ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸರ್ಕಾರ ಬೃಹತ್ ಆಡಳಿತಾತ್ಮಕ ಬದಲಾವಣೆ ಮಾಡಿದ್ದು, ಬುಧವಾರ (ನ.18) ಒಟ್ಟು 32 ಐಪಿಎಸ್ (IPS) ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಪೊಲೀಸ್(Bengaluru City Police) ವ್ಯವಸ್ಥೆಯನ್ನು ಐದು ಪ್ರತ್ಯೇಕ ಕಮಿಷನರೇಟ್ಗಳಾಗಿ ವಿಭಜಿಸಿದ ಬೆನ್ನಲ್ಲೇ ಈ ಮಹತ್ವದ ವರ್ಗಾವಣೆ ಪ್ರಕ್ರಿಯೆ ನಡೆದಿದ್ದು, ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಸೀಮಾಂತ್ ಕುಮಾರ್ ಸಿಂಗ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ನಗರ ಎಡಿಜಿಪಿ ಹಾಗೂ ಪೊಲೀಸ್ …
Read More »Daily Archives: ನವೆಂಬರ್ 19, 2026
ಭೂ ಗ್ಯಾರಂಟಿ ಯೋಜನೆಯಡಿ ಇ-ಸ್ವತ್ತು 2.0ಗೆ ಸಚಿವ ಈಶ್ವರ್ ಖಂಡ್ರೆ ಚಾಲನೆ
ಬೆಂಗಳೂರು: ಭೂ ಗ್ಯಾರಂಟಿ ಯೋಜನೆಯಡಿ ಇ-ಸ್ವತ್ತು 2.0ಗೆ ಸಚಿವ ಈಶ್ವರ್ ಖಂಡ್ರೆ ಚಾಲನೆ ನೀಡಿದರು. ವಿಕಾಸಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರು ಇ-ಸ್ವತ್ತು ಅಭಿಯಾನಕ್ಕೆ ಚಾಲನೆ ನೀಡಿದರು. ಗ್ರಾಮಠಾಣಾ ವ್ಯಾಪ್ತಿಯಲ್ಲಿ ಮೊದಲು ಇ-ಸ್ವತ್ತು ನೀಡುವ ಅಭಿಯಾನ ಇದಾಗಿದೆ. ಈ ವೇಳೆ ಮಾತನಾಡಿದ ಸಚಿವರು, ಇದು ನಮ್ಮ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ. ಚುನಾವಣೆ ಮುನ್ನ ಕೊಟ್ಟ ಎಲ್ಲಾ ಭರವಸೆ ಈಡೇರಿಸಿದ್ದೇವೆ. ಗ್ರಾಮೀಣಾ ಭಾಗದ ಬಹುದಿನಗಳ ಬೇಡಿಕೆ. ಅವರದ್ದೇ ಸ್ವತ್ತು ಆಗಿದ್ರು ಅವರ ಬಳಿ …
Read More »ಪ್ರತಿ ಅನುದಾನದಲ್ಲೂ ಕೇಂದ್ರ ಅನ್ಯಾಯ ಮಾಡ್ತಿದೆ – ಎಂ.ಬಿ ಪಾಟೀಲ್ ಕಿಡಿ
ಬೆಂಗಳೂರು: ಬರ ಪರಿಹಾರದ ಬಗ್ಗೆ ಸುಪ್ರೀಂ ಕೋರ್ಟ್ಗೆ ಹೋಗುವ ಸಂಬಂಧ ಕೇಂದ್ರ ಸರ್ಕಾರದ ವಿರುದ್ಧ ಸಚಿವ ಎಂ.ಬಿ ಪಾಟೀಲ್ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೇಂದ್ರ ಪ್ರತಿ ಅನುದಾನದಲ್ಲೂ ಅನ್ಯಾಯ ಮಾಡುತ್ತಿದೆ. ಗ್ರಾಮಪಂಚಾಯ್ತಿ ಅನುದಾನ ಕೊಡ್ತಿಲ್ಲ. ಭದ್ರಾ ಮೇಲ್ದಂಡೆಗೆ 5300 ಕೋಟಿ ರೂ. ಕೊಡಲಿಲ್ಲ. ಕಳೆದ ಬಾರಿ ನಾವು ಕೋರ್ಟಿಗೆ ಹೋಗಿ ಅನುದಾನ ತರಬೇಕಾಯಿತು. ಈಗ ಮತ್ತೆ ಕೋರ್ಟ್ಗೆ ಹೋಗೋ ಸ್ಥಿತಿ ಬಂದಿದೆ ಎಂದಿದ್ದಾರೆ. ಇದರ ನಡುವೆ ಡಿಸಿಎಂ ಪರಮೇಶ್ವರ್, …
