Breaking News

Daily Archives: ನವೆಂಬರ್ 8, 2026

ಮಹಾರಾಜರು ಅರಮನೆ ಕಟ್ಟಿಸಿದ್ದು ಜನರ ತೆರಿಗೆಯ ಹಣದಿಂದಲೇ, ಎಲ್ಲವೂ ಜನರಿಗೇ ಸೇರಬೇಕು: ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಮಹಾರಾಜರು ಅರಮನೆ ಕಟ್ಟಿಸಿದ್ದು ಕೂಡ ಜನರ ತೆರಿಗೆಯ ಹಣದಿಂದಲೇ, ಹೀಗಾಗಿ ಎಲ್ಲವೂ ಜನರಿಗೇ ಸೇರಬೇಕು ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ಮತ್ತೊಮ್ಮೆ ತಮ್ಮ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅರಮನೆ ಖಾಸಗಿ ಸ್ವತ್ತು, ಸರ್ಕಾರ ಕಟ್ಟಿಸಿಲ್ಲ ಎನ್ನುವ ಪ್ರಮೋದಾ ದೇವಿ ಒಡೆಯರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದರು. ನಾನು ಸಿಂಹಾಸನ ಅಂಬಾರಿ ಸರ್ಕಾರದ್ದು ಅಂತಾ ಎಲ್ಲಿಯೂ ಹೇಳಿಲ್ಲ. ನಾವು ಬಾಡಿಗೆ ಕೊಡುತ್ತೇವೆ ಎಂದು ಹೇಳಿದೆ. ಅವರು …

Read More »

ತನಿಖೆ ಮುಗಿದು ಕೆಪಿಎಸ್‌ಸಿ ಸುಧಾರಣೆ ಆಗೋವರೆಗೂ KAS ಪರೀಕ್ಷೆ ಬೇಡ: ಹೆಚ್‌ಡಿಕೆ ಆಗ್ರಹ

ಬೆಂಗಳೂರು: ಕೆಪಿಎಸ್‌ಸಿ ಪರೀಕ್ಷೆ  ಅಕ್ರಮದ ಆರೋಪಗಳ ಹಿನ್ನೆಲೆಯಲ್ಲಿ ಪರೀಕ್ಷಾ ವ್ಯವಸ್ಥೆಯ ಮೇಲೆ ಅಭ್ಯರ್ಥಿಗಳಿಗೆ ನಂಬಿಕೆ ಇಲ್ಲದಂತಾಗಿದೆ. ಹೀಗಾಗಿ ಅಕ್ರಮದ ತನಿಖೆ ಪೂರ್ಣಗೊಂಡು, ಕೆಪಿಎಸ್‌ಸಿ ವ್ಯವಸ್ಥೆಯಲ್ಲಿ ಸುಧಾರಣೆ ಆಗುವವರೆಗೆ ನವೆಂಬರ್ 15ರಂದು ನಡೆಯಲಿರುವ ಕೆಎಎಸ್ ಪರೀಕ್ಷೆಯನ್ನು ಮುಂದೂಡಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಜೆಡಿಎಸ್ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದ ಬಳಿಕ ಮಾತನಾಡಿದ ಅವರು, ಕೆಪಿಎಸ್‌ಸಿ ಅಕ್ರಮದ ವಿಚಾರವಾಗಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. …

Read More »

16 ವರ್ಷದ ಬಾಲಕಿ ಮೇಲೆ ರೇಪ್ ಆರೋಪ – ಚಿಕ್ಕಪ್ಪ ಅರೆಸ್ಟ್

ದಾವಣಗೆರೆ: 16 ವರ್ಷದ ಬಾಲಕಿಯನ್ನು ಪುಸಲಾಯಿಸಿ ಚಿಕ್ಕಪ್ಪನೇ ಅತ್ಯಾಚಾರಗೈದಿರುವ ಘಟನೆ ದಾವಣಗೆರೆ  ಜಿಲ್ಲೆಯ ಹದಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸಂತ್ರಸ್ತ ಬಾಲಕಿಯ ದೂರಿನ ಆಧಾರದ ಮೇಲೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.  ಚಿಕ್ಕಪ್ಪ ಪುಸಲಾಯಿಸಿ ಅತ್ಯಾಚಾರ ಎಸಗಿರುವುದಾಗಿ ಬಾಲಕಿ ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಯನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.

