Breaking News

Daily Archives: ಅಕ್ಟೋಬರ್ 26, 2026

ಶಿವಮೊಗ್ಗ ದಸರಾದಲ್ಲಿ ಅಂಬಾರಿ ಆನೆ ರಂಪಾಟ – ಅಧಿಕಾರಿಗಳಿಗೆ ಕ್ಲೀನ್‌ಚಿಟ್

ಶಿವಮೊಗ್ಗ: ದಸರಾ ಮೆರವಣಿಗೆಯಲ್ಲಿ  ಅಂಬಾರಿ ಹೊತ್ತಿದ್ದ ಸೋಮಣ್ಣ ಆನೆ ರಂಪಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಕ್ಲೀನ್‌ಚಿಟ್ ಸಿಕ್ಕಿದೆ. ಘಟನೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಕಂಡುಬಂದಿಲ್ಲ ಎಂದು ಸಿಸಿಎಫ್ ಹನುಮಂತಪ್ಪ ಅವರು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಆಂತರಿಕ ತನಿಖೆಯಲ್ಲಿ ಸೋಮಣ್ಣ ಆನೆಯ ವರ್ತನೆಯೇ ಘಟನೆಗೆ ಕಾರಣ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಅಂಬಾರಿ ಹೊತ್ತಿದ್ದ ಆನೆ ರಂಪಾಟ ನಡೆಸಿದ ಘಟನೆ ಬಗ್ಗೆ ಸಿಸಿಎಫ್ ಹನುಮಂತಪ್ಪ ನೇತೃತ್ವದಲ್ಲಿ ಆಂತರಿಕ …

Read More »

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ಗೆ 15 ಎಕರೆ ಕಬ್ಬು ಬೆಂಕಿಗಾಹುತಿ

ಬೀದರ್: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ 15 ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾದ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಓತಗಿ ಗ್ರಾಮದಲ್ಲಿ ನಡೆದಿದೆ. ಬರಗಾಲದ ನಡುವೆ ಕಷ್ಟಪಟ್ಟು ಬೆಳೆದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಗ್ರಾಮದ ರೈತ ಗೋವಿಂದ ಬೀರಪ್ಪ ಅವರಿಗೆ ಸೇರಿದ ಕಬ್ಬಿನ ಜಮೀನಿನಲ್ಲಿ ಈ ಅವಘಡ ಸಂಭವಿಸಿದೆ. ಬೆಂಕಿ ವೇಗವಾಗಿ ಹರಡಿದ ಪರಿಣಾಮ ಕಬ್ಬಿನ ಬೆಳೆ ಧಗಧಗನೆ …

Read More »

ಜನವರಿಯೊಳಗೆ ಜಿಪಂ, ತಾಪಂ ಚುನಾವಣೆ: ಈಶ್ವರ್ ಖಂಡ್ರೆ

ಬೆಂಗಳೂರು: ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ (ಜಿಪಂ) ಮತ್ತು ತಾಲೂಕು ಪಂಚಾಯಿತಿ (ತಾಪಂ) ಚುನಾವಣೆ ನಡೆಸಲು ಸಿದ್ಧತೆಗಳು ನಡೆಯುತ್ತಿವೆ. ಮುಂದಿನ ಡಿಸೆಂಬರ್  ಅಂತ್ಯ ಅಥವಾ ಜನವರಿಯೊಳಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ಜಿಪಂ ಮತ್ತು ತಾಪಂ ಕ್ಷೇತ್ರಗಳ ಮೀಸಲಾತಿ ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸಲು ಅಕ್ಟೋಬರ್ 19ರವರೆಗೆ ಅವಕಾಶ ನೀಡಲಾಗಿತ್ತು ಎಂದು …

Read More »

ರಸ್ತೆಗೆ ಅಡ್ಡಲಾಗಿ ಕಟ್ಟಿದ್ದ ಹಗ್ಗ ಕುತ್ತಿಗೆಗೆ ಸಿಕ್ಕು ಬೈಕ್‌ ಸವಾರ ದುರ್ಮರಣ

ಚಿಕ್ಕಮಗಳೂರು: ಟಿಂಬರ್‌ ಲೋಡ್‌ ಮಾಡಲು ರಸ್ತೆಗೆ ಅಡ್ಡಲಾಗಿ ಕಟ್ಟಿದ್ದ ಹಗ್ಗ ಕುತ್ತಿಗೆಗೆ ಸಿಕ್ಕು ಬೈಕ್‌  ಸವಾರ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಸಮೀಪದ ತೇಗೂರು ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ನಗರದ ಸೈಯದ್ ಗಲ್ಲಿ ನಿವಾಸಿ ಮಹಮ್ಮದ್ ಗೌಸ್ ಖಾನ್ (36) ಮೃತ ದುರ್ದೈವಿ. ತೇಗೂರು ಗ್ರಾಮದಿಂದ ನಗರಕ್ಕೆ ಹೆಂಡತಿ ಜೊತೆ ಸ್ಕೂಟರ್‌ನಲ್ಲಿ ಬರುವಾಗ ಹಗ್ಗ ಕಾಣಿಸದೇ ಈ ಅವಘಡ ಸಂಭವಿಸಿದೆ. ಟ್ರ್ಯಾಕ್ಟರ್‌ಗೆ ಟಿಂಬರ್‌ ಎಳೆದು ಲೋಡ್‌ ಮಾಡಲು ಹಗ್ಗ ಕಟ್ಟಲಾಗಿತ್ತು ಎಂದು …

