ಹುಬ್ಬಳ್ಳಿ: ಮಾಂಜಾ ದಾರ ಮಾರಾಟಗಾರರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಾಗಿದ್ದು, ಹುಬ್ಬಳ್ಳಿ-ಧಾರವಾಡ ಅವಳಿ ನಗರದ ವ್ಯಾಪ್ತಿಯಲ್ಲಿ ಒಟ್ಟು 12 ಕೇಸ್ ದಾಖಲಾಗಿದೆ ಎಂದು ಹುಬ್ಬಳ್ಳಿ ಪೊಲೀಸ್ ಆಯುಕ್ತ ಭೂಷಣ ಬೋರಸೆ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಿನ್ನೆ ಮಾಂಜಾ ದಾರದಿಂದ ಮಹಿಳೆಯೊಬ್ಬರ ಜೀವ ಕಳೆದುಕೊಂಡಿದ್ದಾರೆ. ಸಾಕಷ್ಟು ಜಾಗೃತಿ ಮೂಡಿಸಿದ್ರೂ ಒಂದು ಜೀವ ಹೋಗಿದೆ. ಹೀಗಾಗಿ ಮಾಂಜಾ ದಾರ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತಿದ್ದು, ಹುಬ್ಬಳ್ಳಿ – ಧಾರವಾಡ …
Read More »Monthly Archives: ಅಕ್ಟೋಬರ್ 2026
ನಾಳೆಯಿಂದ 2 ದಿನ ಅಂತಾರಾಷ್ಟ್ರೀಯ ಬೌದ್ಧ ಮಹಾ ಸಮ್ಮೇಳನ – ಮಲ್ಲಿಕಾರ್ಜುನ ಖರ್ಗೆಯಿಂದ ಉದ್ಘಾಟನೆ
ಚಾಮರಾಜನಗರ: ಅಕ್ಟೋಬರ್ 24 ಹಾಗೂ ಅ.25 ರಂದು ಚಾಮರಾಜನಗರದಲ್ಲಿ ಅಂತಾರಾಷ್ಟ್ರೀಯ ಬೌದ್ಧ ಮಹಾ ಸಮ್ಮೇಳನ ನಡೆಯಲಿದೆ. ಬೃಹತ್ ಸಮ್ಮೇಳನಕ್ಕಾಗಿ ಚಾಮರಾಜನಗರದ ಡಾ. ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಭರದ ಸಿದ್ಧತೆ ನಡೆದಿದೆ. ಶ್ರೀಲಂಕಾ, ವಿಯೆಟ್ನಾಂ, ಜಪಾನ್, ಮಲೇಶಿಯಾ ಮೊದಲಾದ ದೇಶಗಳ ಸಾವಿರಾರು ಬೌದ್ಧ ಬಿಕ್ಕುಗಳು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ ವಿವಿಧೆಡೆಯಿಂದ ಎರಡು ದಿನಗಳು ಒಟ್ಟಾರೆ ಎರಡು ಲಕ್ಷಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಂದ …
Read More »ರಾಜ್ಯದಲ್ಲಿ KPSC ಆಯ್ತು, ಇದೀಗ KSOU ಸರದಿ – ಹಣ ಕೊಟ್ರೆ ಮೊಬೈಲ್, ಪುಸ್ತಕ ನೋಡಿ ಪರೀಕ್ಷೆ ಬರೆಯಲು ಅವಕಾಶ
ಶಿವಮೊಗ್ಗ: ರಾಜ್ಯದಲ್ಲಿ ಕೆಪಿಎಸ್ಸಿ ವಿವಾದದ ಬಳಿಕ ಇದೀಗ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಶಿವಮೊಗ್ಗ ಪ್ರಾದೇಶಿಕ ಕಚೇರಿಯಲ್ಲಿ ಅಕ್ರಮವೊಂದು ಬೆಳಕಿಗೆ ಬಂದಿದ್ದು, ಹಣ ಕೊಟ್ಟರೇ ಮೊಬೈಲ್, ಪುಸ್ತಕ ನೋಡಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಕೆಎಸ್ಓಯು ಶಿವಮೊಗ್ಗ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ನಿರ್ದೇಶಕ ಬಿ.