ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಪತ್ನಿಯ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಭೀಕರ ಘಟನೆ ನಡೆದಿದೆ. ಕಚೇರಿಗೆ ಆಗಮಿಸುತ್ತಿದ್ದ ಉದ್ಯಮಿ ಮೇಲೆ ಬೈಕ್ನಲ್ಲಿ ಬಂದಿದ್ದ ನಾಲ್ಕೈದು ಮಂದಿಯ ತಂಡ ಏಕಾಏಕಿ ದಾಳಿ ನಡೆಸಿ ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದೆ. ಕೊಲೆಯಾದ ಉದ್ಯಮಿಯನ್ನು 35 ವರ್ಷದ ಚರಣ್ ಎಂದು ಗುರುತಿಸಲಾಗಿದೆ. ಮೃತ ಚರಣ್ ‘ಧಣಿ ಪ್ರಾಪರ್ಟಿಸ್’ ಸಂಸ್ಥೆಯ ಮಾಲೀಕರಾಗಿದ್ದು ಇಂದು ಬೆಳಗ್ಗೆ ಸುಮಾರು 10.45ರ ವೇಳೆಗೆ ಕಚೇರಿಗೆ ಬರುತ್ತಿದ್ದಾಗ ದುಷ್ಕರ್ಮಿಗಳು …
Read More »Daily Archives: ನವೆಂಬರ್ 14, 2026
ಕಬ್ಬು ಬೆಳೆಗಾರರ ಹಿತ ಕಾಯುವಲ್ಲಿ ಡಿಕೆಶಿ ಸರ್ಕಾರ ವಿಫಲ: ಕೋಡಿಹಳ್ಳಿ ಚಂದ್ರಶೇಖರ್
ಬೆಳಗಾವಿ: ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಲ್ಪಿಸುವಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರೈತರ ಹಿತದೃಷ್ಟಿಯಿಂದ ನಿರ್ಧಾರ ಕೈಗೊಳ್ಳುವ ಬದಲು ಕಾರ್ಖಾನೆ ಮಾಲೀಕರ ಪರವಾಗಿ ಸರ್ಕಾರ ನಡೆದುಕೊಳ್ಳುತ್ತಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ವಾಗ್ದಾಳಿ ನಡೆಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತ ಹೋರಾಟಗಾರರ ಮೂಲಕವೇ ಸಕ್ಕರೆ ಕಾರ್ಖಾನೆ ಮಾಲೀಕರ ಬೇಡಿಕೆಗಳನ್ನು ಪ್ರತಿಪಾದಿಸುವ ಪ್ರಯತ್ನ …
Read More »ಬೆಳಗಾವಿಯಲ್ಲಿ ಪಟಾಕಿ ಸಿಡಿದು ಮನೆಗೆ ಬೆಂಕಿ: ಡೆಕೋರೇಷನ್ ವಸ್ತುಗಳು ಸುಟ್ಟು ಭಸ್ಮ
ಬೆಳಗಾವಿ: ಪಟಾಕಿ ಸಿಡಿದ ಪರಿಣಾಮ ಮನೆಯೊಂದಕ್ಕೆ ಬೆಂಕಿ ತಗುಲಿ, ಮನೆಯಲ್ಲಿದ್ದ ಅಲಂಕಾರಿಕ ವಸ್ತುಗಳು ಸುಟ್ಟು ಕರಕಲಾದ ಘಟನೆ ರಾಯಬಾಗ ಪಟ್ಟಣದ ದತ್ತ ಮಂದಿರದ ಸಮೀಪ ಸಂಭವಿಸಿದೆ. ಪಟಾಕಿ ಸಿಡಿದ ಬೆನ್ನಲ್ಲೇ ಸಮೀಪದ ಮನೆಯೊಂದಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಾರ್ಧದಲ್ಲೇ ಬೆಂಕಿಯ ಕೆನ್ನಾಲಿಗೆ ವ್ಯಾಪಿಸಿದೆ. ಮನೆಯಲ್ಲಿದ್ದ ಡೆಕೋರೇಷನ್ಗೆ ಬಳಸುವ ವಿವಿಧ ಅಲಂಕಾರಿಕ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಬೆಂಕಿಯ ತೀವ್ರತೆಗೆ ವಸ್ತುಗಳು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಮನೆಗೂ ಹಾನಿಯಾಗಿದೆ. ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಸ್ಥಳೀಯರು …
