Breaking News

Daily Archives: ನವೆಂಬರ್ 11, 2026

ಬೆಂಗಳೂರಲ್ಲಿ ದೀಪಾವಳಿ ಪಟಾಕಿ ಅವಘಡ; ಪಟಾಕಿ ಸಿಡಿದು ಗಂಭೀರ ಗಾಯಗೊಂಡ ಗರ್ಭಿಣಿ

ಬೆಂಗಳೂರು: ನಗರದಲ್ಲಿ ದೀಪಾವಳಿ ಪಟಾಕಿ ಅವಘಡಕ್ಕೆ ಇಂದು ಕೂಡ 80 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಪಟಾಕಿ ಸಿಡಿದು ಗರ್ಭಿಣಿ ಗಂಭೀರ ಗಾಯಗೊಂಡಿದ್ದಾರೆ. ಪಟಾಕಿಯಿಂದ ಗಾಯಗೊಂಡು ನಾರಾಯಣ ನೇತ್ರಾಲಯದಲ್ಲಿ ದಾಖಲಾದವರ ಸಂಖ್ಯೆ 48 ಕ್ಕೆ ಏರಿಕೆಯಾಗಿದೆ. 22 ಮಂದಿ ವಯಸ್ಕರು, 26 ಮಕ್ಕಳು ಗಾಯಗೊಂಡಿದ್ದಾರೆ. ಈ ಪೈಕಿ ಇಬ್ಬರಿಗೆ ಶಸ್ತ್ರಚಿಕಿತ್ಸೆ ನೀಡಲಾಗಿದೆ. ಮತ್ತೊಂದು ಕಡೆ ದೇಹ ಸುಟ್ಟುಕೊಂಡವರ ಸಂಖ್ಯೆಯೂ ಏರಿಕೆಯಾಗಿದೆ. ವಿಕ್ಟೋರಿಯಾ ಸುಟ್ಟಗಾಯ ವಿಭಾಗದಲ್ಲಿ ರೋಗಿಗಳು ದಾಖಲಾಗಿದ್ದಾರೆ. ಇಲ್ಲಿಯವರೆಗೆ ಒಟ್ಟು …

Read More »

ಬರ ಪರಿಹಾರದ ಬಗ್ಗೆ ಗೊಂದಲ ಬೇಡ – ಎಲ್ಲ ಅರ್ಹ ರೈತರಿಗೂ 5,000 ರೂ. ನೆರವು: ಸಿಎಂ ಸ್ಪಷ್ಟನೆ

ಬೆಂಗಳೂರು: ಬರ ಪರಿಹಾರದ ಬಗ್ಗೆ ಗೊಂದಲ ಬೇಡ. ಎಲ್ಲ ಅರ್ಹ ರೈತರಿಗೂ 5,000 ರೂ. ನೆರವು ನೀಡಲಾಗುವುದು ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ. ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಸಿಎಂ, ರಾಜ್ಯದ ರೈತ ಬಾಂಧವರಲ್ಲಿ ಬರ ಪರಿಹಾರದ ಕುರಿತು ಯಾವುದೇ ಗೊಂದಲ ಬೇಡ. ಮೊದಲ ಕಂತಿನಲ್ಲಿ ಬಿಡುಗಡೆಯಾಗಿರುವ ಹಣವೇ ಅಂತಿಮವಲ್ಲ. SDRF/NDRF ನಿಯಮಗಳಡಿ ಮಳೆಯಾಶ್ರಿತ, ನೀರಾವರಿ ಹಾಗೂ ಬಹುವಾರ್ಷಿಕ ಬೆಳೆಗಳಿಗೆ ಕ್ರಮವಾಗಿ ₹1,500, ₹2,600 ಮತ್ತು ₹3,200 ಕನಿಷ್ಠ ಪರಿಹಾರ …

Read More »

11 ದಿನದಲ್ಲಿ 30 ಲಕ್ಷಕ್ಕೂ ಅಧಿಕ ಭಕ್ತರಿಂದ ಹಾಸನಾಂಬೆ ದರ್ಶನ – ಇಂದು ದೇವಾಲಯದ ಗರ್ಭಗುಡಿ ಬಾಗಿಲು ಬಂದ್‌

ಹಾಸನ: ಕಳೆದ 11 ದಿನಗಳ ಅವಧಿಯಲ್ಲಿ ರಾಜ್ಯದ ನಾನಾ ಕಡೆಗಳಿಂದ ಆಗಮಿಸಿ 30 ಲಕ್ಷಕ್ಕೂ ಹೆಚ್ಚು ಭಕ್ತರು ಹಾಸನಾಂಬೆ ದೇವಿ ದರ್ಶನ ಪಡೆದಿದ್ದಾರೆ. ಇಂದು ಹಾಸನಾಂಬ ದೇವಾಲಯದ  ಗರ್ಭಗುಡಿ ಬಾಗಿಲು ಬಂದ್‌ ಆಗಲಿದೆ. ಕೊನೆ ದಿನವಾದ್ದರಿಂದ ಇಂದು ಬೆಳಗ್ಗೆ 6 ಗಂಟೆಯವರೆಗೆ ಭಕ್ತರು ನಿರಂತರ ಹಾಸನಾಂಬೆ ದರ್ಶನ ಪಡೆದರು. ಇಂದು ಮಧ್ಯಾಹ್ನ 12 ಗಂಟೆ ನಂತರ ಶಾಸ್ತ್ರೋಕ್ತವಾಗಿ ದೇವಾಲಯದ ಗರ್ಭಗುಡಿ ಬಾಗಿಲು ಮುಚ್ಚಲಿದೆ. ಕೆಲವೇ ಕ್ಷಣಗಳಲ್ಲಿ ಸಿದ್ದೇಶ್ವರಸ್ವಾಮಿ ಕೆಂಡೋತ್ಸವ ನೆರವೇರಲಿದೆ. …

Read More »

ದೀಪಾವಳಿ ಪಟಾಕಿ ಎಫೆಕ್ಟ್; ಸಿಲಿಕಾನ್ ಸಿಟಿಯಲ್ಲಿ ಆವರಿಸಿದ ವಿಷಗಾಳಿ

ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮದ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನಲ್ಲಿ (Bengaluru Airpallution) ವಾಯು ಮಾಲಿನ್ಯದ ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಭಾರಿ ಪ್ರಮಾಣದಲ್ಲಿ ಪಟಾಕಿ ಸಿಡಿಸಿರುವುದರಿಂದ ನಗರದ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿತ ಕಂಡಿದ್ದು, ಮಾಲಿನ್ಯದ ಪ್ರಮಾಣದಲ್ಲಿ ಸುಮಾರು ಶೇ. 30ರಷ್ಟು ಏರಿಕೆ ದಾಖಲಾಗಿದೆ. ಸದ್ಯ ನಗರದ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕ (AQI) 179 ಕ್ಕೆ ತಲುಪಿದ್ದು, ಸೋಮವಾರದಂದು ಇದು ಗರಿಷ್ಠ 186 ಕ್ಕೆ ಏರಿಕೆಯಾಗಿತ್ತು. …

Read More »