Breaking News

Daily Archives: ನವೆಂಬರ್ 4, 2026

ಸ್ಕೂಟರ್‌ಗೆ ಸಾರಿಗೆ ಬಸ್ ಡಿಕ್ಕಿ – ಪಿಯುಸಿ ವಿದ್ಯಾರ್ಥಿನಿ ಸಾವು

ಮೈಸೂರು: ಸ್ಕೂಟರ್‌ಗೆ  ಸಾರಿಗೆ ಬಸ್  ಡಿಕ್ಕಿಯಾದ ಪರಿಣಾಮ ಪಿಯುಸಿ ವಿದ್ಯಾರ್ಥಿನಿ  ಮೃತಪಟ್ಟಿರುವ ಘಟನೆ ಮೈಸೂರು ಅರಮನೆಯ ಸನಿಹದ ಚಾಮರಾಜ ವೃತ್ತದ ಬಳಿ ನಡೆದಿದೆ. ವೈಷ್ಣವಿ (17) ಮೃತ ವಿದ್ಯಾರ್ಥಿನಿ. ಮೈಸೂರಿನ ಎನ್‌ಆರ್ ಮೊಹಲ್ಲಾ ನಿವಾಸಿ ವೆಂಕಟೇಶ್ ಮತ್ತು ಜ್ಯೋತಿ ದಂಪತಿ ಪುತ್ರಿ ವೈಷ್ಣವಿ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಟ್ಯೂಷನ್ ಮುಗಿಸಿಕೊಂಡು ತಂದೆಯೊಂದಿಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಘಟನೆ ಸಂಬಂಧ ದೇವರಾಜ ಪೊಲೀಸ್ ಠಾಣೆಯಲ್ಲಿ …

Read More »

ಕಾಂಗ್ರೆಸ್‌ ಮುಖಂಡನ 2 ಎಕರೆ ಅಡಿಕೆ ತೋಟ ತೆರವು – ಸಮಾಧಾನ ಹೇಳಲು ಬಂದ ಬಿಜೆಪಿ ನಾಯಕರ ಮುಂದೆ ಕಣ್ಣೀರಿಟ್ಟ ರೈತ

ಶಿವಮೊಗ್ಗ: ಸೊರಬ ತಾಲೂಕಿನ ತ್ಯಾವರೆತೆಪ್ಪ- ವಡ್ಡಿಗೇರಿ ಗ್ರಾಮದಲ್ಲಿ 2 ಎಕರೆಯಲ್ಲಿ ಬೆಳೆದಿದ್ದ 15 ವರ್ಷದ ಅಡಿಕೆ ಮರಗಳನ್ನು  ತೆರವು ಮಾಡಿದ್ದ ಸ್ಥಳಕ್ಕೆ ಬಿಜೆಪಿ  ನಾಯಕರು ಇಂದು (ನ.3) ಭೇಟಿ ನೀಡಿದ್ದರು. ಈ ವೇಳೆ ಅಡಿಕೆ ಮರಗಳನ್ನು ಕಳೆದುಕೊಂಡ ರೈತ  ಹಾಗೂ ಕಾಂಗ್ರೆಸ್‌ ಮುಖಂಡ ದೇವರಾಜ್‌, ನಮ್ಮ ಪಕ್ಷದ ಮುಖಂಡರ ಗಮನಕ್ಕೆ ತಂದರೂ ಏನೂ ಪ್ರಯೋಜನವಾಗಲಿಲ್ಲ. ನನ್ನ ನೋವನ್ನು ಕೇಳಲು ಯಾರು ಬರಲಿಲ್ಲ ಎಂದು ಕಣ್ಣೀರಿಟ್ಟಿದ್ದಾರೆ. ಶಿವಮೊಗ್ಗ  ಸಂಸದ ಬಿ.ವೈ.ರಾಘವೇಂದ್ರ , …

Read More »

