದುರ್ಯೋಧನ ಐಹೊಳೆ ಅವರು, ಸ್ಥಳದಲ್ಲಿ ಗೈರುಹಾಜರಿದ್ದ ತಾಲೂಕು ಆರೋಗ್ಯಾಧಿಕಾರಿ(THO) ಡಾ. ರಾಜಶೇಖರ ಖಣದಾಳೆ ಅವರನ್ನು ಫೋನ್ ಮೂಲಕ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಜೋಡಟ್ಟಿ ಗ್ರಾಮದ ಶೇಲವ್ವಾ ದೇವಿ ದೇವಸ್ಥಾನದಲ್ಲಿ ವಿತರಿಸಲಾದ ಪ್ರಸಾದ ಸೇವಿಸಿದ ನೂರಾರು ಭಕ್ತರಲ್ಲಿ ವಾಂತಿ, …
Read More »ಅ.31ಕ್ಕೆ ಮಂಡ್ಯಕ್ಕೆ ಸಿಎಂ ಡಿಕೆಶಿ ಭೇಟಿ – ವಿವಿಧ ಅಭಿವೃದ್ಧಿ ಕಾಮಗಾರಿ ಚಾಲನೆಗೆ ಭರ್ಜರಿ ಸಿದ್ಧತೆ
ಮಂಡ್ಯ: ನಗರಕ್ಕೆ ಅಕ್ಟೋಬರ್ 31ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕೃತವಾಗಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಭರ್ಜರಿ ಸಿದ್ಧತೆಗಳು ಆರಂಭಗೊಂಡಿವೆ. ಕಾರ್ಯಕ್ರಮದ ಯಶಸ್ಸಿಗಾಗಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ರವಿಕುಮಾರ್ ಗೌಡ ಗಣಿಗ ಅವರು ಮಂಡ್ಯ ವಿಶ್ವವಿದ್ಯಾನಿಲಯದ ಆವರಣದಲ್ಲಿ ತಲೆ ಎತ್ತಲಿರುವ ಬೃಹತ್ ವೇದಿಕೆ ನಿರ್ಮಾಣ ಕಾಮಗಾರಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಸಿದ್ಧತಾ ಕಾರ್ಯಗಳಿಗೆ ಅಧಿಕೃತ ಚಾಲನೆ ನೀಡಲಿದ್ದಾರೆ. ಮಂಡ್ಯ …
Read More »ಹುಬ್ಬಳ್ಳಿಯಲ್ಲಿ ಮಾಂಜಾ ದಾರಕ್ಕೆ ಲ್ಯಾಬ್ ಟೆಕ್ನಿಷಿಯನ್ ಬಲಿ
ಹುಬ್ಬಳ್ಳಿ: ಗಾಳಿಪಟ ಹಾರಿಸಲು ಬಳಸುವ ಅಪಾಯಕಾರಿ ಮಾಂಜಾ ದಾರಕ್ಕೆ ಸಿಲುಕಿ ಹುಬ್ಬಳ್ಳಿಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ಕುತ್ತಿಗೆಗೆ ಮಾಂಜಾ ದಾರ ಸಿಲುಕಿ, ತೀವ್ರ ರಕ್ತಸ್ರಾವದಿಂದ ಮಹಿಳೆ ಮೃತಪಟ್ಟಿರುವ ಘಟನೆ ನಗರದ ಶಿವಶಂಕರ ಕಾಲೋನಿ ಬಳಿ ಇಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಹುಬ್ಬಳ್ಳಿಯ ಭರತ್ ನಗರದ ನಿವಾಸಿ, 38 ವರ್ಷದ ವಿದ್ಯಾ ಮಂಜುನಾಥ ಗೌಡ ಎಂದು ಗುರುತಿಸಲಾಗಿದೆ. ವಿದ್ಯಾ ಲ್ಯಾಬ್ ಟೆಕ್ನಿಷಿಯನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇಂದು ಮಧ್ಯಾಹ್ನ ಸುಮಾರು 1 …
