Breaking News

Daily Archives: ನವೆಂಬರ್ 20, 2026

ಬೆಳಗಾವಿ ಅಧಿವೇಶನಕ್ಕಾಗಿ ಆತ್ಮಹತ್ಯೆ ನಿಗ್ರಹ ದಳ ರಚನೆ

ಬೆಳಗಾವಿ: ನಗರದ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 2ರಿಂದ ಆರಂಭವಾಗಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ, ಪ್ರತಿಭಟನೆ ವೇಳೆ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬೆಳಗಾವಿ ನಗರ ಪೊಲೀಸ್ ಇಲಾಖೆಯಿಂದ ಆತ್ಮಹತ್ಯೆ ನಿಗ್ರಹ ದಳ  ರಚಿಸಲಾಗಿದೆ. ಅಧಿವೇಶನದ ಸಂದರ್ಭದಲ್ಲಿ ರಾಜ್ಯದ ವಿವಿಧ ರೈತಪರ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳು ಪ್ರತಿಭಟನೆ ನಡೆಸುವ ಸಾಧ್ಯತೆಯಿದೆ. ಈ ವೇಳೆ ಪ್ರತಿಭಟನಾಕಾರರು ಆತ್ಮಹತ್ಯೆಗೆ ಯತ್ನಿಸುವಂತಹ ಘಟನೆಗಳನ್ನು ತಡೆಯಲು ಪೊಲೀಸ್ ಸಿಬ್ಬಂದಿಯನ್ನು …

Read More »

ಧಾರವಾಡ–ಪಂಢರಪುರ ನಡುವೆ ವಿಶೇಷ ರೈಲು: ಬೆಳಗಾವಿ ಜನರಿಗೆ ಅನುಕೂಲ

ಬೆಳಗಾವಿ: ಏಕಾದಶಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ನೈರುತ್ಯ ರೈಲ್ವೆ ಧಾರವಾಡ ಮತ್ತು ಪಂಢರಪುರ ನಡುವೆ ಕಾಯ್ದಿರಿಸದ ವಿಶೇಷ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. ರೈಲು ಸಂಖ್ಯೆ 07339/07340 ಧಾರವಾಡ–ಪಂಢರಪುರ–ಧಾರವಾಡ ವಿಶೇಷ ರೈಲು ನವೆಂಬರ್ 20, 21 ಮತ್ತು 22ರಂದು ಎರಡೂ ಮಾರ್ಗಗಳಲ್ಲಿ ಸಂಚರಿಸಲಿದೆ. ಒಟ್ಟು ಮೂರು ಟ್ರಿಪ್‌ಗಳ ಸೇವೆ ಲಭ್ಯವಾಗಲಿದೆ. ರೈಲು ಸಂಖ್ಯೆ 07339 ಧಾರವಾಡದಿಂದ ಬೆಳಿಗ್ಗೆ 6 ಗಂಟೆಗೆ ಹೊರಟು ಅದೇ ದಿನ ಸಂಜೆ 4 …

Read More »

ಬೆಲೆ ಏರಿಕೆ ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ: ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ

ಬೆಳಗಾವಿ: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆಲೆ ಏರಿಕೆ ಹಾಗೂ ಜನಸಾಮಾನ್ಯರ ಮೇಲೆ ಹೆಚ್ಚುತ್ತಿರುವ ಆರ್ಥಿಕ ಹೊರೆಯನ್ನು ಖಂಡಿಸಿ ಬಿಜೆಪಿ ನೇತೃತ್ವದಲ್ಲಿ ಬೆಳಗಾವಿ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಮೆರವಣಿಗೆಯುದ್ದಕ್ಕೂ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಬೆಲೆ ಏರಿಕೆಯನ್ನು ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ …

Read More »

ಪುರುಷರಿಗಾಗಿ ಪ್ರತ್ಯೇಕ ಬಸ್ ಓಡಿಸಿ; ಬೆಳಗಾವಿಯಲ್ಲಿ ಪ್ರತಿಭಟನೆ

ಬೆಳಗಾವಿ: ಶಕ್ತಿ ಯೋಜನೆಯಿಂದಾಗಿ ಸರ್ಕಾರಿ ಬಸ್‌ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು, ಬಸ್‌ಗಳು ಸಂಪೂರ್ಣ ಭರ್ತಿಯಾಗುತ್ತಿವೆ. ಇದರಿಂದ ಪುರುಷ ಪ್ರಯಾಣಿಕರು ಬಸ್‌ಗಳಲ್ಲಿ ಪ್ರಯಾಣಿಸಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಆದ್ದರಿಂದ ಪುರುಷ ಪ್ರಯಾಣಿಕರಿಗಾಗಿ ಪ್ರತ್ಯೇಕ ಬಸ್‌ಗಳನ್ನು ಓಡಿಸಬೇಕು ಎಂದು ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಕಾರ್ಮಿಕ ಸಂಘಟನೆಯ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಕಾರ್ಮಿಕ ಸಂಘದ ಜಿಲ್ಲಾಧ್ಯಕ್ಷ ಮಹಾಂತೇಶ್ ಬಡಿಗೇರ್ ಅವರ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಸಂಘಟನೆಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು …

Read More »

ಪೆಟ್ರೋಲ್ ಗುಣಮಟ್ಟದ ಮೇಲೆ ಜಿಲ್ಲಾಡಳಿತ ನಿಗಾ: ಬೆಳಗಾವಿಯ 3 ಬಂಕ್‌ಗಳ ಮಾದರಿ ಪ್ರಯೋಗಾಲಯಕ್ಕೆ

ಬೆಳಗಾವಿ: ಎಥನಾಲ್ ಮಿಶ್ರಿತ ಪೆಟ್ರೋಲ್ ಬಳಕೆಯಿಂದ ವಾಹನಗಳ ಎಂಜಿನ್‌ಗಳಲ್ಲಿ ತಾಂತ್ರಿಕ ಸಮಸ್ಯೆಗಳು ಉಂಟಾಗುತ್ತಿವೆ ಎಂಬ ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಡಳಿತ ಪೆಟ್ರೋಲ್ ಗುಣಮಟ್ಟದ ಪರಿಶೀಲನೆಗೆ ಮುಂದಾಗಿದೆ. ನಗರದ ಮೂರು ಪೆಟ್ರೋಲ್ ಬಂಕ್‌ಗಳಿಂದ ಪೆಟ್ರೋಲ್ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ. ಗುರುವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್‌ನಲ್ಲಿ ಎಥನಾಲ್ ಮಿಶ್ರಣ ಮಾಡುವುದರಿಂದ ವಾಹನಗಳ ಎಂಜಿನ್‌ಗಳ ಕಾರ್ಯಕ್ಷಮತೆ ಕುಸಿಯುತ್ತಿದೆ ಹಾಗೂ ಕೆಲವು …

Read More »

ಗೃಹಲಕ್ಷ್ಮೀ ಹಣಕ್ಕಾಗಿ ಅಜ್ಜಿಯ ಕೊಲೆ ಮಾಡಿದ ಮೊಮ್ಮಗ; ಸುಳಿವು ನೀಡಿದ್ದು ಗೋಣಿ ಚೀಲ

ಬೆಳಗಾವಿ: ಗೃಹಲಕ್ಷ್ಮೀ ಯೋಜನೆಯ ಹಣದ ವಿಚಾರವಾಗಿ ಉಂಟಾದ ಜಗಳದ ಹಿನ್ನೆಲೆಯಲ್ಲಿ ಸ್ವಂತ ಅಜ್ಜಿಯನ್ನೇ ಕೊಲೆ ಮಾಡಿ, ಶವವನ್ನು ಎರಡು ಗೋಣಿ ಚೀಲಗಳಲ್ಲಿ ಕಲ್ಲುಗಳೊಂದಿಗೆ ಕಟ್ಟಿ ಡ್ಯಾಂನ ಹಿನ್ನೀರಿನಲ್ಲಿ ಎಸೆದಿದ್ದ ಮೊಮ್ಮಗನನ್ನು ಯಮಕನಮರಡಿ ಪೊಲೀಸರು ಬಂಧಿಸಿದ್ದಾರೆ. ಹುಕ್ಕೇರಿ ತಾಲೂಕಿನ ಅರಳಿಕಟ್ಟಿ ಗ್ರಾಮದ ಹಮ್ಮವ್ವಾ ಬಾಲಪ್ಪಾ ಸನದಿ (78) ಕೊಲೆಯಾದ ವೃದ್ಧೆ. ಅವರ ಸ್ವಂತ ಮೊಮ್ಮಗ ಭೀಮಪ್ಪಾ ರಾಮಪ್ಪಾ ಸನದಿ (20) ಕೊಲೆ ಆರೋಪದ ಮೇಲೆ ಬಂಧಿತನಾಗಿದ್ದಾನೆ. ಯಮಕನಮರಡಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಜಾವೀದ್ …

Read More »

ಚಳಿಗಾಲ ಅಧಿವೇಶನಕ್ಕೆ ಸುವರ್ಣ ವಿಧಾನಸೌಧ ಸಜ್ಜು

ಬೆಳಗಾವಿ: ಡಿಸೆಂಬರ್ 2ರಿಂದ ಆರಂಭವಾಗಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಗುರುವಾರ (ನ.19) ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲಿಸಿದರು. ಈ ವೇಳೆ ಅಧಿವೇಶನಕ್ಕೆ ಆಗಮಿಸುವ ಸಚಿವರು, ಶಾಸಕರು, ಅಧಿಕಾರಿಗಳು, ಸಿಬ್ಬಂದಿ ಹಾಗೂ ಮಾಧ್ಯಮ ಪ್ರತಿನಿಧಿಗಳಿಗೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಸುವರ್ಣ ವಿಧಾನಸೌಧದ ಮಧ್ಯಮ ಕೊಠಡಿ, ಬ್ಯಾಂಕ್ವೆಟ್ ಹಾಲ್ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಆಸನ ವ್ಯವಸ್ಥೆ, ಸ್ವಚ್ಛತೆ ಹಾಗೂ …

Read More »