ಗ್ರಾಮದಲ್ಲಿರುವ ಅರುಣ್ ಅವರ ತೋಟದಲ್ಲಿ ಅಂತ್ಯಕ್ರಿಯೆ ನಡೆಯಿತು. ಪುತ್ರ ವಲ್ಲಭ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಸಿಸಿಬಿ ಮುಖ್ಯಸ್ಥ ಅಜಯ್ ಹಿಲೋರಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಅಂತಿಮ ನಮನ ಸಲ್ಲಿಸಿದರು. ಪೊಲೀಸ್ ಇಲಾಖೆಯ ವತಿಯಿಂದ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಲಾಯಿತು. ಇದಕ್ಕೂ ಮುನ್ನ ಗೋವಾದಿಂದ ಅಥಣಿ ಮಾರ್ಗವಾಗಿ ಅರುಣ್ ಅವರ ಪಾರ್ಥಿವ ಶರೀರ ಗ್ರಾಮಕ್ಕೆ ಆಗಮಿಸಿತು. ಸಾವಿರಾರು ಯುವಕರು ಬೈಕ್ ರ್ಯಾಲಿ ಮೂಲಕ ಮೃತದೇಹವನ್ನು ಸ್ವಾಗತಿಸಿ ಗ್ರಾಮಕ್ಕೆ …
Read More »Daily Archives: ನವೆಂಬರ್ 3, 2026
ಗೃಹಲಕ್ಷ್ಮಿ ಫಲಾನುಭವಿಗಳೇ ಎಚ್ಚರ: ಸರ್ಕಾರದಿಂದ ಮಹತ್ವದ ಸೂಚನೆ
ಗೃಹಲಕ್ಷ್ಮಿ ಯೋಜನೆಯ ಮರು-ಪರಿಶೀಲನೆ ಹೆಸರಿನಲ್ಲಿ ಒಟಿಪಿ ಹಾಗೂ ಬ್ಯಾಂಕ್ ಖಾತೆ ವಿವರ ಕೇಳುವ ನಕಲಿ ಜಾಲದ ಬಗ್ಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಎಚ್ಚರಿಕೆ ನೀಡಿದೆ. ಸದ್ಯಕ್ಕೆ ಯಾವುದೇ ಮರು-ಪರಿಶೀಲನೆ ಅಥವಾ ಸರ್ವೇ ಆರಂಭವಾಗಿಲ್ಲ. ಫಲಾನುಭವಿಗಳು ತಮ್ಮ ವೈಯಕ್ತಿಕ ಮಾಹಿತಿ, ಒಟಿಪಿ ಅಥವಾ ಬ್ಯಾಂಕ್ ವಿವರಗಳನ್ನು ಅಪರಿಚಿತರೊಂದಿಗೆ ಹಂಚಿಕೊಳ್ಳಬಾರದು. ಇಂತಹ ವಂಚಕರಿಂದ ಎಚ್ಚರದಿಂದಿರುವಂತೆ ಇಲಾಖೆ ಮನವಿ ಮಾಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಗೃಹಜ್ಯೋತಿ ಸರ್ವೆಯನ್ನು ನಡೆಸಲಾಗುತ್ತಿದೆ. …
Read More »ರಾಹುಲ್ ಗಾಂಧಿಯವರನ್ನು ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾದರು. ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಪೊನ್ನಣ್ಣ ಉಪಸ್ಥಿತರಿದ್ದರು. ಈ ಭೇಟಿ ವೇಳೆ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಯಾಗುತ್ತಿರುವ ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣ ಹಾಗೂ ತನಿಖೆಯ ಬೆಳವಣಿಗೆಗಳ ಬಗ್ಗೆ ರಾಹುಲ್ ಗಾಂಧಿಯವರೊಂದಿಗೆ ಚರ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
Read More »ಕೆಪಿಎಸ್ ಸಿ ಹಗರಣ: ಮಹತ್ವದ ಆದೇಶ ನೀಡಿದ ಹೈಕೋರ್ಟ್
ಕರ್ನಾಟಕ ಲೋಕಸೇವಾ ಆಯೋಗದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಪ್ರಕರಣದ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಿರುವ ನ್ಯಾಯಾಲಯ, ತಂಡದ ನೇತೃತ್ವಕ್ಕೆ ಇಬ್ಬರು ದಕ್ಷ ಹಾಗೂ ಹಿರಿಯ ಐಪಿಎಸ್ ಅಧಿಕಾರಿಗಳನ್ನು ನೇಮಕ ಮಾಡಿ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ. ಈ ಹಿಂದೆ ನಡೆದ ತನಿಖಾಧಿಕಾರಿಗಳ ಕುರಿತು ಅರ್ಜಿದಾರರ ಪರ ವಕೀಲ ಗಿರೀಶ್ ಭಾರದ್ವಾಜ್ ಆಕ್ಷೇಪಣೆ ಸಲ್ಲಿಸಿದ್ದ ಹಿನ್ನೆಲೆಯಲ್ಲಿ, ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ …
Read More »ಚಂಡಮಾರುತ ಪೀಡಿತ ಆಂಧ್ರ ಪ್ರದೇಶಕ್ಕೆ ಕರ್ನಾಟಕ ಸರ್ಕಾರದ ನೆರವಿನ ಹಸ್ತ
‘ಅರ್ನಬ್’ ಚಂಡಮಾರುತದಿಂದಾಗಿ ಹಾನಿಗೊಳಗಾದ ಆಂಧ್ರ ಪ್ರದೇಶದಲ್ಲಿ ವಿದ್ಯುತ್ ಪೂರೈಕೆ ಮೂಲಸೌಕರ್ಯ ಮರುಸ್ಥಾಪನೆಗೆ ಸಿಎಂ ಡಿ ಕೆ ಶಿವಕುಮಾರ್ ಅವರ ನೇತೃತ್ವದ ರಾಜ್ಯ ಸರ್ಕಾರ ಸಹಾಯ ಹಸ್ತ ಚಾಚಿದೆ. ವಿದ್ಯುತ್ ಪೂರೈಕೆ ಮೂಲಸೌಕರ್ಯ ಮರುಸ್ಥಾಪಿಸಲು ಅಗತ್ಯವಿರುವ ಮಾನವಶಕ್ತಿ ಮತ್ತು ಉಪಕರಣಗಳನ್ನು ಒದಗಿಸುವಂತೆ ಆಂಧ್ರಪ್ರದೇಶ ಸರ್ಕಾರವು ಕರ್ನಾಟಕ ಸರ್ಕಾರಕ್ಕೆ ವಿನಂತಿಸಿತ್ತು. ಇದಕ್ಕೆ ಸ್ಪಂದಿಸಿರುವ ರಾಜ್ಯ ಸರಕಾರವು ಇಂಧನ ಸಚಿವ ಕೆ ಜೆ ಜಾರ್ಜ್ ಅವರ ಮೇಲ್ವಿಚಾರಣೆಯಲ್ಲಿ ರಾಜ್ಯಗಳ ನಡುವಿನ ಸಹಕಾರ ಮತ್ತು ಒಗ್ಗಟ್ಟಿನ …
Read More »ಕುಮಾರಸ್ವಾಮಿ ಬಳಸಿಕೊಂಡು ಮೋದಿ, ಅಮಿತ ಶಾ ಅವರಿಂದ ಒಂದೇ ಕಲ್ಲಲ್ಲಿ ನಾಲ್ಕು ಹಕ್ಕಿ ಹೊಡೆಯುವ ಪ್ರಯತ್ನ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಲಕ್ಷ್ಮಣ
ಸ್ಟಿಂಗ್ ಪ್ರಕರಣದಲ್ಲಿ ಕಥೆ, ಚಿತ್ರಕತೆ, ನಿರ್ದೇಶನ, ನಿರ್ಮಾಣ ಎಲ್ಲವೂ ಕುಮಾರಸ್ವಾಮಿ ಅವರದ್ದೇ ಆಗಿದೆ. ಸ್ಟಿಂಗ್ ವಿಡಿಯೋ ಬಿಡುಗಡೆ ಮಾಡಿದವರು ಕುಮಾರಸ್ವಾಮಿ ಜೊತೆಗೆ ಕೆಲಸ ಮಾಡುವವರೇ ಆಗಿದ್ದಾರೆ” ಎಂದು ಕೆಪಿಸಿಸಿ ವಕ್ತಾರರಾದ ಎಂ ಲಕ್ಷ್ಮಣ್ ಅವರು ತಿಳಿಸಿದ್ದಾರೆ. ನಗರದ ಮೌರ್ಯ ಹೊಟೇಲ್ ನಲ್ಲಿ ಮಾಧ್ಯಮಗೋಷ್ಠಿ ನಡೆಸಿ ಲಕ್ಷ್ಮಣ್ ಅವರು ಸೋಮವಾರ ಮಾತನಾಡಿದರು. “ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಕಳೆದ ಒಂದು ತಿಂಗಳಿನಿಂದ ಮಾಧ್ಯಮಗೋಷ್ಠಿಗಳ ಮೂಲಕ ಕರ್ನಾಟಕದ ಮಾನ ಮರ್ಯಾದೆಯನ್ನು ದೇಶದಲ್ಲಿ ಹರಾಜು …
Read More »ಹಿಂಡಲಗಾ ಜೈಲಿಗೆ ಮುತ್ತಿಗೆ ಹಾಕಿದ ರೈತರು
ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡುವಂತೆ ಬೆಳಗಾವಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದೆ. ಹಿಂಡಲಗಾ ಬಳಿ ಬಿಗುವುನ ವಾತಾವಾರಣ ನಿರ್ಮಾಣವಾಗಿದೆ. ಕಬ್ಬು ಬೆಳೆಗೆ ಸೂಕ್ತ ಬೆಂಬಲ ಬೆಲೆ ನಿಗದಿಗೆ ಆಗ್ರಹಿಸಿ ರಾಜ್ಯ ಸರ್ಕಾರಕ್ಕೆ ಹಾಗೂ ಕಾರ್ಖಾನೆಗಳಿಗೆ ನೀಡಿದ್ದ ಗಡುವು ಮುಗಿದಿದೆ. ಇದರಿಂದ ಆಕ್ರೋಶಗೊಂಡಿರುವ ರೈತರು, ಗುರ್ಲಾಪುರಿಂದ ಹಿಂಡಲಗಾ ಜೈಲು ಬಾರೋ ಚಳವಳಿ ಆರಂಭಿಸಿದ್ದಾರೆ. ಇದರ ಮಧ್ಯೆ ಸಮೀಪ ಗ್ರಾಮದ ರೈತರು ಹಿಂಡಲಗಾ ಜೈಲಿಗೆ ಮುತ್ತಿಗೆ ಹಾಕಿದ್ದಾರೆ. ರೈತರನ್ನ …
