Breaking News

Monthly Archives: ಅಕ್ಟೋಬರ್ 2026

ಬೆಳಗಾವಿಯಲ್ಲಿ ಭೀಕರ ಅಪಘಾತ: ದಂಪತಿ ಸೇರಿ ಮೂವರ ದುರ್ಮರಣ

ಬೆಳಗಾವಿ: ಟಾಟಾ ಎಸ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಂಪತಿ ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ತಾಲೂಕಿನ ದೇಮಟ್ಟಿ–ಮಲ್ಲಾಪುರ ಮಾರ್ಗದಲ್ಲಿ ಸೋಮವಾರ ರಾತ್ರಿ ನಡೆದಿದೆ. ಅಪಘಾತದಲ್ಲಿ ದೇಮಟ್ಟಿ ಗ್ರಾಮದ ಅಜಾದ್ ಇಸ್ಮಾಯಿಲ್ ಜಮಾದಾರ (45), ಅವರ ಪತ್ನಿ ಕೈರೂನ್ ಆಜಾದ್ ಜಮಾದಾರ (40) ಹಾಗೂ ಅಜಾದ್ ಅವರ ಅಳಿಯ ಬಾಬಾಜಾನ್ ನಿಸ್ಸಾರಅಹ್ಮದ್ ತಡಕೋಡ (16) ಮೃತಪಟ್ಟಿದ್ದಾರೆ. ಮೃತ ದಂಪತಿ ಮೂಲತಃ ಧಾರವಾಡ ತಾಲೂಕಿನ ಹೆಗ್ಗೇರಿ …

Read More »

ಎಂಎಲ್‌ಸಿ ಚುನಾವಣೆಯಲ್ಲಿ ಗೆಲವು: ಬೆಳಗಾವಿಯಲ್ಲಿ ಬಿಜೆಪಿ ವಿಜಯೋತ್ಸವ

ಬೆಳಗಾವಿ: ರಾಜ್ಯ ವಿಧಾನಪರಿಷತ್ತಿನ ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಬಿಜೆಪಿ ನಾಯಕರು ಹಾಗೂ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ಬೆಳಗಾವಿಯ ರಾಮ್‌ದೇವ್ ಹೋಟೆಲ್ ಸಮೀಪ ಮಾಜಿ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ ಅವರ ನೇತೃತ್ವದಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಪಟಾಕಿ ಸಿಡಿಸಿ, ಪರಸ್ಪರ ಸಿಹಿ …

Read More »

ಏಷ್ಯನ್ ಪ್ಯಾರಾ ಗೇಮ್ಸ್ ಕಂಚಿನ ಪದಕ ವಿಜೇತ ಸ್ವಾತಿಕ್ ಪಾಟೀಲಗೆ ಬೆಳಗಾವಿಯಲ್ಲಿ ಅದ್ಧೂರಿ ಸ್ವಾಗತ

ಏಷ್ಯನ್ ಪ್ಯಾರಾ ಗೇಮ್ಸ್ ಕಂಚಿನ ಪದಕ ವಿಜೇತ ಸ್ವಾತಿಕ್ ಪಾಟೀಲಗೆ ಬೆಳಗಾವಿಯಲ್ಲಿ ಅದ್ಧೂರಿ ಸ್ವಾಗತ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಜಿಲ್ಲಾ ಕಾಂಗ್ರೆಸ್‌ನಿಂದ ಸನ್ಮಾನ; ತೆರೆದ ವಾಹನದಲ್ಲಿ ಮೆರವಣಿಗೆ ಪ್ರಗತಿವಾಹಿನಿ ಸುದ್ದಿ/ ಬೆಳಗಾವಿ: ಜಪಾನ್‌ನಲ್ಲಿ ನಡೆದ 2026ರ ಏಷ್ಯನ್ ಪ್ಯಾರಾ ಗೇಮ್ಸ್‌ನ ಪುರುಷರ 100 ಮೀಟರ್ ಬ್ರೆಸ್ಟ್‌ಸ್ಟ್ರೋಕ್ SB9 ಈಜು ಸ್ಪರ್ಧೆಯಲ್ಲಿ ಅದ್ಭುತ ಪ್ರದರ್ಶನ ನೀಡಿ ಕಂಚಿನ ಪದಕ ಗೆಲ್ಲುವ ಮೂಲಕ ದೇಶಕ್ಕೆ ಕೀರ್ತಿ ತಂದ ಬೆಳಗಾವಿ ತಾಲೂಕಿನ ಮುತಗಾ ಗ್ರಾಮದ …

