ಬೆಂಗಳೂರು: ಹೋರಾಟ ನಿರತ ಆಶಾ ಕಾರ್ಯಕರ್ತೆಯರ ನಿಯೋಗದ ಜೊತೆ ಆರೋಗ್ಯ ಸಚಿವ ಯು.ಟಿ. ಖಾದರ್ ಸಭೆ ನಡೆಸಿದ್ದಾರೆ. ಈ ವೇಳೆ ಸಿಎಂ ಡಿ.ಕೆ ಶಿವಕುಮಾರ್ ) ಕಳುಹಿಸಿದ 2,000 ರೂ. ಹೆಚ್ಚಳದ ಭರವಸೆಯ ಸಂದೇಶವನ್ನು ಆಶಾ ಕಾರ್ಯಕರ್ತರ ಮುಂದೆ ಬಹಿರಂಗಪಡಿಸಿದ್ದಾರೆ. ಆದರೆ ಈ ಭರವಸೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲ. ನೂತನ ಸರ್ಕಾರಿ ನಿವಾಸದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ಯು.ಟಿ ಖಾದರ್ ಚರ್ಚೆ ನಡೆಸಿದರು. ಬಳಿಕ 20 ಜನರ ಆಶಾ …
Read More »Daily Archives: ನವೆಂಬರ್ 29, 2026
IFFI 2026 Winners | ‘ಕಾಂತಾರ: ಚಾಪ್ಟರ್ 1’ ಚಿತ್ರಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿ ಗೆದ್ದ ರಿಷಬ್
ಗೋವಾ: 57ನೇ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಇಂದು ಗೋವಾದಲ್ಲಿ ನಡೆದ ಅದ್ಧೂರಿ ಸಮಾರಂಭದೊಂದಿಗೆ ತೆರೆಕಂಡಿದೆ. ಈ ಬಾರಿಯ ಚಲನಚಿತ್ರೋತ್ಸವದಲ್ಲಿ ದೇಶ-ವಿದೇಶಗಳ ಹಲವು ಅತ್ಯುತ್ತಮ ಚಿತ್ರಗಳು ಹಾಗೂ ಕಲಾವಿದರನ್ನ ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಬಾರಿಯ ಪ್ರಮುಖ ಪ್ರಶಸ್ತಿಗಳಲ್ಲಿ ಕನ್ನಡದ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಅವರು ‘ಕಾಂತಾರ: ಎ ಲೆಜೆಂಡ್ – ಚಾಪ್ಟರ್ 1’ ಚಿತ್ರದ ಅಭಿನಯಕ್ಕಾಗಿ ಅತ್ಯುತ್ತಮ ನಟ (ಪುರುಷ) ವಿಭಾಗದ ಸಿಲ್ವರ್ ಪೀಕಾಕ್ ಪ್ರಶಸ್ತಿಯನ್ನ …
Read More »ಇಂದಿನಿಂದ ನಂದಿನಿ ಮೊಸರಿನ ದರ 2 ರೂ. ಇಳಿಕೆ
ಬೆಂಗಳೂರು: ನಂದಿನಿ ಮೊಸರಿನ ದರ ಇಂದಿನಿಂದ ಇಳಿಕೆಯಾಗಲಿದೆ. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ಮೊಸರಿನ ದರವನ್ನು 1 ಲೀಟರ್ಗೆ 2 ರೂಪಾಯಿಗಳಷ್ಟು ಕಡಿತಗೊಳಿಸಿದೆ. ರಾಜ್ಯದ ಹಾಲು ಉತ್ಪಾದಕ ರೈತರ ಮನವಿಯ ಮೇರೆಗೆ ಕಳೆದ ನವೆಂಬರ್ 1 ರಿಂದ ಅನ್ವಯವಾಗುವಂತೆ ನಂದಿನಿ ಹಾಲು ಮತ್ತು ಮೊಸರಿನ ಮಾರಾಟ ದರಗಳನ್ನು ಪರಿಷ್ಕರಿಸಿ ಏರಿಕೆ ಮಾಡಲಾಗಿತ್ತು. ಆದರೆ, ಗ್ರಾಹಕರ ಹಿತದೃಷ್ಟಿಯಿಂದ ಮೊಸರಿನ ದರವನ್ನು ಪ್ರತಿ ಲೀಟರ್ಗೆ 2 ರೂಪಾಯಿ ಇಳಿಕೆ ಮಾಡುವಂತೆ ಸಿಎಂ …
