Breaking News

Daily Archives: ಅಕ್ಟೋಬರ್ 28, 2026

ಪ್ರಿಯತಮೆ ದೂರವಾದ್ಲು ಅಂತಾ ರೊಚ್ಚಿಗೆದ್ದ ಪಾಗಲ್ ಪ್ರೇಮಿ – ಲವರ್ ಬಾವನ ಬೈಕ್‌ಗೆ ಬೆಂಕಿ ಹಚ್ಚಿ ವಿಕೃತಿ!

ಬೆಂಗಳೂರು: ಸೋಷಿಯಲ್ ಮಿಡೀಯಾದಲ್ಲಿ ಶುರುವಾದ ಪರಿಚಯ ಪ್ರೀತಿಗೆ ತಿರುಗಿತ್ತು. ಆದರೆ ಆ ಪ್ರೀತಿಗೆ ಹೆಚ್ಚು ದಿನ ಬಾಳಲಿಲ್ಲ. ಪ್ರಿಯತಮನಿಂದ ದೂರವಾಗಿದ್ದಕ್ಕೆ ರೊಚ್ಚಿಗೆದ್ದಿದ್ದ ಪಾಗಲ್ ಪ್ರೇಮಿ ಬೈಕ್‌ಗೆ ಬೆಂಕಿ ಹಚ್ಚಿದ್ದಾನೆ. ನಂದನ್ ಎಂಬಾತ ಇನ್‌ಸ್ಟಾಗ್ರಾಂನಲ್ಲಿ ಸಂಧ್ಯಾ ಎಂಬ ಮಹಿಳೆಯನ್ನ ಪರಿಚಯ ಮಾಡಿಕೊಂಡಿದ್ದ. ನಂತರ ಅದು ಪ್ರೀತಿಗೆ ತಿರುಗಿತ್ತು. ಕಳೆದ 3-4 ತಿಂಗಳಿಂದ ಪ್ರೀತಿ ಪ್ರೇಮ ಅಂತಾ ನಂದನ್ – ಸಂಧ್ಯಾ ಸುತ್ತಾಡಿದ್ರು. ಆದರೆ ಕಾರಣಾಂತರಗಳಿಂದ ಇತ್ತೀಚೆಗೆ ಸಂಧ್ಯಾ, ನಂದನ್‌ನಿಂದ ದೂರವಾಗಿದ್ದಳು. ತಂಗಿಯ …

Read More »

ಹಣಕಾಸಿನ ಗಲಾಟೆ ಕೊಲೆಯಲ್ಲಿ ಅಂತ್ಯ: ಕಬ್ಬಿಣದ ರಾಡ್‌ನಿಂದ ಹೊಡೆದು ರೌಡಿಶೀಟರ್ ಬರ್ಬರ ಹತ್ಯೆ!

ಹಣಕಾಸಿನ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡಿದೆ. ರೌಡಿಶೀಟರ್ ಸುಜಿತ್ ಪಿಂಟೊ ಎಂಬಾತನನ್ನು ದುಷ್ಕರ್ಮಿಗಳು ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದು ಹತ್ಯೆ ಮಾಡಿದ್ದಾರೆ. ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ರಿಕ್ಷಾ ಚಾಲಕ ಪ್ರಮೋದ್‌ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸುಜಿತ್ ಪಿಂಟೊ ಮತ್ತು ರಿಕ್ಷಾ ಚಾಲಕ ಪ್ರಮೋದ್ ನಡುವೆ ಹಣಕಾಸಿನ ವಿಚಾರವಾಗಿ ಗಲಾಟೆ ನಡೆದಿತ್ತು ಎನ್ನಲಾಗಿದೆ. ಸುಜಿತ್ ಪಿಂಟೊ, ಪ್ರಮೋದ್‌ಗೆ ಹಣ ಪಾವತಿಸುವುದು ಬಾಕಿ ಇದ್ದುದೇ ಸಂಘರ್ಷಕ್ಕೆ ಕಾರಣ ಎಂದು …

Read More »