ಎಂ. ಸ್ವಾಮಿ ನೇತೃತ್ವದಲ್ಲಿ ಹಣ ಪಡೆದು ಪದವಿ ಹಾಗೂ ಸ್ನಾತಕೋತ್ತರ ಪದವಿ ಪರೀಕ್ಷೆಗಳಲ್ಲಿ ಸಾಮೂಹಿಕ ನಕಲು ಮಾಡಿಸುತ್ತಿರುವ ಕರಾಳ ದಂಧೆ ಬಟಾಬಯಲಾಗಿದೆ. …
Read More »ಕಳ್ಳರು ಎಂದು ಇಬ್ಬರ ಮೇಲೆ ಗಂಭೀರ ಹಲ್ಲೆ – 10 ಜನರ ವಿರುದ್ಧ FIR
ಬೆಂಗಳೂರು: ಕಳ್ಳರು ಎಂದು ಇಬ್ಬರ ಮೇಲೆ ಗಂಭೀರ ಹಲ್ಲೆ ಮಾಡಿದ್ದ 10 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಶಾಹಿದ್ (19) ಹಲ್ಲೆಗೊಳಗಾದ ಯುವಕ. ವಾಹನಕ್ಕೆ ಅಡ್ಡ ಬಂದ ಎಂದು ಶಾಹೀದ್ ಹಾಗೂ ಫರ್ದೀನ್ ಪಾಷಾ ಎಂಬ ಇಬ್ಬರ ನಡುವೆ ವಾಗ್ವಾದ ನಡೆದಿತ್ತು. ಇದೇ ವೇಳೆ ಬಂದ ಅಪರಿಚಿತ ವ್ಯಕ್ತಿಯೊಬ್ಬ ಜಗಳವಾಡುತ್ತಿದ್ದ ಇಬ್ಬರನ್ನು ಕಳ್ಳರು ಎಂದು ಬಿಂಬಿಸಿದ್ದ. ಕೂಡಲೇ ಅಲ್ಲಿದ್ದ ಸ್ಥಳೀಯರು ಇಬ್ಬರನ್ನು ಅಟ್ಟಾಡಿಸಿಕೊಂಡು ಹೊಡೆದಿದ್ದಾರೆ. ಶಾಹೀದ್ ಮೇಲೆ ಗಂಭೀರ ಹಲ್ಲೆ …
Read More »ತುಮಕೂರು ಹಾಲು ಒಕ್ಕೂಟದ ನೇಮಕಾತಿ ವಿವಾದ ಮತ್ತೆ ಮುನ್ನೆಲೆಗೆ; 38 ಅಭ್ಯರ್ಥಿಗಳಿಂದ ಕಾನೂನು ಹೋರಾಟ
ತುಮಕೂರು: ಹಾಲು ಒಕ್ಕೂಟದ ನೇಮಕಾತಿ ಅಕ್ರಮದ ಆರೋಪ ಮತ್ತೆ ಮುನ್ನೆಲೆಗೆ ಬಂದಿದೆ. 2016-17ನೇ ಸಾಲಿನಲ್ಲಿ ನಡೆದ 97 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ನೌಕರಿಯಿಂದ ವಂಚಿತ ಅಭ್ಯರ್ಥಿಗಳು, ಈಗ ಮತ್ತೆ ನ್ಯಾಯಾಲಯದ ಮೊರೆ ಹೋಗಲು ಮುಂದಾಗಿದ್ದಾರೆ. ಈಗಾಗಲೇ ಕಾನೂನು ಹೋರಾಟದಲ್ಲಿ ಜಯ ಸಾಧಿಸಿರುವ ವೇಣುಗೋಪಾಲ್ ಅವರ ಬೆನ್ನಲ್ಲೇ, ಇನ್ನುಳಿದ 37 ಅಭ್ಯರ್ಥಿಗಳೂ ಹೋರಾಟಕ್ಕೆ ಸಜ್ಜಾಗಿದ್ದಾರೆ. 97 ಹುದ್ದೆಗಳ ನೇಮಕಾತಿ ಬಗ್ಗೆ ಆರೋಪ ತುಮುಲ್ನಲ್ಲಿ 2016-17ನೇ ಸಾಲಿನಲ್ಲಿ …
Read More »ಕಾಕತಿ ರಾಣಿ ಚೆನ್ನಮ್ಮ ಕೋಟೆ ಅಭಿವೃದ್ಧಿಗೆ ಪರ್ಯಾಯ ಜಾಗದ ಚಿಂತನೆ: ಸಚಿವ ಸತೀಶ ಜಾರಕಿಹೊಳಿ
