ತುಮಕೂರು: ಸಿದ್ದಗಂಗಾ ಶ್ರೀಗಳ ಆಶೀರ್ವಾದದಿಂದಲೇ ಇಂದು ಉಪಮುಖ್ಯಮಂತ್ರಿಯಾಗಿ ಜನರ ಮುಂದೆ ನಿಲ್ಲಲು ಸಾಧ್ಯವಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು. ನಗರದಲ್ಲಿ ನಡೆದ ಧಾನ್ಯ ವ್ಯಾಪಾರಿಗಳ ಸಂಘದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜಕೀಯಕ್ಕೆ ಬರಬೇಕೆಂದು ನಾನು ಮೊದಲಿನಿಂದಲೂ ನಿರ್ಧರಿಸಿರಲಿಲ್ಲ ಎಂದು ಹೇಳಿದರು. ರಾಜಕೀಯ ಪ್ರವೇಶಕ್ಕೂ ಮುನ್ನ ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದೆ, ವಿದೇಶದಲ್ಲಿಯೂ ಕೆಲಸ ಮಾಡಿದ್ದೆ. ರಜೆ ಮೇಲೆ ಊರಿಗೆ ಬಂದಾಗ ಕುಟುಂಬದ ಜವಾಬ್ದಾರಿ ವಹಿಸಿಕೊಂಡು ಸಂಸ್ಥೆಗಳನ್ನು ಮುಂದುವರಿಸುವಂತೆ ತಂದೆಯವರು ಸೂಚಿಸಿದ್ದರು. …
Read More »Monthly Archives: ಅಕ್ಟೋಬರ್ 2026
ಕೆಸೆಟ್-26 ತಾತ್ಕಾಲಿಕ ಫಲಿತಾಂಶ ಪ್ರಕಟ: ಕೆಇಎ
ಬೆಂಗಳೂರು:ಅಕ್ಟೋಬರ್ 11ರಂದು ಒಟ್ಟು 37 ವಿಷಯಗಳಿಗೆ ನಡೆದ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ ತಾತ್ಕಾಲಿಕ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಕೀ ಉತ್ತರಗಳಿಗೆ ಬಂದ ಆಕ್ಷೇಪಣೆಗಳನ್ನು ಪರಿಗಣಿಸಿ ಈ ಫಲಿತಾಂಶ ಪ್ರಕಟಿಸಲಾಗಿದೆ. ಇದಕ್ಕೆ ಆಕ್ಷೇಪಣೆಗಳು ಇದ್ದಲ್ಲಿ ಪೂರಕ ದಾಖಲೆಗಳೊಂದಿಗೆ ಅ.26ರ ಬೆಳಿಗ್ಗೆ 10:30ರೊಳಗೆ ಇ-ಮೇಲ್ (cetonline.Karnataka.gov.in/kea/) ಮೂಲಕ ತಿಳಿಸಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ. ತಾತ್ಕಾಲಿಕ ಫಲಿತಾಂಶದ ಜೊತೆಗೆ ಅಂತಿಮ ಕೀ ಉತ್ತರಗಳನ್ನೂ …
Read More »ಮಗಳನ್ನ ನೋಡಲು ಹೋಗಿದ್ದ ತಂದೆ ಅಪಘಾತದಲ್ಲಿ ಸಾವು!
ಚಿಕ್ಕಬಳ್ಳಾಪುರ: ಮಗಳನ್ನು ನೋಡಿಕೊಂಡು ಸ್ವಗ್ರಾಮಕ್ಕೆ ವಾಪಸಾಗುತ್ತಿದ್ದ ತಂದೆ ರಾಷ್ಟ್ರೀಯ ಹೆದ್ದಾರಿ ದಾಟುವ ವೇಳೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಬಂಡಹಳ್ಳಿ ಗೇಟ್ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 44ರ ನಂದಿ ಮೆಡಿಕಲ್ ಕಾಲೇಜು ಮುಂಭಾಗ ಅಪಘಾತ ಸಂಭವಿಸಿದೆ. ಸೋಮೇನಹಳ್ಳಿ ಗ್ರಾಮದಲ್ಲಿರುವ ಮಗಳನ್ನು ನೋಡಿಕೊಂಡು ಬಂಡಹಳ್ಳಿ ಗ್ರಾಮಕ್ಕೆ ವಾಪಸಾಗುತ್ತಿದ್ದ ವ್ಯಕ್ತಿ, ನಂದಿ ಮೆಡಿಕಲ್ ಕಾಲೇಜು ಬಳಿ ಬಸ್ನಿಂದ ಇಳಿದು ಹೆದ್ದಾರಿ ದಾಟುತ್ತಿದ್ದರು. ಈ ವೇಳೆ …
Read More »ಇನ್ಮುಂದೆ ಲಿಂಗಾಯತ ಸ್ವತಂತ್ರ ಧರ್ಮ ಹೋರಾಟಕ್ಕೆ ಹೋಗಲ್ಲ: ಎಂಬಿ ಪಾಟೀಲ್