Read More »

ನಿರ್ಮಾಣ ಹಂತದ ಎಕ್ಸ್‌ಪ್ರೆಸ್‌ ಹೈವೇಯಲ್ಲಿ ಭೀಕರ ಅಪಘಾತ – ನಾಲ್ವರು ಯುವಕರು ದುರ್ಮರಣ

ಯಾದಗಿರಿ: ನಿರ್ಮಾಣ ಹಂತದ ಎಕ್ಸ್‌ಪ್ರೆಸ್‌ ಹೈವೇಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಯುವಕರು ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರ  ತಾಲೂಕಿನ ಇಬ್ರಾಹಿಂ ಡಿಬಿಎಲ್ ಕ್ಯಾಂಪ್ ಬಳಿಯ ಚೆನ್ನೈ-ಸೂರತ್ ಎಕ್ಸ್‌ಪ್ರೆಸ್‌ ಹೈವೇಯಲ್ಲಿ ಶುಕ್ರವಾರ (ನ.6) ರಾತ್ರಿ 11:30ರ ವೇಳೆಗೆ ಈ ಭೀಕರ ಅಪಘಾತ ಸಂಭವಿಸಿದೆ. ಮೃತರನ್ನು ಗುರುರಾಜ್ ಚವ್ಹಾಣ್ (35), ರೆಡ್ಡಿ ರಾಠೋಡ್ (33), ಗೋವಿಂದ ಚವ್ಹಾಣ್ (28) ಹಾಗೂ ಕುಮಾರ ರಾಠೋಡ್ (26) ಎಂದು ಗುರುತಿಸಲಾಗಿದೆ. ಮೃತ …

Read More »

ಪಿಜಿ ವೈದ್ಯಕೀಯ; ಮೊದಲ ಸುತ್ತಿನ ಫಲಿತಾಂಶ ಪ್ರಕಟ, 3,268 ಸೀಟು ಹಂಚಿಕೆ: ಕೆಇಎ

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್  ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶ ಪ್ರಕಟಿಸಿದ್ದು, ಪ್ರವೇಶ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಈ ಸುತ್ತಿನಲ್ಲಿ ಒಟ್ಟು 4,388 ಸೀಟುಗಳ ಪೈಕಿ 3,268 ಸೀಟು ಹಂಚಿಕೆಯಾಗಿವೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.   ಸೀಟು ಹಂಚಿಕೆಯಾದವರು ನ.11ರವರೆಗೆ ಚಾಯ್ಸ್ ದಾಖಲಿಸಲು ಅವಕಾಶ ನೀಡಲಾಗಿದೆ. ಚಾಯ್ಸ್- 1 ಮತ್ತು 2 ದಾಖಲಿಸಿದವರು ನ.11ರವರೆಗೆ ಚಲನ್ …

Read More »

ವಿದ್ಯುತ್ ಶಾಕ್‌ನಿಂದ 13 ವರ್ಷದ ಕಾಡಾನೆ ಸಾವು – ಜಮೀನು ಮಾಲೀಕನಿಂದ ತಪ್ಪೊಪ್ಪಿಗೆ

ಶಿವಮೊಗ್ಗ: ಕಾಡುಪ್ರಾಣಿಗಳ ಕಾಟ ತಪ್ಪಿಸಿಕೊಳ್ಳಲು ಗದ್ದೆಗೆ ಅಕ್ರಮವಾಗಿ ಎಳೆದಿದ್ದ ವಿದ್ಯುತ್‌ ತಂತಿ ತುಳಿದು 13 ವರ್ಷದ ಕಾಡಾನೆ (Elephant) ಸಾವನ್ನಪ್ಪಿದ ಘಟನೆ ಗಾಜನೂರು ಸಮೀಪದ ಈಚಲವಾಡಿ ಗ್ರಾಮದಲ್ಲಿ ನಡೆದಿದೆ. ಶಂಕರ ವಲಯ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ. ಕಾಡಿನಿಂದ ಆಹಾರ ಅರಸಿ ಗ್ರಾಮಕ್ಕೆ ಕಾಡಾನೆ ಬಂದಿತ್ತು. ಈ ವೇಳೆ ಫಸಲಿಗೆ ಬಂದಿದ್ದ ಗದ್ದೆಯನ್ನು ರಕ್ಷಿಸಲು ಅಕ್ರಮವಾಗಿ ಎಳೆದಿದ್ದ ವಿದ್ಯುತ್ ತಂತಿ ತುಳಿದು ಆನೆ ಸಾವನ್ನಪ್ಪಿದೆ. ಕಾಡಾನೆ ಮೃತಪಟ್ಟಿರುವ …