Read More »

ಕೆಎಲ್ಎಸ್ ಜಿಐಟಿ ಎಂಬಿಎ ವಿದ್ಯಾರ್ಥಿಗಳಿಗೆ ಆತ್ಮೀಯ ಸ್ವಾಗತ: ಕೌಶಲ್ಯ ವೃದ್ಧಿಗೆ ಡಾ. ನರಗುಂದಕರ ಕರೆ

ಬೆಳಗಾವಿಯ ಕೆಎಲ್ಎಸ್ ಗೋಗಟೆ ತಂತ್ರಜ್ಞಾನ ಸಂಸ್ಥೆಯ (ಕೆಎಲ್ಎಸ್ ಜಿಐಟಿ) ಎಂಬಿಎ ವಿಭಾಗದಿಂದ 2026–28ನೇ ಸಾಲಿನ ನೂತನ ಎಂಬಿಎ ವಿದ್ಯಾರ್ಥಿಗಳ ಸ್ವಾಗತ ಹಾಗೂ ಉದ್ಘಾಟನಾ ಸಮಾರಂಭವನ್ನು ಸಿಲ್ವರ್ ಜುಬಿಲಿ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವು ಹೊಸದಾಗಿ ಪ್ರವೇಶ ಪಡೆದ ವಿದ್ಯಾರ್ಥಿಗಳ ಶೈಕ್ಷಣಿಕ ಪಯಣಕ್ಕೆ ಉತ್ಸಾಹಭರಿತ ಚಾಲನೆ ನೀಡಿತು. ಇಂದೋರ್‌ನ ಪ್ರೆಸ್ಟೀಜ್ ವಿಶ್ವವಿದ್ಯಾಲಯದ ಮಾಜಿ ಕುಲಪತಿ ಹಾಗೂ ಕೆಎಲ್ಎಸ್ ಜಿಐಟಿ ಎಂಬಿಎ ವಿಭಾಗದ ಅತಿಥಿ ಪ್ರಾಧ್ಯಾಪಕ ಡಾ. ರಾಜೇಂದ್ರ ನರಗುಂದಕರ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. …

Read More »

ಬೆಳಗಾವಿಯಲ್ಲಿ ಐಟಿ ಪಾರ್ಕ್: ಸ್ಥಳ ಪರಿಶೀಲನೆ

ಬೆಳಗಾವಿ: ಬೆಳಗಾವಿ ನಗರದ ಅಭಿವೃದ್ಧಿಗೆ ಹೊಸ ವೇಗ ನೀಡುವ ಉದ್ದೇಶದಿಂದ ಪ್ರಸ್ತಾವಿತ ಐಟಿ ಪಾರ್ಕ್ ನಿರ್ಮಾಣ ಯೋಜನೆಗೆ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಹಾಗೂ ಬುಡಾ ಅಧ್ಯಕ್ಷ ಆಸಿಫ್ (ರಾಜು) ಸೇಠ್ ಚುರುಕು ನೀಡಿದ್ದಾರೆ. ಪುತ್ರ ಅಮಾನ್ ಸೇಠ್ ಹಾಗೂ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ (ಬುಡಾ) ಅಧಿಕಾರಿಗಳೊಂದಿಗೆ ಪ್ರಸ್ತಾವಿತ ಐಟಿ ಪಾರ್ಕ್ ನಿರ್ಮಾಣದ ಸ್ಥಳಕ್ಕೆ ಭೇಟಿ ನೀಡಿದ ಅವರು, ಜಮೀನಿನ ಸಮೀಕ್ಷೆ ನಡೆಸಿ ಯೋಜನೆಯ ಪ್ರಗತಿಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿದರು. …

Read More »

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಸುವರ್ಣಸೌಧದಲ್ಲಿ ನಡೆಯಲಿದೆ ನೇರ ಸಂದರ್ಶನ

