Breaking News

Daily Archives: ನವೆಂಬರ್ 26, 2026

ಮಾಜಿ ಸಚಿವ ನಾಗೇಂದ್ರಗೆ ಸಿಐಡಿ ಕ್ಲೀನ್ ಚಿಟ್; ಆರೋಪಿಯಲ್ಲ ಈಗ ಸಾಕ್ಷಿ!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಬಹುಕೋಟಿ ಭ್ರಷ್ಟಾಚಾರ ಪ್ರಕರಣದಲ್ಲಿ ಮಾಜಿ ಸಚಿವ ನಾಗೇಂದ್ರಗೆ ಸಿಐಡಿ ಕ್ಲೀನ್ ಚಿಟ್ ನೀಡಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ) ಅಧಿಕಾರಿಗಳು ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಅಂತಿಮ ದೋಷಾರೋಪ ಪಟ್ಟಿ ಸಲ್ಲಿಸಿದೆ. ಹಗರಣದ ಆರೋಪ ಹೊತ್ತಿದ್ದ ಮಾಜಿ ಸಚಿವ ಬಿ. ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಬಸವರಾಜ್ ದದ್ದಲ್ ಅವರನ್ನು ಈ ಪ್ರಕರಣದಲ್ಲಿ ಸಿಐಡಿ …

Read More »

ಬಿಹಾರ ಶಾಸಕನ ಪುತ್ರಿಯ ಅದ್ಧೂರಿ ವಿವಾಹಕ್ಕೆ ಜನಸಾಗರ: 10 ಕಿ.ಮೀ. ಟ್ರಾಫಿಕ್ ಜಾಮ್!

ಪಾಟ್ನಾ: ಮದುವೆ ಸಂಭ್ರಮಕ್ಕೆ ಲಕ್ಷಾಂತರ ಜನರು ಹರಿದುಬಂದರೆ ಏನಾಗಬಹುದು? ಬಿಹಾರದ ಪ್ರಭಾವಿ ರಾಜಕಾರಣಿ, ಮೊಕಾಮಾ ಶಾಸಕ ಅನಂತ್ ಸಿಂಗ್  ಪುತ್ರಿ ಶಿವಾಂಗಿ ಸಿಂಗ್ ಅವರ ಅದ್ಧೂರಿ ವಿವಾಹ ಮಹೋತ್ಸವ ಇದಕ್ಕೆ ಸಾಕ್ಷಿಯಾಗಿದೆ. ನಿರೀಕ್ಷೆಗೂ ಮೀರಿ ಜನಸಾಗರವೇ ಹರಿದುಬಂದ ಪರಿಣಾಮ ಪಾಟ್ನಾ ಜಿಲ್ಲೆಯ ನದವಾನ್ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ ಬರೋಬ್ಬರಿ 10 ಕಿಲೋಮೀಟರ್‌ಗೂ ಹೆಚ್ಚು ದೂರ ಟ್ರಾಫಿಕ್ ಜಾಮ್  ಉಂಟಾಗಿ, ಇಡೀ ಪ್ರದೇಶವೇ ಜನಜಂಗುಳಿಯಿಂದ ಸ್ತಬ್ಧಗೊಂಡಿತ್ತು. ಬುಧವಾರ ನಡೆದ ಈ …

Read More »

ನಾವು ಜಗಳವೇ ಆಡಿಲ್ಲ, ಮುನಿಸು ಎಲ್ಲಿಂದ ಬಂತು? – ಸಿದ್ದು ಮನೆಯಲ್ಲಿ ಮಹದೇವಪ್ಪ ಮಾತು

ಮೈಸೂರು: ಕಳೆದ ನಾಲ್ಕು ತಿಂಗಳಿನಿಂದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಅಂತರ ಕಾಯ್ದುಕೊಂಡಿದ್ದ ಮಾಜಿ ಸಚಿವ ಡಾ. ಹೆಚ್‌.ಸಿ. ಮಹದೇವಪ್ಪ ಅವರು ಇಂದು ಮೈಸೂರಿನ ಕುವೆಂಪುನಗರದಲ್ಲಿರುವ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿ ಕುತೂಹಲ ಮೂಡಿಸಿದ್ದಾರೆ. ಗುರುವಾರ(ನ.26) ನಡೆಯಲಿರುವ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಸಿದ್ದರಾಮಯ್ಯ ಅವರು ಇಂದು ಸಂಜೆಯೇ ಮೈಸೂರಿಗೆ ಆಗಮಿಸಿದ್ದರು. ಈ ವೇಳೆ ಅವರ ನಿವಾಸಕ್ಕೆ ಭೇಟಿ ನೀಡಿದ ಡಾ. ಎಚ್.ಸಿ. ಮಹದೇವಪ್ಪ ಕೆಲಕಾಲ ಮಾತುಕತೆ …

Read More »

ಹಾವೇರಿಯಲ್ಲಿ ಸಿನಿಮಾದಲ್ಲಿ ಬಳಸುವ ನಕಲಿ ನೋಟುಗಳ ಚಲಾವಣೆಗೆ ಯತ್ನ..! ಎಟಿಎಂ ಯಂತ್ರಕ್ಕೇ ಟೋಪಿ ಹಾಕಲು ಹೋಗಿ ಸಿಕ್ಕಿಬಿದ್ದ ಖದೀಮರು..!

