ಬೆಳಗಾವಿ: ನಾಡಿನ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ಕುಂದಾನಗರಿ ಬೆಳಗಾವಿ ಸಜ್ಜಾಗಿದ್ದು, ನವೆಂಬರ್ 1ರಂದು ನಡೆಯಲಿರುವ ಅದ್ಧೂರಿ ಮೆರವಣಿಗೆಯ ಹಿನ್ನೆಲೆಯಲ್ಲಿ ನಗರ ಪೊಲೀಸ್ ಇಲಾಖೆ ಸಂಚಾರ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. ನವೆಂಬರ್ 1ರಂದು ಬೆಳಿಗ್ಗೆ 11 ಗಂಟೆಯಿಂದ ರಾಜ್ಯೋತ್ಸವದ ಮೆರವಣಿಗೆ ಮುಕ್ತಾಯವಾಗುವವರೆಗೆ ಎಲ್ಲಾ ಭಾರಿ ವಾಹನಗಳ ಬೆಳಗಾವಿ ನಗರ ಪ್ರವೇಶವನ್ನು ನಿಷೇಧಿಸಲಾಗಿದೆ. ಮೆರವಣಿಗೆಯ ಸಂದರ್ಭದಲ್ಲಿ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೊಂದರೆಯಾಗದಂತೆ ಸುಗಮ ಸಂಚಾರಕ್ಕಾಗಿ ಪರ್ಯಾಯ ಮಾರ್ಗಗಳನ್ನು ನಿಗದಿಪಡಿಸಲಾಗಿದೆ. …
Read More »Monthly Archives: ನವೆಂಬರ್ 2026
ಮಟ್ಕಾ ಅಡ್ಡೆ ಮೇಲೆ ಬೆಳಗಾವಿ ಪೊಲೀಸರ ದಾಳಿ: ಮದ್ಯ ಸೇವನೆಗೆ ಅವಕಾಶ ನೀಡಿದವರ ಮೇಲೂ ಕೇಸ್
ಬೆಳಗಾವಿ: ಅಕ್ರಮ ಚಟುವಟಿಕೆಗಳ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ಹಿರೇಬಾಗೇವಾಡಿ ಪೊಲೀಸರು, ಮಟ್ಕಾ ಜೂಜಾಟದ ಅಡ್ಡೆ ಮೇಲೆ ದಾಳಿ ನಡೆಸಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ಮತ್ತೊಂದೆಡೆ, ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವನೆ ಹಾಗೂ ಮದ್ಯಪಾನಕ್ಕೆ ಅವಕಾಶ ಕಲ್ಪಿಸಿದ ಆರೋಪದ ಮೇಲೆ ಮತ್ತೊಬ್ಬ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಮಟ್ಕಾ ಜೂಜಾಟಕ್ಕೆ ಕಡಿವಾಣ ಹಾಕಲು ಪೊಲೀಸರ ದಾಳಿ ಅಕ್ಟೋಬರ್ 29ರಂದು ಹಿರೇಬಾಗೇವಾಡಿ ಗ್ರಾಮದ ಎಪಿಎಂಸಿ ಮಾರುಕಟ್ಟೆ ಪ್ರದೇಶದಲ್ಲಿ ಅಕ್ರಮವಾಗಿ ಮಟ್ಕಾ ಜೂಜಾಟ ನಡೆಯುತ್ತಿರುವ …
Read More »ಕರ್ನಾಟಕ ರಾಜ್ಯೋತ್ಸವಕ್ಕೆ ಬೆಳಗಾವಿ ಪೊಲೀಸ್ರಿಂದ ಭಾರಿ ಭದ್ರತೆ
ಬೆಳಗಾವಿ: ಗಡಿನಾಡು ಬೆಳಗಾವಿಯಲ್ಲಿ ನವೆಂಬರ್ 1ರಂದು ನಡೆಯಲಿರುವ ಕರ್ನಾಟಕ ರಾಜ್ಯೋತ್ಸವದ ಅದ್ಧೂರಿ ಆಚರಣೆಗೆ ಪೊಲೀಸ್ ಇಲಾಖೆ ಬಿಗಿ ಭದ್ರತಾ ವ್ಯವಸ್ಥೆ ಕೈಗೊಂಡಿದೆ. ಲಕ್ಷಾಂತರ ಜನರು ರಾಜ್ಯೋತ್ಸವದ ಮೆರವಣಿಗೆ ಹಾಗೂ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯ ಹಿನ್ನೆಲೆಯಲ್ಲಿ ನಗರಾದ್ಯಂತ ಬೃಹತ್ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಬೆಳಗಾವಿ ನಗರದಿಂದ 3 ಡಿಎಸ್ಪಿ, 6 ಪೊಲೀಸ್ ಇನ್ಸ್ಪೆಕ್ಟರ್, 20 ಪಿಎಸ್ಐ ಹಾಗೂ 98 ಎಎಸ್ಐ ಸೇರಿದಂತೆ 528 ಹೆಡ್ಕಾನ್ಸ್ಟೇಬಲ್ ಮತ್ತು ಪೊಲೀಸ್ ಕಾನ್ಸ್ಟೇಬಲ್ಗಳನ್ನು ನಿಯೋಜಿಸಲಾಗಿದೆ. …
Read More »
Laxmi News 24×7