Read More »ಬ್ರೇಕಪ್ ಸೇಡು: ಮಾಜಿ ಪ್ರಿಯತಮೆಯ ಖಾಸಗಿ ವಿಡಿಯೋ ಪೋರ್ನ್ ವೆಬ್ಸೈಟ್ಗೆ ಅಪ್ಲೋಡ್
ಬೆಂಗಳೂರು: ಪ್ರೀತಿಸಿ, ಲಿವಿಂಗ್ ಟುಗೆದರ್ನಲ್ಲಿದ್ದು ಬಳಿಕ ಬ್ರೇಕಪ್ ಮಾಡಿಕೊಂಡ ಯುವಕನೊಬ್ಬ, ಸೇಡು ತೀರಿಸಿಕೊಳ್ಳಲು ತನ್ನ ಮಾಜಿ ಪ್ರಿಯತಮೆಯ ಖಾಸಗಿ ವಿಡಿಯೋಗಳನ್ನು ಪೋರ್ನ್ ವೆಬ್ಸೈಟ್ಗೆ ಅಪ್ಲೋಡ್ ಮಾಡಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಅಭ್ಯುದಯ್ ಪುರೋಹಿತ್ ಎಂಬಾತನೇ ಈ ಕೃತ್ಯ ಎಸಗಿದ ಆರೋಪಿಯಾಗಿದ್ದು, ನೊಂದ ಸಂತ್ರಸ್ತ ಯುವತಿ ಆಗ್ನೇಯ ವಿಭಾಗದ ಸಿಇಎನ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸಂತ್ರಸ್ತ ಯುವತಿ ಮತ್ತು ಆರೋಪಿ ಅಭ್ಯುದಯ್ ಪುರೋಹಿತ್ 2023ರಿಂದ 2024ರವರೆಗೆ ಪರಸ್ಪರ ಪ್ರೀತಿಸಿ …
Read More »ಮಸೂದೆ ಬೆಂಬಲಿಸಿದ ಮಾತ್ರಕ್ಕೆ ನಾವು ಬಿಜೆಪಿ ಜೊತೆಗಿದ್ದೇವೆ ಎಂದರ್ಥವಲ್ಲ: ಅಮಿತ್ ಶಾ ಭೇಟಿ ಬಳಿಕ ಕನಿಮೊಳಿ ಹೇಳಿಕೆ
ನವದೆಹಲಿ: ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಮತ್ತು ಮಹಿಳಾ ಮೀಸಲಾತಿ ಮಸೂದೆಗಳಿಗೆ ದ್ರಾವಿಡ ಮುನ್ನೇತ್ರ ಕಳಗಂ ಪಕ್ಷ ತನ್ನ ಬೆಂಬಲವನ್ನು ಘೋಷಿಸಿದ ಬೆನ್ನಲ್ಲೇ ರಾತ್ರಿ ಪಕ್ಷದ ನಾಯಕರು ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಶನಿವಾರ ಡಿಎಂಕೆ ಅಧ್ಯಕ್ಷ ಹಾಗೂ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ನೇತೃತ್ವದಲ್ಲಿ ನಡೆದ ಪಕ್ಷದ ಸಂಸದರ ಸಭೆಯಲ್ಲಿ ಈ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಯಿತು. ಈ …
Read More »ಮೋಡಿ ಲಿಪಿಯ ಅಪರೂಪದ ಐತಿಹಾಸಿಕ ದಾಖಲೆಗಳ ಸಂರಕ್ಷಣೆಗೆ ಗೋವಾ ಸರ್ಕಾರ–ಸಂಕೇಶ್ವರ ಮಠ ಒಪ್ಪಂದ