Read More »

ತುಂಡಾಗಿ ಬಿದ್ದಿದ್ದ ಹೈಟೆನ್ಷನ್ ವಿದ್ಯುತ್ ತಂತಿ ತುಳಿದು ಯುವಕ ಸಾವು

ಹಾಸನ: ತುಂಡಾಗಿ ಬಿದ್ದಿದ್ದ ಹೈಟೆನ್ಷನ್ ವಿದ್ಯುತ್ ತಂತಿ  ತುಳಿದು ಯುವಕ ಸಾವನ್ನಪ್ಪಿರುವ ಘಟನೆ ಹಾಸನ  ಜಿಲ್ಲೆ, ಚನ್ನರಾಯಪಟ್ಟಣ  ತಾಲೂಕಿನ ಅಪ್ಪೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸುಪ್ರೀತ್ (35) ಮೃತಪಟ್ಟ ಯುವಕ. ಮನೆಯ ಹಿಂಭಾಗದಲ್ಲೇ ಹೈಟೆನ್ಷನ್ ವಿದ್ಯುತ್ ವೈರ್ ತುಂಡಾಗಿ ಬಿದ್ದಿದ್ದು, ಸುಪ್ರೀತ್ ಜಾನುವಾರುಗಳನ್ನು ಹಿಡಿದುಕೊಂಡು ಜಮೀನಿನ ಬಳಿಗೆ ತೆರಳುತ್ತಿದ್ದ ವೇಳೆ ಕಾಣದೆ ತುಂಡಾಗಿ ಬಿದ್ದಿದ್ದ ವಿದ್ಯುತ್ ವೈರ್ ತುಂಡಾಗಿ ಬಿದ್ದಿದ್ದು, ಸುಪ್ರೀತ್ ಜಾನುವಾರುಗಳನ್ನು ಹಿಡಿದುಕೊಂಡು ಜಮೀನಿನ ಬಳಿಗೆ ತೆರಳುತ್ತಿ ವಿದ್ಯುತ್ ತಂತಿ …

Read More »

ಸುಂಟಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಾಟ್ ಜಿಪಿಟಿ ಬಳಸಿ ಔಷಧಿ ಬರೆದುಕೊಡ್ತಿದ್ದಾರಂತೆ ಮೆಡಿಕಲ್ ಸ್ಟೂಡೆಂಟ್ಸ್‌!

ಮಡಿಕೇರಿ: ಕೊಡಗಿನ  ಸುಂಟಿಕೊಪ್ಪದ ಸಮುದಾಯ ಆರೋಗ್ಯ ಕೇಂದ್ರಕ್ಕೆ  ಮೇಜರ್ ಸರ್ಜರಿಯೇ ಬೇಕಾಗಿದೆ. ಬಡವರ ಪಾಲಿನ ಸಂಜೀವಿನಿಯಾಗಬೇಕಿದ್ದ ಆಸ್ಪತ್ರೆ ಇಂದು ಅವ್ಯವಸ್ಥೆಯ ಸುಳಿಯಲ್ಲಿ ಸಿಲುಕಿದೆ. ವೈದ್ಯರು, ಸಿಬ್ಬಂದಿ ಕೊರತೆ ಜೊತೆಗೆ ಮೂಲಸೌಕರ್ಯಗಳ ನಿರ್ಲಕ್ಷ್ಯದಿಂದ ರೋಗಿಗಳು ಪರದಾಡುವಂತಾಗಿದೆ. ಇನ್ನೂ ಆಸ್ಪತ್ರೆಯಲ್ಲಿರುವ ಮೆಡಿಕಲ್‌ ಕಾಲೇಜಿನ ವಿದ್ಯಾರ್ಥಿಗಳು ಚಾಟ್ ಜಿಪಿಟಿ ಬಳಸಿ ಔಷಧಿ ಬರೆದುಕೊಡ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿರುವ ಈ ಆಸ್ಪತ್ರೆ ಅಪಘಾತಗಳು ಸಂಭವಿಸಿದಾಗಲೂ, ಕಾಡಾನೆಗಳ ಹಾವಳಿಯಿಂದ ಗಾಯಗೊಂಡವರಿಗೆ ತುರ್ತು ಚಿಕಿತ್ಸೆ …