ಬರ ಪರಿಹಾರಕ್ಕಾಗಿ 22,400 ಕೋಟಿ ರೂ. ನೆರವು ಕೋರಿ ಕೇಂದ್ರಕ್ಕೆ ಜಿ.ಪರಮೇಶ್ವರ್‌ ಪತ್ರ

ಬೆಂಗಳೂರು: ಕರ್ನಾಟಕವು ಎಂದೂ ಕಾಣದ ಭೀಕರ ಬರವನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಬರ ಪರಿಹಾರದ  ಆರ್ಥಿಕ ನೆರವನ್ನು ತ್ವರಿತವಾಗಿ ಮಂಜೂರು ಮಾಡಿ ಬಿಡುಗಡೆ ಮಾಡುವಂತೆ ಕೋರಿ ಡಿಸಿಎಂ ಹಾಗೂ ಕಂದಾಯ ಸಚಿವ ಡಾ. ಜಿ.ಪರಮೇಶ್ವರ್‌  ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪ್ರತ್ಯೇಕ ಪತ್ರಗಳನ್ನು ಬರೆದಿದ್ದಾರೆ. ನವೆಂಬರ್ 2ರಂದು ಬರೆದಿರುವ …

Read More »

ಖಾಲಿ ಮಾತನಾಡುವ ಗಿರಾಕಿ ಅಲ್ಲ, ರಾಜ್ಯದ ಪ್ರಜಾ ಸೇವಕನಾಗಿ ನುಡಿದಂತೆ ನಡೆಯುತ್ತೇನೆ: ಡಿಕೆಶಿ

ಚಿತ್ರದುರ್ಗ: ನಾನು ಬರೀ ಖಾಲಿ ಮಾತನಾಡುವ ಗಿರಾಕಿ ಅಲ್ಲ, ನಾನು ರಾಜ್ಯದ ಪ್ರಜಾ ಸೇವಕನಾಗಿ ನುಡಿದಂತೆ ನಡೆಯುತ್ತೇನೆ ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಹಿರಿಯೂರು  ತಾಲೂಕಿನಲ್ಲಿ 2,328 ಕೋಟಿ ರೂ. ವಿವಿಧ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಗ್ಯಾರಂಟಿ ಕೊಟ್ಟಾಗ ವಿರೋಧ ಪಕ್ಷದವರು ನಕ್ಕರು. ಆದರೆ ನಮ್ಮ ಸರ್ಕಾರ ಯಶಸ್ವಿಯಾಗಿ ಗ್ಯಾರಂಟಿ ಕೊಟ್ಟಿದೆ. ಎಲ್ಲಾ ತಾಯಂದಿರು ಉಚಿತವಾಗಿ ಓಡಾಡುತಿದ್ದಾರೆ. 5 ಕೆಜಿ ಅಕ್ಕಿ, 5 ಕೆಜಿ ಅಕ್ಕಿಯ …

Read More »

ಜೈಲುಗಳಲ್ಲಿ ಜಾತಿ ತಾರತಮ್ಯ ಕೇಸ್;‌ 23 ರಾಜ್ಯಗಳಿಗೆ ಸುಪ್ರೀಂ ಕೋರ್ಟ್‌ನಿಂದ ಕೊನೆಯ ಎಚ್ಚರಿಕೆ

ನವದೆಹಲಿ: ದೇಶದ ಜೈಲುಗಳಲ್ಲಿ ನಡೆಯುತ್ತಿರುವ ಜಾತಿ ಆಧಾರಿತ ತಾರತಮ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಮಾಹಿತಿ ಸಲ್ಲಿಸದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸುಪ್ರೀಂ ಕೋರ್ಟ್ ಕೊನೆಯ ಅವಕಾಶ ನೀಡಿದೆ. ಮುಂದಿನ ವಿಚಾರಣೆಯ ವೇಳೆಗೆ ಮಾಹಿತಿ ಸಲ್ಲಿಸದಿದ್ದರೆ ಆಯಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು ಅಥವಾ ಪ್ರಧಾನ ಕಾರ್ಯದರ್ಶಿಗಳು ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗುವಂತೆ ಆದೇಶಿಸಬೇಕಾಗುತ್ತದೆ ಎಂದು ನ್ಯಾಯಪೀಠ ಎಚ್ಚರಿಕೆ ನೀಡಿದೆ. ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಮನಮೋಹನ್ ಅವರನ್ನೊಳಗೊಂಡ ಪೀಠ ಪ್ರಕರಣದ …

Read More »