ಬೆಳಗಾವಿ: ಪ್ರಾಚೀನ ಮೋಡಿ ಲಿಪಿಯಲ್ಲಿರುವ ಅಮೂಲ್ಯ ಐತಿಹಾಸಿಕ ಹಸ್ತಪ್ರತಿಗಳು ಹಾಗೂ ದಾಖಲೆಗಳನ್ನು ಭಾಷಾಂತರಿಸಿ, ವೈಜ್ಞಾನಿಕವಾಗಿ ಸಂರಕ್ಷಿಸುವ ಮಹತ್ವದ ಕಾರ್ಯಕ್ಕೆ ಗೋವಾ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಗೋವಾ ಸರ್ಕಾರ ಮತ್ತು ಸಂಕೇಶ್ವರದ ಶಂಕರಾಚಾರ್ಯ ಸಂಸ್ಥಾನ ಮಠದ ನಡುವೆ ಮಹತ್ವದ ಒಪ್ಪಂದ ಏರ್ಪಟ್ಟಿದೆ. ಗೋವಾ ಸಚಿವಾಲಯದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹಾಗೂ ಸಂಕೇಶ್ವರ ಶ್ರೀಮಠದ ಪೀಠಾಧಿಪತಿ ಸಚ್ಚಿದಾನಂದ ಅಭಿನವ ವಿದ್ಯಾನರಸಿಂಹ ಭಾರತಿ ಸ್ವಾಮೀಜಿ ಅವರ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ …
Read More »ಬೆಂಗಳೂರು ಬೆಳಗಾವಿ ವಂದೇ ಭಾರತ್ ರೈಲಿನ ಉಟದಲ್ಲಿ ಬೋಲ್ಟ್ ಪತ್ತೆ
ಬೆಳಗಾವಿ: ಐಷಾರಾಮಿ ರೈಲು ಎಂದೇ ಗುರುತಿಸಿಕೊಂಡಿರುವ ವಂದೇ ಭಾರತ್ ಎಕ್ಸ್ಪ್ರೆಸ್ನಲ್ಲಿ ಪ್ರಯಾಣಿಕರಿಗೆ ನೀಡುವ ಆಹಾರದ ಗುಣಮಟ್ಟದ ಕುರಿತು ಗಂಭೀರ ಪ್ರಶ್ನೆ ಎದ್ದಿದೆ. ರೈಲಿನಲ್ಲಿ ಖರೀದಿಸಿದ ವಡಾದೊಳಗೆ ಬೋಲ್ಟ್ ಪತ್ತೆಯಾಗಿರುವ ಘಟನೆ ಪ್ರಯಾಣಿಕರನ್ನು ಬೆಚ್ಚಿಬೀಳಿಸಿದೆ. ಬೆಂಗಳೂರಿನಿಂದ ಬೆಳಗಾವಿಗೆ ಸಂಚರಿಸುವ ವಂದೇ ಭಾರತ್ ಎಕ್ಸ್ಪ್ರೆಸ್ನಲ್ಲಿ ನಿನ್ನೆ ಪ್ರಯಾಣಿಸುತ್ತಿದ್ದ ಸಮರ್ಥ ಕೋಡಿಯಾಳ ಎಂಬುವವರು ಉಪಾಹಾರಕ್ಕಾಗಿ ವಡಾ ಖರೀದಿಸಿದ್ದರು. ಆದರೆ, ಅದನ್ನು ತಿನ್ನುವ ಸಂದರ್ಭದಲ್ಲಿ ಒಳಭಾಗದಲ್ಲಿ ಬೋಲ್ಟ್ ಇರುವುದು ಕಂಡುಬಂದಿದೆ. ಅನಿರೀಕ್ಷಿತವಾಗಿ ವಡಾದಲ್ಲಿ ಬೋಲ್ಟ್ ಪತ್ತೆಯಾಗಿದ್ದರಿಂದ …
Read More »ಮಂಡೋಳಿ-ಖಾದರವಾಡಿ ಗ್ರಾಮಗಳಿಗೆ ₹2.50 ಕೋಟಿ ವೆಚ್ಚದಲ್ಲಿ ಸಂಪರ್ಕ ರಸ್ತೆ ನಿರ್ಮಾಣ
ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಮಂಡೋಳಿ ಗ್ರಾಮದಲ್ಲಿ ಸುಮಾರು 2.50 ಕೋಟಿ ರೂ. ವೆಚ್ಚದಲ್ಲಿ ಮಂಡೋಳಿ ಮತ್ತು ಖಾದರವಾಡಿ ಗ್ರಾಮಗಳನ್ನು ಸಂಪರ್ಕಿಸುವ ಪ್ರಮುಖ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು. ಸ್ಥಳೀಯ ಜನಪ್ರತಿನಿಧಿಗಳು, ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಹಾಗೂ ಗ್ರಾಮಸ್ಥರು ಭೂಮಿಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು. ಈ ರಸ್ತೆ ನಿರ್ಮಾಣದಿಂದ ಮಂಡೋಳಿ ಮತ್ತು ಖಾದರವಾಡಿ ಗ್ರಾಮಗಳ ನಡುವಿನ ಸಂಪರ್ಕ ಮತ್ತಷ್ಟು ಸುಗಮವಾಗಲಿದ್ದು, …