ಹಾವೇರಿ ಜಿಲ್ಲೆಯಲ್ಲಿ ಸಿನಿಮಾಗಳ ಚಿತ್ರೀಕರಣಕ್ಕೆ ಬಳಸುವ ನಕಲಿ ನೋಟುಗಳನ್ನು ನೈಜ ಹಣದಂತೆ ಚಲಾವಣೆ ಮಾಡಲು ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ. 500 ರೂಪಾಯಿ ಮುಖಬೆಲೆಯ ನಕಲಿ ನೋಟುಗಳನ್ನು ರಾಷ್ಟ್ರೀಯ ಬ್ಯಾಂಕ್‌ನ ಎಟಿಎಂ ಯಂತ್ರದ ಮೂಲಕ ಜಮೆ ಮಾಡಲು ಯತ್ನಿಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಈ ಘಟನೆ ನಡೆದಿದ್ದು, ಬರೋಬ್ಬರಿ 76 ನಕಲಿ ನೋಟುಗಳನ್ನು ಎಟಿಎಂ ಮೂಲಕ ಜಮೆ ಮಾಡಲು ಆರೋಪಿಗಳು ಪ್ರಯತ್ನಿಸಿದ್ದಾರೆ ಎನ್ನಲಾಗಿದೆ. ಇನ್ನು …

Read More »

ಮೂಡಲಗಿ–ಗುರ್ಲಾಪುರ ರಸ್ತೆಯಲ್ಲಿ ಭೀಕರ ಅಪಘಾತ: ಆರೋಗ್ಯ ಸಿಬ್ಬಂದಿ ಸ್ಥಳದಲ್ಲೇ ಸಾವು

ಬೆಳಗಾವಿ: ಕಾರು ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಡಯಾಲಿಸಿಸ್ ವಾರ್ಡ್ ಸಿಬ್ಬಂದಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ ಮುಂಜಾನೆ ಮೂಡಲಗಿ–ಗುರ್ಲಾಪುರ ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಅಥಣಿ ತಾಲೂಕಿನ ಕೊಕಟನೂರು ಗ್ರಾಮದ ಮುರಗೇಶ ಮಂಟೂರ (32) ಎಂದು ಗುರುತಿಸಲಾಗಿದೆ. ಇವರು ಮೂಡಲಗಿ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದ ಡಯಾಲಿಸಿಸ್ ವಿಭಾಗದಲ್ಲಿ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಮುರಗೇಶ ಅವರು ಬುಧವಾರ ಮುಂಜಾನೆ ತಮ್ಮ ಕರ್ತವ್ಯಕ್ಕೆ ಹಾಜರಾಗಲು ಕೊಕಟನೂರು …

Read More »

ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆಗೆ ನಮ್ಮ ಸಹಮತವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಬೆಳಗಾವಿ: ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡುವುದಕ್ಕೆ ನಮ್ಮ ಸಹಮತವಿಲ್ಲ. ಆದರೆ ಆಡಳಿತಾತ್ಮಕ ಅನುಕೂಲಕ್ಕಾಗಿ ಬೆಳಗಾವಿ ಜಿಲ್ಲೆಯನ್ನು ವಿಭಜಿಸಿ ಪ್ರತ್ಯೇಕ ಜಿಲ್ಲೆ ರಚನೆ ಮಾಡುವುದಕ್ಕೆ ನಮ್ಮ ಬೆಂಬಲವಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು. ಹುಕ್ಕೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆ ವಿಭಜನೆ ಹಾಗೂ ಹೊಸ ಜಿಲ್ಲೆ ರಚನೆಯ ವಿಚಾರದಲ್ಲಿ ನಮ್ಮ ನಿಲುವು ಸ್ಪಷ್ಟವಾಗಿದೆ. ಈ ಬಗ್ಗೆ ಯಾವುದೇ ಅಪಸ್ವರ ಇಲ್ಲ. ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು …

Read More »