Read More »

ಇಂದು ಹಾಸನಾಂಬ ದೇವಿ ದರ್ಶನಕ್ಕೆ ಸಿಎಂ ಡಿಕೆಶಿ, ಕೇಂದ್ರ ಸಚಿವ ಹೆಚ್‌ಡಿಕೆ ಆಗಮನ

ಹಾಸನ: ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ಕರುಣಿಸುವ ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಸಾರ್ವಜನಿಕ ದರ್ಶನಕ್ಕೆ ಇಂದು ಹತ್ತನೇ ದಿನ. ಭಾನುವಾರದ ರಜಾ ದಿನವಾಗಿರುವುದರಿಂದ ದೇವಿಯ ದರ್ಶನ ಪಡೆಯಲು ಭಕ್ತಸಾಗರವೇ ಹರಿದುಬರುತ್ತಿದೆ. ಇದೇ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಇಂದು ದೇವಿಯ ದರ್ಶನ ಪಡೆಯಲಿದ್ದಾರೆ. ದರ್ಶನ ಪಡೆಯಲಿರುವ ಮುಖ್ಯಮಂತ್ರಿ ಡಿಕೆಶಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಹಾಸನಾಂಬ …

Read More »

ವಾಹನಗಳ ಎಂಜಿನ್ ಹಾಳಾಗಬಹುದು: ಹೆಚ್ಚಿನ ಪ್ರಮಾಣದ ಎಥೆನಾಲ್ ಬಳಕೆ ಎಫೆಕ್ಟ್ ಬಗ್ಗೆ ತಜ್ಞರು ಹೇಳೋದೇನು?

ಬೆಂಗಳೂರು: ಎಂಜಿನ್ ಸಾಮರ್ಥ್ಯಕ್ಕೆ ಅನುಗುಣವಾಗಿ ಎಥೆನಾಲ್  ಮಿಶ್ರಣ ಮಾಡುವುದು ಅಗತ್ಯ. ಹೆಚ್ಚಿನ ಪ್ರಮಾಣದ ಎಥೆನಾಲ್ ಮಿಶ್ರಣದಿಂದ ವಾಹನಗಳ ಎಂಜಿನ್ ಹಾಳಾಗಬಹುದು ಎಂದು ಬೆಂಗಳೂರು ವಿವಿಯ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಜಿ.ಕೃಷ್ಣಮೂರ್ತಿ ಹೇಳಿದರು. ಪೆಟ್ರೋಲ್‌ನಲ್ಲಿ ಎಥೆನಾಲ್ ಮಿಶ್ರಣ ಆರ್ಥಿಕವಾಗಿ ಅನುಕೂಲಕರ. ಎಂಜಿನ್ ಸಾಮರ್ಥ್ಯಕ್ಕೆ ಅನುಗುಣವಾಗಿ ಎಥೆನಾಲ್ ಮಿಶ್ರಣ ಮಾಡುವುದು ಅಗತ್ಯ. ಸಾಮಾನ್ಯ ವಾಹನಗಳ ಎಂಜಿನ್‌ಗಳಿಗೆ ಶೇ.20ರಷ್ಟು ಎಥೆನಾಲ್ ಮಿಶ್ರಣ ಸೂಕ್ತ. ಕೆಲವು ಮಾಡಿಫೈಡ್ ಎಂಜಿನ್‌ಗಳು ಶೇ.25ರಿಂದ 30ರಷ್ಟು ಎಥೆನಾಲ್ ಮಿಶ್ರಣ …

Read More »