ಬೆಳಗಾವಿ: ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ಒದಗಿಬಂದಿದ್ದು, ಬೆಳಗಾವಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಅಕ್ಟೋಬರ್ 31ರಂದು ಶನಿವಾರ ಖಾಸಗಿ ಕಂಪನಿಗಳಿಂದ ನೇರ ಸಂದರ್ಶನ ಆಯೋಜಿಸಲಾಗಿದೆ. ಎಸ್‌ಎಸ್‌ಎಲ್‌ಸಿ, ಐಟಿಐ, ಪಿಯುಸಿ ಹಾಗೂ ಪದವಿ ಪೂರ್ಣಗೊಳಿಸಿದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ಬೆಳಗಾವಿಯ ಸುವರ್ಣ ವಿಧಾನಸೌಧದ ತಳಮಹಡಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಕೊಠಡಿ ಸಂಖ್ಯೆ ಟಿಪಿ2 ಮತ್ತು ಟಿಪಿ3ರಲ್ಲಿ ಸಂದರ್ಶನ ನಡೆಯಲಿದೆ. ಉದ್ಯೋಗಾವಕಾಶ ಸಂಪೂರ್ಣ ಉಚಿತವಾಗಿದ್ದು, …

Read More »

ಪ್ರಿಯತಮೆ ದೂರವಾದ್ಲು ಅಂತಾ ರೊಚ್ಚಿಗೆದ್ದ ಪಾಗಲ್ ಪ್ರೇಮಿ – ಲವರ್ ಬಾವನ ಬೈಕ್‌ಗೆ ಬೆಂಕಿ ಹಚ್ಚಿ ವಿಕೃತಿ!

ಬೆಂಗಳೂರು: ಸೋಷಿಯಲ್ ಮಿಡೀಯಾದಲ್ಲಿ ಶುರುವಾದ ಪರಿಚಯ ಪ್ರೀತಿಗೆ ತಿರುಗಿತ್ತು. ಆದರೆ ಆ ಪ್ರೀತಿಗೆ ಹೆಚ್ಚು ದಿನ ಬಾಳಲಿಲ್ಲ. ಪ್ರಿಯತಮನಿಂದ ದೂರವಾಗಿದ್ದಕ್ಕೆ ರೊಚ್ಚಿಗೆದ್ದಿದ್ದ ಪಾಗಲ್ ಪ್ರೇಮಿ ಬೈಕ್‌ಗೆ ಬೆಂಕಿ ಹಚ್ಚಿದ್ದಾನೆ. ನಂದನ್ ಎಂಬಾತ ಇನ್‌ಸ್ಟಾಗ್ರಾಂನಲ್ಲಿ ಸಂಧ್ಯಾ ಎಂಬ ಮಹಿಳೆಯನ್ನ ಪರಿಚಯ ಮಾಡಿಕೊಂಡಿದ್ದ. ನಂತರ ಅದು ಪ್ರೀತಿಗೆ ತಿರುಗಿತ್ತು. ಕಳೆದ 3-4 ತಿಂಗಳಿಂದ ಪ್ರೀತಿ ಪ್ರೇಮ ಅಂತಾ ನಂದನ್ – ಸಂಧ್ಯಾ ಸುತ್ತಾಡಿದ್ರು. ಆದರೆ ಕಾರಣಾಂತರಗಳಿಂದ ಇತ್ತೀಚೆಗೆ ಸಂಧ್ಯಾ, ನಂದನ್‌ನಿಂದ ದೂರವಾಗಿದ್ದಳು. ತಂಗಿಯ …

Read More »

ಹಣಕಾಸಿನ ಗಲಾಟೆ ಕೊಲೆಯಲ್ಲಿ ಅಂತ್ಯ: ಕಬ್ಬಿಣದ ರಾಡ್‌ನಿಂದ ಹೊಡೆದು ರೌಡಿಶೀಟರ್ ಬರ್ಬರ ಹತ್ಯೆ!

