Breaking News

Daily Archives: ನವೆಂಬರ್ 17, 2026

ರೈತರ ಸಾಲ ವಸೂಲಾತಿಗೆ ಒತ್ತಡ ಹೇರಬೇಡಿ; ಮರುಪಾವತಿಗೆ ಕಾಲಾವಕಾಶ ನೀಡಿ: ಜಗದೀಶ್ ಶೆಟ್ಟರ್ ಎಚ್ಚರಿಕೆ

ಬೆಳಗಾವಿ: ಬರಗಾಲದ ಪರಿಸ್ಥಿತಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಸಾಲ ವಸೂಲಾತಿಗೆ ಬ್ಯಾಂಕ್ ಅಧಿಕಾರಿಗಳು ಒತ್ತಡ ಹೇರದೆ, ಮಾನವೀಯ ದೃಷ್ಟಿಕೋನದಿಂದ ಸ್ಪಂದಿಸಬೇಕು. ರೈತರ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಸಾಲ ಮರುಪಾವತಿಗೆ ಸೂಕ್ತ ಕಾಲಾವಕಾಶ ನೀಡಬೇಕು. ರೈತರಿಗೆ ಅನಗತ್ಯ ಕಿರುಕುಳ ನೀಡಿದರೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಂಸದ ಜಗದೀಶ್ ಶೆಟ್ಟರ್ ಬ್ಯಾಂಕ್ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ನಡೆದ 2026–27ನೇ ಸಾಲಿನ ತೃತೀಯ ತ್ರೈಮಾಸಿಕ …

Read More »

ಬೆಳಗಾವಿಯಲ್ಲಿ ಇಂದು 9 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯ: ಹಲವು ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಬೆಳಗಾವಿ: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ (ಹೆಸ್ಕಾಂ) ವತಿಯಿಂದ ಮೂರನೇ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ನವೆಂಬರ್ 17ರಂದು ಬೆಳಗಾವಿ ನಗರದ ವಿವಿಧ ಪ್ರದೇಶಗಳಲ್ಲಿ ಬೆಳಿಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ನಗರದ ವಿವಿಧ ಉಪಕೇಂದ್ರಗಳ ವ್ಯಾಪ್ತಿಯಲ್ಲಿ ನಿರ್ವಹಣಾ ಕಾಮಗಾರಿ ನಡೆಯಲಿರುವುದರಿಂದ ಹಲವು ಬಡಾವಣೆಗಳು, ವಾಣಿಜ್ಯ ಪ್ರದೇಶಗಳು ಹಾಗೂ ಪ್ರಮುಖ ಸರ್ಕಾರಿ ಕಚೇರಿಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ. …

Read More »

ಗಾಂಜಾ ಸೇವನೆ ಪ್ರಕರಣಕ್ಕೆ ವಿಭಿನ್ನ ಶಿಕ್ಷೆ: ಪೊಲೀಸರ ಜೊತೆ ರಸ್ತೆಗಿಳಿದ ಆರೋಪಿ ಮಾಡಿದ್ದೇನು ಗೊತ್ತಾ?

ಸಾಮಾನ್ಯವಾಗಿ ಅಪರಾಧಿಗಳಿಗೆ ದಂಡ ಅಥವಾ ಜೈಲು ಶಿಕ್ಷೆ ವಿಧಿಸುವುದನ್ನು ನೋಡಿದ್ದೇವೆ. ಆದರೆ, ಗಾಂಜಾ ಸೇವನೆ ಪ್ರಕರಣದಲ್ಲಿ ನ್ಯಾಯಾಲಯ ನೀಡಿದ ಶಿಕ್ಷೆ ಮಾತ್ರ ವಿಭಿನ್ನವಾಗಿದೆ. ತಪ್ಪು ಮಾಡಿದ ವ್ಯಕ್ತಿಗೆ ಪೊಲೀಸರ ಜೊತೆಗೇ ಸಾರ್ವಜನಿಕ ಸೇವೆ ಮಾಡುವಂತೆ ಆದೇಶಿಸಲಾಗಿದೆ. ಅದರಂತೆ ಆರೋಪಿ ಸಂಚಾರಿ ಪೊಲೀಸರೊಂದಿಗೆ ರಸ್ತೆಗಿಳಿದು ವಾಹನಗಳ ಸಂಚಾರ ನಿಯಂತ್ರಿಸಿದ್ದಾರೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸಿದ್ದಾಪುರ ಪಟ್ಟಣದಲ್ಲಿ ಈ ಅಪರೂಪದ ಘಟನೆ ನಡೆದಿದೆ. ಗಾಂಜಾ ಸೇವನೆ ಪ್ರಕರಣದಲ್ಲಿ ಸಿದ್ದಾಪುರ ನಿವಾಸಿ ಆಸೀಮ್ …

Read More »

ಮಹಾದೇವ ಭಾಂದುರ್ಗೆ ಇನ್ನಿಲ್ಲ

 ಬೆಳಗಾವಿ: ಭಾಗ್ಯನಗರ- ಅನಗೋಳ ಪ್ರದೇಶದ ಪ್ರತಿಷ್ಠಿತ ನಾಗರಿಕರೂ, ಭಾಂದುರ್ಗೆ ಮೆಡಿಕಲ್ಸ್ ಮಾಲಿಕರೂ ಆಗಿದ್ದ ಮಹಾದೇವ ರಾಮಚಂದ್ರ ಭಾಂದುರ್ಗೆ (69) ಅವರು ಸೋಮವಾರ (ನ.16) ಬೆಳಗಿನ ಜಾವ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರರು, ಸೊಸೆಯಂದಿರು ಹಾಗೂ ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು ಬಳಗವಿದೆ. ಅವರ ಅಂತ್ಯಕ್ರಿಯೆ ಸೋಮವಾರ ಸಂಜೆ ಚಿದಂಬರ ನಗರ ಸ್ಮಶಾನ ಭೂಮಿಯಲ್ಲಿ ನಡೆಯಿತು.ಮೃತರ ರಕ್ಷಾ ವಿಸರ್ಜನೆ ಕಾರ್ಯಕ್ರಮ ಗುರುವಾರ (ನ.19) ಬೆಳಗ್ಗೆ 8.30ಕ್ಕೆ ಚಿದಂಬರ ನಗರ ಸ್ಮಶಾನ …

Read More »

ಬೆಳಗಾವಿಯಲ್ಲಿ ಮೂರು ದಿನಗಳ ರಾಜ್ಯ ಮಟ್ಟದ ವಿಜ್ಞಾನ ಸಮ್ಮೇಳನ: ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿ: ಮಕ್ಕಳಲ್ಲಿ ವೈಜ್ಞಾನಿಕ ಚಿಂತನೆ ಹಾಗೂ ಸಂಶೋಧನಾ ಮನೋಭಾವ ಬೆಳೆಸುವ ಉದ್ದೇಶದಿಂದ ಬೆಳಗಾವಿಯಲ್ಲಿ ಡಿಸೆಂಬರ್ 27ರಿಂದ 29ರವರೆಗೆ ಮೂರು ದಿನಗಳ ಕಾಲ 6ನೇ ರಾಜ್ಯ ಮಟ್ಟದ ವಿಜ್ಞಾನ ಸಮ್ಮೇಳನ ಆಯೋಜಿಸಲಾಗುತ್ತಿದ್ದು, ಸಮ್ಮೇಳನವನ್ನು ಅಚ್ಚುಕಟ್ಟಾಗಿ ಮತ್ತು ಯಶಸ್ವಿಯಾಗಿ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ವಿಜ್ಞಾನ ಸಮ್ಮೇಳನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ …

Read More »