Breaking News

Daily Archives: ನವೆಂಬರ್ 3, 2026

38 ಸಾವಿರ ಕೋಟಿ ರೂ. ಬಾಕಿ ಬಿಡುಗಡೆಗೆ ಗಡುವು – ಸಿಎಂ ಜೊತೆ ಗುತ್ತಿಗೆದಾರರ ನಿಯೋಗ ಚರ್ಚೆ

ಬೆಂಗಳೂರು: 38 ಸಾವಿರ ಕೋಟಿ ರೂ. ಬಾಕಿ ಬಿಡುಗಡೆಗೆ ಗಡುವು ನೀಡಿದ ಬೆನ್ನಲ್ಲೇ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್ ಹಾಗೂ ಪದಾಧಿಕಾರಿಗಳ ನಿಯೋಗ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಡಿ.ಕೆ ಶಿವಕುಮಾರ್‌ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿತು. ಬಾಕಿ ಹಣ ಬಿಡುಗಡೆಗೆ ಗುತ್ತಿಗೆದಾರರ ಪಟ್ಟು ಹಿಡಿದಿದ್ದು, ಈಗಾಗಲೇ ಡಿಸೆಂಬರ್‌ವರೆಗೆ ಸರ್ಕಾರಕ್ಕೆ ಅಂತಿಮ ಗಡುವು ನೀಡಿದ್ದಾರೆ. ಗಡುವು ನೀಡಿದ ಬೆನ್ನಲ್ಲೇ ಸಿಎಂ ಜೊತೆ ಗುತ್ತಿಗೆದಾರರು ಸಭೆ ನಡೆಸಿದ್ದಾರೆ. ಇತ್ತೀಚೆಗೆ ಗುತ್ತಿಗೆದಾರರು ಶಾಸಕರ …

Read More »

ಅಡ್ಡಂಡ ಕಾರ್ಯಪ್ಪ ಪತ್ರಿಕಾಗೋಷ್ಠಿ ವೇಳೆ ಗಲಾಟೆ – ಚಪ್ಪಲಿ ಎಸೆತ, ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

ಬೆಂಗಳೂರು: ಬೆಂಗಳೂರಿನ ಬನಶಂಕರಿಯ ಸುಚಿತ್ರಾ ಫಿಲ್ಮ್ ಸೊಸೈಟಿ ಆವರಣದಲ್ಲಿ ನಡೆದ ಪತ್ರಿಕಾಗೋಷ್ಠಿಯ ವೇಳೆ ಗಲಾಟೆ ನಡೆದಿದ್ದು, ನಾಟಕಕಾರ ಅಡ್ಡಂಡ ಕಾರ್ಯಪ್ಪ  ಅವರತ್ತ ಕಾಂಗ್ರೆಸ್  ಕಾರ್ಯಕರ್ತರು ಚಪ್ಪಲಿ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. `ಗಾಂಧಿ ಹತ್ಯೆಯ ಸತ್ಯ’ ನಾಟಕದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರು ಪತ್ರಿಕಾಗೋಷ್ಠಿ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕೆಪಿಸಿಸಿ ಮುಖಂಡರಾದ ಲಕ್ಷ್ಮಣ್ ಮತ್ತು ಮನೋಹರ್ ನೇತೃತ್ವದಲ್ಲಿ ಹಲವು ಕಾಂಗ್ರೆಸ್ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಪ್ರತಿಭಟನೆ ನಡೆಸಿದ್ದಾರೆ. ಈ …

Read More »