ಹಣಕಾಸಿನ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡಿದೆ. ರೌಡಿಶೀಟರ್ ಸುಜಿತ್ ಪಿಂಟೊ ಎಂಬಾತನನ್ನು ದುಷ್ಕರ್ಮಿಗಳು ಕಬ್ಬಿಣದ ರಾಡ್‌ನಿಂದ ತಲೆಗೆ ಹೊಡೆದು ಹತ್ಯೆ ಮಾಡಿದ್ದಾರೆ. ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ರಿಕ್ಷಾ ಚಾಲಕ ಪ್ರಮೋದ್‌ನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಸುಜಿತ್ ಪಿಂಟೊ ಮತ್ತು ರಿಕ್ಷಾ ಚಾಲಕ ಪ್ರಮೋದ್ ನಡುವೆ ಹಣಕಾಸಿನ ವಿಚಾರವಾಗಿ ಗಲಾಟೆ ನಡೆದಿತ್ತು ಎನ್ನಲಾಗಿದೆ. ಸುಜಿತ್ ಪಿಂಟೊ, ಪ್ರಮೋದ್‌ಗೆ ಹಣ ಪಾವತಿಸುವುದು ಬಾಕಿ ಇದ್ದುದೇ ಸಂಘರ್ಷಕ್ಕೆ ಕಾರಣ ಎಂದು …

Read More »

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರು ಯುವತಿಯರು ಸ್ಥಳದಲ್ಲೇ ಸಾವು

ತುಮಕೂರು: ಬೆಳ್ಳಂಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಜವರಾಯನ ಅಟ್ಟಹಾಸ ಮೆರೆದಿದ್ದು, ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಯುವತಿಯರು ಮೃತಪಟ್ಟಿರುವ ಘಟನೆ ಶಿರಾ ತಾಲೂಕಿನ ತಾವರೆಕೆರೆಯಲ್ಲಿ ನಡೆದಿದೆ. ಮೃತ ಯುವತಿಯರನ್ನು ನಿಸರ್ಗ (20) ಹಾಗೂ ರೂಪಾ (21) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಐದಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ. ಇಂದು ಬೆಳಗಿನ ಜಾವ 5 ಗಂಟೆಗೆ ಈ ದುರ್ಘಟನೆ ಸಂಭವಿಸಿದೆ. ಬಿಜಾಪುರದಿಂದ ಡಿಸೈರ್ ಕಾರಿನಲ್ಲಿ ಮೂವರು ಯುವತಿಯರು ಹಾಗೂ …

Read More »

ಯುವತಿಯ ವಿಡಿಯೋ ಮಾಡಿದ ಆರೋಪ – ಮೆಟ್ರೋ ನಿಲ್ದಾಣದ ಒಳಗೆ ಯುವತಿಯರಿಗೆ ಸೇಫ್ಟಿ ಇಲ್ವಾ?

ಬೆಂಗಳೂರು: ಯುವತಿಯ ವಿಡಿಯೋ ಮಾಡಿದ ಆರೋಪ ಕೇಳಿ ಬಂದಿದ್ದು, ಮೆಟ್ರೋ ನಿಲ್ದಾಣದ ಒಳಗೆಯೇ ಯುವತಿಯರಿಗೆ ಸೇಫ್ಟಿ ಇಲ್ವಾ ಎಂಬ ಪ್ರಶ್ನೆ ಮೂಡಿದೆ. ವೈಟ್‌ಫೀಲ್ಡ್‌ನ  ಕಾಡುಗೋಡಿ ಮೆಟ್ರೋ ನಿಲ್ದಾಣದಲ್ಲಿ  ಈ ಘಟನೆ ನಡೆದಿದೆ. ಯುವತಿಯ ವಿಡಿಯೋ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನ ಹಿಡಿದು ಆಕೆ ತರಾಟೆಗೆ ತೆಗೆದುಕೊಂಡಿದ್ದಳು. ಬಳಿಕ ಆತ ಮೊಬೈಲ್ ಕಿತ್ತುಕೊಂಡು ನಿಲ್ದಾಣದಿಂದ ಕಾಲ್ಕಿತ್ತಿದ್ದಾನೆ. ಮೆಟ್ರೋದಲ್ಲಿ ಸಂಚಾರ ಮಾಡ್ತಿದ್ದ ವೇಳೆ ಯುವತಿಯ ಹಿಂದಿನಿಂದ ವಿಡಿಯೋ ಮಾಡಿದ್ದ ಕಾಮುಕ. ಕೂಡಲೇ ಮೊಬೈಲ್ …

Read More »