ನ.13ಕ್ಕೆ ಪ್ರಧಾನಿ ಮೋದಿಯಿಂದ ನಮ್ಮ ಮೆಟ್ರೋ ಪಿಂಕ್‌ ಮಾರ್ಗ ಉದ್ಘಾಟನೆ

ಬೆಂಗಳೂರು: ನಮ್ಮ ಮೆಟ್ರೋ  ಪ್ರಯಾಣಿಕರಿಗೆ ಗುಡ್‌ ನ್ಯೂಸ್‌ ಸಿಕ್ಕಿದೆ. ಇದೇ ನವೆಂಬರ್‌ 13 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಮೆಟ್ರೋ ಪಿಂಕ್‌ ಮಾರ್ಗವನ್ನು  ಉದ್ಘಾಟಿಸಲಿದ್ದಾರೆ. ಈ ಕುರಿತು ಸಂಸದ ತೇಜಸ್ವಿ ಸೂರ್ಯ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಇದು ಅಧಿಕೃತ! ಬೆಂಗಳೂರಿಗೆ ಇದೊಂದು ಐತಿಹಾಸಿಕ ಮೈಲಿಗಲ್ಲು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನವೆಂಬರ್ 13 ರಂದು ‘ನಮ್ಮ ಮೆಟ್ರೋ’ದ ಪಿಂಕ್ ಲೈನ್ (ಗುಲಾಬಿ ಮಾರ್ಗ) ಅನ್ನು ಉದ್ಘಾಟಿಸಲಿದ್ದಾರೆ. …

Read More »

ಬಂಡೀಪುರದ ಗೋಪಾಲಸ್ವಾಮಿ ಬೆಟ್ಟದಲ್ಲಿ ಗರ್ಭಿಣಿ ಆನೆ ಸಾವು – ಕಾರಣ ನಿಗೂಢ

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗೋಪಾಲಸ್ವಾಮಿಬೆಟ್ಟ ವಲಯ ವ್ಯಾಪ್ತಿಯಲ್ಲಿ ಗರ್ಭಿಣಿ ಆನೆಯ ಕಳೇಬರ ಪತ್ತೆಯಾಗಿದೆ. ಅರಣ್ಯಾಧಿಕಾರಿಗಳು ನಿಯಮಾನುಸಾರ ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಗೋಪಾಲಸ್ವಾಮಿ ಬೆಟ್ಟ ವಲಯದ ಅರಣ್ಯ ಗಡಿಯಿಂದ ಸುಮಾರು 150 ಮೀಟರ್ ದೂರದ ಖಾಸಗಿ ಸರ್ವೇ ನಂ-155ರಲ್ಲಿ ಸುಮಾರು 35 ವರ್ಷ ವಯಸ್ಸಿನ ಆನೆ ಕಳೇಬರ ಪತ್ತೆಯಾಗಿದ್ದು, ಮೃತ ಆನೆಯ ಹೊಟ್ಟೆಯಲ್ಲಿ ಒಂದು ವರ್ಷ ವಯಸ್ಸಿನ ಮರಿಯಿರುವುದು ಕಂಡುಬಂದಿತು. ಮಸ್ತಿಗೆ ಬಂದ ಕಾಡಾನೆಯೊಂದಿಗೆ ಮಿಲನಕ್ಕೆ …

Read More »

ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ; ಶಾಲೆ ಧ್ವಂಸ, 29 ಮಂದಿ ಸಾವು

ಕೀವ್‌: ಉಕ್ರೇನ್‌ ಮೇಲೆ ರಷ್ಯಾ  ದಾಳಿ ನಡೆಸಿದ್ದು, ಶಾಲೆಯೊಂದು ಧ್ವಂಸಗೊಂಡು 29 ಮಂದಿ ಮೃತಪಟ್ಟಿದ್ದಾರೆ. ಅಮೆರಿಕದ ಮಧ್ಯಸ್ಥಿಕೆಯಲ್ಲಿ ಮಾತುಕತೆಗಳು ನಡೆಯಲಿರುವ ಹೊತ್ತಲ್ಲೇ ರಷ್ಯಾ ನಡೆಸಿದ ಈ ಮಾರಣಾಂತಿಕ ದಾಳಿಗಳನ್ನು ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಖಂಡಿಸಿದ್ದಾರೆ. ಮಂಗಳವಾರ ಖಾರ್ಕಿವ್‌ನಲ್ಲಿ ರಷ್ಯಾ ಆಸ್ಪತ್ರೆಯೊಂದರ ಮೇಲೆ ದಾಳಿ ನಡೆಸಿದ್ದು, ಇದರಲ್ಲಿ 73 ಮಂದಿ ಗಾಯಗೊಂಡಿದ್ದಾರೆ. ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದ ಆಸ್ಪತ್ರೆಯ ಕಾರ್ಡಿಯಾಲಜಿ (ಹೃದಯರೋಗ) ವಿಭಾಗಕ್ಕೆ ಹಾನಿಯಾಗಿದೆ ಎಂದು ಝೆಲೆನ್ಸ್ಕಿ ತಿಳಿಸಿದ್ದಾರೆ. ಎರಡನೇ ಮಹಾಯುದ್ಧದ ನಂತರದ …

Read More »

ಪೊಲೀಸರ ನೋಟಿಸ್‌ಗೂ ಧನ್ವೀರ್ ಗೌಡ ಡೋಂಟ್ ಕೇರ್: ವಿಚಾರಣೆಗೆ ಗೈರಾದ ನಟ

ನಟ ಧನ್ವೀರ್ ಗೌಡ ಸುತ್ತ ವಿವಾದಗಳ ಸರಣಿ ಮುಂದುವರಿದಿದೆ. ನಟ ಝೈದ್ ಖಾನ್ ವಿರುದ್ಧ ಅವಹೇಳನಕಾರಿ ಮತ್ತು ಆಕ್ಷೇಪಾರ್ಹ ಪದಗಳನ್ನು ಬಳಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರು. ಆದರೆ, ನಿಗದಿತ ಸಮಯಕ್ಕೆ ಧನ್ವೀರ್ ವಿಚಾರಣೆಗೆ ಹಾಜರಾಗಿಲ್ಲ. ಹೀಗಾಗಿ ಇದೀಗ ಎರಡನೇ ನೋಟಿಸ್ ನೀಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಧನ್ವೀರ್ ಗೌಡ ಮತ್ತು ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ನಡುವಿನ ವಿವಾದದ ನಡುವೆಯೇ, ಝೈದ್ ಖಾನ್ …

Read More »

ಬೇರೆ ನಟರ ಕಾರ್ಯಕ್ರಮದಲ್ಲಿ ಡಿ-ಬಾಸ್ ಘೋಷಣೆ ಬೇಡ: ಅಭಿಮಾನಿಗಳಿಗೆ ಡಿ ಕಂಪನಿ ಖಡಕ್ ಸಂದೇಶ

ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ‘ಡಿ-ಬಾಸ್’ ಹೆಸರಿನಲ್ಲಿ ನಡೆಯುತ್ತಿರುವ ಅಭಿಮಾನಿಗಳ ಅತಿರೇಕದ ವರ್ತನೆಗೆ ಕಡಿವಾಣ ಹಾಕಲು ನಟ ದರ್ಶನ್ ಅವರ ಅಧಿಕೃತ ಬಳಗ ಮುಂದಾಗಿದೆ. ಬೇರೆ ನಟರ ಕಾರ್ಯಕ್ರಮಗಳು ಹಾಗೂ ಗಣ್ಯರ ವೇದಿಕೆಗಳಲ್ಲಿ ಅನಗತ್ಯವಾಗಿ ದರ್ಶನ್ ಹೆಸರು ಕೂಗಿ ಮುಜುಗರ ಸೃಷ್ಟಿಸಬಾರದು ಎಂದು ಡಿ ಕಂಪನಿ ಅಭಿಮಾನಿಗಳಿಗೆ ಸ್ಪಷ್ಟ ಸಂದೇಶ ನೀಡಿದೆ. ಇತ್ತೀಚೆಗೆ ಮಂಡ್ಯದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ನಟ ಧ್ರುವ ಸರ್ಜಾ ಮತ್ತು ಶಾಸಕ ರವಿ ಗಣಿಗ ವೇದಿಕೆಯಲ್ಲಿದ್ದಾಗ ಕೆಲವರು ‘ಡಿ-ಬಾಸ್’ …

Read More »