ಬೆಂಗಳೂರು: ಮದುವೆಗೆ ಒಂದು ತಿಂಗಳು ಬಾಕಿ ಇರುವಾಗಲೇ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕೆ.ಪಿ. ಅಗ್ರಹಾರದಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಭೂಮಿಕಾ (24) ಆತ್ಮಹತ್ಯೆಗೆ ಶರಣಾದ ಯುವತಿ. ಬ್ಲ್ಯಾಕ್ಮೇಲ್ಗೆ ಹೆದರಿ ಮಗಳು ಈ ನಿರ್ಧಾರ ತೆಗೆದುಕೊಂಡಿದ್ದಾಳೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಇನ್ನೊಂದು ತಿಂಗಳು ಕಳೆದಿದ್ದರೆ ಆ ಮನೆಯಲ್ಲಿ ಮದುವೆಯ ಸಂಭ್ರಮ ಮನೆಮಾಡಬೇಕಿತ್ತು. ಆದರೆ, ವಿಧಿಯ ಆಟವೇ ಬೇರೆಯಾಗಿತ್ತು. ಹಸೆಮಣೆ ಏರಬೇಕಿದ್ದ ಮಗಳ ಮೃತದೇಹವನ್ನು ಪೆಂಡಾಲ್ ಕೆಳಗೆ …
Read More »Daily Archives: ನವೆಂಬರ್ 27, 2026
ಬೆಳಗಾವಿಯಲ್ಲಿ ಮತ್ತೊಂದು ಬಹುಕೋಟಿ ವಂಚನೆ: ಹೆಚ್ಚಿನ ಬಡ್ಡಿ ಆಸೆ ತೋರಿಸಿ ತಾಯಿ-ಮಗನಿಂದ ಮೋಸ: ಕೇಸ್ ದಾಖಲಾಗುತ್ತಿದ್ದಂತೆ ಆರೋಪಿಗಳು ಎಸ್ಕೇಪ್
ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಬಹುಕೋಟಿ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಹೆಚ್ಚಿನ ಬಡ್ಡಿ ಆಮಿಷವೊಡ್ಡಿ ಸಾವಿರಾರು ಜನರಿಗೆ ತಾಯಿ-ಮಗ ವಂಚನೆಯೆಸಗಿದ್ದಾರೆ. ಈ ತಾಯಿ ಮಗನ ಮಾತಿಗೆ ಮರುಳಾಗಿ ಮಹಾರಾಷ್ಟ್ರ ಮತ್ತು ಕರ್ನಾಟಕದ ಗಡಿಭಾಗದ ಜನರು 133 ಕೋಟಿ ರೂ. ಹೂಡಿಕೆ ಮಾಡಿದ್ದರು ಎಂಬುದು ಗೊತ್ತಾಗಿದೆ. ನಿಪ್ಪಾಣಿಯ ನಂದಾ ಪಾಟೀಲ್, ಪುತ್ರ ಪ್ರಸಾದ್ ಪಾಟೀಲ್ ಪ್ರಮುಖ ಆರೋಪಿಗಳು. ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಕಚೇರಿಗಳನ್ನ ತೆರೆದಿದ್ದ ಆರೋಪಿಗಳು ನಂದಾ ಟ್ರೇಡರ್ಸ್, ಲೂನಾರ್ಸ್ ಎಜುಕೇಷನ್ …
Read More »ಬೆಳಗಾವಿಯ 20 ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ವಿದ್ಯಾ ಆಧಾರದಿಂದ ₹2 ಲಕ್ಷ ನೆರವುಬೆಳಗಾವಿಯ 20 ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ವಿದ್ಯಾ ಆಧಾರದಿಂದ ₹2 ಲಕ್ಷ ನೆರವು