ನಂದಿನಿ ಮೊಸರು ಪ್ರತಿ ಲೀಟರ್‌ಗೆ 2 ರೂ. ಇಳಿಸಲು ಸಿಎಂ ಸೂಚನೆ

ಬೆಂಗಳೂರು: ಹಾಲು – ಮೊಸರಿನ ದರ ಏರಿಕೆಗೆ ರಾಜ್ಯಾದ್ಯಂತ ಜಕ್ರೋಶ ವ್ಯಕ್ತವಾಗಿದೆ. ಈ ಬೆನ್ನಲ್ಲೇ ಸಿಎಂ ಡಿಕೆ ಶಿವಕುಮಾರ್‌ (DK Shivakumar) ನಂದಿನಿ ಮೊಸರಿನ ದರ ಪ್ರತಿ ಲೀಟರ್‌ಗೆ 2 ರೂ. ಕಡಿಮೆ ಮಾಡಲು ಸೂಚನೆ ಕೊಟ್ಟಿದ್ದಾರೆ. ನಂದಿನಿ ಹಾಲಿನ ದರ ಏರಿಕೆ ಬೆನ್ನಲ್ಲೇ ಅರ್ಧ ಲೀಟ‌ರ್ ಮೊಸರಿನ ದರವನ್ನ 28 ರೂ. ನಿಂದ 34 ರೂ.ಗೆ ಹಾಗೂ 1 ಲೀಟರ್ ಮೊಸರಿನ ದರವನ್ನ 54 ರೂ. ನಿಂದ 68 …

Read More »

ಶಿವಮೊಗ್ಗದಲ್ಲಿ ನ.5 ರಂದು ಬಿಜೆಪಿಯಿಂದ ಬೃಹತ್ ಪ್ರತಿಭಟನೆ

ಶಿವಮೊಗ್ಗ: ಎಸ್ಐಆರ್  ಪ್ರಕ್ರಿಯೆಯನ್ನ ವಿರೋಧಿಸುವ ನೆಪದಲ್ಲಿ ಕಾಂಗ್ರೆಸ್  ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಹೊರಟಿದ್ದು, ಜನರಿಗೆ ಸತ್ಯವನ್ನ ತಿಳಿಸುವ ಉದ್ದೇಶದಿಂದ ನ.5 ರಂದು ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಶಿವಮೊಗ್ಗ  ನಗರ ಶಾಸಕ ಎಸ್.ಎನ್. ಚನ್ನಬಸಪ್ಪ ತಿಳಿಸಿದರು. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ದೇಶವು ಅನೇಕ ಸಮಸ್ಯೆಗೆ ಪರಿಹಾರ ಸೂಚಿಸಿ, ಇತರೆ ದೇಶಗಳಿಗೆ ಬೆನ್ನೆಲುಬಾಗಿ ನಿಂತಿದೆ. ಜೊತೆಗೆ ವೇಗವಾಗಿ ಬೆಳೆಯುತ್ತಿರುವ ರಾಷ್ಟ್ರವಾಗಿ ಭಾರತವು ಇತರೆ ರಾಷ್ಟ್ರಗಳಿಗೂ ಸಹಕಾರ ನೀಡುತ್ತಿದೆ. ಆದರೆ, …

Read More »

ಉತ್ತರಾಖಂಡ ಹೆಲಿಕಾಪ್ಟರ್ ದುರಂತ: ಸರ್ಕಾರಿ ಗೌರವದೊಂದಿಗೆ ಸಿಸಿಬಿ ಇನ್ಸ್‌ಪೆಕ್ಟರ್ ಅರುಣ್ ಸಾಳುಂಕೆ ಅಂತ್ಯಕ್ರಿಯೆ

ಗ್ರಾಮದಲ್ಲಿರುವ ಅರುಣ್ ಅವರ ತೋಟದಲ್ಲಿ ಅಂತ್ಯಕ್ರಿಯೆ ನಡೆಯಿತು. ಪುತ್ರ ವಲ್ಲಭ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಸಿಸಿಬಿ ಮುಖ್ಯಸ್ಥ ಅಜಯ್ ಹಿಲೋರಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಅಂತಿಮ ನಮನ ಸಲ್ಲಿಸಿದರು. ಪೊಲೀಸ್ ಇಲಾಖೆಯ ವತಿಯಿಂದ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಲಾಯಿತು. ಇದಕ್ಕೂ ಮುನ್ನ ಗೋವಾದಿಂದ ಅಥಣಿ ಮಾರ್ಗವಾಗಿ ಅರುಣ್ ಅವರ ಪಾರ್ಥಿವ ಶರೀರ ಗ್ರಾಮಕ್ಕೆ ಆಗಮಿಸಿತು. ಸಾವಿರಾರು ಯುವಕರು ಬೈಕ್ ರ‍್ಯಾಲಿ ಮೂಲಕ ಮೃತದೇಹವನ್ನು ಸ್ವಾಗತಿಸಿ ಗ್ರಾಮಕ್ಕೆ …