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಯುವತಿಯರು ಸ್ಥಳದಲ್ಲೇ ಸಾವು

ತುಮಕೂರು: ಬೆಳ್ಳಂಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಜವರಾಯನ ಅಟ್ಟಹಾಸ ಮೆರೆದಿದ್ದು, ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಯುವತಿಯರು ಮೃತಪಟ್ಟಿರುವ ಘಟನೆ ಶಿರಾ ತಾಲೂಕಿನ ತಾವರೆಕೆರೆಯಲ್ಲಿ ನಡೆದಿದೆ. ಮೃತ ಯುವತಿಯರನ್ನು ನಿಸರ್ಗ (20) ಹಾಗೂ ರೂಪಾ (21) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಐದಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಇಂದು ಬೆಳಗಿನ ಜಾವ 5 ಗಂಟೆಗೆ ಈ ದುರ್ಘಟನೆ ಸಂಭವಿಸಿದೆ. ಬಿಜಾಪುರದಿಂದ ಡಿಸೈರ್ ಕಾರಿನಲ್ಲಿ ಮೂವರು ಯುವತಿಯರು ಹಾಗೂ …

Read More »

ಯುವತಿಯ ವಿಡಿಯೋ ಮಾಡಿದ ಆರೋಪ – ಮೆಟ್ರೋ ನಿಲ್ದಾಣದ ಒಳಗೆ ಯುವತಿಯರಿಗೆ ಸೇಫ್ಟಿ ಇಲ್ವಾ?

ಬೆಂಗಳೂರು: ಯುವತಿಯ ವಿಡಿಯೋ ಮಾಡಿದ ಆರೋಪ ಕೇಳಿ ಬಂದಿದ್ದು, ಮೆಟ್ರೋ ನಿಲ್ದಾಣದ ಒಳಗೆಯೇ ಯುವತಿಯರಿಗೆ ಸೇಫ್ಟಿ ಇಲ್ವಾ ಎಂಬ ಪ್ರಶ್ನೆ ಮೂಡಿದೆ. ವೈಟ್‌ಫೀಲ್ಡ್‌ನ  ಕಾಡುಗೋಡಿ ಮೆಟ್ರೋ ನಿಲ್ದಾಣದಲ್ಲಿ  ಈ ಘಟನೆ ನಡೆದಿದೆ. ಯುವತಿಯ ವಿಡಿಯೋ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನ ಹಿಡಿದು ಆಕೆ ತರಾಟೆಗೆ ತೆಗೆದುಕೊಂಡಿದ್ದಳು. ಬಳಿಕ ಆತ ಮೊಬೈಲ್ ಕಿತ್ತುಕೊಂಡು ನಿಲ್ದಾಣದಿಂದ ಕಾಲ್ಕಿತ್ತಿದ್ದಾನೆ. ಮೆಟ್ರೋದಲ್ಲಿ ಸಂಚಾರ ಮಾಡ್ತಿದ್ದ ವೇಳೆ ಯುವತಿಯ ಹಿಂದಿನಿಂದ ವಿಡಿಯೋ ಮಾಡಿದ್ದ ಕಾಮುಕ. ಕೂಡಲೇ ಮೊಬೈಲ್ …

Read More »

ಕೋಟ ಜಂಕ್ಷನ್‌ನಲ್ಲಿ ಭೀಕರ ಅಪಘಾತ; ಸೈಕಲ್ ಸವಾರನ ಬಳಿಕ ಕಾರು ಚಾಲಕನೂ ಸಾವು

ಉಡುಪಿ: ಕುಂದಾಪುರ ತಾಲೂಕಿನ  ಕೋಟ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರು ಮತ್ತು ಸೈಕಲ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ  ಇಬ್ಬರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಕಾರು ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇದಕ್ಕೂ ಮುನ್ನ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದರು. ಚಿಕಿತ್ಸೆ ಫಲಿಸದೆ ಕಾರು ಚಾಲಕ ಸಾವು ಮೃತ ಕಾರು ಚಾಲಕನನ್ನು ಕುಂದಾಪುರ ತಾಲೂಕಿನ ಬೀಜಾಡಿ ನಿವಾಸಿ ಪ್ರದೀಪ್ ಕಾಂಚನ್ (26) ಎಂದು ಗುರುತಿಸಲಾಗಿದೆ. ಸೋಮವಾರ …