ಬೆಳಗಾವಿ: ಶಾಂತಾಯಿ ವಿದ್ಯಾ ಆಧಾರ ಉಪಕ್ರಮದಡಿ ವಿದ್ಯಾ ಆಧಾರ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯು ಬುಧವಾರ ಇಲ್ಲಿನ ಭರತೇಶ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 20 ಬಡ ಹಾಗೂ ಅರ್ಹ ವಿದ್ಯಾರ್ಥಿಗಳಿಗೆ ₹2 ಲಕ್ಷ ಶೈಕ್ಷಣಿಕ ಆರ್ಥಿಕ ನೆರವನ್ನು ವಿತರಿಸಿತು. ಈ ಉಪಕ್ರಮದ ಮೂಲಕ ಇಲ್ಲಿಯವರೆಗೆ 485ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ಶಿಕ್ಷಣವನ್ನು ಮುಂದುವರಿಸಲು ಆರ್ಥಿಕ ನೆರವು ಪಡೆದಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಬೆಳಗಾವಿ ಕಂಟೋನ್ಮೆಂಟ್ ಬೋರ್ಡ್ನ ಮುಖ್ಯ ಕಾರ್ಯನಿರ್ವಾಹಕ …
Read More »ಕರ್ನಾಟಕದ ಮರಾಠಾ ಸಮುದಾಯದ ಏಕತೆಗೆ ಸಕಲ್ ಮರಾಠಾ ಸಮಾಜದ ಮಹತ್ವದ ನಿರ್ಧಾರ
ಕರ್ನಾಟಕದಾದ್ಯಂತ ಹರಡಿಕೊಂಡಿರುವ ಮರಾಠಾ ಸಮುದಾಯವನ್ನು ಒಂದೇ ವೇದಿಕೆಯಡಿ ಸಂಘಟಿಸಿ, ಸಮುದಾಯದಲ್ಲಿ ಏಕತೆ, ಪರಸ್ಪರ ಸಹಕಾರ ಹಾಗೂ ಸರ್ವತೋಮುಖ ಅಭಿವೃದ್ಧಿ ಸಾಧಿಸುವ ಉದ್ದೇಶದಿಂದ ಕರ್ನಾಟಕ ಸಕಲ್ ಮರಾಠಾ ಸಮಾಜವು ಮಹತ್ವದ ಸಂಘಟನಾ ಉಪಕ್ರಮಕ್ಕೆ ಮುಂದಾಗಿದೆ. ಶ್ರೀ ಕಿರಣ್ ಜಾಧವ್ ಅವರ ನೇತೃತ್ವದಲ್ಲಿ ಈ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಸಮುದಾಯದ ಹಿರಿಯರಿಗೆ ಗೌರವ ಸಲ್ಲಿಸುವುದು, ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಪ್ರತಿಭಾವಂತರನ್ನು ಗುರುತಿಸಿ ಸನ್ಮಾನಿಸುವುದು ಹಾಗೂ ರಾಜ್ಯದಾದ್ಯಂತ ಇರುವ ಮರಾಠಾ ಸಮುದಾಯದ …
Read More »ಪತ್ರಕರ್ತೆ ಸುನಿತಾ ದೇಸಾಯಿಗೆ ‘ಸೇವಾರತ್ನ’ ಪ್ರಶಸ್ತಿ
ಬೆಳಗಾವಿ: ಬಡ ಮಕ್ಕಳಿಗೆ ಅನ್ನ, ಆಶ್ರಯ ಒದಗಿಸಲು ಉಚಿತ ಪ್ರಸಾದ ನಿಲಯ ಆರಂಭಿಸಿದ್ದ ಡಾ. ಶಿವಬಸವ ಮಹಾಸ್ವಾಮೀಜಿ ಅವರ 137ನೇ ಜಯಂತಿ ಮಹೋತ್ಸವದಲ್ಲಿ ಬೆಳಗಾವಿಯ ಹಿರಿಯ ಪತ್ರಕರ್ತೆ ಸುನಿತಾ ದೇಸಾಯಿ ಅವರಿಗೆ ‘ಸೇವಾರತ್ನ’ ಪ್ರಶಸ್ತಿ ಪ್ರದಾನ ಮಾಡಲಾಗುವುದು. ನಾಗನೂರು ಶ್ರೀ ರುದ್ರಾಕ್ಷಿಮಠ ನೀಡುವ ಈ ಪ್ರಶಸ್ತಿಯು ₹25 ಸಾವಿರ ನಗದು, ಪ್ರಶಸ್ತಿಪತ್ರ ಮತ್ತು ಫಲಕವನ್ನು ಒಳಗೊಂಡಿದೆ. ಡಿಸೆಂಬರ್ 8ರಂದು ಬೆಳಿಗ್ಗೆ 10.30ಕ್ಕೆ ನಡೆಯುವ ಸಮಾರಂಭದಲ್ಲಿ ದೇಸಾಯಿ ಅವರನ್ನು ಗೌರವಿಸಲಾಗುವುದು ಎಂದು …