ಪ್ರತಿಭಾನ್ವೇಷಣೆ ಪರೀಕ್ಷೆ: ಪರಿಕ್ಷಾ ಕೇಂದ್ರಕ್ಕೆ ಜಿಪಂ ಸಿಇಒ ರಾಹುಲ್ ಶಿಂಧೆ ಭೇಟಿ

ಬೆಳಗಾವಿ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿನ ಪ್ರತಿಭೆಯನ್ನು ಗುರುತಿಸಿ, ಅವರನ್ನು ಶಾಲಾ ಹಂತದಲ್ಲಿಯೇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಜ್ಜುಗೊಳಿಸುವ ಉದ್ದೇಶದಿಂದ ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಆಯೋಜಿಸಲಾಗುತ್ತಿರುವ ಜಿಲ್ಲಾಮಟ್ಟದ ಪ್ರತಿಭಾನ್ವೇಷಣೆ (ಟ್ಯಾಲೆಂಟ್ ಸರ್ಚ್) ಪರೀಕ್ಷೆ ಬುಧವಾರ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಿತು. ಈ ಬಾರಿ ಬೆಳಗಾವಿ ಮತ್ತು ಚಿಕ್ಕೋಡಿ ಶೈಕ್ಷಣಿಕ ವಿಭಾಗಗಳಿಂದ ಒಟ್ಟು 1,584 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾದರು. ಬೆಳಗಾವಿ ಶೈಕ್ಷಣಿಕ ವಿಭಾಗದ ವಿದ್ಯಾರ್ಥಿಗಳಿಗೆ …

Read More »

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹ: ಮತ್ತೆ ಉಪವಾಸ ಸತ್ಯಾಗ್ರಹಕ್ಕೆ ಕರೆ ಕೊಟ್ಟ ಬಸವ ಜಯಮೃತ್ಯುಂಜಯ ಸ್ವಾಮೀಜಿ

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ಮತ್ತೆ ಹೋರಾಟಕ್ಕೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ. ಡಿಸೆಂಬರ್ 2ರಿಂದ 11ರ ವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ವೇಳೆ ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಡಿ.10ರಂದು ಬೆಳಗಾವಿಯಲ್ಲಿ 1 ದಿನದ ಉಪವಾಸ ಸತ್ಯಾಗ್ರಹಕ್ಕೆ ಬಸವ ಜಯಮೃತ್ಯುಂಜಯ ಸ್ವಾಮೀಜಿ ಕರೆ ನೀಡಿದ್ದಾರೆ. ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಲು ಆಗ್ರಹಿಸಿ ಹೋರಾಟದ ವೇಳೆ 2024ರಲ್ಲಿ ನಡೆದಿದ್ದ ಲಾಠಿಚಾರ್ಜ್ …

Read More »

ಬೆಳಗಾವಿಯಲ್ಲಿ ಮಹಿಳೆಯ ಬರ್ಬರ ಹತ್ಯೆ: ತಲೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆ

ನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರನ್ನು ತಲೆಯ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ನಂದಿವಾಡಿ ಗ್ರಾಮದ ನಿವಾಸಿ ಐರಾವತಿ ಖೋತ (40) ಕೊಲೆಯಾದ ಮಹಿಳೆ. ಮೃತ ಮಹಿಳೆ ಕಳೆದ ಎರಡು ವರ್ಷಗಳಿಂದ ಸಂಜು ಎಂಬಾತನೊಂದಿಗೆ ಸಂಬಂಧ ಹೊಂದಿದ್ದರು ಎಂಬ ಆರೋಪ ಕೇಳಿ ಬಂದಿದೆ. ಇಬ್ಬರೂ ಒಂದೇ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಈ ನಡುವೆ ಸಂಜು ಬೇರೆ …

Read More »

ಜೂಜು ಅಡ್ಡೆ ಮೇಲೆ ಬೆಳಗಾವಿ ಗ್ರಾಮೀಣ ಪೊಲೀಸರ ದಾಳಿ: 7 ಜನ ವಶಕ್ಕೆ

ಬೆಳಗಾವಿ: ಇಸ್ಪೀಟ್ ಎಲೆಗಳ ಮೇಲೆ ಹಣ ಪಣಕ್ಕಿಟ್ಟು ಅಂದರ್-ಬಾಹರ್ ಜೂಜಾಟದಲ್ಲಿ ತೊಡಗಿದ್ದ ಏಳು ಮಂದಿಯನ್ನು ಬೆಳಗಾವಿ ಗ್ರಾಮೀಣ ಪೊಲೀಸರು ಬಂಧಿಸಿದ್ದು ಬಂಧಿತರದಿಂದ 27,390 ರೂ. ನಗದು ಹಾಗೂ ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಯಳ್ಳೂರ ಕೆರೆ ಸಮೀಪ ನ.23ರಂದು ಈ ದಾಳಿ ನಡೆದಿದೆ. ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಪಿಎಸ್‌ಐ ಎಲ್.ಎಸ್. ಜೋಡಟ್ಟಿ ಅವರು ಪೊಲೀಸ್ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ಜೂಜಾಟದ ಅಡ್ಡೆ ಮೇಲೆ ದಾಳಿ ನಡೆಸಿದ್ದಾರೆ. …

Read More »