Read More »

ಆನ್‌ಲೈನ್ ಬೆಟ್ಟಿಂಗ್ ಹಗರಣ – ವೀರೇಂದ್ರ ಪಪ್ಪಿ & ಇತರರಿಗೆ ಸೇರಿದ 23.35 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು

ಬೆಂಗಳೂರು: ಆನ್‌ಲೈನ್ ಬೆಟ್ಟಿಂಗ್ ಹಗರಣ ಸಂಬಂಧ ಇಡಿ ಅಧಿಕಾರಿಗಳು ಶಾಸಕ ವೀರೇಂದ್ರ ಪಪ್ಪಿ  ಮತ್ತು ಇತರರಿಗೆ ಸೇರಿದ 23.35 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಗುಲ್ಷನ್ ಖಟ್ಟರ್, ನೇಹಾ ಟಂಡನ್‌ಗೆ ಸೇರಿದ ಒಟ್ಟು 23.35 ಕೋಟಿ ರೂ. ಮೌಲ್ಯದ ಚರ ಮತ್ತು ಸ್ಥಿರಾಸ್ತಿ ತಾತ್ಕಾಲಿಕ ಜಪ್ತಿ ಮಾಡಿದ್ದು, 13.76 ಕೋಟಿ ರೂ. ಮೌಲ್ಯದ ಚರಾಸ್ತಿ, 9.58 ಕೋಟಿ ರೂ. ಮೌಲ್ಯದ ಸ್ಥಿರಾಸ್ತಿ ವಶಕ್ಕೆ ಪಡೆಯಲಾಗಿದೆ. ಕಿಂಗ್ 567 …

Read More »

ರಸ್ತೆ ಗುಂಡಿ ತಪ್ಪಿಸಲು ಹೋಗಿ ಯುವತಿ ದುರ್ಮರಣ

ಚಿಕ್ಕೋಡಿ: ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದಾಗ ರಸ್ತೆ ಗುಂಡಿ ತಪ್ಪಿಸಲು ಹೋಗಿ ಯುವತಿಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕೋಡಿಯಲ್ಲಿ  ನಡೆದಿದೆ. ಮೃತರನ್ನು ಪಟ್ಟಣಕುಡಿ ನಿವಾಸಿ ಕುಮಾರಿ ಪ್ರೀತಿ ಬಾಳಾಸೋ ಗೌರಾಯಿ (27) ಎಂದು ಗುರುತಿಸಲಾಗಿದ್ದು, ಡಿ-ಫಾರ್ಮಸಿ ಪದವೀಧರೆ ಎಂದು ತಿಳಿದುಬಂದಿದೆ.  ಬೊರಗಾವ-ಬೆಡಕಿಹಾಳ ರಸ್ತೆಯ ಬೊರಗಾವವಾಡಿ-ಶಿರೋಳೆ ಮಳಕೆ ಅಪಘಾತ ಸಂಭವಿಸಿದೆ. ಮೃತ ಪ್ರೀತಿ ಸಹೋದರನೊಂದಿಗೆ KA23HD3880 ಸಂಖ್ಯೆಯ ದ್ವಿಚಕ್ರ ವಾಹನದಲ್ಲಿ ಪಟ್ಟಣಕುಡಿಯಿಂದ ಜಯಸಿಂಪುರದಲ್ಲಿರುವ ಸಂಬಂಧಿಕರ ಬಳಿಗೆ ತೆರಳುತ್ತಿದ್ದರು. ಈ ವೇಳೆ ಅಬ್ದುಲಾಟ್‌ನಿಂದ ಹುನ್ನರಗಿ ಕಡೆಗೆ …

Read More »