Read More »ಬೆಳಗಾವಿಯ ಅಲಕನೂರ ಕರಿಸಿದ್ದೇಶ್ವರ ದೇವಸ್ಥಾನದ ಆನೆ ಧ್ರುವ ಇನ್ನಿಲ್ಲ
ಬೆಳಗಾವಿ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಅಲಕನೂರ ಗ್ರಾಮದ ಕರಿಸಿದ್ದೇಶ್ವರ ದೇವಸ್ಥಾನದ ಪ್ರೀತಿಯ ಆನೆ ಧ್ರುವ (ರಾಜಾ) ಇನ್ನಿಲ್ಲ. ಕಳೆದ 20 ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ 32 ವರ್ಷದ ಗಂಡಾನೆ, ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಬೆಳಗಿನ ಜಾವ ಕೊನೆಯುಸಿರೆಳೆದಿದೆ. ಸುಮಾರು 25 ವರ್ಷಗಳ ಹಿಂದೆ ದೇವಸ್ಥಾನಕ್ಕೆ ಕರೆತರಲಾಗಿದ್ದ ಧ್ರುವ, ಅಂದಿನಿಂದಲೇ ಗ್ರಾಮಸ್ಥರು ಹಾಗೂ ಭಕ್ತರ ಪ್ರೀತಿಗೆ ಪಾತ್ರವಾಗಿತ್ತು. ದೇವಸ್ಥಾನದ ಧಾರ್ಮಿಕ ಕಾರ್ಯಕ್ರಮಗಳು ಸೇರಿದಂತೆ ಗ್ರಾಮದ ಹಲವು ಆಚರಣೆಗಳಲ್ಲಿ ಪ್ರಮುಖ ಆಕರ್ಷಣೆಯಾಗಿದ್ದ …
Read More »9ನೇ ವಯಸ್ಸಿನಲ್ಲೇ ವಿಶ್ವದಾಖಲೆಗಳ ಸರದಾರನಾದ ಪುಟ್ಟ ಅನುಜ್ಗೆ ಲಕ್ಷ್ಮೀ ಹೆಬ್ಬಾಳಕರ್ ಸನ್ಮಾನ
ಬೆಳಗಾವಿ: ಸಾಧನೆಗೆ ವಯಸ್ಸಿನ ಮಿತಿಯಿಲ್ಲ ಎಂಬುದನ್ನು ಕೇವಲ 9ನೇ ವಯಸ್ಸಿನಲ್ಲೇ ಸಾಬೀತುಪಡಿಸಿರುವ ಪುಟ್ಟ ಸ್ಕೇಟಿಂಗ್ ಪ್ರತಿಭೆ ಅನುಜ್ ಶ್ರೀಕಾಂತ್ ಬೆಳಗಾಂವ್ಕರ್ ಅವರನ್ನು ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಿದರು. ಪುಣೆಯ ಅಭಿನವ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ 3ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅನುಜ್, ಮೂಲತಃ ಬೆಳಗಾವಿ ಗ್ರಾಮೀಣ ಕ್ಷೇತ್ರದ ಅತಿವಾಡ ಗ್ರಾಮದ ಬೆಳಗಾಂವ್ಕರ್ ಕುಟುಂಬದ ಕುಡಿ. ಮಾರುತಿ ಸಾತೇರಿ …
Read More »ಮುನವಳ್ಳಿಯಲ್ಲಿ ಕಾಂಗ್ರೆಸ್ಗೆ ಬಲ: ಇಬ್ಬರು ಪುರಸಭೆ ಸದಸ್ಯರು ಪಕ್ಷ ಸೇರ್ಪಡೆ
