ಚಿಕ್ಕಬಳ್ಳಾಪುರ: ಮಗಳನ್ನು ನೋಡಿಕೊಂಡು ಸ್ವಗ್ರಾಮಕ್ಕೆ ವಾಪಸಾಗುತ್ತಿದ್ದ ತಂದೆ ರಾಷ್ಟ್ರೀಯ ಹೆದ್ದಾರಿ ದಾಟುವ ವೇಳೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಬಂಡಹಳ್ಳಿ ಗೇಟ್ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 44ರ ನಂದಿ ಮೆಡಿಕಲ್ ಕಾಲೇಜು ಮುಂಭಾಗ ಅಪಘಾತ ಸಂಭವಿಸಿದೆ. ಸೋಮೇನಹಳ್ಳಿ ಗ್ರಾಮದಲ್ಲಿರುವ ಮಗಳನ್ನು ನೋಡಿಕೊಂಡು ಬಂಡಹಳ್ಳಿ ಗ್ರಾಮಕ್ಕೆ ವಾಪಸಾಗುತ್ತಿದ್ದ ವ್ಯಕ್ತಿ, ನಂದಿ ಮೆಡಿಕಲ್ ಕಾಲೇಜು ಬಳಿ ಬಸ್ನಿಂದ ಇಳಿದು ಹೆದ್ದಾರಿ ದಾಟುತ್ತಿದ್ದರು. ಈ ವೇಳೆ …
Read More »Daily Archives: ಅಕ್ಟೋಬರ್ 26, 2026
ಇನ್ಮುಂದೆ ಲಿಂಗಾಯತ ಸ್ವತಂತ್ರ ಧರ್ಮ ಹೋರಾಟಕ್ಕೆ ಹೋಗಲ್ಲ: ಎಂಬಿ ಪಾಟೀಲ್
ಬೀದರ್: ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಪ್ರಭಾವಿ ನಾಯಕ, ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಈ ವಿಚಾರದಲ್ಲಿ ಮಹತ್ವದ ಹಾಗೂ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಇನ್ಮುಂದೆ ಲಿಂಗಾಯತ ಧರ್ಮದ ಪ್ರತ್ಯೇಕ ಹೋರಾಟಕ್ಕೆ ತಾವೆಂದೂ ಹೋಗುವುದಿಲ್ಲ ಎಂದು ಘೋಷಿಸುವ ಮೂಲಕ ಚಳವಳಿಯ ಹೋರಾಟದಿಂದ ಹಿಂದೆ ಸರಿಯುವ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಬೀದರ್ ಜಿಲ್ಲೆಯ ಐತಿಹಾಸಿಕ ಬಸವಕಲ್ಯಾಣದಲ್ಲಿ ಆಯೋಜಿಸಲಾಗಿದ್ದ 25ನೇ ಕಲ್ಯಾಣ ಪರ್ವ ಕಾರ್ಯಕ್ರಮದ …
Read More »ಮೋದಿ ಅವರಪ್ಪನೂ ಜೈಲಿಗೆ ಹೋಗ್ಬೇಕು ಎಂದ ಖರ್ಗೆಗೆ ಸಂಕಷ್ಟ – ದೂರು ದಾಖಲು
ಪಾಟ್ನಾ: ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ತಂದೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದೂರು ದಾಖಲಾಗಿದೆ. ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಮಿತಿಯ ಸದಸ್ಯರಾದ ಕೃಷ್ಣ ಸಿಂಗ್ ಕಲ್ಲು ಅವರು, ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಖರ್ಗೆ ವಿರುದ್ಧ ಲಿಖಿತ ದೂರು ದಾಖಲಿಸಿದ್ದಾರೆ. ಏನಿದು ವಿವಾದ? ಪಾಟ್ನಾದಲ್ಲಿ ಕೃಷ್ಣ ಸಿಂಗ್ ಅವರ 139ನೇ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ …
Read More »ನ್ಯಾಯಾಧೀಶರ 17 ವರ್ಷದ ಮಗ ಚಲಾಯಿಸುತ್ತಿದ್ದ ಮರ್ಸಿಡಿಸ್ ಕಾರು ಸ್ಕೂಟರ್ಗೆ ಡಿಕ್ಕಿ – ವ್ಯಕ್ತಿ ಸಾವು
