Breaking News

Monthly Archives: ಅಕ್ಟೋಬರ್ 2026

ರಂಗದೋಳಿ ಗುತ್ತಿ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ನೂತನ ಮೂರ್ತಿ ಲೋಕಾರ್ಪಣೆಗೊಳಿಸಿದ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಬೆಳಗಾವಿ: ಬೆಳಗಾವಿ ಜಿಲ್ಲೆಯ ರಂಗದೋಳಿ ಗುತ್ತಿ ಗ್ರಾಮದಲ್ಲಿ ಮಹಾಕಾವ್ಯ ರಾಮಾಯಣದ ಸೃಷ್ಟಿಕರ್ತ, ಆದಿಕವಿ ಮಹರ್ಷಿ ವಾಲ್ಮೀಕಿ ಅವರ ನೂತನ ಮೂರ್ತಿಯನ್ನು ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಭಾನುವಾರ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್ ಅವರು, ಮಹರ್ಷಿ ವಾಲ್ಮೀಕಿ ಅವರು ಕೇವಲ ರಾಮಾಯಣದ ಕರ್ತೃಗಳಲ್ಲ, ಮಾನವೀಯ ಮೌಲ್ಯಗಳು, ಧರ್ಮ, ನ್ಯಾಯ, ತ್ಯಾಗ, ಕರ್ತವ್ಯ ಪ್ರಜ್ಞೆ ಹಾಗೂ ಆದರ್ಶ ಬದುಕಿನ ಸಂದೇಶ ಸಾರಿದ ಮಹಾನ್ ಋಷಿಗಳು. …

Read More »

ಮಗಳ ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದ ತಾಯಿ: ಬಳಿಕ ತಾನೂ ಆತ್ಮಹತ್ಯೆ

ತಾಯಿಯೊಬ್ಬರು 14 ವರ್ಷದ ಮಗಳ ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದಿದ್ದು, ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ನಡೆದಿದೆ. ಮಗಳ ಅನಾರೋಗ್ಯಕ್ಕೆ ಬೇಸತ್ತು ಹೆತ್ತ ತಾಯಿಯೇ ಮಗಳನ್ನು ಕೊಲೆಗೈದಿದ್ದಾರೆ. ಬಳಿಕ ತಾನೂ ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಸುದ್ದಿ ಕೇಳಿ ಇಡೀ ಕರಾವಳಿ ಜಿಲ್ಲೆ ಬೆಚ್ಚಿಬಿದ್ದಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊರಗ ಕಾಲೋನಿಯಲ್ಲಿ ಹೆತ್ತ ತಾಯಿಯೇ ಮಗಳ ಕತ್ತು ಸೀಳಿ ಕೊಲೆ ಮಾಡಿದ್ದಾರೆ. ಬಳಿಕ ತಾನೂ …

Read More »

ಶಾಸಕ ವಿಠ್ಠಲ ಹಲಗೇಕರಗೆ ಗ್ರಾಮಸ್ಥರ ಘೇರಾವ್; ರಸ್ತೆ ಅಭಿವೃದ್ಧಿಗೆ ಆಗ್ರಹ

ಬೆಳಗಾವಿ: ಖಾನಾಪುರ ತಾಲೂಕಿನ ಇಟಗಿ ಗ್ರಾಮದಲ್ಲಿ ರಸ್ತೆ ಅಭಿವೃದ್ಧಿ ಹಾಗೂ ನೂತನ ಸರ್ಕಾರಿ ಪ್ರೌಢಶಾಲೆ ಸ್ಥಾಪನೆ ವಿಚಾರವಾಗಿ ಗ್ರಾಮಸ್ಥರು ಶಾಸಕ ವಿಠ್ಠಲ ಹಲಗೇಕರ ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಗ್ರಾಮಕ್ಕೆ ಭೇಟಿ ನೀಡಿದ ಶಾಸಕರನ್ನು ಯುವಕರು ಹಾಗೂ ಗ್ರಾಮಸ್ಥರು ಸುತ್ತುವರಿದು, ಗ್ರಾಮದ ಮೂಲಸೌಕರ್ಯ ಸಮಸ್ಯೆಗಳ ಕುರಿತು ಪ್ರಶ್ನಿಸಿದರು. ಹಲವು ವರ್ಷಗಳಿಂದ ರಸ್ತೆ ಅಭಿವೃದ್ಧಿ ಕಾಮಗಾರಿ ಸಮರ್ಪಕವಾಗಿ ನಡೆಯದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಗ್ರಾಮಸ್ಥರು, ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡುವಂತೆ ಒತ್ತಾಯಿಸಿದರು. …

Read More »

ಗುರ್ಲಾಪುರ ಕ್ರಾಸ್‌ನಲ್ಲಿ ಕಬ್ಬು ಬೆಳೆಗಾರರ ಅಹೋರಾತ್ರಿ ಹೋರಾಟ ತೀವ್ರ

 ಬೆಳಗಾವಿ: ಪ್ರಸಕ್ತ ಸಾಲಿನ ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೇತೃತ್ವದಲ್ಲಿ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್‌ನಲ್ಲಿ ಕಬ್ಬು ಬೆಳೆಗಾರರ ಹೋರಾಟ ಮತ್ತಷ್ಟು ತೀವ್ರಗೊಂಡಿದೆ. ಮುಧೋಳ–ನಿಪ್ಪಾಣಿ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ಎರಡನೇ ಬಾರಿಗೆ ಬೃಹತ್ ಪ್ರತಿಭಟನೆ ನಡೆಸಿದ ರೈತರು, ಬೇಡಿಕೆ ಈಡೇರುವವರೆಗೆ ಅಹೋರಾತ್ರಿ ಹೋರಾಟ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಆಗಮಿಸಿದ ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಸರ್ಕಾರದ ವಿರುದ್ಧ ಆಕ್ರೋಶ …

Read More »

ಕಿತ್ತೂರಿಗೆ ಸಿಎಂ ಡಿ.ಕೆ.ಶಿವಕುಮಾರ ಭರ್ಜರಿ ಕೊಡುಗೆ ಘೋಷಣೆ

 ಕಿತ್ತೂರು: ಕಿತ್ತೂರು ಉತ್ಸವದ ಅಂತಿಮ ದಿನ ಸಮಾರೋಪ ಭಾಷಣ ಮಾಡಿದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಭರ್ಜರಿ ಕೊಡುಗೆ ಘೋಷಿಸಿದ್ದಾರೆ. ಚನ್ನಮ್ಮ ಫ್ರೀಡಂ ಪಾರ್ಕ್ ನಿರ್ಮಾಣಕ್ಕೆ ಬಜೆಟ್ ನಲ್ಲಿ ₹40 ಕೋಟಿ ಅನುದಾನ ಸುಮಾರು 40 ಕೋಟಿ ರೂ. ವೆಚ್ಚದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ, ಚೆನ್ನಮ್ಮನ ಇತಿಹಾಸ ಸಾರುವ ಪಾರ್ಕ್ ನಿರ್ಮಾಣಕ್ಕೆ ಯೋಜನೆ ಘೋಷಿಸಿದ್ದಾರೆ. ಶಾಸಕ ಬಾಬಾಸಾಹೇಬ ಪಾಟೀಲ ಮನವಿ ಮೇರೆಗೆ ಈ ಘೋಷಣೆ ಮಾಡಿದ್ದು, ಬರುವ ಬಜೆಟ್ ನಲ್ಲಿ ಅನುದಾನ ನೀಡುವುದಾಗಿ, ಇಂದೇ …

Read More »

202ನೇ ಕಿತ್ತೂರು ಉತ್ಸವದಲ್ಲಿ ಸಿಎಂ ಡಿಕೆಶಿ ಭಾಗಿ: ಬೆಳಗಾವಿಯ ಇಬ್ಬರು ಸಚಿವರು ಗೈರು!

