Breaking News

Daily Archives: ಅಕ್ಟೋಬರ್ 30, 2026

ನಿಸರ್ಗಮನೆಗೆ ರಾಷ್ಟ್ರೀಯ ಮಾನ್ಯತೆ: ಸಂತಸ ತಂದ ಸಂಗತಿ: ಡಾ. ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ

ಬೆಳಗಾವಿ: ಶಿರಸಿಯ ಡಾ. ವೆಂಕಟರಮಣ ಹೆಗಡೆ ಅವರ ನಿಸರ್ಗಮನೆ ವೇದ ವೆಲ್‌ನೆಸ್ ಸೆಂಟರ್‌ಗೆ ರಾಷ್ಟ್ರೀಯ ಮಟ್ಟದ ಎನ್‌ಎಬಿಎಚ್ ಸಂಸ್ಥೆಯಿಂದ ಮಾನ್ಯತಾ ಪ್ರಮಾಣಪತ್ರ ಲಭಿಸಿರುವುದು ಅತ್ಯಂತ ಸಂತಸದ ಸಂಗತಿ ಎಂದು ಬೆಳಗಾವಿ ಹುಕ್ಕೇರಿ ಹಿರೇಮಠದ ಡಾ. ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹರ್ಷ ವ್ಯಕ್ತಪಡಿಸಿದ್ದಾರೆ. ಆಯುರ್ವೇದ, ಪಂಚಕರ್ಮ, ಪ್ರಕೃತಿ ಹಾಗೂ ಯೋಗ ಸೇರಿದಂತೆ ಪರಿಸರಸ್ನೇಹಿ ಚಿಕಿತ್ಸಾ ವಿಧಾನಗಳನ್ನು ಒಂದೇ ಸೂರಿನಡಿ ಒದಗಿಸುತ್ತಿರುವ ಡಾ. ವೆಂಕಟರಮಣ ಹೆಗಡೆ ಹಾಗೂ ಅವರ ಬಳಗದ ಸೇವೆ ಶ್ಲಾಘನೀಯವಾಗಿದೆ. …

Read More »

ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಮಕ್ಕಳ ಸುರಕ್ಷತೆಗೆ ಆದ್ಯತೆ ನೀಡಿ: ಅಡಿವೇಶ ಇಟಗಿ

ಬೆಳಗಾವಿ: ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನವನ್ನು ವ್ಯವಸ್ಥಿತವಾಗಿ ಆಯೋಜಿಸುವುದರ ಜೊತೆಗೆ, ಸಮ್ಮೇಳನದಲ್ಲಿ ಭಾಗವಹಿಸುವ ಮಕ್ಕಳ ಸುರಕ್ಷತೆ, ವಸತಿ, ಊಟ ಹಾಗೂ ಸಾರಿಗೆ ವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಅಡಿವೇಶ ಇಟಗಿ ಅಧಿಕಾರಿಗಳಿಗೆ ಸೂಚಿಸಿದರು. ನಗರದ ಜಿಲ್ಲಾ ಪಂಚಾಯತ್ ವೀಡಿಯೊ ಸಂವಾದ ಸಭಾಂಗಣದಲ್ಲಿ ಗುರುವಾರ (ಅ.29) ನಡೆದ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮಕ್ಕಳಲ್ಲಿ ಹೆಚ್ಚುತ್ತಿರುವ …

Read More »

ನವೆಂಬರ್ 30ರಿಂದ ಬೆಳಗಾವಿಯಲ್ಲಿ ಅಧಿವೇಶನ

ಬೆಂಗಳೂರು: ರಾಜ್ಯ ವಿಧಾನಮಂಡಲದ ಬೆಳಗಾವಿ ಅಧಿವೇಶನವನ್ನು ಈ ಬಾರಿಯೂ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ನವೆಂಬರ್ 30ರಿಂದ ಡಿಸೆಂಬರ್ 11ರವರೆಗೆ ಒಟ್ಟು 10 ದಿನಗಳ ಕಾಲ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಮೊದಲು ಡಿಸೆಂಬರ್ 7ರಿಂದ ಅಧಿವೇಶನ ನಡೆಸಲು ಉದ್ದೇಶಿಸಲಾಗಿತ್ತು. ಆದರೆ, ಪಂಚಾಯಿತಿ ಚುನಾವಣೆಗಳು ನಡೆಯುವ …

Read More »

ಹಾಸನಾಂಬೆ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ – ಎರಡು ಕಿಮೀ ಸಾಲುಗಟ್ಟಿ ನಿಂತ ಜನ!

ಹಾಸನ: ಹಾಸನಾಂಬ ದೇವಿ ದರ್ಶನಕ್ಕೆ ಮೊದಲ ದಿನವೇ ಭಕ್ತರ ದಂಡು ಸಾಗರೋಪಾದಿಯಾಗಿ ಹರಿದುಬಂದಿದೆ. ಮುಂಜಾನೆ 3 ಗಂಟೆಯಿಂದಲೇ ದೇವಿ ದರ್ಶನಕ್ಕೆ ಸಹಸ್ರಾರು ಭಕ್ತರು ಸಾಲುಗಟ್ಟಿ ನಿಂತಿದ್ದಾರೆ. 300 ರೂ. ವಿಶೇಷ ದರ್ಶನದ ಸಾಲಿನಲ್ಲಿ ಸುಮಾರು ಎರಡು ಕಿಲೋ ಮೀಟರ್‌ವರೆಗೂ ಕ್ಯೂನಲ್ಲಿ ಭಕ್ತರು ದೇವಿ ದರ್ಶನಕ್ಕಾಗಿ ಕಾದು ನಿಂತಿದ್ದಾರೆ. 1000 ರೂ. ವಿಶೇಷ ದರ್ಶನದ ಸಾಲು ಸಂಪೂರ್ಣ ಭರ್ತಿಯಾಗಿದೆ. ಬೆಳಿಗ್ಗೆ 8 ಗಂಟೆಯಿಂದ 10 ಗಂಟೆಯವರೆಗೆ ಗೋಲ್ಡ್ ಪಾಸ್ ಪಡೆದವರಿಗೆ ದರ್ಶನಕ್ಕೆ …

Read More »