Read More »ಇ-ಕಾಮರ್ಸ್ ವೇದಿಕೆಗಳಲ್ಲಿ ಸ್ಫೋಟಕಗಳ ಮಾರಾಟ ನಿಷಿದ್ಧ – ವೆಬ್ಲಿಂಕ್ಗೆ ಬಿತ್ತು ಬರೋಬ್ಬರಿ 20 ಲಕ್ಷ ದಂಡ
ನವದೆಹಲಿ: ಆನ್ಲೈನ್ ವೇದಿಕೆಯಲ್ಲಿ ಸ್ಪೋಟಕಗಳ ಮಾರಾಟ ವಿರುದ್ಧ ವೆಬ್ಲಿಂಕ್ ಇನ್ ಪ್ರೈವೇಟ್ ಲಿಮಿಟೆಡ್ಗೆ 20 ಲಕ್ಷ ರೂ. ದಂಡ ವಿಧಿಸಿದ್ದ CCPA ಆದೇಶವನ್ನು ರಾಷ್ಟ್ರೀಯ ಗ್ರಾಹಕ ವಿವಾದ ಪರಿಹಾರ ಆಯೋಗ ಎತ್ತಿ ಹಿಡಿದಿದೆ. ನವದೆಹಲಿಯ ರಾಷ್ಟ್ರೀಯ ಗ್ರಾಹಕ ವಿವಾದ ಪರಿಹಾರ ಆಯೋಗ (NCDRC)ವು ExportersIndia.com ಅನ್ನು ನಿರ್ವಹಿಸುವ ‘ವೆಬ್ಲಿಂಕ್ ಇನ್ ಪ್ರೈವೇಟ್ ಲಿಮಿಟೆಡ್’ ಸಲ್ಲಿಸಿದ್ದ ಮೇಲ್ಮನವಿಗಳನ್ನು ವಜಾಗೊಳಿಸಿ ಮಹತ್ವದ ಆದೇಶ ನೀಡಿದೆ. ಏನಿದು ಪ್ರಕರಣ? ಇ-ಕಾಮರ್ಸ್ ವೇದಿಕೆಯಲ್ಲಿ ನಿಯಂತ್ರಿತ ಮತ್ತು …
Read More »ಶಬರಿಮಲೆಯಲ್ಲಿ ಕ್ಯೂ ನಿಲ್ಲುವ ಅಗತ್ಯವಿಲ್ಲ – ಇನ್ಮುಂದೆ ಯಂತ್ರದ ಮೂಲಕ ಸಿಗಲಿದೆ ಅರವಣ, ಅಪ್ಪಂ ಪ್ರಸಾದ
ಶಬರಿಮಲೆ: ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರ ಅನುಕೂಲಕ್ಕಾಗಿ ತಿರುವಾಂಕೂರು ದೇವಸ್ವಂ ಮಂಡಳಿಯು ಮತ್ತೊಂದು ಮಹತ್ವದ ಡಿಜಿಟಲ್ ಹೆಜ್ಜೆಯಿಟ್ಟಿದೆ. ಇನ್ನು ಮುಂದೆ ಭಕ್ತರು ಸರತಿ ಸಾಲಿನಲ್ಲಿ ಗಂಟೆಗಟ್ಟಲೆ ಕಾಯದೆ, ಹೊಸದಾಗಿ ಅಳವಡಿಸಲಾಗಿರುವ ಸ್ವಯಂಚಾಲಿತ ವಿತರಣಾ ಯಂತ್ರಗಳ ಮೂಲಕ ಅರವಣ(Aravana) ಮತ್ತು ಅಪ್ಪಂ ಪ್ರಸಾದವನ್ನುಸುಲಭವಾಗಿ ಖರೀದಿಸಬಹುದಾಗಿದೆ. ವಿಶೇಷವೆಂದರೆ, ಈ ಯಂತ್ರಗಳಲ್ಲಿ ಯುಪಿಐ (UPI) ಮೂಲಕ ಡಿಜಿಟಲ್ ಪಾವತಿ ಮಾಡುವ ಸೌಲಭ್ಯವನ್ನೂ ಕಲ್ಪಿಸಲಾಗಿದೆ. ಮಂಗಳವಾರ ಸನ್ನಿಧಾನದಲ್ಲಿ ದೇವಸ್ವಂ ಮಂಡಳಿ ಅಧ್ಯಕ್ಷ ಜಯಕುಮಾರ್ …
Read More »ಜಾಲಿ ರೈಡ್ಗೆ ಬಂದಿದ್ದ ನಾಲ್ಕು ದುರಂತ ಅಂತ್ಯ
