ಉಡುಪಿ: ಜಿಲ್ಲೆಯ ಬ್ರಹ್ಮಾವರದಲ್ಲಿ ರೌಡಿಶೀಟರ್ನನ್ನು ಕಬ್ಬಿಣದ ರಾಡ್ನಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆಗೈದ ಘಟನೆ ನಡೆದಿದೆ. ಹಣಕಾಸಿನ ವಿಚಾರಕ್ಕೆ ಇಬ್ಬರ ನಡುವೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡಿದೆ. ರೌಡಿಶೀಟರ್ ಸುಜಿತ್ ಪಿಂಟೊ (43) ಕೊಲೆಯಾದ ವ್ಯಕ್ತಿಯಾಗಿದ್ದು, ಕೊಲೆ ಪ್ರಕರಣದ ಆರೋಪಿ ಎನ್ನಲಾದ ರಿಕ್ಷಾ ಚಾಲಕ ಪ್ರಮೋದ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುಜಿತ್ ಪಿಂಟೊ ಮತ್ತು ರಿಕ್ಷಾ ಚಾಲಕ ಪ್ರಮೋದ್ ನಡುವೆ ಹಣಕಾಸಿನ ವಿಚಾರವಾಗಿ ಗಲಾಟೆ ನಡೆದಿತ್ತು. ಸುಜಿತ್ ಪಿಂಟೊ, ಪ್ರಮೋದ್ಗೆ …
Read More »Daily Archives: ಅಕ್ಟೋಬರ್ 28, 2026
ಮಂದಗತಿಯ ಸ್ಟಿಂಗ್ ತನಿಖೆಗೆ ತೀವ್ರ ಅಸಮಾಧಾನ – ಸಿಸಿಬಿ ಅಧಿಕಾರಿಗಳಿಗೆ ಸಿದ್ದರಾಮಯ್ಯ ತರಾಟೆ
ಬೆಂಗಳೂರು: ತಮ್ಮ ವಿರುದ್ಧ ನಡೆದಿದೆ ಎನ್ನಲಾದ ನಕಲಿ ಸ್ಟಿಂಗ್ ಕಾರ್ಯಾಚರಣೆ ಪ್ರಕರಣದ ತನಿಖೆ ತೃಪ್ತಿಕರವಾಗಿ ಸಾಗದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಅಪರಾಧ ವಿಭಾಗದ ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪ್ರಕರಣ ಸಂಬಂಧ ಎಫ್ಐಆರ್ ದಾಖಲಾದ ದಿನದಿಂದಲೂ ಸಿದ್ದರಾಮಯ್ಯ ಅವರು ತನಿಖೆಯ ದಿನಂಪ್ರತಿ ಬೆಳವಣಿಗೆಗಳ ಮಾಹಿತಿ ಪಡೆಯುತ್ತಿದ್ದಾರೆ. ಎಂದಿನಂತೆ ನಿನ್ನೆ ಕೂಡ ಪ್ರಕರಣದ ಪ್ರಗತಿ ವರದಿ ನೀಡಲು ತಮ್ಮನ್ನು ಭೇಟಿ ಮಾಡಿದ ಸಿಸಿಬಿ ಅಧಿಕಾರಿಗಳ ತಂಡವನ್ನು …
Read More »ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಮುಹೂರ್ತ ಫಿಕ್ಸ್
ಬೆಳಗಾವಿ: ಕರ್ನಾಟಕ ವಿಧಾನಮಂಡಲದ ಉಭಯ ಸದನಗಳ 10 ದಿನಗಳ ಚಳಿಗಾಲದ ಅಧಿವೇಶನವನ್ನು 2026ರ ಡಿಸೆಂಬರ್ 7ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಸಲು ರಾಜ್ಯ ಸರ್ಕಾರ ಸಂಭಾವ್ಯ ನಿರ್ಧಾರ ಕೈಗೊಂಡಿದೆ. ಸರಕಾರದ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಈ ಸಂಬಂಧ ವಿಧಾನಪರಿಷತ್ ಕಾರ್ಯದರ್ಶಿಗಳಿಗೆ ಮಂಗಳವಾರ ಪತ್ರ ಬರೆದಿದ್ದಾರೆ. ಸರ್ಕಾರದ ಈ ಸಂಭಾವ್ಯ ನಿರ್ಧಾರ ಜಾರಿಯಾದಲ್ಲಿ, ಡಿಸೆಂಬರ್ 7ರಿಂದ ಸುಮಾರು 10 ದಿನಗಳ ಕಾಲ ಬೆಳಗಾವಿಯಲ್ಲಿ ವಿಧಾನಮಂಡಲದ ಕಲಾಪಗಳು ನಡೆಯಲಿವೆ. ಉತ್ತರ …
Read More »ದೇಶಕ್ಕಾಗಿ ಪ್ರಾಣಾರ್ಪಣೆ ಮಾಡಿದ ವೀರರಿಗೆ ನಮನ: ಬೆಳಗಾವಿಯಲ್ಲಿ 80ನೇ ಪದಾತಿ ದಳ ದಿನಾಚರಣೆ
ಬೆಳಗಾವಿ: ದೇಶದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದ ವೀರ ಯೋಧರ ಶೌರ್ಯ, ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸುವ ಮೂಲಕ ಬೆಳಗಾವಿಯ ಮರಾಠಾ ಲೈಟ್ ಇನ್ಫ್ಯಾಂಟ್ರಿ ರೆಜಿಮೆಂಟಲ್ ಸೆಂಟರ್ (ಮರಾಠಾ ಎಲ್ಐಆರ್ಸಿ) ವತಿಯಿಂದ 80ನೇ ಪದಾತಿ ದಳ ದಿನವನ್ನು ಗೌರವಪೂರ್ವಕವಾಗಿ ಆಚರಿಸಲಾಯಿತು. ಈ ನಿಮಿತ್ತ ಬೆಳಗಾವಿಯ ಶರಕತ್ ಯುದ್ಧ ಸ್ಮಾರಕದಲ್ಲಿ ಪುಷ್ಪಚಕ್ರ ಸಮರ್ಪಣಾ ಸಮಾರಂಭ ಆಯೋಜಿಸಲಾಗಿತ್ತು. ಜೂನಿಯರ್ ಲೀಡರ್ಸ್ ವಿಂಗ್ನ ಕಮಾಂಡರ್ ಮೇಜರ್ ಜನರಲ್ ಧನಂಜಯ ಜೋಶಿ, ಮರಾಠಾ ಎಲ್ಐಆರ್ಸಿ ಕಮಾಂಡೆಂಟ್ …
Read More »ರಾತ್ರೋರಾತ್ರಿ ಪುತ್ಥಳಿ ಪ್ರತಿಷ್ಠಾಪನೆ: ವಾಲ್ಮೀಕಿ ಭವನ ನಿರ್ಮಾಣಕ್ಕೆ ಆಗ್ರಹಿಸಿ ಪ್ರತಿಭಟನೆ
ಬೆಳಗಾವಿ: ಖಾನಾಪುರ ಪಟ್ಟಣದ ಬಸವೇಶ್ವರ ವೃತ್ತದ ಸಮೀಪವಿರುವ ಶಿಶು ಅಭಿವೃದ್ಧಿ ಯೋಜನಾ ಕಚೇರಿಯ ಪಕ್ಕದ ಸರ್ಕಾರಿ ನಿವೇಶನದಲ್ಲಿ ಸೋಮವಾರ ತಡರಾತ್ರಿ ಮಹರ್ಷಿ ವಾಲ್ಮೀಕಿಯವರ 7 ಅಡಿ ಎತ್ತರದ ಪುತ್ಥಳಿಯನ್ನು ಪ್ರತಿಷ್ಠಾಪಿಸಲಾಗಿದೆ. ಈ ಬೆಳವಣಿಗೆ ಮಂಗಳವಾರ ಬೆಳಗ್ಗೆ ಬೆಳಕಿಗೆ ಬಂದಿದ್ದು, ನಿವೇಶನದಲ್ಲಿ ವಾಲ್ಮೀಕಿ ಭವನ ನಿರ್ಮಿಸಬೇಕು ಎಂದು ಆಗ್ರಹಿಸಿ ವಾಲ್ಮೀಕಿ ಸಮುದಾಯದವರು ಸ್ಥಳದಲ್ಲೇ ಪ್ರತಿಭಟನೆ ಆರಂಭಿಸಿದ್ದಾರೆ. ಸೋಮವಾರ ಸಂಜೆ ಪಟ್ಟಣದಲ್ಲಿ ತಾಲೂಕು ಆಡಳಿತದ ವತಿಯಿಂದ ವಾಲ್ಮೀಕಿ ಜಯಂತಿ ಮೆರವಣಿಗೆ ಆಯೋಜಿಸಲಾಗಿತ್ತು. ಮೆರವಣಿಗೆ …
Read More »
Laxmi News 24×7