Breaking News

Monthly Archives: ಅಕ್ಟೋಬರ್ 2026

ಮೈಸೂರಿನಿಂದ ಬೆಳಗಾವಿ ಮೂಲಕ ವಿಶೇಷ ರೈಲು ಸಂಚಾರ

ಬೆಳಗಾವಿ: ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ನೈರುತ್ಯ ರೈಲ್ವೆಯು ಮೈಸೂರು ಮತ್ತು ಬಿಹಾರದ ದರ್ಭಾಂಗಾ ನಡುವೆ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ಎರಡೂ ಮಾರ್ಗಗಳಲ್ಲಿ ತಲಾ ಐದು ಟ್ರಿಪ್‌ಗಳಂತೆ ಈ ರೈಲುಗಳು ಸಂಚರಿಸಲಿದ್ದು, ಬೆಳಗಾವಿ ಸೇರಿದಂತೆ ಹಲವು ಪ್ರಮುಖ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿವೆ. ರೈಲು ಸಂಖ್ಯೆ 06211 ಮೈಸೂರು–ದರ್ಭಾಂಗಾ ವಿಶೇಷ ಎಕ್ಸ್‌ಪ್ರೆಸ್ ಅಕ್ಟೋಬರ್ 27ರಿಂದ ನವೆಂಬರ್ 24ರವರೆಗೆ ಪ್ರತಿ ಮಂಗಳವಾರ ರಾತ್ರಿ 8.05ಕ್ಕೆ ಮೈಸೂರಿನಿಂದ ಹೊರಟು, …

Read More »

ಚೆನ್ನಮ್ಮನ ಆದರ್ಶದಂತೆ ಮಕ್ಕಳನ್ನು ಬೆಳೆಸಿ: ಸಚಿವ ಸತೀಶ್ ಜಾರಕಿಹೊಳಿ ಕರೆ

ಬೆಳಗಾವಿ: ರಾಣಿ ಕಿತ್ತೂರು ಚೆನ್ನಮ್ಮನ ಶೌರ್ಯ, ಧೈರ್ಯ ಮತ್ತು ಸ್ವಾಭಿಮಾನದ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವುದು ಅಗತ್ಯ. ತಂದೆ-ತಾಯಿಗಳು ತಮ್ಮ ಮಕ್ಕಳನ್ನು ರಾಣಿ ಚೆನ್ನಮ್ಮನ ಆದರ್ಶಗಳಂತೆ ಬೆಳೆಸಬೇಕು ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಕರೆ ನೀಡಿದರು. ಬೆಳಗಾವಿ ತಾಲೂಕಿನ ಕಾಕತಿಯಲ್ಲಿ ಶುಕ್ರವಾರ (ಅ. 23) ನಡೆದ 202ನೇ ಕಿತ್ತೂರು ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಣಿ ಚೆನ್ನಮ್ಮನ ಹೋರಾಟ ಮತ್ತು ನಾಯಕತ್ವ …

Read More »

ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಮುತಗಾ ಗ್ರಾಮದ ಸ್ವಾತಿಕ್ ಪಾಟೀಲ್‌ಗೆ ಕಂಚಿನ ಪದಕ: ಲಕ್ಷ್ಮೀ ಹೆಬ್ಬಾಳಕರ್ ಅಭಿನಂದನೆ

ಬೆಳಗಾವಿ: ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ಭಾರತದ ತ್ರಿವರ್ಣ ಧ್ವಜವನ್ನು ಎತ್ತಿಹಿಡಿದು, ಪುರುಷರ 100 ಮೀಟರ್ ಬ್ರೆಸ್ಟ್‌ಸ್ಟ್ರೋಕ್ SB9 ಈಜು ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದಿರುವ ಬೆಳಗಾವಿ ತಾಲೂಕಿನ ಮುತಗಾ ಗ್ರಾಮದ ಸ್ವಾತಿಕ್ ಪಾಟೀಲ್ ಅವರಿಗೆ ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅಭಿನಂದನೆ ಸಲ್ಲಿಸಿದ್ದಾರೆ. ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಅದ್ಭುತ ಪ್ರದರ್ಶನ ನೀಡಿ ಪದಕ ಗೆಲ್ಲುವ ಮೂಲಕ ಸ್ವಾತಿಕ್ ಪಾಟೀಲ್ ಅವರು ನಾಡಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಅವರ …

Read More »

ಕಿತ್ತೂರು ಉತ್ಸವ-2026: ಜಲ ಕ್ರೀಡೆ, ದೋಣಿ ವಿಹಾರಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ

ಕಿತ್ತೂರು: ಐತಿಹಾಸಿಕ ಕಿತ್ತೂರು ಉತ್ಸವ-2026ರ ಅಂಗವಾಗಿ ಆಯೋಜಿಸಲಾಗಿರುವ ಜಲ ಕ್ರೀಡೆಗಳು ಹಾಗೂ ದೋಣಿ ವಿಹಾರದ ಕಾರ್ಯಕ್ರಮಕ್ಕೆ ಮಾಜಿ ಸಚಿವೆ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಚಾಲನೆ ನೀಡಿದರು. ವೀರರಾಣಿ ಕಿತ್ತೂರು ರಾಣಿ ಚೆನ್ನಮ್ಮನ ಐತಿಹಾಸಿಕ ಪರಾಕ್ರಮ, ಶೌರ್ಯ ಮತ್ತು ಸ್ವಾಭಿಮಾನದ ಹೋರಾಟವನ್ನು ಸ್ಮರಿಸುವ ಕಿತ್ತೂರು ಉತ್ಸವದ ಭಾಗವಾಗಿ, ಸಾರ್ವಜನಿಕರು ಹಾಗೂ ಪ್ರವಾಸಿಗರನ್ನು ಆಕರ್ಷಿಸುವ ಉದ್ದೇಶದಿಂದ ಜಲ ಕ್ರೀಡೆಗಳು ಮತ್ತು ದೋಣಿ ವಿಹಾರದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸ್ಥಳೀಯ ನಿವಾಸಿಗಳು ಮಾತ್ರವಲ್ಲದೆ, ದೂರದೂರುಗಳಿಂದ ಆಗಮಿಸುವ …

Read More »

ಗೃಹ ಜ್ಯೋತಿ ಫಲಾನುಭವಿಗಳ ಗಮನಕ್ಕೆ: ಸಮೀಕ್ಷೆ ಗಡುವು ವಿಸ್ತರಣೆ ಇಲ್ಲ: ತಕ್ಷಣ ದಾಖಲಾತಿ ಸಲ್ಲಿಸಿ

ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಗೃಹ ಜ್ಯೋತಿ ಫಲಾನುಭವಿಗಳ ಮನೆ-ಮನೆ ಸಮೀಕ್ಷೆಗೆ ನೀಡಿರುವ ಗಡುವು ಅಕ್ಟೋಬರ್‌ 31ಕ್ಕೆ ಮುಕ್ತಾಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳದ ಗ್ರಾಹಕರು ಅಗತ್ಯ ದಾಖಲಾತಿಗಳನ್ನು ಬೆಸ್ಕಾಂ ಉಪ ವಿಭಾಗ ಕಚೇರಿಗೆ ಖುದ್ದಾಗಿ ತೆರಳಿ ಸಲ್ಲಿಸಲು ಬೆಸ್ಕಾಂ ವಿನಂತಿಸಿದೆ.ಕಳೆದ ಮೂರುವರೆ ತಿಂಗಳಿನಿಂದ ನಡೆಯುತ್ತಿರುವ ಸಮೀಕ್ಷೆಯಲ್ಲಿ ಮನೆಗೆ ಬೀಗ ಹಾಕಿರುವ, ಮನೆ ಖಾಲಿ ಇರುವ ಹಾಗೂ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗದ ಗ್ರಾಹಕರಿಗೆ ಬೆಸ್ಕಾಂ ಕಚೇರಿಗೆ ತೆರಳಿ ದಾಖಲಾತಿ ಸಲ್ಲಿಸಲು ರಾಜ್ಯ …

Read More »

ಗೌತಮ್ ಪಾಟೀಲ್ ಜೊತೆ ಸರಳವಾಗಿ ನೆರವೇರಿದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ನಿಶ್ಚಿತಾರ್ಥ