Read More »ರೈತ ಸಂಘಟನೆಗಳ ಸಭೆ ಕರೆದ ಸಚಿವ ಸತೀಶ್ ಜಾರಕಿಹೊಳಿ
ಬೆಳಗಾವಿ: ಕಬ್ಬಿನ ಬೆಲೆ ನಿಗದಿಗೆ ಆಗ್ರಹಿಸಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದ ಎದುರು ರೈತರು ನಡೆಸಿದ ಪ್ರತಿಭಟನೆಗೆ ತಾತ್ಕಾಲಿಕ ತೆರೆ ಬಿದ್ದಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಲ್ಲಾ ರೈತ ಸಂಘಟನೆಗಳ ಮುಖಂಡರ ಸಭೆ ನಡೆಸಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುವುದಾಗಿ ಸಚಿವರು ಭರವಸೆ ನೀಡಿದ್ದಾರೆ. ಕಬ್ಬು ಕಟಾವಿಗೆ ಸಿದ್ಧವಾಗಿದ್ದರೂ ಸೂಕ್ತ ಬೆಲೆ ನಿಗದಿಯಾಗದ ಕಾರಣ ಹೊಲಗಳಲ್ಲೇ ಒಣಗುತ್ತಿದೆ. ಇದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರ ಕೂಡಲೇ ಬೆಲೆ ಘೋಷಿಸಿ …
Read More »ಹತ್ತು ವರ್ಷಗಳಿಂದ ಪರಿಹಾರಕ್ಕಾಗಿ ಹೋರಾಟ: 95 ರೈತರಿಗೆ ₹54 ಕೋಟಿ ರೂ. ವಿತರಣೆ
ಬೆಳಗಾವಿ: ಬಳ್ಳಾರಿ ನಾಲಾ ಯೋಜನೆಯಡಿ ಭೂಮಿ ಕಳೆದುಕೊಂಡ ಕಮಲಾಪೂರ ಗ್ರಾಮದ ರೈತರು ಕಳೆದ ಹತ್ತು ವರ್ಷಗಳಿಂದ ಪರಿಹಾರಕ್ಕಾಗಿ ಹೋರಾಟ ನಡೆಸುತ್ತಿದ್ದರು. ಇದೀಗ 95 ರೈತರಿಗೆ ಒಟ್ಟು ₹54 ಕೋಟಿ ಪರಿಹಾರ ವಿತರಣೆ ಮಾಡಲಾಗಿದ್ದು, ರೈತರಿಗೆ ನ್ಯಾಯ ದೊರಕಿದಂತಾಗಿದೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಸೋಮವಾರ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಮಲಾಪೂರ ಗ್ರಾಮದ 95 ರೈತರಿಗೆ ₹54 ಕೋಟಿ ಪರಿಹಾರದ ಚೆಕ್ ವಿತರಿಸಿ …
Read More »ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರತಿಭಟನೆ, ಧರಣಿ, ಮೆರವಣಿಗೆಗೆ ನಿರ್ಬಂಧ; ಡಿಸಿ ಆದೇಶ
ಬೆಳಗಾವಿ: ಜಿಲ್ಲೆಯ ವ್ಯಾಪ್ತಿಯಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ-48 ಸೇರಿದಂತೆ ಎಲ್ಲಾ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರತಿಭಟನೆ, ಧರಣಿ, ಮೆರವಣಿಗೆ ಹಾಗೂ ರಸ್ತೆ ತಡೆ ನಡೆಸುವುದನ್ನು ನಿರ್ಬಂಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಯಾವುದೇ ವ್ಯಕ್ತಿ, ಸಂಘಟನೆ ಅಥವಾ ಗುಂಪು ಪ್ರತಿಭಟನೆ, ಧರಣಿ, ಮೆರವಣಿಗೆ ಸೇರಿದಂತೆ ಯಾವುದೇ ಉದ್ದೇಶಕ್ಕಾಗಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ತಡೆ ನಡೆಸುವಂತಿಲ್ಲ. ಅಲ್ಲದೆ, ವಾಹನ ಸಂಚಾರವನ್ನು ಸಂಪೂರ್ಣವಾಗಿ ಅಥವಾ ಭಾಗಶಃ ಸ್ಥಗಿತಗೊಳಿಸುವುದು ಹಾಗೂ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಪಡಿಸುವುದನ್ನೂ …
Read More »
Laxmi News 24×7