ಬೆಳಗಾವಿ; ಮದುವೆಯಾಗುವುದಾಗಿ ನಂಬಿಸಿ ನಾಲ್ಕು ವರ್ಷಗಳ ಕಾಲ ಪ್ರೀತಿಸಿದ ಯುವಕ, ಕೊನೆಗೆ ಮದುವೆಯಾಗುವಂತೆ ಒತ್ತಾಯಿಸಿದ ಯುವತಿಯನ್ನೇ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ರಾಯಬಾಗ ತಾಲೂಕಿನ ಹಾರುಗೇರಿ ಗ್ರಾಮದ ರಕ್ಷಿತಾ ಸಾರಿಕರ್ (25) ಕೊಲೆಯಾದ ಯುವತಿ. ಅಥಣಿ ತಾಲೂಕಿನ ಅಡಳಹಟ್ಟಿ ಗ್ರಾಮದ ಬಸಪ್ಪ ಸಿದ್ದಪ್ಪ ಸಾತನ್ನವಣ್ಣರ ಕೊಲೆ ಆರೋಪಿಯಾಗಿದ್ದಾನೆ. ಆರೋಪಿ ಬಸಪ್ಪ ಕಳೆದ ನಾಲ್ಕು ವರ್ಷಗಳಿಂದ ರಕ್ಷಿತಾಳನ್ನು ಪ್ರೀತಿಸುತ್ತಿದ್ದು, ಮದುವೆಯಾಗುವುದಾಗಿ ಭರವಸೆ ನೀಡಿದ್ದ ಎನ್ನಲಾಗಿದೆ. ಆದರೆ ಮದುವೆಯ …
Read More »Daily Archives: ನವೆಂಬರ್ 4, 2026
ಸಭೆ ಆರಂಭವಾಗದಿದ್ದಕ್ಕೆ ರೈತರ ಆಕ್ರೋಶ ಸ್ಫೋಟ: ಡಿಸಿ ಕಚೇರಿ ಎದುರು ರಸ್ತೆ ಬಂದ್, ಬಸ್ ತಡೆದು ಪ್ರತಿಭಟನೆ
ಬೆಳಗಾವಿ: ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯಬೇಕಿದ್ದ ಸಭೆ ಆರಂಭವಾಗದ ಹಿನ್ನೆಲೆಯಲ್ಲಿ ರೈತರ ಆಕ್ರೋಶ ಸ್ಫೋಟಗೊಂಡಿದೆ. ಮಧ್ಯಾಹ್ನದಿಂದಲೇ ಸಭೆಗಾಗಿ ಕಾದು ಕುಳಿತಿದ್ದ ರೈತರು, ಏಕಾಏಕಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ರಸ್ತೆಯನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಚನ್ನಮ್ಮ ವೃತ್ತಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಲ್ಲಿ ರೈತರು ಧರಣಿ ನಡೆಸಿ, ಸಂಚಾರಕ್ಕೆ ಅಡ್ಡಿಪಡಿಸಿದರು. ಅಲ್ಲದೆ, ರಸ್ತೆಯಲ್ಲಿ ಸಂಚರಿಸುತ್ತಿದ್ದ ಬಸ್‌ಗಳನ್ನು ತಡೆದು ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಘೋಷಣೆಗಳನ್ನು …
Read More »ಬೆಳಗಾವಿ ಪಾಲಿಕೆ ಕಚೇರಿಗಳಲ್ಲಿ ಏಜೆಂಟರ ಹಾವಳಿ ತಡೆಗೆ ಮಹತ್ವದ ಸಭೆ
ಬೆಳಗಾವಿ: ಮಹಾನಗರ ಪಾಲಿಕೆಯ ವಲಯ ಕಚೇರಿಗಳಲ್ಲಿ ಏಜೆಂಟರು ಹಾಗೂ ಮಧ್ಯವರ್ತಿಗಳ ಹಾವಳಿ ಹೆಚ್ಚಾಗುತ್ತಿರುವ ಬಗ್ಗೆ ದೂರುಗಳು ಬಂದಿದ್ದು, ಇದಕ್ಕೆ ಕಡಿವಾಣ ಹಾಕಲು ಸೂಕ್ತ ಕ್ರಮ ಕೈಗೊಳ್ಳುವಂತೆ ತೆರಿಗೆ ನಿರ್ಧರಣೆ, ಹಣಕಾಸು ಹಾಗೂ ಅಪೀಲುಗಳ ಸ್ಥಾಯಿ ಸಮಿತಿ ಅಧ್ಯಕ್ಷ ರಮೇಶ ಮೈಲುಗೋಳ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಂಗಳವಾರ ಮಹಾನಗರ ಪಾಲಿಕೆಯಲ್ಲಿ ನಡೆದ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮಿತಿ ಸದಸ್ಯರು, ನಗರಸೇವಕರು ಹಾಗೂ ಸಾರ್ವಜನಿಕರಿಂದ ಈ ಕುರಿತು …