ಲೋಕಸಭೆಯ ಅತ್ಯಂತ ಕಿರಿಯ ಸಂಸದೆಯರಲ್ಲಿ ಒಬ್ಬರಾದ ಚಿಕ್ಕೋಡಿ ಕ್ಷೇತ್ರದ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರ ನಿಶ್ಚಿತಾರ್ಥ ಗೌತಮ್ ಪಾಟೀಲ್ ಅವರೊಂದಿಗೆ ನೆರವೇರಿತು. ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿಯಾಗಿರುವ ಪ್ರಿಯಾಂಕಾ ಅವರು ರಾಯಚೂರು ಮೂಲದ ಚಾರ್ಟರ್ಡ್ ಅಕೌಂಟೆಂಟ್ ಗೌತಮ್ ಪಾಟೀಲ್ ಅವರೊಂದಿಗೆ ವಿವಾಹವಾಗಲಿದ್ದಾರೆ. ಗೋಕಾಕ್‌ನ ಕ್ಲಬ್ ರಸ್ತೆಯಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ‘ಹಿಲ್ ಗಾರ್ಡನ್’ ನಿವಾಸದಲ್ಲಿ ಸರಳವಾಗಿ ಮಗಳು ಪ್ರಿಯಾಂಕ ಜಾರಕಿಹೊಳಿ ಹಾಗೂ ಗೌತಮ್ ಪಾಟೀಲ್ ನಿಶ್ಚಿತಾರ್ಥ …

Read More »

ಮನೆಗೆ ನುಗ್ಗಿ ಜೀವ ಬೆದರಿಕೆ ಹಾಕಿದ್ದಾರೆ: ವಿಜಯಲಕ್ಷ್ಮಿ ದರ್ಶನ್ ವಿರುದ್ಧ ಧನ್ವೀರ್‌ ತಂದೆಯಿಂದ ದೂರು

ನಟ ಧನ್ವೀರ್ ಗೌಡ ಮತ್ತು ದರ್ಶನ್ ಪತ್ನಿ ವಿಜಯಲಕ್ಷ್ಮಿ ನಡುವಿನ ವಿವಾದ ಮತ್ತೊಂದು ತಿರುವು ಪಡೆದುಕೊಂಡಿದೆ. ಧನ್ವೀರ್ ತಂದೆ ತಿಮ್ಮೇಗೌಡ, ವಿಜಯಲಕ್ಷ್ಮಿ ಹಾಗೂ ತಂಡದ ವಿರುದ್ಧ ರಾಜಾಜಿನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮನೆಗೆ ಬಂದು ಗಲಾಟೆ ನಡೆಸಿ, ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ದೂರಿನ ಆಧಾರದಲ್ಲಿ ಪೊಲೀಸರು ಎನ್‌ಸಿಆರ್ ದಾಖಲಿಸಿಕೊಂಡಿದ್ದಾರೆ. ತಿಮ್ಮೇಗೌಡ ನೀಡಿರುವ ದೂರಿನ ಪ್ರಕಾರ, ಅಕ್ಟೋಬರ್ 21ರಂದು ರಾತ್ರಿ ಸುಮಾರು 8.30ರ ವೇಳೆಗೆ ಧನ್ವೀರ್ ಮೈಸೂರಿಗೆ …

Read More »

ಜಂಬೂ ಸವಾರಿಗೆ ಪುಷ್ಪಾರ್ಚನೆ – ಪ್ರೋಟೋಕಾಲ್‌ನಲ್ಲಿ ಸಿಎಂ ಪತ್ನಿ ಹೆಸರು ಇರಲಿಲ್ಲ: ಸಚಿವ ಯತೀಂದ್ರ

ಮೈಸೂರು: ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್  ಅವರು ಮೊದಲ ಬಾರಿಗೆ ಜಂಜೂಸವಾರಿಗೆ ಪುಷ್ಪಾರ್ಚನೆ ಮಾಡಿದ್ದು, ದಸರಾ  ಕೂಡ ಯಶಸ್ವಿಯಾಗಿ ನೆರವೇರಿದೆ. ಆದ್ರೆ ದಸರಾದಲ್ಲಿ ನಡೆದ ಕೆಲ ಘಟನೆಗಳ ಬಗ್ಗೆ ಈಗ ಅಪಸ್ವರ ಎದ್ದಿದೆ. ದಸರಾ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸಿಎಂ ಪತ್ನಿ ಪುಷ್ಪಾರ್ಚನೆ ಮಾಡಿದ್ದು, ಇದು ಶಿಷ್ಟಾಚಾರದ ಉಲ್ಲಂಘನೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಯತೀಂದ್ರ ಸಿದ್ದರಾಮಯ್ಯ ಅವರು, ಶಿಷ್ಟಾಚಾರ ಪಟ್ಟಿಯಲ್ಲಿ …

