ಬೆಳಗಾವಿ: ಖಾನಾಪುರ ತಾಲೂಕಿನ ಇಟಗಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಹಾಗೂ ನೂತನ ಸರ್ಕಾರಿ ಪ್ರೌಢಶಾಲೆ ಸ್ಥಾಪನೆ ವಿಚಾರವಾಗಿ ಗ್ರಾಮಸ್ಥರು ಶಾಸಕ ವಿಠ್ಠಲ ಹಲಗೇಕರ ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಗ್ರಾಮಕ್ಕೆ ಭೇಟಿ ನೀಡಿದ ಶಾಸಕರನ್ನು ಯುವಕರು ಹಾಗೂ ಗ್ರಾಮಸ್ಥರು ಸುತ್ತುವರಿದು, ಗ್ರಾಮದ ಮೂಲಸೌಕರ್ಯ ಸಮಸ್ಯೆಗಳ ಕುರಿತು ಪ್ರಶ್ನಿಸಿದರು. ಹಲವು ವರ್ಷಗಳಿಂದ ರಸ್ತೆ ಅಭಿವೃದ್ಧಿ ಕಾಮಗಾರಿ ಸಮರ್ಪಕವಾಗಿ ನಡೆಯದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಗ್ರಾಮಸ್ಥರು, ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡುವಂತೆ ಒತ್ತಾಯಿಸಿದರು. …
Read More »Daily Archives: ಅಕ್ಟೋಬರ್ 26, 2026
ಗುರ್ಲಾಪುರ ಕ್ರಾಸ್ನಲ್ಲಿ ಕಬ್ಬು ಬೆಳೆಗಾರರ ಅಹೋರಾತ್ರಿ ಹೋರಾಟ ತೀವ್ರ
ಬೆಳಗಾವಿ: ಪ್ರಸಕ್ತ ಸಾಲಿನ ಕಬ್ಬಿಗೆ ಪ್ರತಿ ಟನ್ಗೆ ₹5,500 ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್ನಲ್ಲಿ ಕಬ್ಬು ಬೆಳೆಗಾರರ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಮುಧೋಳ–ನಿಪ್ಪಾಣಿ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ಎರಡನೇ ಬಾರಿಗೆ ಬೃಹತ್ ಪ್ರತಿಭಟನೆ ನಡೆಸಿದ ರೈತರು, ಬೇಡಿಕೆ ಈಡೇರುವವರೆಗೆ ಅಹೋರಾತ್ರಿ ಹೋರಾಟ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಆಗಮಿಸಿದ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಸರ್ಕಾರದ ವಿರುದ್ಧ ಆಕ್ರೋಶ …
Read More »ಕಿತ್ತೂರಿಗೆ ಸಿಎಂ ಡಿ.ಕೆ.ಶಿವಕುಮಾರ ಭರ್ಜರಿ ಕೊಡುಗೆ ಘೋಷಣೆ
ಕಿತ್ತೂರು: ಕಿತ್ತೂರು ಉತ್ಸವದ ಅಂತಿಮ ದಿನ ಸಮಾರೋಪ ಭಾಷಣ ಮಾಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಭರ್ಜರಿ ಕೊಡುಗೆ ಘೋಷಿಸಿದ್ದಾರೆ. ಚನ್ನಮ್ಮ ಫ್ರೀಡಂ ಪಾರ್ಕ್ ನಿರ್ಮಾಣಕ್ಕೆ ಬಜೆಟ್ ನಲ್ಲಿ ₹40 ಕೋಟಿ ಅನುದಾನ ಸುಮಾರು 40 ಕೋಟಿ ರೂ. ವೆಚ್ಚದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ, ಚೆನ್ನಮ್ಮನ ಇತಿಹಾಸ ಸಾರುವ ಪಾರ್ಕ್ ನಿರ್ಮಾಣಕ್ಕೆ ಯೋಜನೆ ಘೋಷಿಸಿದ್ದಾರೆ. ಶಾಸಕ ಬಾಬಾಸಾಹೇಬ ಪಾಟೀಲ ಮನವಿ ಮೇರೆಗೆ ಈ ಘೋಷಣೆ ಮಾಡಿದ್ದು, ಬರುವ ಬಜೆಟ್ ನಲ್ಲಿ ಅನುದಾನ ನೀಡುವುದಾಗಿ, ಇಂದೇ …
Read More »202ನೇ ಕಿತ್ತೂರು ಉತ್ಸವದಲ್ಲಿ ಸಿಎಂ ಡಿಕೆಶಿ ಭಾಗಿ: ಬೆಳಗಾವಿಯ ಇಬ್ಬರು ಸಚಿವರು ಗೈರು!
ಬೆಳಗಾವಿ: ವೀರರಾಣಿ ಕಿತ್ತೂರು ಚೆನ್ನಮ್ಮನ ನಾಡಿನಲ್ಲಿ ನಡೆಯುತ್ತಿರುವ 202ನೇ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಿ, ಕಾರ್ಯಕ್ರಮದಲ್ಲಿ ಭಾಗಿಯಾದರು. ಇದೇ ವೇಳೆ ಬೆಳಗಾವಿ ಜಿಲ್ಲೆಯ ಇಬ್ಬರು ಸಚಿವರು ಸಮಾರಂಭಕ್ಕೆ ಗೈರಾಗಿರುವುದು ಗಮನ ಸೆಳೆಯಿತು. ಕಿತ್ತೂರಿಗೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರಿಗಳು, ಕಾಂಗ್ರೆಸ್ ಮುಖಂಡರು ಹಾಗೂ ಅಭಿಮಾನಿಗಳು ಆತ್ಮೀಯ ಸ್ವಾಗತ ಕೋರಿದರು. ಉತ್ಸವದಲ್ಲಿ ಪಾಲ್ಗೊಳ್ಳಲು ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಜನರು ರಸ್ತೆಯ ಇಕ್ಕೆಲಗಳಲ್ಲಿ …
Read More »ವಾಲ್ಮೀಕಿ ಜಯಂತಿ: ವಿವಿಧ ವಾಲ್ಮೀಕಿ ಯುವಕ ಸಂಘಗಳಿಗೆ ಲಕ್ಷ್ಮೀತಾಯಿ ಫೌಂಡೇಶನ್ನಿಂದ ಆರ್ಥಿಕ ನೆರವು
ಬೆಳಗಾವಿ : ಮಹರ್ಷಿ ವಾಲ್ಮೀಕಿ ಜಯಂತಿಯ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ವಾಲ್ಮೀಕಿ ಯುವಕ ಸಂಘಗಳು ಹಾಗೂ ವಾಲ್ಮೀಕಿ ಸಂಘಟನೆಗಳಿಗೆ ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಯುವ ಮುಖಂಡ ಮೃಣಾಲ್ ಹೆಬ್ಬಾಳಕರ್ ಅವರು ಲಕ್ಷ್ಮೀತಾಯಿ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು ನೀಡಿದರು. ಪ್ರತಿ ವರ್ಷದಂತೆ ಈ ಬಾರಿಯೂ ವಾಲ್ಮೀಕಿ ಜಯಂತಿಯನ್ನು ಸಂಭ್ರಮದಿಂದ ಆಚರಿಸಲು ಅನುಕೂಲವಾಗುವಂತೆ ಬೆಳಗಾವಿ ಗ್ರಾಮೀಣ ಕ್ಷೇತ್ರ ಸೇರಿದಂತೆ …
Read More »
Laxmi News 24×7