Read More »ಬೆಂಗಳೂರಿನಲ್ಲಿ ಮೆಟ್ರೋ ಕಾಮಗಾರಿ ವಿಳಂಬ – BMRCL ಎಂಡಿಗೆ ಕೃಷ್ಣ ಬೈರೇಗೌಡ ಕ್ಲಾಸ್
ಬೆಂಗಳೂರು: ಬೆಂಗಳೂರು ಅಭಿವೃದ್ಧಿಗೆ ಮೆಟ್ರೋ ಅತ್ಯಗತ್ಯ. ಆದರೆ ಇದೇ ಮೆಟ್ರೋ ಕಾಮಗಾರಿ ಈಗ ಜನರ ಪಾಲಿಗೆ ಸಂಕಷ್ಟವಾಗಿ ಪರಿಣಮಿಸಿದೆ. ಕೆ.ಆರ್.ಪುರಂನಿಂದ ಹೆಬ್ಬಾಳ, ಏರ್ಪೋರ್ಟ್ ರಸ್ತೆವರೆಗಿನ ಕಾಮಗಾರಿಗಳ ಪ್ರಗತಿ ಪರಿಶೀಲನೆಗೆ ಇಳಿದ ಸಚಿವ ಕೃಷ್ಣಬೈರೇಗೌಡರಿಗೆ ಕಂಡಿದ್ದು ಅಸಮರ್ಪಕ ಕಾಮಗಾರಿ ನಿರ್ವಹಣೆ. ಮಾನ್ಯತಾ ಟೆಕ್ ಪಾರ್ಕ್ ಮುಂಭಾಗದಲ್ಲಿ ಕಾಮಗಾರಿ ನಡೆಯುತ್ತಿರುವ ವೇಗ ಕಂಡು ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾಮಗಾರಿ ಮುಗಿಸೋದು ಯಾವಾಗ ಅಂತ ಅಧಿಕಾರಿಗಳನ್ನೇ ಪ್ರಶ್ನಿಸಿದ್ದಾರೆ. ವರ್ಷಗಳು ಕಳೆದರೂ ಕಾಮಗಾರಿ ವೇಗ …
Read More »ಗಡಿಯಾರ, ಕನ್ನಡಕ, ಉಂಗುರಗಳಲ್ಲೂ ಕ್ಯಾಮೆರಾ ಇಟ್ಟು ಟ್ರ್ಯಾಪ್ : ಸಚಿವ ಸತೀಶ್ ಜಾರಕಿಹೊಳಿ ಎಚ್ಚರಿಕೆ!
ಗಡಿಯಾರ, ಕನ್ನಡಕ ಮತ್ತು ಉಂಗುರಗಳಲ್ಲಿ ಕ್ಯಾಮೆರಾ ಅಳವಡಿಸಿ ಸಚಿವರು ಹಾಗೂ ಶಾಸಕರನ್ನು ಸ್ಟಿಂಗ್ ಆಪರೇಷನ್ ಮೂಲಕ ಸಿಲುಕಿಸಲು ಪ್ರಯತ್ನಗಳು ನಡೆಯುತ್ತಿವೆ. ಹೀಗಾಗಿ ಜನಪ್ರತಿನಿಧಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಾರಕಿಹೊಳಿ, ಸ್ಟಿಂಗ್ ಕಾರ್ಯಾಚರಣೆಗಳ ಬಗ್ಗೆ ಮುಖ್ಯಮಂತ್ರಿಗಳೇ ಎಚ್ಚರಿಕೆ ನೀಡಿದ್ದಾರೆ . ಇದೇ ವೇಳೆ, ಅಕ್ಟೋಬರ್ 26ರಂದು ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಸಭೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ. ಸಚಿವರು ಮತ್ತು ಶಾಸಕರನ್ನು …
Read More »ಬಟ್ಟೆ ಒಣಗಿಸುವಾಗ ಕರೆಂಟ್ ಶಾಕ್: ಮಗನನ್ನು ರಕ್ಷಿಸಲು ಹೋಗಿ ತಾಯಿಯೂ ಸಾವು