Read More »ಬಡಸ್ ಕೆ.ಎಚ್. ಗ್ರಾಮದ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ 20 ಲಕ್ಷ ರೂ. ಅನುದಾನ: ಚನ್ನರಾಜ ಹಟ್ಟಿಹೊಳಿ ಅವರಿಂದ ಚೆಕ್ ವಿತರಣೆ
ಇದೇ ವೇಳೆ, ಸುಮಾರು 1.20 ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಶ್ರೀ ಮಡಿವಾಳೇಶ್ವರ ಮಠದ ಅಭಿವೃದ್ಧಿ ಕಾಮಗಾರಿಗೆ ಮೂರನೇ ಕಂತಿನ ಅನುದಾನವಾಗಿ 15 ಲಕ್ಷ ರೂ.ಗಳ ಚೆಕ್ ಅನ್ನು ಸಂಬಂಧಪಟ್ಟ ಟ್ರಸ್ಟ್ ಸಮಿತಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಿದರು. ಗ್ರಾಮದ ಧಾರ್ಮಿಕ ಹಾಗೂ ಆಧ್ಯಾತ್ಮಿಕ ಕೇಂದ್ರಗಳ ಅಭಿವೃದ್ಧಿಗೆ ನೆರವು ನೀಡಿರುವುದಕ್ಕೆ ಟ್ರಸ್ಟ್ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು ಚನ್ನರಾಜ ಹಟ್ಟಿಹೊಳಿ ಅವರಿಗೆ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಟ್ರಸ್ಟ್ ಸಮಿತಿಯ ಪದಾಧಿಕಾರಿಗಳು ಹಾಗೂ ಗ್ರಾಮಸ್ಥರು …
Read More »ಕುಡಿಯುವ ನೀರಿಗಾಗಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಕಾಲಿಗೆ ಬಿದ್ದ ವೃದ್ಧ
ಬೆಳಗಾವಿ: ಕುಡಿಯುವ ನೀರಿನ ಸಮಸ್ಯೆಯಿಂದ ಬೇಸತ್ತ ವೃದ್ಧರೊಬ್ಬರು ಯುವ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರ ಕಾಲಿಗೆ ಬಿದ್ದು ಕಣ್ಣೀರಿಡುತ್ತಾ ಮನವಿ ಮಾಡಿದ ಘಟನೆ ಚಿಕ್ಕೋಡಿ ತಾಲೂಕಿನ ಉಮರಾಣಿ ಗ್ರಾಮದಲ್ಲಿ ನಡೆದಿದೆ. ಕುಡಿಯುವ ನೀರಿಗಾಗಿ ಗ್ರಾಮಸ್ಥರು ಜನಪ್ರತಿನಿಧಿಗಳ ಮುಂದೆ ಅಂಗಲಾಚುವಂತಹ ಪರಿಸ್ಥಿತಿ ನಿರ್ಮಾಣವಾಗಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಉಮರಾಣಿ ಗ್ರಾಮದಲ್ಲಿ ಕಳೆದ ಹಲವು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿದೆ. ಗ್ರಾಮಕ್ಕೆ ಐದು-ಆರು ದಿನಗಳಿಗೊಮ್ಮೆ ಮಾತ್ರ ನೀರು ಪೂರೈಕೆಯಾಗುತ್ತಿದ್ದು, ಪ್ರತಿನಿತ್ಯದ …
Read More »
Laxmi News 24×7