Read More »

ಕಾಂಗ್ರೆಸ್‌ನ ಸ್ಟಿಂಗ್‌ನಿಂದ ರಾಜ್ಯಕ್ಕೆ ಕಳಂಕ – ರೇಣುಕಾಚಾರ್ಯ ವಾಗ್ದಾಳಿ

ಶಿವಮೊಗ್ಗ: ರಾಜ್ಯದಲ್ಲಿ ಸ್ಟಿಂಗ್ ಆಪರೇಷನ್  ಒಂದು ಭೂತ ಆವರಿಸಿದೆ. ರಾಜ್ಯಕ್ಕೆ ಒಂದು ಇತಿಹಾಸ ಇದೆ. ಸಂಸ್ಕೃತಿ, ಸಂಸ್ಕಾರ, ಪರಂಪರೆ ಇದೆ. ಇಂತಹ ಕರ್ನಾಟಕಕ್ಕೆ ಕಳಂಕ ತರುವ ಕೆಲಸವನ್ನು ಈ ಸರ್ಕಾರ ಮಾಡುತ್ತಿದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ  ವಾಗ್ದಾಳಿ ನಡೆಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯರಂತ ಹಿರಿಯ ನಾಯಕರು ಯಾವುದೇ ಪಕ್ಷ ಇರಬಹುದು. ದೇಶಕ್ಕೆ ಮೋದಿ, ಅಟಲ್ ಜೀ ನಮಗೆ ಆದರ್ಶ. ರಾಜ್ಯದಲ್ಲಿ ರೈತನಾಯಕ ಯಡಿಯೂರಪ್ಪ ಅವರು ನಮಗೆ …

Read More »

ದೇವೇಗೌಡರ ಕುಟುಂಬ ಮುಗಿಸಲು 600 ಕೋಟಿ ಡೀಲ್: ಹೆಚ್‌ಡಿಕೆ ಬಾಂಬ್‌

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಸ್ಟಿಂಗ್ ಆಪರೇಷನ್  ವಿವಾದದ ಬೆನ್ನಲ್ಲೇ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಗಂಭೀರ ಆರೋಪದ ಬಾಂಬ್ ಸಿಡಿಸಿದ್ದಾರೆ. ದೇವೇಗೌಡರ ಕುಟುಂಬದ ರಾಜಕೀಯ ಅಸ್ತಿತ್ವವನ್ನೇ ಮುಗಿಸಲು ಬರೋಬ್ಬರಿ 600 ಕೋಟಿ ರೂ. ಬೃಹತ್ ಡೀಲ್ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋ ಕುರಿತು ಪ್ರತಿಕ್ರಿಯಿಸಿದ ಹೆಚ್‌ಡಿಕೆ, “ಒಂದು ಕುಟುಂಬವನ್ನು ಮುಗಿಸಲು 600 ಕೋಟಿ …

Read More »

ಕಬ್ಬು ಬೆಳೆಗಾರರ ವಿಚಾರದಲ್ಲಿ ಮುಖ್ಯಮಂತ್ರಿಗಳ ಕಪಟ ನಾಟಕ: ವಿಜಯೇಂದ್ರ ಕಿಡಿ

ಬೆಂಗಳೂರು: ಕಬ್ಬು ಬೆಳೆಗಾರರ  ವಿಚಾರದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್  ಅವರು ಕಪಟ ನಾಟಕ ಆಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಮಾಧ್ಯಮಗಳ ಜೊತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕಬ್ಬು ಬೆಳೆಗಾರರನ್ನು ಭೇಟಿ ಮಾಡಿ ಇದೆಲ್ಲವೂ ಕೇಂದ್ರ ಸರ್ಕಾರದ ಜವಾಬ್ದಾರಿ; ರಾಜ್ಯ ಸರ್ಕಾರದ ಹೊಣೆ ಏನೂ ಇಲ್ಲ ಎಂಬಂತೆ ವರ್ತಿಸಿದ್ದಾರೆ. ಸಕ್ಕರೆ ಕಾರ್ಖಾನೆಗಳಿಂದ ರಾಜ್ಯ ಸರ್ಕಾರಕ್ಕೆ ಅತಿ ಹೆಚ್ಚು ಅನುಕೂಲ ಆಗುತ್ತಿದೆ ಎಂಬುದನ್ನು ಕಬ್ಬು ಬೆಳೆಗಾರರು ಅರ್ಥ ಮಾಡಿಕೊಳ್ಳಬೇಕು. …

Read More »