Read More »ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆಯಲ್ಲಿ ಕೆಎಲ್‌ಇ ಸಂಸ್ಥೆಗೆ ದ್ವಿತೀಯ ಬಹುಮಾನ
ಬೆಳಗಾವಿ: ಮೈಸೂರು ದಸರಾ 2026ರ ಐತಿಹಾಸಿಕ ಜಂಬೂಸವಾರಿ ಮೆರವಣಿಗೆಯಲ್ಲಿ ಬೆಳಗಾವಿಯ ಕರ್ನಾಟಕ ಲಿಂಗಾಯತ ಶಿಕ್ಷಣ ಸಂಸ್ಥೆ (ಕೆಎಲ್‌ಇ) ತನ್ನ ಸಾಧನೆಯ ಮೂಲಕ ರಾಜ್ಯದ ಗಮನ ಸೆಳೆದಿದೆ. ಮೆರವಣಿಗೆಯಲ್ಲಿ ಪ್ರದರ್ಶಿಸಿದ ಆಕರ್ಷಕ ಸ್ತಬ್ಧಚಿತ್ರಕ್ಕೆ ಸಂಸ್ಥೆಗಳ ವಿಭಾಗದಲ್ಲಿ ದ್ವಿತೀಯ ಬಹುಮಾನ ಲಭಿಸಿದೆ. ವಿಶೇಷವೆಂದರೆ, ಮೈಸೂರು ದಸರಾ ಜಂಬೂಸವಾರಿಯಲ್ಲಿ ಕೆಎಲ್‌ಇ ಸಂಸ್ಥೆ ಮೊದಲ ಬಾರಿಗೆ ಭಾಗವಹಿಸಿದ್ದು, ಮೊದಲ ಪ್ರಯತ್ನದಲ್ಲೇ ಪ್ರತಿಷ್ಠಿತ ಪ್ರಶಸ್ತಿ ಪಡೆದುಕೊಂಡಿರುವುದು ಸಂಸ್ಥೆಯ ಹೆಗ್ಗಳಿಕೆಯಾಗಿದೆ. ಬಸವತತ್ವಗಳ ಸಂದೇಶ ಸಾರಿದ ಸ್ತಬ್ಧಚಿತ್ರ ‘ಬಸವತತ್ವಗಳಿಂದ ಸಬಲ …
Read More »ತವರು ಮನೆಯಿಂದ ಹೋದ ಮಹಿಳೆ ನಾಪತ್ತೆ; ಪತ್ತೆಗೆ ಪೊಲೀಸರ ಮನವಿ
ಬೆಳಗಾವಿ: ಜಿಲ್ಲೆಯ ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ನಿವಾಸಿ 33 ವರ್ಷದ ಕಮಲವ್ವ ಪಾಂಡಪ್ಪ ಚಂದರಗಿ ಎಂಬ ಮಹಿಳೆ ಕಾಣೆಯಾಗಿದ್ದಾರೆ. ಮನ್ನಿಕೇರಿ ಗ್ರಾಮದ ತಮ್ಮ ತವರು ಮನೆಯಿಂದ ಹೊರಗೆ ಹೋದ ಕಮಲವ್ವ ಅವರು ಮರಳಿ ಮನೆಗೆ ಬಾರದೆ ನಾಪತ್ತೆಯಾಗಿದ್ದಾರೆ. ಈ ಕುರಿತು ಕುಲಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮಹಿಳೆಯ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ. ಮಹಿಳೆಯ ಚಹರೆ: ಸುಮಾರು 5.2 ಅಡಿ ಎತ್ತರ, ಸಾಧಾರಣ ಮೈಕಟ್ಟು, ದುಂಡು ಮುಖ, …
Read More »ನಾಳೆಯೊಳಗೆ ಕಬ್ಬಿನ ದರ ವಿವಾದಕ್ಕೆ ತೆರೆ ಎಳೆಯುವ ಭರವಸೆ: ಸತೀಶ್ ಜಾರಕಿಹೊಳಿ
ಬೆಳಗಾವಿ: ಕಬ್ಬಿನ ದರ ನಿಗದಿ ವಿಚಾರವಾಗಿ ರೈತರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ನಡುವೆ ಮುಂದುವರಿದಿರುವ ಬಿಕ್ಕಟ್ಟಿಗೆ ನಾಳೆಯೊಳಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಭರವಸೆ ನೀಡಿದ್ದಾರೆ. ಬೆಳಗಾವಿಯಲ್ಲಿ ರೈತ ಮುಖಂಡರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ರೈತರ ಮನವಿಯ ಮೇರೆಗೆ ಮತ್ತೊಮ್ಮೆ ಸಭೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಲಾಗಿದೆ. ಈ ಹಿಂದೆ ಮುಖ್ಯಮಂತ್ರಿ ನೇತೃತ್ವದಲ್ಲಿ …
Read More »
Laxmi News 24×7