ಬೀದರ್: ಲಿಂಗಾಯತ ಸ್ವತಂತ್ರ ಧರ್ಮ ಮಾನ್ಯತೆಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಪ್ರಭಾವಿ ನಾಯಕ, ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರು ಈ ವಿಚಾರದಲ್ಲಿ ಮಹತ್ವದ ಹಾಗೂ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಇನ್ಮುಂದೆ ಲಿಂಗಾಯತ ಧರ್ಮದ ಪ್ರತ್ಯೇಕ ಹೋರಾಟಕ್ಕೆ ತಾವೆಂದೂ ಹೋಗುವುದಿಲ್ಲ ಎಂದು ಘೋಷಿಸುವ ಮೂಲಕ ಚಳವಳಿಯ ಹೋರಾಟದಿಂದ ಹಿಂದೆ ಸರಿಯುವ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಬೀದರ್ ಜಿಲ್ಲೆಯ ಐತಿಹಾಸಿಕ ಬಸವಕಲ್ಯಾಣದಲ್ಲಿ ಆಯೋಜಿಸಲಾಗಿದ್ದ 25ನೇ ಕಲ್ಯಾಣ ಪರ್ವ ಕಾರ್ಯಕ್ರಮದ …
Read More »ಮೋದಿ ಅವರಪ್ಪನೂ ಜೈಲಿಗೆ ಹೋಗ್ಬೇಕು ಎಂದ ಖರ್ಗೆಗೆ ಸಂಕಷ್ಟ – ದೂರು ದಾಖಲು
ಪಾಟ್ನಾ: ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ತಂದೆಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದೂರು ದಾಖಲಾಗಿದೆ. ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಮಿತಿಯ ಸದಸ್ಯರಾದ ಕೃಷ್ಣ ಸಿಂಗ್ ಕಲ್ಲು ಅವರು, ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಖರ್ಗೆ ವಿರುದ್ಧ ಲಿಖಿತ ದೂರು ದಾಖಲಿಸಿದ್ದಾರೆ. ಏನಿದು ವಿವಾದ? ಪಾಟ್ನಾದಲ್ಲಿ ಕೃಷ್ಣ ಸಿಂಗ್ ಅವರ 139ನೇ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ …
Read More »ನ್ಯಾಯಾಧೀಶರ 17 ವರ್ಷದ ಮಗ ಚಲಾಯಿಸುತ್ತಿದ್ದ ಮರ್ಸಿಡಿಸ್ ಕಾರು ಸ್ಕೂಟರ್ಗೆ ಡಿಕ್ಕಿ – ವ್ಯಕ್ತಿ ಸಾವು
ತಿರುವನಂತಪುರಂ: ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ 17 ವರ್ಷದ ಮಗ ಚಲಾಯಿಸುತ್ತಿದ್ದ ಮರ್ಸಿಡಿಸ್ ಬೆನ್ಜ್ (Mercedes Benz) ಕಾರು ಸ್ಕೂಟರ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 54 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಕೇರಳದ ಕೊಚ್ಚಿಯಲ್ಲಿ ಇಂದು ನಡೆದಿದೆ. ಕೊಚ್ಚಿಯ ಚೆರಾನೆಲ್ಲೂರು ಸಮೀಪ ನಸುಕಿನ ಜಾವ 2 ರಿಂದ 3 ಗಂಟೆಯ ನಡುವೆ ಈ ಅಪಘಾತ ಸಂಭವಿಸಿದ್ದು, ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನ ಮಂಜಳಿ ನಿವಾಸಿ ಜಯಬಾಲಕೃಷ್ಣನ್ …
Read More »ಜಡ್ಜ್ ನೇಮಕಾತಿಗೂ ಮುನ್ನವೇ ಚಂದ್ರಚೂಡ್ ಸರ್ಕಾರದ ಪೂರ್ವಾನುಮೋದನೆ ಪಡೆಯುತ್ತಿದ್ದರು: ನಿವೃತ್ತ ನ್ಯಾ. ಸಂಜಯ್ ಕಿಶನ್ ಕೌಲ್
