Breaking News

Daily Archives: ಅಕ್ಟೋಬರ್ 25, 2026

ಬೆಳಗಾವಿಯಲ್ಲಿ ಭೀಕರ ಅಗ್ನಿ ಅವಘಡ: ಲಕ್ಷಾಂತರ ರೂ. ನಷ್ಟ

ಬೆಳಗಾವಿ: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಭವಿಸಿದ ಅಗ್ನಿ ಅವಘಡದಲ್ಲಿ ಮನೆಯೊಂದು ಸಂಪೂರ್ಣ ಸುಟ್ಟುಹೋಗಿದ್ದು, ಬಡ ಕುಟುಂಬವೊಂದು ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ-ಪಾಸ್ತಿಯನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿ ಗ್ರಾಮದ ಅಂಬೇಡ್ಕರ್ ನಗರದಲ್ಲಿ ಮಾರುತಿ ಕೋಟೆ ಹಾಗೂ ಶ್ರವಣ ಕೋಟೆ ಅವರಿಗೆ ಸೇರಿದ ಮನೆಯಲ್ಲಿ ಈ ದುರಂತ ಸಂಭವಿಸಿದೆ. ಮನೆಯಲ್ಲಿ ಏಕಾಏಕಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಬೆಂಕಿ ಹೊತ್ತಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಮನೆಯಾದ್ಯಂತ ವ್ಯಾಪಿಸಿದೆ. ಬೆಂಕಿಯ …

Read More »

ಅಂಗನವಾಡಿಗಳ ಬಲವರ್ಧನೆಗೆ ಆದ್ಯತೆ ನೀಡಿ: ಸಚಿವ ಸತೀಶ್ ಜಾರಕಿಹೊಳಿ

ಗೋಕಾಕ: ಗ್ರಾಮೀಣ ಪ್ರದೇಶಗಳಲ್ಲಿ ಮಕ್ಕಳ ಸಮಗ್ರ ಬೆಳವಣಿಗೆ, ಪೌಷ್ಟಿಕತೆ ಹಾಗೂ ಮಹಿಳಾ ಕಲ್ಯಾಣದಲ್ಲಿ ಅಂಗನವಾಡಿ ಕೇಂದ್ರಗಳು ಮಹತ್ವದ ಪಾತ್ರ ವಹಿಸುತ್ತವೆ. ಸರ್ಕಾರದ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಂಗನವಾಡಿ ಸಿಬ್ಬಂದಿಯ ಜವಾಬ್ದಾರಿ ದೊಡ್ಡದಿದ್ದು, ಆಯ್ಕೆಯಾದವರು ನಿಷ್ಠೆ, ಪ್ರಾಮಾಣಿಕತೆ ಹಾಗೂ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಬೇಕು ಎಂದು ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಕರೆ ನೀಡಿದರು. ಗೋಕಾಕ ನಗರದ ಹಿಲ್‌ ಗಾರ್ಡನ್‌ ಕಚೇರಿಯಲ್ಲಿ ಮಹಿಳಾ ಮತ್ತು …

Read More »

5 ಎಕರೆ ಗೋಮಾಳ ಭೂಮಿ ರಕ್ಷಣೆಗೆ ಗ್ರಾಮಸ್ಥರ ಪ್ರತಿಭಟನೆ

ಬೆಳಗಾವಿ: ಸರ್ಕಾರಿ ಗೋಮಾಳ ಭೂಮಿಯನ್ನು ದನಕರುಗಳ ಮೇಯಿಸುವಿಕೆ ಹಾಗೂ ಗ್ರಾಮಸ್ಥರ ಸಾಮೂಹಿಕ ಬಳಕೆಗೆ ಮೀಸಲಿಡುವಂತೆ ಆಗ್ರಹಿಸಿ, ಖಾನಾಪುರ ತಾಲ್ಲೂಕಿನ ಕಕ್ಕೇರಿ ಗ್ರಾಮದ ನಿವಾಸಿಗಳು ಶುಕ್ರವಾರ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ಕಕ್ಕೇರಿ ಗ್ರಾಮದಲ್ಲಿರುವ 5 ಎಕರೆ ಸರ್ಕಾರಿ ಗೋಮಾಳ ಭೂಮಿಯನ್ನು ಬೇರೆ ಉದ್ದೇಶಕ್ಕೆ ಬಳಸಲು ವರದಿ ಸಲ್ಲಿಸಲಾಗುತ್ತಿದೆ ಎಂಬ ಮಾಹಿತಿ ತಿಳಿದುಬಂದಿದ್ದು, ಇದರಿಂದ ಗ್ರಾಮಸ್ಥರಲ್ಲಿ ಆತಂಕ ಉಂಟಾಗಿದೆ. ಈ ಜಮೀನು ದನಕರುಗಳ ಮೇಯಿಸುವಿಕೆಗೆ ಅತ್ಯಗತ್ಯವಾಗಿದ್ದು, ಅದನ್ನು …