ತಿರುವನಂತಪುರಂ: ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ 17 ವರ್ಷದ ಮಗ ಚಲಾಯಿಸುತ್ತಿದ್ದ ಮರ್ಸಿಡಿಸ್ ಬೆನ್ಜ್ (Mercedes Benz) ಕಾರು ಸ್ಕೂಟರ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 54 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಕೇರಳದ ಕೊಚ್ಚಿಯಲ್ಲಿ ಇಂದು ನಡೆದಿದೆ. ಕೊಚ್ಚಿಯ ಚೆರಾನೆಲ್ಲೂರು ಸಮೀಪ ನಸುಕಿನ ಜಾವ 2 ರಿಂದ 3 ಗಂಟೆಯ ನಡುವೆ ಈ ಅಪಘಾತ ಸಂಭವಿಸಿದ್ದು, ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನ ಮಂಜಳಿ ನಿವಾಸಿ ಜಯಬಾಲಕೃಷ್ಣನ್ …
Read More »ಜಡ್ಜ್ ನೇಮಕಾತಿಗೂ ಮುನ್ನವೇ ಚಂದ್ರಚೂಡ್ ಸರ್ಕಾರದ ಪೂರ್ವಾನುಮೋದನೆ ಪಡೆಯುತ್ತಿದ್ದರು: ನಿವೃತ್ತ ನ್ಯಾ. ಸಂಜಯ್ ಕಿಶನ್ ಕೌಲ್
ನವದೆಹಲಿ: ಭಾರತದ ಸುಪ್ರೀಂ ಕೋರ್ಟ್ನ) ನಿವೃತ್ತ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಅವರು ಮಾಜಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ಅವರ ಕಾರ್ಯವೈಖರಿ ಕುರಿತು ಅತ್ಯಂತ ಸಂಚಲನಕಾರಿ ಮಾಹಿತಿಯೊಂದನ್ನು ಬಹಿರಂಗಪಡಿಸಿದ್ದಾರೆ. ಸುಪ್ರೀಂ ಕೋರ್ಟ್ ಕೊಲಿಜಿಯಂನಲ್ಲಿ ನ್ಯಾಯಾಧೀಶರ ಹೆಸರುಗಳನ್ನು ಔಪಚಾರಿಕವಾಗಿ ಚರ್ಚಿಸುವ ಮುನ್ನವೇ ನ್ಯಾ. ಚಂದ್ರಚೂಡ್ ಅವರು ಸರ್ಕಾರದೊಂದಿಗೆ ಆ ಹೆಸರುಗಳ ಬಗ್ಗೆ ಚರ್ಚಿಸುತ್ತಿದ್ದರು ಇದು ಸರ್ಕಾರದ ‘ಪೂರ್ವಾನುಮೋದನೆ’ ಪಡೆಯುವಂತಿದ್ದು, ತಾವು ಇದನ್ನು ಕಟುವಾಗಿ ವಿರೋಧಿಸಿದ್ದಾಗಿ ನ್ಯಾ. ಕೌಲ್ ತಿಳಿಸಿದ್ದಾರೆ. …
Read More »539 ಕೆರೆಗಳ 2,431 ಎಕರೆ ಭೂಮಿ ಒತ್ತುವರಿ ತೆರವಿಗೆ ಈಶ್ವರ್ ಖಂಡ್ರೆ ಸೂಚನೆ
ಶಿವಮೊಗ್ಗ: ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಸ್ವಾಧೀನದಲ್ಲಿರುವ ಒಟ್ಟು 4351 ಕೆರೆಗಳ ಪೈಕಿ ಇನ್ನೂ 539 ಕೆರೆಗಳ 2431 ಎಕರೆ ಭೂಮಿ ಒತ್ತುವರಿ ತೆರವಾಗಬೇಕಿದ್ದು, ಕೂಡಲೇ ಇದಕ್ಕೆ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದರು. ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಅಧಿಕಾರಿಗಳಿಗೆ ಸೂಚನೆ ನೀಡಿದರು ಗ್ರಾಮ ಪಂಚಾಯತಿ ಆಸ್ತಿಗಳ ಸಂರಕ್ಷಣೆ …
Read More »ಬೆಳಗಾವಿಯಲ್ಲಿ ಯುವತಿ ವಿಚಾರವಾಗಿ ತಲ್ವಾರ್, ಚಾಕುವಿನಿಂದ ಭೀಕರ ಹಲ್ಲೆ
ಬೆಳಗಾವಿ: ಯುವತಿಯೊಂದಿಗಿನ ಸಲುಗೆಯ ವಿಚಾರವಾಗಿ ಎರಡು ಗುಂಪುಗಳ ನಡುವೆ ಆರಂಭವಾದ ವೈಮನಸ್ಸು ತೀವ್ರ ಸಂಘರ್ಷಕ್ಕೆ ತಿರುಗಿದ್ದು, ತಲ್ವಾರ್ ಹಾಗೂ ಚಾಕುವಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಳಗಾವಿಯ ವಡಗಾವಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಹಾಪುರ ಠಾಣೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ತರುಣ ಜಾಲಗಾರ (20), ಪ್ರೇಮ ಜಾಲಗಾರ (26), ಆದಿತ್ಯ ಪೂಜಾರಿ (20), ಪ್ರಶಾಂತ ಜಾಲಗಾರ (26) ಹಾಗೂ ಮಾರುತಿ ಮಂಜಾಲಕರ (23) ಎಂದು ಗುರುತಿಸಲಾಗಿದೆ. ಕೇತನ್ …
