ಶಿವಮೊಗ್ಗ: ಮನೆಯಲ್ಲಿ ಬಟ್ಟೆಗೆ ಇಸ್ತ್ರಿ ಮಾಡುತ್ತಿದ್ದಾಗ ವಿದ್ಯುತ್ ಶಾಕ್ನಿಂದ ಬಾಲಕ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ನಗರದ ವಾದಿ-ಏ-ಹುಧಾದಲ್ಲಿ ನಡೆದಿದೆ. ಉಮರ್ ಫಾರುಕ್ (14) ಮೃತ ದುರ್ದೈವಿ. ಈತ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಬಟ್ಟೆ ಇಸ್ತ್ರಿ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಪ್ರಜ್ಞೆತಪ್ಪಿ ಬಿದ್ದಿದ್ದಾನೆ. ಆತನನ್ನು ಕುಟುಂಬಸ್ಥರು ಕೂಡಲೇ ಆಸ್ಪತ್ರೆ ಸಾಗಿಸಲು ಯತ್ನಿಸಿದ್ದರು. ಆದರೆ ಮಾರ್ಗ ಮಧ್ಯದಲ್ಲೇ ಬಾಲಕ ಸಾವನ್ನಪ್ಪಿದ್ದಾನೆ. ಬಾಲಕನ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಶಿಕ್ಷಕರು ಹಾಗೂ, …
Read More »Daily Archives: ಅಕ್ಟೋಬರ್ 28, 2026
4 ಎಂಎಲ್ಸಿ ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ: ಪರಮೇಶ್ವರ್
ಬೆಂಗಳೂರು: ಇಂದಿನ ಎಂಎಲ್ಸಿ ಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ನಾಲ್ಕು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸವಿದೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ತಿಳಿಸಿದರು. ಬೆಂಗಳೂರಿನ ಸದಾಶಿವನಗರದಲ್ಲಿರುವ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ಸಾಮಾನ್ಯವಾಗಿ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ವಲ್ಪ ಹಿನ್ನಡೆಯನ್ನು ಅನುಭವಿಸುತ್ತಿತ್ತು. ಆದರೆ, ಈ ಬಾರಿ ಪದವೀಧರರು ಹಾಗೂ ಶಿಕ್ಷಕರ ಹಲವು ಸಮಸ್ಯೆಗಳನ್ನು ಸರ್ಕಾರ ಬಗೆಹರಿಸಿದೆ. ಹೀಗಾಗಿ …
Read More »ದಸರಾ ದಂಗಲ್| ತಪ್ಪಿದ್ದರೆ ತಿದ್ದಿಕೊಳ್ಳುತ್ತೇವೆ: ಡಿಕೆಶಿ