Read More »

ನಾನು ನೆಪವಷ್ಟೇ:ದರ್ಶನ್ ನಿಜವಾದ ಟಾರ್ಗೆಟ್: ಅವರಿಗೆ ಅನ್ಯಾಯ ಆಗೋಕೆ ಬಿಡಲ್ಲ ಎಂದ ನಟ ಧನ್ವೀರ್

ವಿಜಯಲಕ್ಷ್ಮಿ ದರ್ಶನ್ ಹಾಗೂ ನಟ ಧನ್ವೀರ್‌ ನಡುವಿನ ಕೋಲ್ಡ್ ವಾರ್ ತೀವ್ರ ಸ್ವರೂಪ ಪಡೆದುಕೊಂಡಿದೆ. ಇಬ್ಬರ ನಡುವಿನ ಫೈಟ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಧನ್ವೀರ್ ವಿರುದ್ಧ ಮೂರು ಪ್ರಕರಣಗಳು ದಾಖಲಾಗಿವೆ. ಅತ್ತ ವಿಜಯಲಕ್ಷ್ಮೀ ವಿರುದ್ಧ ಧನ್ವೀರ್ ತಂದೆ ಕೇಸ್ ದಾಖಲಿಸಿದ್ದಾರೆ. ಈ ಎಲ್ಲಾ ಘಟನೆಗಳ ಬೆನ್ನಲ್ಲೇ ನಟ ಧನ್ವೀರ್ ಖಾಸಗಿ ಸುದ್ದಿವಾಹಿನಿಯೊಂದರಲ್ಲಿ ಮಾತನಾಡಿದ್ದು, ನಾನು ನೆಪವಷ್ಟೇ ಅವರ ಟಾರ್ಗೆಟ್ ದರ್ಶನ್. ದರ್ಶನ್ ಗೆ ಅನ್ಯಾಯವಾಗಲು ನಾನು ಬಿಡಲ್ಲ ಎಂದಿದ್ದಾರೆ. ನಾನು …

Read More »

ಮಾತೃಭಾಷೆ ಕನ್ನಡ ಎಂದು ಉಲ್ಲೇಖಿಸಿದರೆ ಕನ್ನಡಿಗರಿಗೆ ಐಟಿ ಕಂಪನಿಗಳಲ್ಲಿ ಉದ್ಯೋಗ ಸಿಗಲ್ಲ: ವಿಡಿಯೋ ಹಂಚಿಕೊಂಡು ಕಣ್ಣೀರಿಟ್ಟ ಯುವತಿ

ಮಾತೃಭಾಷೆ ಕನ್ನಡ ಎಂದು ಉಲ್ಲೇಖಿಸಿದರೆ ಐಟಿ ಕಂಪನಿಗಳಲ್ಲಿ ಕೆಲಸ ಸಿಗುವುದಿಲ್ಲ ಎಂದು ಕನ್ನಡದ ಯುವತಿಯೊಬ್ಬಳು ಸಾಮಾಜಿಕ ಜಾಲ ತಾಣಗಳಲ್ಲಿ ವಿಡಿಯೋ ಹಂಚಿಕೊಂಡು ಅಳಲು ತೋಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಐಟಿ ಕಂಪನಿಗಳು ಉದ್ಯೋಗನೀಡುವ ಸಂದರ್ಭದಲ್ಲಿ ತೆಲುಗು ಮತ್ತು ತಮಿಳಿಗರಿಗೆ ಹೆಚ್ಚಿನ ಆದ್ಯತೆ ನೀಡುತ್ತಿವೆ. ರೆಸ್ಯೂಮ್​ ನಲ್ಲಿ ಕನ್ನಡ ಮಾತೃಭಾಷೆ ಎಂದು ಉಲ್ಲೇಖಿಸಿದರೆ ಉದ್ಯೋಗ ಸಿಗುತ್ತಿಲ್ಲ ಎಂದು ಯುವತಿ ವಿಡಿಯೋ ಮೂಲಕ ಕಣ್ಣೀರಿಟ್ಟಿದ್ದಾರೆ. ಬೆಂಗಳೂರಿನ ಕಾಲೇಜುಗಳಲ್ಲಿ ಕ್ಯಾಂಪಸ್​​ ಇಂಟರ್​ವ್ಯೂವ್​​ ಗಳನ್ನು​ ಮಾಡುತ್ತಿಲ್ಲ. ಬದಲಾಗಿ, ಕಡಿಮೆ …