ಬೆಳಗಾವಿ: ವೀರರಾಣಿ ಕಿತ್ತೂರು ಚೆನ್ನಮ್ಮನ ನಾಡಿನಲ್ಲಿ ನಡೆಯುತ್ತಿರುವ 202ನೇ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಿ, ಕಾರ್ಯಕ್ರಮದಲ್ಲಿ ಭಾಗಿಯಾದರು. ಇದೇ ವೇಳೆ ಬೆಳಗಾವಿ ಜಿಲ್ಲೆಯ ಇಬ್ಬರು ಸಚಿವರು ಸಮಾರಂಭಕ್ಕೆ ಗೈರಾಗಿರುವುದು ಗಮನ ಸೆಳೆಯಿತು. ಕಿತ್ತೂರಿಗೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಅಧಿಕಾರಿಗಳು, ಕಾಂಗ್ರೆಸ್ ಮುಖಂಡರು ಹಾಗೂ ಅಭಿಮಾನಿಗಳು ಆತ್ಮೀಯ ಸ್ವಾಗತ ಕೋರಿದರು. ಉತ್ಸವದಲ್ಲಿ ಪಾಲ್ಗೊಳ್ಳಲು ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ್ದ ಜನರು ರಸ್ತೆಯ ಇಕ್ಕೆಲಗಳಲ್ಲಿ …

Read More »

ವಾಲ್ಮೀಕಿ ಜಯಂತಿ: ವಿವಿಧ ವಾಲ್ಮೀಕಿ ಯುವಕ ಸಂಘಗಳಿಗೆ ಲಕ್ಷ್ಮೀತಾಯಿ ಫೌಂಡೇಶನ್‌ನಿಂದ ಆರ್ಥಿಕ ನೆರವು

ಬೆಳಗಾವಿ : ಮಹರ್ಷಿ ವಾಲ್ಮೀಕಿ ಜಯಂತಿಯ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ ವಾಲ್ಮೀಕಿ ಯುವಕ ಸಂಘಗಳು ಹಾಗೂ ವಾಲ್ಮೀಕಿ ಸಂಘಟನೆಗಳಿಗೆ ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಯುವ ಮುಖಂಡ ಮೃಣಾಲ್ ಹೆಬ್ಬಾಳಕರ್ ಅವರು ಲಕ್ಷ್ಮೀತಾಯಿ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು ನೀಡಿದರು. ಪ್ರತಿ ವರ್ಷದಂತೆ ಈ ಬಾರಿಯೂ ವಾಲ್ಮೀಕಿ ಜಯಂತಿಯನ್ನು ಸಂಭ್ರಮದಿಂದ ಆಚರಿಸಲು ಅನುಕೂಲವಾಗುವಂತೆ ಬೆಳಗಾವಿ ಗ್ರಾಮೀಣ ಕ್ಷೇತ್ರ ಸೇರಿದಂತೆ …

Read More »

ಮೌಢ್ಯ ಬದಿಗೊತ್ತಿ ಚಾಮರಾಜನಗರಕ್ಕೆ ಭೇಟಿ ಕೊಟ್ಟ ಡಿಕೆಶಿ

ಚಾಮರಾಜನಗರ: ಈ ಕ್ಷೇತ್ರಕ್ಕೆ ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯವನ್ನು ಬದಿಗೊತ್ತಿ ಸಿಎಂ ಡಿ.ಕೆ ಶಿವಕುಮಾರ್‌  ಅವರು ಚಾಮರಾಜನಗರಕ್ಕೆ  ಭೇಟಿ ನೀಡಿದ್ದಾರೆ. ನಗರದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಅಂತರಾಷ್ಟ್ರೀಯ ಬೌದ್ಧ ಮಹಾ ಸಮ್ಮೇಳನದಲ್ಲಿ ಅವರು ಭಾಗಿಯಾದರು. ಸಮ್ಮೇಳನದ ಎರಡನೇ ದಿನದ ಕಾರ್ಯಕ್ರಮವನ್ನು ಬುದ್ದನ ಪ್ರತಿಮೆ, ಬೋಧಿ ವೃಕ್ಷ ಹಾಗೂ ಪುಸ್ತಕಗಳಿಗೆ ಪುಷ್ಪಾರ್ಚನೆ ನೇರವೇರಿಸಿ ಧಮ್ಮ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ವೇಳೆ ಸಿಎಂಗೆ ಸಚಿವರಾದ ಮುನಿಯಪ್ಪ, ನರೇಂದ್ರಸ್ವಾಮಿಯವರು …

Read More »

ದೇವೇಗೌಡರ ಕುಟುಂಬ ಮುಗಿಸಲು 600 ಕೋಟಿ ಡೀಲ್: ಹೆಚ್‌ಡಿಕೆ ಬಾಂಬ್‌

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಸ್ಟಿಂಗ್ ಆಪರೇಷನ್  ವಿವಾದದ ಬೆನ್ನಲ್ಲೇ, ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ಮತ್ತೊಂದು ಗಂಭೀರ ಆರೋಪದ ಬಾಂಬ್ ಸಿಡಿಸಿದ್ದಾರೆ. ದೇವೇಗೌಡರ ಕುಟುಂಬದ ರಾಜಕೀಯ ಅಸ್ತಿತ್ವವನ್ನೇ ಮುಗಿಸಲು ಬರೋಬ್ಬರಿ 600 ಕೋಟಿ ರೂ. ಬೃಹತ್ ಡೀಲ್ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವಿಡಿಯೋ ಕುರಿತು ಪ್ರತಿಕ್ರಿಯಿಸಿದ ಹೆಚ್‌ಡಿಕೆ, “ಒಂದು ಕುಟುಂಬವನ್ನು ಮುಗಿಸಲು 600 ಕೋಟಿ …

Read More »

ದೀಪಾವಳಿಗೆ `ವೋಕಲ್ ಫಾರ್ ಲೋಕಲ್’ ಅಭಿಯಾನ ಬಲಪಡಿಸಿ: ಪ್ರಧಾನಿ ಮೋದಿ ಕರೆ

ನವದೆಹಲಿ: ದೇಶಾದ್ಯಂತ ದೀಪಾವಳಿ  ಹಬ್ಬದ ಸಂಭ್ರಮಕ್ಕೆ ಸಿದ್ಧತೆಗಳು ನಡೆಯುತ್ತಿರುವ ಬೆನ್ನಲ್ಲೇ, ಸ್ಥಳೀಯ ಕುಶಲಕರ್ಮಿಗಳು ತಯಾರಿಸಿದ ಉತ್ಪನ್ನಗಳನ್ನು ಖರೀದಿಸುವ ಮೂಲಕ `ವೋಕಲ್ ಫಾರ್ ಲೋಕಲ್’  ಅಭಿಯಾನವನ್ನು ಬಲಪಡಿಸುವಂತೆ ಪ್ರಧಾನಿ ನರೇಂದ್ರ ಮೋದಿ  ಭಾನುವಾರ ದೇಶದ ಜನರಿಗೆ ಕರೆ ನೀಡಿದ್ದಾರೆ. ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ `ಮನ್ ಕಿ ಬಾತ್’ನಲ್ಲಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಭಾರತೀಯ ಉತ್ಪನ್ನಗಳು ಸಾಧಿಸುತ್ತಿರುವ ಯಶಸ್ಸಿನ ಬಗ್ಗೆಯೂ ಪ್ರಸ್ತಾಪಿಸಿದರು. ಬಿಹಾರದ ಮಖಾನಾ ಮತ್ತು ಕರ್ನಾಟಕದ ತೊಗರಿ ಬೇಳೆ …

Read More »