ಕಾಕತಿ: ಕಿತ್ತೂರು ರಾಣಿ ಚೆನ್ನಮ್ಮನ ಇತಿಹಾಸ ಸಾರುವ ಕಾಕತಿಯ ಕೋಟೆ ಅರಣ್ಯ ಇಲಾಖೆಯ ವ್ಯಾಪ್ತಿಯಲ್ಲಿರುವುದರಿಂದ ಅಭಿವೃದ್ಧಿ ಕಾರ್ಯಗಳಿಗೆ ತೊಡಕಾಗಿದೆ. ಪರ್ಯಾಯ ಜಾಗ ಲಭ್ಯವಾದರೆ ಕೋಟೆ ಹಾಗೂ ಸುತ್ತಮುತ್ತಲಿನ ಪ್ರದೇಶದ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವ ಕುರಿತು ಚಿಂತನೆ ನಡೆಸಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು. ತಾಲೂಕಿನ ಕಾಕತಿಯಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಉತ್ಸವ ಸಮಿತಿ ವತಿಯಿಂದ ಆಯೋಜಿಸಿದ್ದ 202ನೇ ಕಿತ್ತೂರು …
Read More »ಟಿಬೆಟ್ನಲ್ಲಿ ಪ್ರಬಲ ಭೂಕಂಪ; 18 ಮಂದಿ ಸಾವು, 300ಕ್ಕೂ ಹೆಚ್ಚು ಮನೆಗಳು ನೆಲಸಮ
ಬೀಜಿಂಗ್: ಚೀನಾದ ಟಿಬೆಟ್ ಪ್ರದೇಶದಲ್ಲಿ 7.0 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಘಟನೆಯಲ್ಲಿ 18 ಮಂದಿ ಸಾವನ್ನಪ್ಪಿದ್ದು, 46 ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ 11 ಜನರ ಸ್ಥಿತಿ ಗಂಭೀರವಾಗಿದೆ. ಭೂಕಂಪದ ತೀವ್ರತೆಗೆ ಹಲವು ಕಟ್ಟಡಗಳು ಕುಸಿದಿದ್ದು, ಮನೆಗಳಿಗೆ ವ್ಯಾಪಕ ಹಾನಿಯಾಗಿದೆ. ಜನರು ಅಂಗಡಿ, ರೆಸ್ಟೋರೆಂಟ್ಗಳಿಂದ ಹೊರಗೆ ಓಡಿಬಂದಿದ್ದಾರೆ. ಸದ್ಯ ಭೂಕಂಪ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆಗಳು ಮುಂದುವರಿದಿವೆ. ಟಿಬೆಟ್ನ ಪರ್ವತ ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದು ಪ್ರಾದೇಶಿಕ ರಾಜಧಾನಿ ಲಾಸಾದಿಂದ …
Read More »ಪವಿತ್ರಾ ಗೌಡಗೆ ಬಿಗ್ಡೇ – ಬ್ಯಾರಕ್ ಬದಲಾವಣೆ ಬಗ್ಗೆ ಇಂದು ಕೋರ್ಟ್ ನಿರ್ಧಾರ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ) ಇದ್ದ ಬ್ಯಾರಕ್ ಬದಲಾವಣೆ ವಿಚಾರವಾಗಿ ಇಂದು ನ್ಯಾಯಾಲಯ (Court) ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ. ಬ್ಯಾರಕ್ ಬದಲಾವಣೆ ಕೋರಿ ಪವಿತ್ರಾ ಗೌಡ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಬೆಂಗಳೂರಿನ 59ನೇ ಸಿಸಿಹೆಚ್ ನ್ಯಾಯಾಲಯ ವಾದ-ಪ್ರತಿವಾದ ಆಲಿಸಿ ಆದೇಶ ಕಾಯ್ದಿರಿಸಿದೆ. ಮಹಿಳಾ ಬ್ಯಾರಕ್ಗಳನ್ನು ಪರಿಶೀಲಿಸಲು ನ್ಯಾಯಾಧೀಶರೇ ಜೈಲಿಗೆ ಭೇಟಿ ನೀಡಬೇಕು ಎಂದು ಪವಿತ್ರಾ ಗೌಡ ಪರ ವಕೀಲರು ಮನವಿ ಮಾಡಿದ್ದಾರೆ. ಈ …
Read More »SSLC, PUC ಪಬ್ಲಿಕ್ ಪರೀಕ್ಷೆ ಮುಂದೂಡಿಕೆ ಸಾಧ್ಯತೆ
ಬೆಂಗಳೂರು: ಜನಗಣತಿ ಹಿನ್ನೆಲೆಯಲ್ಲಿ ಎಸ್ಎಸ್ಎಲ್ಸಿ ತ್ತು ಪಿಯುಸಿ ಪಬ್ಲಿಕ್ ಪರೀಕ್ಷೆ ಮುಂದೂಡಿಕೆ ಸಾಧ್ಯತೆ ಇದೆ. ಜನವರಿಯಿಂದ ಕೇಂದ್ರ ಸರ್ಕಾರದ ಜನಗಣತಿ 2ನೇ ಹಂತ ಪ್ರಾರಂಭವಾಗಲಿದೆ. ಹೀಗಾಗಿ, ಎಸ್ಎಸ್ಎಲ್ಸಿ, ಪಿಯುಸಿ ಪಬ್ಲಿಕ್ ಪರೀಕ್ಷೆ ಮುಂದೂಡಿಕೆಗೆ ಶಾಲಾ ಶಿಕ್ಷಣ ಇಲಾಖೆಗೆ ಕೇಂದ್ರ ಜನಗಣತಿ ಕಾರ್ಯಾಚರಣೆ ನಿರ್ದೇಶನಾಲಯ ಪತ್ರ ಬರೆದಿದೆ. ಪರೀಕ್ಷೆ ಮುಂದೂಡುವಂತೆ ಶಾಲಾ ಶಿಕ್ಷಣ ಇಲಾಖೆಗೆ ಪತ್ರ ಬರೆಯಲಾಗಿದೆ. ಕೇಂದ್ರದ ಎರಡನೇ ಸುತ್ತಿನ ಜನಗಣತಿ ಜನವರಿ 25ರಿಂದ ಫೆಬ್ರವರಿ 28ರವರೆಗೆ ನಡೆಯಲಿದೆ. ಮಾರ್ಚ್ …
Read More »ಪೊಲೀಸರು ಅವ್ರ ಡ್ಯೂಟಿ ಮಾಡಿದ್ದಾರೆ, ಅದರಲ್ಲಿ ತಪ್ಪೇನಿದೆ: ಡಿಸಿಎಂ ರಿಯಾಕ್ಷನ್
ಬೆಂಗಳೂರು: ದಸರಾದಲ್ಲಿ ನಂದಿಧ್ವಜ ಪೂಜೆಗೆ ಮುಖ್ಯಮಂತ್ರಿಗಳೊಂದಿಗೆ ತೆರಳುತ್ತಿದ್ದ ಸಚಿವರನ್ನು ಎಸ್ಪಿ ತಡೆದಿರುವ ಘಟನೆಗೆ ಸಂಬಧಿಸಿದಂತೆ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ಪ್ರತಿಕ್ರಿಯಿಸಿ, ಮೇಲಾಧಿಕಾರಿಗಳ ಸೂಚನೆ ಪೊಲೀಸರು ಪಾಲಿಸಿರುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದ್ದಾರೆ. ಮೈಸೂರು ದಸರಾ ಸಂದರ್ಭದಲ್ಲಿ ಸಚಿವರನ್ನು ಎಸ್ಪಿ ತಡೆದಿರುವ ವಿಡಿಯೋ ವೈರಲ್ ಆಗಿರುವ ಕುರಿತು ಮಾತನಾಡಿದ ಅವರು, ಸಿಎಂ ವಿಚಾರದಲ್ಲಿ ಕೆಲವೊಂದು ಶಿಷ್ಟಾಚಾರ ಇರುತ್ತೆ, ಅದನ್ನ ಪಾಲಿಸಬೇಕಾಗುತ್ತೆ ಎಂದು ಹೇಳಿದ್ದಾರೆ. ಈ ಕುರಿತು ಬಿಜೆಪಿ ಮಾಡಿರುವ ಆರೋಪಗಳಿಗೆ ಡಿಸಿಎಂ ಪ್ರತಿಕ್ರಿಯಿಸಿ, …
Read More »
Laxmi News 24×7