Read More »

ಯಳ್ಳೂರ ಕೆಎಲ್‌ಇ ಸೆಂಟಿನರಿ ಆಸ್ಪತ್ರೆಗೆ NABH ಮಾನ್ಯತೆ

ಬೆಳಗಾವಿ : ಯಳ್ಳೂರು ರಸ್ತೆಯಲ್ಲಿರುವ ಕೆಎಲ್‌ಇ ಸೆಂಟಿನರಿ ಚಾರಿಟಬಲ್ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರವು ಗುಣಮಟ್ಟದ ಆರೋಗ್ಯ ಸೇವೆ ಹಾಗೂ ರೋಗಿಗಳ ಸುರಕ್ಷತೆಗೆ ನೀಡುತ್ತಿರುವ ಆದ್ಯತೆಯ ಅಂಗವಾಗಿ ಓಂಃಊ ಮಾನ್ಯತೆಯನ್ನು ಪಡೆದುಕೊಂಡಿದೆ. ಈ ಕುರಿತು ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಎನ್. ಅವರು ಮಾತನಾಡಿ, ನಮ್ಮ ಆಸ್ಪತ್ರೆಯು NABH ಮಾನ್ಯತೆ ಪಡೆದಿರುವುದು ಹೆಮ್ಮೆಯ ವಿಷಯವಾಗಿದೆ. ರೋಗಿಗಳಿಗೆ ಸುರಕ್ಷಿತ, ಗುಣಮಟ್ಟದ ಹಾಗೂ ವೈಜ್ಞಾನಿಕ ಆಧಾರಿತ ವೈದ್ಯಕೀಯ ಸೇವೆಗಳನ್ನು ಒದಗಿಸುವುದು ನಮ್ಮ …

Read More »

ಮಂಗಳವಾರ ಕರ್ನಾಟಕ ಬಂದ್?

ಬೆಳಗಾವಿ: ಕಬ್ಬು ಬೆಳೆಗಾರರ ಬೇಡಿಕೆಗಳ ಕುರಿತು ಅಕ್ಟೋಬರ್ 26ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಳಗಾವಿಯಲ್ಲಿ ಸಭೆ ನಡೆಸಲಿದ್ದಾರೆ. ಅಂದು ಬೆಳಗ್ಗೆ 11 ಗಂಟೆಗೆ ಸಕ್ಕರೆ ಕಾರ್ಖಾನೆ ಮಾಲಿಕರ ಸಭೆ ಹಾಗೂ ಮಧ್ಯಾಹ್ನ 3.30ಕ್ಕೆ ಕಬ್ಬು ಬೆಳೆಗಾರರ ಸಭೆ ನಡೆಸಲಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಈ ಮಹತ್ವದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಸೂಕ್ತ ಸ್ಪಂದನೆ ಸಿಗದಿದ್ದರೆ, ಅಕ್ಟೋಬರ್ 27ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗುವುದು ಎಂದು ಕರ್ನಾಟಕ ರಾಜ್ಯ …

Read More »

ಬೆಳಗಾವಿಯ ಹೈವೇ ಮೇಲೆ ವಾಹನ ಅಡ್ಡಗಟ್ಟಿ ದರೋಡೆ: ಮೂವರು ಆರೋಪಿಗಳ ಬಂಧನ

ಬೆಳಗಾವಿ: ನಗರದ ಹಿಂಡಲಗಾ ಬ್ರಿಡ್ಜ್‌ ಸಮೀಪದ ಹೈವೇ ಮೇಲೆ ಬುಲೆರೋ ವಾಹನವನ್ನು ಅಡ್ಡಗಟ್ಟಿ, ಚಾಲಕನ ಮೇಲೆ ಹಲ್ಲೆ ನಡೆಸಿ ಹಣ ಹಾಗೂ ಮೊಬೈಲ್ ಫೋನ್ ಕಸಿದುಕೊಂಡು ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಮಾಳಮಾರುತಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಕ್ಟೋಬರ್ 15ರಂದು ನಸುಕಿನ ಜಾವ ಸುಮಾರು 2 ಗಂಟೆಗೆ ಈ ಘಟನೆ ನಡೆದಿತ್ತು. ಬೊಲೆರೋ ವಾಹನವನ್ನು ಅಡ್ಡಗಟ್ಟಿ ನಿಲ್ಲಿಸಿದ ಆರೋಪಿಗಳು, ಚಾಲಕನಿಗೆ ಹಲ್ಲೆ ನಡೆಸಿ ಆತನ ಬಳಿ ಇದ್ದ ಹಣ ಮತ್ತು ಮೊಬೈಲ್ …

Read More »