ಆಕಸ್ಮಿಕ ಬೆಂಕಿಗೆ ಗುಡಿಸಲು ಸುಟ್ಟು ಭಸ್ಮ – ಬೀದಿಗೆ ಬಂದ ದಂಪತಿ

ರಾಮನಗರ: ಆಕಸ್ಮಿಕ ಅಗ್ನಿ ಅವಘಡದಲ್ಲಿ  ಬಡ ದಂಪತಿಯ ಗುಡಿಸಲು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ಘಟನೆ ಚನ್ನಪಟ್ಟಣ  ತಾಲೂಕಿನ ಮೆಣಸಿಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಾಕಮ್ಮ ಹಾಗೂ ಮರಿಯಣ್ಣ ದಂಪತಿಗೆ ಸೇರಿದ ಗುಡಿಸಲಿಗೆ ಬೆಂಕಿ ತಗಲಿದ್ದು, ಘಟನೆ ವೇಳೆ ಅದೃಷ್ಟವಶಾತ್ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ದಂಪತಿ ಸ್ವಂತ ಮನೆ ನಿರ್ಮಿಸಿಕೊಳ್ಳುವ ಕನಸಿನಿಂದ ತಮ್ಮ ಹಸು ಮಾರಿ 2 ಲಕ್ಷ ಹಣವನ್ನು ಗುಡಿಸಲಿನಲ್ಲಿ ಇಟ್ಟುಕೊಂಡಿದ್ದರು. ಆದರೆ, ಮುಂಜಾನೆ ಏಕಾಏಕಿ ತಗಲಿದ ಆಕಸ್ಮಿಕ ಬೆಂಕಿಯ …

Read More »

ಸಿಎಂ, ಜಮೀರ್ ಅಹ್ಮದ್ ವಿರುದ್ಧ ಧನ್ವೀರ್‌ದ್ದು ಎನ್ನಲಾದ ಅವಹೇಳನಕಾರಿ ಹೇಳಿಕೆ ಖಂಡನೀಯ – ಕಾನೂನು ಕ್ರಮಕ್ಕೆ ಕೀರ್ತನ್ ಗೌಡ ಆಗ್ರಹ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಹಾಗೂ ಸಚಿವ ಜಮೀರ್ ಅಹಮದ್ ಖಾನ್  ಅವರ ವಿರುದ್ಧ ನಟ ಧನ್ವೀರ್ ಅವರು ನೀಡಿದ್ದಾರೆ ಎನ್ನಲಾದ ಅವಹೇಳನಕಾರಿ ಹಾಗೂ ಆಕ್ಷೇಪಾರ್ಹ ಹೇಳಿಕೆಗಳ ಕುರಿತು ಸೂಕ್ತ ತನಿಖೆ ನಡೆಸಿ, ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂದು ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಉಪಾಧ್ಯಕ್ಷರಾದ ಕೀರ್ತನ್ ಗೌಡ ಕೊಡಪಾಲ ಅವರು ಆಗ್ರಹಿಸಿದ್ದಾರೆ. ಪ್ರತಿಕಾ ಹೇಳಿಕೆ ನೀಡಿರುವ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ …

Read More »

ಡಿಸಿಎಂ ಪರಮೇಶ್ವರ್ ಆಸ್ಪತ್ರೆಗೆ ದಾಖಲು – ಐಸಿಯುನಲ್ಲಿ ಚಿಕಿತ್ಸೆ, ಡಿಕೆಶಿ ದೌಡು

ಬೆಂಗಳೂರು: ಡಿಸಿಎಂ ಡಾ. ಜಿ. ಪರಮೇಶ್ವರ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣವೇ ಬೆಂಗಳೂರಿನ ವೈದೇಹಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಠಾತ್ ಆರೋಗ್ಯ ಏರುಪೇರಾದ ಕಾರಣ ಕುಟುಂಬಸ್ಥರು ಹಾಗೂ ಭದ್ರತಾ ಸಿಬ್ಬಂದಿ ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ. ಪರಮೇಶ್ವರ್‌ ಅನಾರೋಗ್ಯಕ್ಕೆ ಒಳಗಾದ ಹಿನ್ನೆಲೆಯಲ್ಲಿ ಸಿಎಂ ಡಿಕೆ ಶಿವಕುಮಾರ್‌ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ವೈದೇಹಿ ಆಸ್ಪತ್ರೆಯ ಹಿರಿಯ ವೈದ್ಯರ ತಂಡವು ಸಚಿವರ ಆರೋಗ್ಯ ತಪಾಸಣೆ ನಡೆಸುತ್ತಿದ್ದು, ಅಗತ್ಯ …

Read More »