Read More »ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಸಮಗ್ರ ಚರ್ಚೆಯಾಗಲಿ: ಮಹಾಂತೇಶ ಕವಟಗಿಮಠ
ಬೆಳಗಾವಿ: ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಲ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಸಮಗ್ರ ಚರ್ಚೆ ನಡೆಯಬೇಕು. ನೀರಾವರಿ, ಶಿಕ್ಷಣ, ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಅಭಿವೃದ್ಧಿಯಾದ ದಕ್ಷಿಣ ಕರ್ನಾಟಕ ಹಾಗೂ ಅಭಿವೃದ್ಧಿಯಿಂದ ವಂಚಿತವಾಗಿರುವ ಉತ್ತರ ಕರ್ನಾಟಕ ಎಂಬ ಎರಡು ಕರ್ನಾಟಕಗಳಿವೆ. …
Read More »ಕಿತ್ತೂರು ರಾಣಿ ಚನ್ನಮ್ಮನವರಿಗೆ ರಾಷ್ಟ್ರೀಯ ಮಾನ್ಯತೆ ನೀಡಲು ಬಸವರಾಜ ಹೊರಟ್ಟಿ ಅವರಿಗೆ ಮನವಿ
ಹುಬ್ಬಳ್ಳಿ: 1824ರಲ್ಲಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿ ವಿರುದ್ಧ ಕಿತ್ತೂರು ರಾಣಿ ಚನ್ನಮ್ಮನವರು ನಡೆಸಿದ ಐತಿಹಾಸಿಕ ಸಶಸ್ತ್ರ ಹೋರಾಟವನ್ನು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಆರಂಭಿಕ ಮಹತ್ವದ ಅಧ್ಯಾಯವೆಂದು ಗುರುತಿಸಿ, ರಾಣಿ ಚನ್ನಮ್ಮನವರನ್ನು ದೇಶದ ಪ್ರಥಮ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿಯೆಂದು ಕೇಂದ್ರ ಸರ್ಕಾರ ಅಧಿಕೃತವಾಗಿ ಘೋಷಿಸಬೇಕು ಹಾಗೂ ಕಿತ್ತೂರಿನ ಐತಿಹಾಸಿಕ ಕೋಟೆ, ಅರಮನೆ ಸೇರಿದಂತೆ ಸಂಸ್ಥಾನಕ್ಕೆ ಸಂಬಂಧಿಸಿದ ಸ್ಮಾರಕಗಳಿಗೆ ರಾಷ್ಟ್ರೀಯ ಮಹತ್ವದ ಮಾನ್ಯತೆ ನೀಡಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು …
Read More »ಬೆಳಗಾವಿಯಲ್ಲಿ ಲಿಂಗತ್ವ ತಾರತಮ್ಯ ವಿರೋಧಿಸಿ ತೃತೀಯ ಲಿಂಗಿಗಳ ಪ್ರತಿಭಟನೆ
ಬೆಳಗಾವಿ: ಲಿಂಗತ್ವ ತಾರತಮ್ಯ ವಿರೋಧಿಸಿ ಹಾಗೂ ಸರ್ಕಾರದಿಂದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ ನೂರಾರು ತೃತೀಯ ಲಿಂಗಿಗಳು ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ತೃತೀಯ ಲಿಂಗಿಗಳು ಸ್ವಾಭಿಮಾನದ ನಡೆ ನಡೆಸುವ ಮೂಲಕ ಸಮಾಜದಲ್ಲಿನ ತಾರತಮ್ಯ ಹಾಗೂ ತಮಗೆ ಎದುರಾಗುತ್ತಿರುವ ಅನ್ಯಾಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನಾಕಾರರು ಮಾತನಾಡಿ, ರಾಜ್ಯ ಸರ್ಕಾರ ನಮಗೆ ಕನಿಷ್ಠ ಒಂದು ಆಶ್ರಯವನ್ನೂ ಕಲ್ಪಿಸಿಲ್ಲ. ಭಿಕ್ಷೆ ಬೇಡುವುದು ಸಮಾಜದ ಕಣ್ಣಿಗೆ ತಪ್ಪಾಗಿ ಕಾಣುತ್ತದೆ. ಆದರೆ ನಮಗೆ …
Read More »ಲೋಕಾಯುಕ್ತ ಬಲೆಗೆ ಬಿದ್ದ ಹುಕ್ಕೇರಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ
ಬೆಳಗಾವಿ: ಬಿಸಿಯೂಟ ಯೋಜನೆಯ ಹಿಂದಿನ ಅವಧಿಯ ಕ್ಯಾಶ್ ಬುಕ್ ಸರಿಪಡಿಸಿಕೊಡಲು ಶಿಕ್ಷಕರೊಬ್ಬರಿಂದ ₹15 ಸಾವಿರ ಲಂಚ ಸ್ವೀಕರಿಸುತ್ತಿದ್ದ ಹುಕ್ಕೇರಿ ತಾಲೂಕು ಪಂಚಾಯಿತಿ ಆವರಣದಲ್ಲಿರುವ ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕಿ ಸವಿತಾ ಹಲಕಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಶಿಪ್ಪೂರ ಹೈಸ್ಕೂಲ್ನಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕಾರ್ಯನಿರ್ವಹಿಸಿದ್ದ ಪಿ.ಎಂ. ಹೆಜ್ಜೆ ಅವರು ಪ್ರಸ್ತುತ ಬೆಳಗಾವಿ ತಾಲೂಕಿನ ಮುತ್ನಾಳ ಹೈಸ್ಕೂಲ್ನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಬಿಸಿಯೂಟ ಯೋಜನೆಯ ಹಿಂದಿನ ಅವಧಿಯ ಕ್ಯಾಶ್ ಬುಕ್ …
Read More »ಬೆಳಗಾವಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ
ಬೆಳಗಾವಿ: ನಗರದ ಜಿಲ್ಲಾ ನ್ಯಾಯಾಲಯಕ್ಕೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಗುರುವಾರ (ನ.26) ನ್ಯಾಯಾಲಯದ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನ ದಳದ ಸಿಬ್ಬಂದಿ ಸುದೀರ್ಘ ಪರಿಶೀಲನೆ ನಡೆಸಿದ್ದು, ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ಬೆದರಿಕೆ ಹುಸಿ ಎಂಬುದು ದೃಢಪಟ್ಟಿದೆ. ನ್ಯಾಯಾಲಯದ ಕಟ್ಟಡವನ್ನು ಸ್ಫೋಟಿಸುವುದಾಗಿ ಅನಾಮಧೇಯ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ರವಾನಿಸಲಾಗಿತ್ತು. ಈ …
Read More »
Laxmi News 24×7