ಕನ್ನಡಿಗರನ್ನು ಕಡೆಗಣಿಸಿದ್ರೆ ಸೂಕ್ತ ಕ್ರಮ – ಖಾಸಗಿ ಕಂಪನಿಗಳಿಗೆ ಡಿಕೆಶಿ ಖಡಕ್‌ ಎಚ್ಚರಿಕೆ

ಬೆಂಗಳೂರು: ಕನ್ನಡಿಗರನ್ನು ಕಡೆಗಣಿಸಿದರೆ ಸೂಕ್ತ ಕ್ರಮಕೈಗೊಳ್ಳುವುದಾಗಿ ಖಾಸಗಿ ಕಂಪನಿಗಳಿಗೆ ಸಿಎಂ ಡಿ.ಕೆ ಶಿವಕುಮಾರ್‌  ಎಚ್ಚರಿಕೆ ನೀಡಿದ್ದಾರೆ. ಕನ್ನಡದ ಉದ್ಯೋಗಿಗಳಿಗೆ ಖಾಸಗಿ ಕಂಪನಿಗಳಲ್ಲಿ ಕಿರುಕುಳ ನೀಡುತ್ತಿರುವ ಬಗ್ಗೆ ಎಕ್ಸ್‌ನಲ್ಲಿ ಅವರು ಖಡಕ್‌ ಸಂದೇಶ ರವಾನಿಸಿದ್ದಾರೆ. ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಅನ್ಯಾಯವಾಗುತ್ತಿದೆ ಎಂಬ ದೂರುಗಳು ಕೇಳಿಬರುತ್ತಿರುವುದು ವಿಷಾದನೀಯ. ಕನ್ನಡ ಮಾತೃಭಾಷೆ ಇರುವವರನ್ನು ಕಡೆಗಣಿಸಲಾಗುತ್ತಿದೆ ಎಂಬ ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ಕನ್ನಡಿಗರ ಹಕ್ಕು, ಗೌರವ ಮತ್ತು …

Read More »

ಸಿದ್ದಗಂಗಾ ಶ್ರೀಗಳ ಆಶೀರ್ವಾದದಿಂದಲೇ ಇಂದು ಉಪಮುಖ್ಯಮಂತ್ರಿಯಾಗಿದ್ದೇನೆ: ಪರಮೇಶ್ವರ್

ತುಮಕೂರು: ಸಿದ್ದಗಂಗಾ ಶ್ರೀಗಳ  ಆಶೀರ್ವಾದದಿಂದಲೇ ಇಂದು ಉಪಮುಖ್ಯಮಂತ್ರಿಯಾಗಿ ಜನರ ಮುಂದೆ ನಿಲ್ಲಲು ಸಾಧ್ಯವಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್  ಹೇಳಿದರು. ನಗರದಲ್ಲಿ ನಡೆದ ಧಾನ್ಯ ವ್ಯಾಪಾರಿಗಳ ಸಂಘದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜಕೀಯಕ್ಕೆ ಬರಬೇಕೆಂದು ನಾನು ಮೊದಲಿನಿಂದಲೂ ನಿರ್ಧರಿಸಿರಲಿಲ್ಲ ಎಂದು ಹೇಳಿದರು. ರಾಜಕೀಯ ಪ್ರವೇಶಕ್ಕೂ ಮುನ್ನ ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದೆ, ವಿದೇಶದಲ್ಲಿಯೂ ಕೆಲಸ ಮಾಡಿದ್ದೆ. ರಜೆ ಮೇಲೆ ಊರಿಗೆ ಬಂದಾಗ ಕುಟುಂಬದ ಜವಾಬ್ದಾರಿ ವಹಿಸಿಕೊಂಡು ಸಂಸ್ಥೆಗಳನ್ನು ಮುಂದುವರಿಸುವಂತೆ ತಂದೆಯವರು ಸೂಚಿಸಿದ್ದರು. …

Read More »

ಕೆಸೆಟ್-26 ತಾತ್ಕಾಲಿಕ ಫಲಿತಾಂಶ ಪ್ರಕಟ: ಕೆಇಎ

ಬೆಂಗಳೂರು:ಅಕ್ಟೋಬರ್ 11ರಂದು ಒಟ್ಟು 37 ವಿಷಯಗಳಿಗೆ ನಡೆದ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ  ಪ್ರಕಟಿಸಿದೆ. ಕೀ ಉತ್ತರಗಳಿಗೆ ಬಂದ ಆಕ್ಷೇಪಣೆಗಳನ್ನು ಪರಿಗಣಿಸಿ ಈ ಫಲಿತಾಂಶ ಪ್ರಕಟಿಸಲಾಗಿದೆ. ಇದಕ್ಕೆ ಆಕ್ಷೇಪಣೆಗಳು ಇದ್ದಲ್ಲಿ ಪೂರಕ ದಾಖಲೆಗಳೊಂದಿಗೆ ಅ.26ರ ಬೆಳಿಗ್ಗೆ‌ 10:30ರೊಳಗೆ ಇ-ಮೇಲ್ (cetonline.Karnataka.gov.in/kea/) ಮೂಲಕ ತಿಳಿಸಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ತಾತ್ಕಾಲಿಕ ಫಲಿತಾಂಶದ ಜೊತೆಗೆ ಅಂತಿಮ ಕೀ ಉತ್ತರಗಳನ್ನೂ …

Read More »