ಬೆಳಗಾವಿ: ರಾಜಮನೆತನಕ್ಕೆ ನೀಡಬೇಕಾದ ಗೌರವ ಹಾಗೂ ಸಾಂಪ್ರದಾಯಿಕ ಪದ್ಧತಿಗಳಿಗೆ ಯಾವುದೇ ಚ್ಯುತಿ ತರುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮೈಸೂರು ದಸರಾ ಮಹೋತ್ಸವ ಆಚರಣೆ ವಿಚಾರವಾಗಿ ಮೈಸೂರು ರಾಜಮನೆತನದ ಪ್ರಮೋದಾದೇವಿ ಒಡೆಯರ್ ಅವರು ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಅವರು ಪ್ರತಿಕ್ರಿಯೆ ನೀಡಿದರು. ದಸರಾ ಮಹೋತ್ಸವ ಸರ್ಕಾರದ ಕಾರ್ಯಕ್ರಮವೇ ಹೊರತು ಡಿಕೆಶಿ ಕಾರ್ಯಕ್ರಮವಲ್ಲ. ನಮ್ಮ ಕಡೆಯಿಂದ ಏನಾದರೂ ತಪ್ಪಾಗಿದ್ದರೆ ಅದನ್ನು ತಿದ್ದಿಕೊಳ್ಳಲು ನಾವು ಸಿದ್ಧರಿದ್ದೇವೆ ಎಂದು …
Read More »ಧರ್ಮಸ್ಥಳ ಸೌಜನ್ಯ ಕೇಸ್ – ಪೋಸ್ಟ್ ಮಾರ್ಟಂ ಮಾಡಿದ್ದ ಸಿಬ್ಬಂದಿಗೆ ಎಸ್ಐಟಿ ನೋಟಿಸ್
ಮಂಗಳೂರು: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸಂಬಂಧಿಸಿದಂತೆ ಪೋಸ್ಟ್ ಮಾರ್ಟಂ ಮಾಡಿದ್ದ ಸಿಬ್ಬಂದಿಗೆ ಎಸ್ಐಟಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಅಲ್ಲದೇ ಆರಂಭದಿಂದ ಕೊನೆಯ ತನಿಖೆಯವರೆಗೂ ಇದ್ದ ಪೊಲೀಸ್ ಸಿಬ್ಬಂದಿಗೂ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಆರಂಭದಲ್ಲಿ ಸಾಕ್ಷಿ ನಾಶ ಮಾಡಿದ ಬಗ್ಗೆ ಇವರ ಮೇಲೆ ಆರೋಪ ಕೇಳಿಬಂದಿತ್ತು. ಆರೋಪಗಳ ಹಿನ್ನಲೆಯಲ್ಲಿ ಎಸ್ಐಟಿ ವಿಚಾರಣೆಗೆ ಮುಂದಾಗಿದೆ. ಶುಕ್ರವಾರ (ಅ.30) ವಿಚಾರಣೆಗೆ ಹಾಜರಾಗುವಂತೆ ನೊಟೀಸ್ನಲ್ಲಿ ಸೂಚಿಸಲಾಗಿದೆ. 2012ರಲ್ಲಿ ಪ್ರಕರಣದ ತನಿಖೆ ನಡೆಸಿದ …
Read More »ಆಭರಣ ಪ್ರಿಯರಿಗೆ ಗುಡ್ನ್ಯೂಸ್ – ಚಿನ್ನ, ಬೆಳ್ಳಿ ದರದಲ್ಲಿ ಭಾರೀ ಇಳಿಕೆ
ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿ ಹಬ್ಬಕ್ಕೆ ಕೆಲವೇ ದಿನಗಳು ಬಾಕಿಯಿರುವಾಗಲೇ, ಆಭರಣ ಪ್ರಿಯರಿಗೆ ಜಾಕ್ಪಾಟ್ ಹೊಡೆದಿದೆ. ಇತ್ತೀಚೆಗೆ ಗಗನಕ್ಕೇರಿದ್ದ ಚಿನ್ನ ಮತ್ತು ಬೆಳ್ಳಿ ದರಗಳಲ್ಲಿ ಕಳೆದೊಂದು ತಿಂಗಳಿನಿಂದ ದಿಢೀರ್ ಇಳಿಕೆಯಾಗಿದೆ. ಹಬ್ಬದ ಸಮಯದಲ್ಲಿ ಹಾಗೂ ಮದುವೆ ಸೀಜನ್ನಲ್ಲಿ ಚಿನ್ನ ಕೊಳ್ಳುವವರಿಗೆ ಇದು ಸೂಕ್ತ ಕಾಲವಾಗಿದ್ದು, ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಭಾರಿ ಕುಸಿತ ಕಂಡಿದೆ. ಈ ವರ್ಷದಲ್ಲಿ ರೆರ್ಕಾಡ್ ಬರೆದಿದ್ದ ಚಿನ್ನ ಕಳೆದೊಂದು ತಿಂಗಳಿನಿಂದ ದಿಢೀರ್ ಕುಸಿದಿದೆ. ಅದರಲ್ಲೂ ಬೆಳ್ಳಿ …