Read More »

ಕ್ರೈಂ, ಥ್ರಿಲ್ಲರ್ ಸಿನಿಮಾದಂತೆ ರೋಚಕವಾಗಿ ಕಂಡುಬಂದ ಲೂಟಿಕೋರರು ವರ್ಸಸ್ ರಕ್ಷಕರು ಟಾಸ್ಕ್

ಬಿಗ್‌ಬಾಸ್‌ನಲ್ಲಿ ಈ ವಾರ ಲೂಟಿಕೋರರು ವರ್ಸಸ್ ರಕ್ಷಕರು ಟಾಸ್ಕ್ ಭಾರೀ ಹೈಲೈಟ್ ಆಗಿದೆ. ನಾಮಿನೇಟ್ ಆಗಿ ಜೈಲಲ್ಲಿರೋ ಸ್ಪರ್ಧಿಗಳೇ ಲೂಟಿಕೋರರಾಗಿದ್ದರು. ಈ ಪೈಕಿ ಓರ್ವ ಪುರುಷ ಸ್ಪರ್ಧಿ ತಾಂಡವ್ ಸೇರಿದಂತೆ ಇನ್ನುಳಿದ ಎಲ್ಲಾ ಸ್ಪರ್ಧಿಗಳು ಮಹಿಳೆಯರೇ ಆಗಿದ್ದರು. ಸೌಂದರ್ಯ, ಆಸಿಯಾ, ಲಕ್ಷ್ಮಿ, ಕುಮಾರಿ ಹಾಗೂ ಸೋನಿಕಾ ಲೂಟಿಕೋರರ ಗ್ಯಾಂಗ್‌ನಲ್ಲಿ ಆಟವಾಡಿದ್ದರು. ಅತ್ಯಂತ ಕಷ್ಟವಾಗಿದ್ದ ಟಾಸ್ಕ್‌ನ್ನು ಚಾಣಾಕ್ಷತನದಿಂದ ಲೂಟಿಕೋರರ ಗ್ಯಾಂಗ್ ಲೂಟಿ ಮಾಡಿ ಆಡಿಯನ್ಸ್‌ಗೆ ಭರ್ಜರಿ ಮಜ ಕೊಟ್ಟಿದೆ. ವಜ್ರ ಕದಿಯುವ …

Read More »

ಆಯೋಗದ ಅಧಿಕಾರಿ ವಿರುದ್ಧ ಇಬ್ಬರು ಚುನಾವಣಾ ಆಯುಕ್ತರ ಆಕ್ಷೇಪ – RTI ನಲ್ಲಿ ಬಹಿರಂಗ

ನವದೆಹಲಿ: ಎಸ್‌ಐಆರ್‌  ಪ್ರಕ್ರಿಯೆ ವಿರೋಧಿ, ಸಿಇಸಿ ಜ್ಞಾನೇಶ್‌ ಕುಮಾರ್‌  ರಾಜೀನಾಮೆಗೆ ಆಗ್ರಹಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿರುವ ಹೊತ್ತಿನಲ್ಲೇ ಸ್ಫೋಟಕ ಮಾಹಿತಿಯೊಂದು ಬಹಿರಂಗವಾಗಿದೆ. ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು, ಚುನಾವಣಾ ಆಯೋಗದ  ಹಿರಿಯ ಅಧಿಕಾರಿಯೊಬ್ಬರ ಕಾರ್ಯವೈಖರಿಯ ವಿರುದ್ಧ ಕ್ಯಾಬಿನೆಟ್ ಕಾರ್ಯದರ್ಶಿ ಟಿ.ವಿ. ಸೋಮನಾಥನ್ ಅವರಿಗೆ ಪ್ರತ್ಯೇಕವಾಗಿ ದೂರು ಸಲ್ಲಿಸಿದ್ದಾರೆ. ಆದರೆ, ಈ ಉನ್ನತ ಅಧಿಕಾರಿಯು ಯಾವುದೇ ಕ್ರಮ ಕೈಗೊಳ್ಳಲು ನಿರಾಕರಿಸಿದ್ದಾರೆ ಎಂಬುದು ಆರ್‌ಟಿಐ (ಮಾಹಿತಿ …

Read More »