ಚಿಕ್ಕಬಳ್ಳಾಪುರ: ಕಾರು ಹಾಗೂ ಬೊಲೆರೋ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಜಾಲಿ ರೈಡ್ಗೆ ಬಂದಿದ್ದ ನಾಲ್ಕು ಜನ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ನಂದಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ನಡೆದಿದೆ. ಮೃತ ಯುವಕರನ್ನು ಯಲಹಂಕದ ಕೊಂಡಪ್ಪ ಬಡಾವಣೆ ನಿವಾಸಿಗಳಾದ ವೈಷ್ಣವ್, ಸಿದ್ದಾರ್ಥ್, ಶ್ರೇಯಸ್ ಹಾಗೂ ಯಶವಂತ್ ಎಂದು ಗುರುತಿಸಲಾಗಿದೆ. ಗಾಯಾಳು ದಿನೇಶ್ನನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದ್ದು, ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಬೆಟ್ಟ ಹಲಸೂರು …
Read More »ಬುಲೆಟ್ ರೈಲು ಯೋಜನೆ ವೆಚ್ಚ ದುಪ್ಪಟ್ಟು: 2.02 ಲಕ್ಷ ಕೋಟಿಗೆ ಏರಿಕೆ
ಅಹಮದಾಬಾದ್: ದೇಶದ ಮಹತ್ವಾಕಾಂಕ್ಷೆಯ ಅಹಮದಾಬಾದ್-ಮುಂಬೈ ಹೈ-ಸ್ಪೀಡ್ ರೈಲು ಕಾರಿಡಾರ್ ಯೋಜನೆಯ ಅಂದಾಜು ವೆಚ್ಚವು ಆರಂಭಿಕ ಮೊತ್ತಕ್ಕಿಂತ ಬಹುತೇಕ ದುಪ್ಪಟ್ಟಾಗಿದೆ. ಮಾರ್ಚ್ 2026ರ ಅಂತ್ಯದ ವೇಳೆಗೆ ಈ ಯೋಜನೆಗಾಗಿ ರಾಷ್ಟ್ರೀಯ ಹೈ-ಸ್ಪೀಡ್ ರೈಲು ನಿಗಮ ನಿಯಮಿತ (NHSRCL) ಈಗಾಗಲೇ 92,761 ಕೋಟಿ ಖರ್ಚು ಮಾಡಿದೆ ಎಂಬ ಮಹತ್ವದ ಮಾಹಿತಿ ಮಾಹಿತಿ ಹಕ್ಕು ಕಾಯ್ದೆಯಡಿ (RTI) ಬಹಿರಂಗವಾಗಿದೆ. ಮಹಾರಾಷ್ಟ್ರ, ಗುಜರಾತ್ ಹಾಗೂ ಕೇಂದ್ರಾಡಳಿತ ಪ್ರದೇಶವಾದ ದಾದ್ರಾ ಮತ್ತು ನಗರ ಹವೇಲಿ ಮೂಲಕ ಹಾದುಹೋಗುವ …
Read More »ಕೈಕಾಲು ಕಟ್ಟಿ ರಸ್ತೆಯಲ್ಲೇ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ಸಾವು ಬದುಕಿನ ನಡುವೆ ಹೋರಾಡಿದ ವ್ಯಕ್ತಿ
ನಗರದಲ್ಲಿ ಬೆಚ್ಚಿಬೀಳಿಸುವ ಕೃತ್ಯವೊಂದು ಬೆಳಕಿಗೆ ಬಂದಿದೆ. ವ್ಯಕ್ತಿಯ ಕೈಕಾಲುಗಳನ್ನು ಕಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದುಷ್ಕರ್ಮಿಗಳು ಆತನನ್ನು ನಡು ರಸ್ತೆಯಲ್ಲಿ ಬಿಟ್ಟು ಪರಾರಿಯಾಗಿದ್ದಾರೆ. ಸುಟ್ಟ ಗಾಯಗಳಿಂದ ನರಳುತ್ತಿದ್ದ ವ್ಯಕ್ತಿ ರಸ್ತೆಯ ಪಕ್ಕದಲ್ಲಿ ಬಿದ್ದಿರುವುದನ್ನು ಕಂಡು ಪೊಲೀಸರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪಾದರಾಯನಪುರದ ನಿವಾಸಿ ಮಹಮ್ಮದ್ ಗಾಯಾಳು ಎಂದು ಗುರುತಿಸಲಾಗಿದೆ. ಬೆಂಗಳೂರಿನ ಗಿರಿನಗರದ ವೀರಭದ್ರ ಸಿಗ್ನಲ್ ಬಳಿ ಬೆಳಗ್ಗೆ ಸುಮಾರು 6.30ರ ವೇಳೆಗೆ ಈ ಘಟನೆ ನಡೆದಿದೆ. ಯುವಕರ ಗುಂಪೊಂದು …