Read More »ಕಬ್ಬು ದರ ಸಂಘರ್ಷ| ಸತತ 13 ಗಂಟೆಗಳ ಸಭೆ ಬಳಿಕ ತಾತ್ಕಾಲಿಕ ಸಂಧಾನ – ಅಂತಿಮ ನಿರ್ಧಾರಕ್ಕೆ 2 ದಿನಗಳ ಗಡುವು
ಬೆಳಗಾವಿ: ಕರ್ನಾಟಕದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದ್ದ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸತತ 13 ಗಂಟೆಗಳ ಸುದೀರ್ಘ ಸಭೆ ತಾತ್ಕಾಲಿಕವಾಗಿ ಮುಕ್ತಾಯಗೊಂಡಿದೆ. ಸರ್ಕಾರಕ್ಕೆ ಪ್ರೋತ್ಸಾಹ ಧನದ ನೇರ ಹೊರೆಯಿಂದ ಸದ್ಯಕ್ಕೆ ರಿಲೀಫ್ ಸಿಕ್ಕಿದ್ದರೂ, ಅಂತಿಮ ಒಪ್ಪಂದಕ್ಕೆ ಬರಲು ಸಕ್ಕರೆ ಕಾರ್ಖಾನೆ ಮಾಲೀಕರು ಮತ್ತು ರೈತ ಮುಖಂಡರು ಎರಡು ದಿನಗಳ ಕಾಲಾವಕಾಶ ಪಡೆದಿದ್ದಾರೆ. ಸಕ್ಕರೆ ಎಂಎಸ್ಪಿ (ಕನಿಷ್ಠ ಮಾರಾಟ ಬೆಲೆ) ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೇಂದ್ರ …
Read More »ಧನ್ವೀರ್ಗೆ ವಾರ್ನಿಂಗ್ ಕೊಡೋಕೆ ದರ್ಶನ್ ಅಣ್ಣ ಹೇಳಿದ್ರು: ಝೈದ್ ಖಾನ್
ಧನ್ವೀರ್ಗೆ ವಾರ್ನಿಂಗ್ ಕೊಡೋಕೆ ದರ್ಶನ್ ಅಣ್ಣ ಹೇಳಿದರು ಎಂದು ನಟ ಝೈದ್ ಖಾನ್ ತಿಳಿಸಿದ್ದಾರೆ. ಕೊಲೆ ಪ್ರಕರಣದಲ್ಲಿ ಜೈಲಲ್ಲಿರುವ ದರ್ಶನ್ ಅವರನ್ನು ಪತ್ನಿ ವಿಜಯಲಕ್ಷ್ಮೀ ಹಾಗೂ ನಟ ಝೈದ್ ಖಾನ್ ಇಂದು ಭೇಟಿಯಾದರು. ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಝೈದ್ ಖಾನ್, ಧಮ್ ಇದ್ರೆ ನನ್ ಮುಂದೆ ಮಾತಾಡ್ಲಿ. ನಾನು ಜೈಲಿನಲ್ಲಿರುವಾಗ ನನ್ ಹೆಂಡ್ತಿ-ಮಕ್ಳ ಬಗ್ಗೆ ಮಾತಾಡೋಕೆ ಅವನ್ಯಾರು ಎಂದು ದರ್ಶನ್ ಗರಂ ಆಗಿದ್ದಾರೆಂದು ಹೇಳಿದರು. ದರ್ಶನ್ ಅಣ್ಣ ಧನ್ವೀರ್ಗೆ …
Read More »ಆಂಧ್ರ ಕರಾವಳಿಗೆ ಅಪ್ಪಳಿಸಿದ ಅರ್ನಾಬ್ ಚಂಡಮಾರುತ – 135 ಕಿ.ಮೀ ವೇಗದಲ್ಲಿ ಬೀಸುತ್ತಿದೆ ಗಾಳಿ
ವಿಶಾಖಪಟ್ಟಣಂ: ಬಂಗಾಳಕೊಲ್ಲಿಯಲ್ಲಿ ಉಂಟಾದ ತೀವ್ರ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಭೀಕರ ಸ್ವರೂಪ ಪಡೆದುಕೊಂಡಿರುವ ಅರ್ನಾಬ್ ಚಂಡಮಾರುತವು ಇಂದು ಮುಂಜಾನೆ ಆಂಧ್ರಪ್ರದೇಶ ಕರಾವಳಿಗೆ ಅಪ್ಪಳಿಸಿದೆ. ಇದರ ಪರಿಣಾಮವಾಗಿ ದಕ್ಷಿಣ ಮತ್ತು ಪೂರ್ವ ಭಾರತದ ಕರಾವಳಿ ತೀರದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಕಡಲತೀರಗಳಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಬಂಗಾಳಿ ಭಾಷೆಯಲ್ಲಿ ‘ಸಮುದ್ರ’ ಎಂಬ ಅರ್ಥವನ್ನು ಹೊಂದಿರುವ ಈ ‘ಅರ್ನಾಬ್’ ಸೈಕ್ಲೋನ್, ಆಂಧ್ರದ ಬಾಪಟ್ಲಾ ಮತ್ತು ವಿಶಾಖಪಟ್ಟಣಂ ನಡುವೆ ಯಾಣಂ ಕರಾವಳಿಯನ್ನು …
Read More »ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಎಸ್.ವಿ. ಸಂಕನೂರಗೆ ಭರ್ಜರಿ ಗೆಲುವು; 3ನೇ ಬಾರಿಗೆ ಪ್ರವೇಶ
ಧಾರವಾಡ: ತೀವ್ರ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ 9,323 ಮತಗಳ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಗೆಲುವಿನೊಂದಿಗೆ ಅವರು ಸತತ ಮೂರನೇ ಬಾರಿಗೆ ಮೇಲ್ಮನೆ ಪ್ರವೇಶಿಸಿದಂತಾಗಿದೆ. ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೇಂದ್ರದಲ್ಲಿ ನಡೆದ ಮತ ಎಣಿಕೆಯಲ್ಲಿ ಆರಂಭದಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಸಂಕನೂರ ಅವರು, ಅಂತಿಮ ಸುತ್ತಿನಲ್ಲೂ ತಮ್ಮ ಪ್ರಾಬಲ್ಯ ಮುಂದುವರಿಸಿ ಗೆಲುವಿನ ನಗೆ ಬೀರಿದರು. ಕೊನೆಯ ಸುತ್ತಿನಲ್ಲಿ …
Read More »ದೆಹಲಿಯಲ್ಲಿ ಹೆಚ್ಡಿಕೆ ಭೇಟಿಯಾದ ರಾಜೇಂದ್ರ – ಜೆಡಿಎಸ್ಗೆ ಶಿಫ್ಟ್ ಆಗ್ತಾರಾ ರಾಜಣ್ಣ & ಸನ್?
ತುಮಕೂರು: ರಾಜಣ್ಣ ಪುತ್ರ ಎಂಎಲ್ಸಿ ರಾಜೇಂದ್ರ ಜೆಡಿಎಸ್ ವರಿಷ್ಠ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದು ಕುತೂಹಲ ಕೆರಳಿಸಿದೆ. ಕೆಎನ್ ರಾಜಣ್ಣ ಕಾಂಗ್ರೆಸ್ ಪಕ್ಷದ ನೇರ ನುಡಿಯ ನಾಯಕ. ಸ್ವಪಕ್ಷ ಇರಲಿ, ವಿರೋಧ ಪಕ್ಷ ಇರಲಿ ತಪ್ಪನ್ನು ಖಂಡಾತುಂಡವಾಗಿ ಹೇಳುವ ಜಾಯಮಾನ ಅವರದು. ಹಾಗಾಗಿಯೇ ಅವರನ್ನು ರೆಬೆಲ್ ರಾಜಣ್ಣ ಅನ್ನೋದು. ಮಾಜಿ ಸಿಎಂ ಸಿದ್ದರಾಮಯ್ಯರ ಕಟ್ಟಾ ಬೆಂಬಲಿಗರಾಗಿರುವ ರಾಜಣ್ಣ ವೋಟ್ ಚೋರಿ ವಿಚಾರದಲ್ಲಿ ತಮ್ಮ ಪಕ್ಷದ್ದೂ ತಪ್ಪಿದೆ ಎಂದು ಹೇಳಿ ಸಚಿವ …
Read More »
Laxmi News 24×7