ವಿದ್ಯುತ್ ಅವಘಡಕ್ಕೆ ತಾಯಿ, ಮಗ ಇಬ್ಬರೂ ಬಲಿಯಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಬಟ್ಟೆ ಒಣಗಿಸಲು ಹೋಗಿ ಈ ದುರಂತ ಸಂಭವಿಸಿದೆ. ತಾಯಿ ಮರ್ಸಿ ಮಸ್ಕರೇನಸ್ (45), ಪುತ್ರ ಶೋನ್ ಮಸ್ಕರೇನಸ್ (18) ಮೃತ ದುರ್ದೈವಿಗಳು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯಿತಿಯ ವರ್ಣಬೆಟ್ಟುವಿನಲ್ಲಿ ಈ ಘಟನೆ ನಡೆದಿದೆ. ಬೆಳಿಗ್ಗೆ 7 ರಿಂದ 8 ಗಂಟೆ ನಡುವೆ …
Read More »ಅಕ್ರಮ ಸಂಬಂಧದ ಅನುಮಾನಕ್ಕೆ ಪತ್ನಿಯನ್ನೇ ಕೊಂದ ಪತಿ: 9 ದಿನಗಳ ಬಳಿಕ ಪ್ರಕರಣ ಬಯಲು
ಸುದ್ದಿ: ಬೆಂಗಳೂರಿನ ಮಾಗಡಿ ರಸ್ತೆ ವ್ಯಾಪ್ತಿಯ ರಾಜಕಾಲುವೆಯಲ್ಲಿ ಮಹಿಳೆಯ ಮೃತದೇಹ ಪತ್ತೆಯಾದ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಅನುಮಾನದಿಂದ ಪತ್ನಿ ರುಕ್ಸಾನಾಳನ್ನು ಕೊಲೆ ಮಾಡಿದ ಆರೋಪದ ಮೇಲೆ ಪತಿ ಮೊಹಮ್ಮದ್ ಇರ್ಫಾಜ್ನನ್ನು ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ 25 ವರ್ಷದ ರುಕ್ಸಾನಾ ಕೊಲೆಯಾದ ಮಹಿಳೆ. ಅಕ್ಟೋಬರ್ 13ರಂದು ರಾಜಕಾಲುವೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿತ್ತು. ಆರಂಭದಲ್ಲಿ ಮಹಿಳೆಯ ಗುರುತು ಪತ್ತೆಹಚ್ಚಲು ಪೊಲೀಸರಿಗೆ ಸಾಧ್ಯವಾಗಿರಲಿಲ್ಲ. ಬಳಿಕ ಹಲವು …
Read More »ಬೀದಿನಾಯಿಯನ್ನು ಮರಕ್ಕೆ ನೇತುಹಾಕಿ ಹೊಡೆದು ಕೊಂದ ದುಷ್ಕರ್ಮಿಗಳು: ವಿಡಿಯೋ ವೈರಲ್
ಇದೆಂತಹ ವಿಲಕ್ಷಣ ಕೃತ್ಯ. ಬೀದಿ ನಾಯಿಯನ್ನು ಮರಕ್ಕೆ ನೇತುಹಾಕಿ ಕ್ರೂರವಾಗಿ ಹಲ್ಲೆ ಮಾಡಿ ಕೊಂದಿರುವ ಘಟನೆ ನಡೆದಿದೆ. ಈ ಪ್ರಕರಣ ಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ. ಶ್ವಾನ ಪ್ರಿಯೆ ನಿಶ್ಚಿಂತ ನರೇನ್ ಎಂಬುವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪುನೀತ್, ಮುರಳಿ ಹಾಗೂ ಮುನಿಯಪ್ಪ ಎಂಬುವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಬೆಂಗಳೂರಿನ ಗುಂಜೂರಿನ ಗ್ರೀನ್ ವುಡ್ ಹೈಸ್ಕೂಲ್ ಬಳಿ ಇರುತ್ತಿದ್ದ ಬೀದಿನಾಯಿಯನ್ನು …
Read More »
Laxmi News 24×7