ನವದೆಹಲಿ: ಭಾರತದ ಸುಪ್ರೀಂ ಕೋರ್ಟ್ನ) ನಿವೃತ್ತ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಅವರು ಮಾಜಿ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ಅವರ ಕಾರ್ಯವೈಖರಿ ಕುರಿತು ಅತ್ಯಂತ ಸಂಚಲನಕಾರಿ ಮಾಹಿತಿಯೊಂದನ್ನು ಬಹಿರಂಗಪಡಿಸಿದ್ದಾರೆ. ಸುಪ್ರೀಂ ಕೋರ್ಟ್ ಕೊಲಿಜಿಯಂನಲ್ಲಿ ನ್ಯಾಯಾಧೀಶರ ಹೆಸರುಗಳನ್ನು ಔಪಚಾರಿಕವಾಗಿ ಚರ್ಚಿಸುವ ಮುನ್ನವೇ ನ್ಯಾ. ಚಂದ್ರಚೂಡ್ ಅವರು ಸರ್ಕಾರದೊಂದಿಗೆ ಆ ಹೆಸರುಗಳ ಬಗ್ಗೆ ಚರ್ಚಿಸುತ್ತಿದ್ದರು ಇದು ಸರ್ಕಾರದ ‘ಪೂರ್ವಾನುಮೋದನೆ’ ಪಡೆಯುವಂತಿದ್ದು, ತಾವು ಇದನ್ನು ಕಟುವಾಗಿ ವಿರೋಧಿಸಿದ್ದಾಗಿ ನ್ಯಾ. ಕೌಲ್ ತಿಳಿಸಿದ್ದಾರೆ. …
Read More »539 ಕೆರೆಗಳ 2,431 ಎಕರೆ ಭೂಮಿ ಒತ್ತುವರಿ ತೆರವಿಗೆ ಈಶ್ವರ್ ಖಂಡ್ರೆ ಸೂಚನೆ
ಶಿವಮೊಗ್ಗ: ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಸ್ವಾಧೀನದಲ್ಲಿರುವ ಒಟ್ಟು 4351 ಕೆರೆಗಳ ಪೈಕಿ ಇನ್ನೂ 539 ಕೆರೆಗಳ 2431 ಎಕರೆ ಭೂಮಿ ಒತ್ತುವರಿ ತೆರವಾಗಬೇಕಿದ್ದು, ಕೂಡಲೇ ಇದಕ್ಕೆ ಕ್ರಮ ಕೈಗೊಳ್ಳುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸೂಚಿಸಿದರು. ಶಿವಮೊಗ್ಗದ ಅಂಬೇಡ್ಕರ್ ಭವನದಲ್ಲಿಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಅಧಿಕಾರಿಗಳಿಗೆ ಸೂಚನೆ ನೀಡಿದರು ಗ್ರಾಮ ಪಂಚಾಯತಿ ಆಸ್ತಿಗಳ ಸಂರಕ್ಷಣೆ …
Read More »ಬೆಳಗಾವಿಯಲ್ಲಿ ಯುವತಿ ವಿಚಾರವಾಗಿ ತಲ್ವಾರ್, ಚಾಕುವಿನಿಂದ ಭೀಕರ ಹಲ್ಲೆ
ಬೆಳಗಾವಿ: ಯುವತಿಯೊಂದಿಗಿನ ಸಲುಗೆಯ ವಿಚಾರವಾಗಿ ಎರಡು ಗುಂಪುಗಳ ನಡುವೆ ಆರಂಭವಾದ ವೈಮನಸ್ಸು ತೀವ್ರ ಸಂಘರ್ಷಕ್ಕೆ ತಿರುಗಿದ್ದು, ತಲ್ವಾರ್ ಹಾಗೂ ಚಾಕುವಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಳಗಾವಿಯ ವಡಗಾವಿಯಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಹಾಪುರ ಠಾಣೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ತರುಣ ಜಾಲಗಾರ (20), ಪ್ರೇಮ ಜಾಲಗಾರ (26), ಆದಿತ್ಯ ಪೂಜಾರಿ (20), ಪ್ರಶಾಂತ ಜಾಲಗಾರ (26) ಹಾಗೂ ಮಾರುತಿ ಮಂಜಾಲಕರ (23) ಎಂದು ಗುರುತಿಸಲಾಗಿದೆ. ಕೇತನ್ …
Read More »ಅರಣ್ಯ ಇಲಾಖೆ ಸಿಬ್ಬಂದಿ ಆತ್ಮಹತ್ಯೆ
ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ವಿಠಲ್ ಜೋನಿ ಆತ್ಮಹತ್ಯೆಗೆ ಶರಣಾದ ದುರ್ದೈವಿ. ಕಳೆದ ರಾತ್ರಿ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಹಿಂದೆ ವಿಠಲ್ ಅರಣ್ಯ ಇಲಾಖೆಯ ನೌಕರ ಸಂಘದ ಅಧ್ಯಕ್ಷರಾಗಿದ್ದರು. ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಧಾರವಾಡದ ಕುಮಾರೇಶ್ವರ ನಗರದಲ್ಲಿ ಈ ಘಟನೆ ನಡೆದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಶವವನ್ನು …
Read More »
Laxmi News 24×7