ಬೆಳಗಾವಿ: ಸವದತ್ತಿ ತಾಲೂಕಿನ ಮುನವಳ್ಳಿ ಪಟ್ಟಣದಲ್ಲಿ ಬಿಜೆಪಿಯ ಓರ್ವ ಹಾಗೂ ಪಕ್ಷೇತರ ಓರ್ವ ಪುರಸಭೆ ಸದಸ್ಯರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮತ್ತು ಸ್ಥಳೀಯ ನಾಯಕತ್ವದ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಪುರಸಭೆ ಸದಸ್ಯೆ ಮಮತಾಜ್ ಫ. ಚೋಪದಾರ್ ಹಾಗೂ ಪಕ್ಷೇತರ ಪುರಸಭೆ ಸದಸ್ಯೆ ಶಾಹಿದಾ ಮ. ಗಡಾದ್ ಅವರು ಅಧಿಕೃತವಾಗಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. ರಾಜ್ಯ ಕಾಂಗ್ರೆಸ್ …
Read More »ಬೆಳಗಾವಿಯದ್ದು ಎಲ್ಲರನ್ನೂ ಒಳಗೊಳ್ಳುವ ಸಂಸ್ಕೃತಿ ಜಿಲ್ಲೆಯ ಉತ್ಪನ್ನಗಳಿಗೆ ಜಾಗತಿಕ ಮಾರುಕಟ್ಟೆಯಲ್ಲಿ ವಿಫುಲ ಅವಕಾಶ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್
ಬೆಳಗಾವಿ: ಎಲ್ಲರನ್ನೂ ಒಳಗೊಳ್ಳುವ ಸಂಸ್ಕೃತಿ, ಶ್ರೀಮಂತ ಉದ್ಯಮ ಪರಂಪರೆ ಹಾಗೂ ವೈವಿಧ್ಯಮಯ ಉತ್ಪನ್ನಗಳಿಗೆ ಹೆಸರಾದ ಬೆಳಗಾವಿ ಜಿಲ್ಲೆಗೆ ಜಾಗತಿಕ ಮಾರುಕಟ್ಟೆಯಲ್ಲಿ ವಿಫುಲ ಅವಕಾಶಗಳಿವೆ. ಜಿಲ್ಲೆಯ ಉದ್ಯಮಿಗಳು, ಉತ್ಪಾದಕರು ಹಾಗೂ ಸಾರ್ವಜನಿಕರು ಒಗ್ಗಟ್ಟಿನಿಂದ ಪ್ರಯತ್ನಿಸಿದರೆ ಬೆಳಗಾವಿಯ ಅಭಿವೃದ್ಧಿಗೆ ಇನ್ನಷ್ಟು ವೇಗ ನೀಡಬಹುದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು. ಬೆಳಗಾವಿ ಅಂಚೆ ವಿಭಾಗ ಹಾಗೂ ಬೆಳಗಾವಿ ವಾಣಿಜ್ಯೋದ್ಯಮ ಸಂಸ್ಥೆ (ಬಿಸಿಸಿಐ)ಯ ಸಂಯುಕ್ತಾಶ್ರಯದಲ್ಲಿ ನಗರದ ಚೇಂಬರ್ ಆಫ್ ಕಾಮರ್ಸ್ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ …
Read More »ಬೆಳಗಾವಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿದ ಪೊಲೀಸ್ ಕಮಿಷನರ್: ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ
ಬೆಳಗಾವಿ: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ನವೆಂಬರ್ 15ರಂದು ನಡೆಯಲಿರುವ 2026-27ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಗರದ ಒಟ್ಟು 34 ಪರೀಕ್ಷಾ ಕೇಂದ್ರಗಳಲ್ಲಿ ನವೆಂಬರ್ 15ರಂದು ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಹಾಗೂ ಮಧ್ಯಾಹ್ನ 2.30ರಿಂದ ಸಂಜೆ 4 ಗಂಟೆಯವರೆಗೆ ಪರೀಕ್ಷೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲೂ …
Read More »
Laxmi News 24×7