Read More »

ಗೃಹಲಕ್ಷ್ಮಿ ಫಲಾನುಭವಿಗಳೇ ಎಚ್ಚರ: ಸರ್ಕಾರದಿಂದ ಮಹತ್ವದ ಸೂಚನೆ

ಗೃಹಲಕ್ಷ್ಮಿ ಯೋಜನೆಯ ಮರು-ಪರಿಶೀಲನೆ ಹೆಸರಿನಲ್ಲಿ ಒಟಿಪಿ ಹಾಗೂ ಬ್ಯಾಂಕ್ ಖಾತೆ ವಿವರ ಕೇಳುವ ನಕಲಿ ಜಾಲದ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಎಚ್ಚರಿಕೆ ನೀಡಿದೆ. ಸದ್ಯಕ್ಕೆ ಯಾವುದೇ ಮರು-ಪರಿಶೀಲನೆ ಅಥವಾ ಸರ್ವೇ ಆರಂಭವಾಗಿಲ್ಲ. ಫಲಾನುಭವಿಗಳು ತಮ್ಮ ವೈಯಕ್ತಿಕ ಮಾಹಿತಿ, ಒಟಿಪಿ ಅಥವಾ ಬ್ಯಾಂಕ್ ವಿವರಗಳನ್ನು ಅಪರಿಚಿತರೊಂದಿಗೆ ಹಂಚಿಕೊಳ್ಳಬಾರದು. ಇಂತಹ ವಂಚಕರಿಂದ ಎಚ್ಚರದಿಂದಿರುವಂತೆ ಇಲಾಖೆ ಮನವಿ ಮಾಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಗೃಹಜ್ಯೋತಿ ಸರ್ವೆಯನ್ನು ನಡೆಸಲಾಗುತ್ತಿದೆ. …

Read More »

ರಾಹುಲ್ ಗಾಂಧಿಯವರನ್ನು ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾದರು. ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಪೊನ್ನಣ್ಣ ಉಪಸ್ಥಿತರಿದ್ದರು. ಈ ಭೇಟಿ ವೇಳೆ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಯಾಗುತ್ತಿರುವ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣ ಹಾಗೂ ತನಿಖೆಯ ಬೆಳವಣಿಗೆಗಳ ಬಗ್ಗೆ ರಾಹುಲ್ ಗಾಂಧಿಯವರೊಂದಿಗೆ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

Read More »

ಕೆಪಿಎಸ್ ಸಿ ಹಗರಣ: ಮಹತ್ವದ ಆದೇಶ ನೀಡಿದ ಹೈಕೋರ್ಟ್

ಕರ್ನಾಟಕ ಲೋಕಸೇವಾ ಆಯೋಗದ  ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಿರುವ ನ್ಯಾಯಾಲಯ, ತಂಡದ ನೇತೃತ್ವಕ್ಕೆ ಇಬ್ಬರು ದಕ್ಷ ಹಾಗೂ ಹಿರಿಯ ಐಪಿಎಸ್ ಅಧಿಕಾರಿಗಳನ್ನು ನೇಮಕ ಮಾಡಿ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಈ ಹಿಂದೆ ನಡೆದ ತನಿಖಾಧಿಕಾರಿಗಳ ಕುರಿತು ಅರ್ಜಿದಾರರ ಪರ ವಕೀಲ ಗಿರೀಶ್ ಭಾರದ್ವಾಜ್ ಆಕ್ಷೇಪಣೆ ಸಲ್ಲಿಸಿದ್ದ ಹಿನ್ನೆಲೆಯಲ್ಲಿ, ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ …

Read More »