Read More »ಅರಣ್ಯ ಇಲಾಖೆ ಸಿಬ್ಬಂದಿ ಆತ್ಮಹತ್ಯೆ
ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ವಿಠಲ್ ಜೋನಿ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಕಳೆದ ರಾತ್ರಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಹಿಂದೆ ವಿಠಲ್ ಅರಣ್ಯ ಇಲಾಖೆಯ ನೌಕರ ಸಂಘದ ಅಧ್ಯಕ್ಷರಾಗಿದ್ದರು. ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಧಾರವಾಡದ ಕುಮಾರೇಶ್ವರ ನಗರದಲ್ಲಿ ಈ ಘಟನೆ ನಡೆದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಶವವನ್ನು …
Read More »ರಂಗದೋಳಿ ಗುತ್ತಿ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ನೂತನ ಮೂರ್ತಿ ಲೋಕಾರ್ಪಣೆಗೊಳಿಸಿದ ಲಕ್ಷ್ಮೀ ಹೆಬ್ಬಾಳಕರ್
ಬೆಳಗಾವಿ: ಬೆಳಗಾವಿ: ಬೆಳಗಾವಿ ಜಿಲ್ಲೆಯ ರಂಗದೋಳಿ ಗುತ್ತಿ ಗ್ರಾಮದಲ್ಲಿ ಮಹಾಕಾವ್ಯ ರಾಮಾಯಣದ ಸೃಷ್ಟಿಕರ್ತ, ಆದಿಕವಿ ಮಹರ್ಷಿ ವಾಲ್ಮೀಕಿ ಅವರ ನೂತನ ಮೂರ್ತಿಯನ್ನು ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಭಾನುವಾರ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್ ಅವರು, ಮಹರ್ಷಿ ವಾಲ್ಮೀಕಿ ಅವರು ಕೇವಲ ರಾಮಾಯಣದ ಕರ್ತೃಗಳಲ್ಲ, ಮಾನವೀಯ ಮೌಲ್ಯಗಳು, ಧರ್ಮ, ನ್ಯಾಯ, ತ್ಯಾಗ, ಕರ್ತವ್ಯ ಪ್ರಜ್ಞೆ ಹಾಗೂ ಆದರ್ಶ ಬದುಕಿನ ಸಂದೇಶ ಸಾರಿದ ಮಹಾನ್ ಋಷಿಗಳು. …
Read More »ಮಗಳ ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದ ತಾಯಿ: ಬಳಿಕ ತಾನೂ ಆತ್ಮಹತ್ಯೆ
ತಾಯಿಯೊಬ್ಬರು 14 ವರ್ಷದ ಮಗಳ ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದಿದ್ದು, ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ನಡೆದಿದೆ. ಮಗಳ ಅನಾರೋಗ್ಯಕ್ಕೆ ಬೇಸತ್ತು ಹೆತ್ತ ತಾಯಿಯೇ ಮಗಳನ್ನು ಕೊಲೆಗೈದಿದ್ದಾರೆ. ಬಳಿಕ ತಾನೂ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಸುದ್ದಿ ಕೇಳಿ ಇಡೀ ಕರಾವಳಿ ಜಿಲ್ಲೆ ಬೆಚ್ಚಿಬಿದ್ದಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊರಗ ಕಾಲೋನಿಯಲ್ಲಿ ಹೆತ್ತ ತಾಯಿಯೇ ಮಗಳ ಕತ್ತು ಸೀಳಿ ಕೊಲೆ ಮಾಡಿದ್ದಾರೆ. ಬಳಿಕ ತಾನೂ …
Read More »
Laxmi News 24×7