Read More »ಬೆಳಗಾವಿಯಲ್ಲಿ ಸಲೂನ್ ಹೆಸರಿನಲ್ಲಿ ವೇಶ್ಯಾವಾಟಿಕೆ ದಂಧೆ ಬಯಲು: ಸಿಸಿಬಿ ಪೊಲೀಸರ ದಾಳಿ, ನಾಲ್ವರು ಯುವತಿಯರ ರಕ್ಷಣೆ
ಬೆಳಗಾವಿ: ನಗರದ ಪ್ರತಿಷ್ಠಿತ ಪ್ರದೇಶಗಳಲ್ಲಿ ಒಂದಾದ ಆರ್ಪಿಡಿ ಕ್ರಾಸ್ನಲ್ಲಿ ಸಲೂನ್ ಮತ್ತು ಸ್ಪಾ ಹೆಸರಿನಲ್ಲಿ ಅಕ್ರಮ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ನಾಲ್ವರು ಯುವತಿಯರನ್ನು ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ನಗರದ ಆರ್ಪಿಡಿ ಕ್ರಾಸ್ನಲ್ಲಿರುವ ಡಿವೈನ್ ಸಲೂನ್ ಆ್ಯಂಡ್ ಸ್ಪಾದಲ್ಲಿ ಕಾನೂನುಬಾಹಿರ ಚಟುವಟಿಕೆಗಳು ನಡೆಯುತ್ತಿವೆ ಎಂಬ ಖಚಿತ ಮಾಹಿತಿ ಸಿಸಿಬಿ ಪೊಲೀಸರಿಗೆ ಲಭ್ಯವಾಗಿತ್ತು. ಈ ಮಾಹಿತಿಯ ಆಧಾರದ ಮೇಲೆ ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ …
Read More »ಸ್ಕೇಟಿಂಗ್ ಸ್ಪರ್ಧೆಯ ಮೊದಲ ದಿನವೇ ಪದಕಗಳ ಬೇಟೆ: ದಕ್ಷಿಣ ವಲಯದ ಕ್ರೀಡಾಪಟುಗಳ ಭರ್ಜರಿ ಪ್ರದರ್ಶನ
ಬೆಳಗಾವಿಯಲ್ಲಿ ನಡೆಯುತ್ತಿರುವ ಸಿಬಿಎಸ್ಇ ರಾಷ್ಟ್ರೀಯ ಸ್ಕೇಟಿಂಗ್ ಚಾಂಪಿಯನ್ಶಿಪ್-2026ರ ಮೊದಲ ದಿನವೇ ಕ್ರೀಡಾಪಟುಗಳು ತಮ್ಮ ಸಾಮರ್ಥ್ಯ ಪ್ರದರ್ಶಿಸಿದ್ದಾರೆ. ಅದರಲ್ಲೂ ದಕ್ಷಿಣ ವಲಯದ ಸ್ಕೇಟರ್ಗಳು ವಿವಿಧ ವಿಭಾಗಗಳಲ್ಲಿ ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಗೆದ್ದು ಗಮನ ಸೆಳೆದಿದ್ದಾರೆ. ದೇಶದ ವಿವಿಧ ಭಾಗಗಳಿಂದ ಆಗಮಿಸಿರುವ ಪ್ರತಿಭಾವಂತ ಕ್ರೀಡಾಪಟುಗಳ ನಡುವೆ ತೀವ್ರ ಪೈಪೋಟಿ ನಡೆದಿದ್ದು, ವೇಗ, ಕೌಶಲ ಮತ್ತು ಸಮತೋಲನದ ಪ್ರದರ್ಶನ ಪ್ರೇಕ್ಷಕರ ಗಮನ ಸೆಳೆದಿದೆ. ಬೆಳಗಾವಿಯ ಪ್ರತಿಷ್ಠಿತ ಬಿರ್ಲಾ ಇಂಟರ್ನ್ಯಾಷನಲ್ ಸ್ಕೂಲ್ ಮತ್ತು …
Read More »
Laxmi News 24×7