ಚಂಡಮಾರುತ ಪೀಡಿತ ಆಂಧ್ರ ಪ್ರದೇಶಕ್ಕೆ ಕರ್ನಾಟಕ ಸರ್ಕಾರದ ನೆರವಿನ ಹಸ್ತ

‘ಅರ್ನಬ್’ ಚಂಡಮಾರುತದಿಂದಾಗಿ ಹಾನಿಗೊಳಗಾದ ಆಂಧ್ರ ಪ್ರದೇಶದಲ್ಲಿ ವಿದ್ಯುತ್ ಪೂರೈಕೆ ಮೂಲಸೌಕರ್ಯ ಮರುಸ್ಥಾಪನೆಗೆ ಸಿಎಂ ಡಿ ಕೆ ಶಿವಕುಮಾರ್ ಅವರ ನೇತೃತ್ವದ ರಾಜ್ಯ ಸರ್ಕಾರ ಸಹಾಯ ಹಸ್ತ ಚಾಚಿದೆ. ವಿದ್ಯುತ್ ಪೂರೈಕೆ ಮೂಲಸೌಕರ್ಯ ಮರುಸ್ಥಾಪಿಸಲು ಅಗತ್ಯವಿರುವ ಮಾನವಶಕ್ತಿ ಮತ್ತು ಉಪಕರಣಗಳನ್ನು ಒದಗಿಸುವಂತೆ ಆಂಧ್ರಪ್ರದೇಶ ಸರ್ಕಾರವು ಕರ್ನಾಟಕ ಸರ್ಕಾರಕ್ಕೆ ವಿನಂತಿಸಿತ್ತು. ಇದಕ್ಕೆ ಸ್ಪಂದಿಸಿರುವ ರಾಜ್ಯ ಸರಕಾರವು ಇಂಧನ ಸಚಿವ ಕೆ ಜೆ ಜಾರ್ಜ್ ಅವರ ಮೇಲ್ವಿಚಾರಣೆಯಲ್ಲಿ ರಾಜ್ಯಗಳ ನಡುವಿನ ಸಹಕಾರ ಮತ್ತು ಒಗ್ಗಟ್ಟಿನ …

Read More »

ಕುಮಾರಸ್ವಾಮಿ ಬಳಸಿಕೊಂಡು ಮೋದಿ, ಅಮಿತ ಶಾ ಅವರಿಂದ ಒಂದೇ ಕಲ್ಲಲ್ಲಿ ನಾಲ್ಕು ಹಕ್ಕಿ ಹೊಡೆಯುವ ಪ್ರಯತ್ನ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಲಕ್ಷ್ಮಣ

ಸ್ಟಿಂಗ್ ಪ್ರಕರಣದಲ್ಲಿ ಕಥೆ, ಚಿತ್ರಕತೆ, ನಿರ್ದೇಶನ, ನಿರ್ಮಾಣ ಎಲ್ಲವೂ ಕುಮಾರಸ್ವಾಮಿ ಅವರದ್ದೇ ಆಗಿದೆ. ಸ್ಟಿಂಗ್ ವಿಡಿಯೋ ಬಿಡುಗಡೆ ಮಾಡಿದವರು ಕುಮಾರಸ್ವಾಮಿ ಜೊತೆಗೆ ಕೆಲಸ ಮಾಡುವವರೇ ಆಗಿದ್ದಾರೆ” ಎಂದು ಕೆಪಿಸಿಸಿ ವಕ್ತಾರರಾದ ಎಂ ಲಕ್ಷ್ಮಣ್ ಅವರು ತಿಳಿಸಿದ್ದಾರೆ. ನಗರದ ಮೌರ್ಯ ಹೊಟೇಲ್ ನಲ್ಲಿ ಮಾಧ್ಯಮಗೋಷ್ಠಿ ನಡೆಸಿ ಲಕ್ಷ್ಮಣ್ ಅವರು ಸೋಮವಾರ ಮಾತನಾಡಿದರು. “ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಕಳೆದ ಒಂದು ತಿಂಗಳಿನಿಂದ ಮಾಧ್ಯಮಗೋಷ್ಠಿಗಳ ಮೂಲಕ ಕರ್ನಾಟಕದ ಮಾನ ಮರ್ಯಾದೆಯನ್ನು ದೇಶದಲ್ಲಿ ಹರಾಜು …

Read More »