ಮರೆಯದ ಮಾಣಿಕ್ಯ ಡಾ. ಫ.ಗು. ಹಳಕಟ್ಟಿ ಅವರ ಜಯಂತಿ ಆಚರಣೆ ಬಾಗಲಕೋಟೆ : ಬಿ.ವಿ.ವಿ.ಎಸ್. ಅಕ್ಕನ ಬಳಗ ಹಾಗೂ ಕದಳಿ ಮಹಿಳಾ ವೇದಿಕೆ, ತಾಲೂಕು ಘಟಕ ಬಾಗಲಕೋಟೆ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ಬಸವೇಶ್ವರ ಹೆಣ್ಣುಮಕ್ಕಳ ಮಾಧ್ಯಮಿಕ ಶಾಲೆಯಲ್ಲಿ ವಚನ ಗುಮ್ಮಟ ಡಾ. ಫ.ಗು. ಹಳಕಟ್ಟಿ ಅವರ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅಕ್ಕನ ಬಳಗದ ಹಿರಿಯ ಸದಸ್ಯೆ ಕಮಲಾ ರುದ್ರಾಕ್ಷಿ ಅವರು ಅತಿಥಿ ಉಪನ್ಯಾಸ ನೀಡಿ, ಡಾ. ಫ.ಗು. …
Read More »Yearly Archives: 2026
ಸಾರಿಗೆ ನೌಕರರಿಗೆ ಸಿಹಿ ಸುದ್ದಿ – ಈ ತಿಂಗಳಿನಿಂದಲೇ ಅಕೌಂಟ್‌ಗೆ ಪರಿಷ್ಕೃತ ವೇತನ ಜಮೆ
ಬೆಂಗಳೂರು: ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ಕೊನೆಗೂ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಈ ತಿಂಗಳಿನಿಂದ ಸಾರಿಗೆ ನೌಕರರ ಮೂಲ ವೇತನ ಹೆಚ್ಚಳವಾಗಲಿದೆ. ಸರ್ಕಾರವು ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ, ಮತ್ತು ಕೆಕೆಆರ್‌ಟಿಸಿ ನೌಕರರ ಮೂಲ ವೇತನವನ್ನು 12.5%ರಷ್ಟು ಹೆಚ್ಚಿಸಿದೆ. ಜುಲೈ ತಿಂಗಳ ವೇತನದಲ್ಲಿ ಪರಿಷ್ಕೃತ ವೇತನ ಜಾರಿಗೆ ಬರುವಂತೆ ಪಾವತಿಸಲು ಸರ್ಕಾರ ಆದೇಶ ಹೊರಡಿಸಿದ್ದು, ಹೊಸ ವೇತನ ಪರಿಷ್ಕರಣೆಯು 2025ರ …
Read More »ಬೆಳಗಾವಿಯಲ್ಲಿ ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ
ಬೆಳಗಾವಿ: ಕಳೆದ ಮಾರ್ಚ್ ತಿಂಗಳಲ್ಲಿ ಹರ್ಯಾಣದ ಸಮಾಲ್ಖಾದಲ್ಲಿ ಯಶಸ್ವಿಯಾಗಿ ನಡೆದಿದ್ದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖ ಸಭೆಯ ಬೆನ್ನಲ್ಲೇ, ಈ ಬಾರಿಯ ಪ್ರತಿಷ್ಠಿತ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆಗೆ ಕುಂದಾನಗರಿ ಬೆಳಗಾವಿ ವೇದಿಕೆಯಾಗಲಿದೆ. ಜುಲೈ 10 ರಿಂದ 12 ರವರೆಗೆ ಮೂರು ದಿನಗಳ ಕಾಲ ಈ ಮಹತ್ವದ ಸಭೆಯನ್ನು ಆಯೋಜಿಸಲಾಗಿದೆ. ಈ ವಾರ್ಷಿಕ ಸಭೆಯಲ್ಲಿ ಸಂಘದ ವಿವಿಧ ಸ್ತರದ ಪ್ರಮುಖರು ಪಾಲ್ಗೊಳ್ಳಲಿದ್ದಾರೆ ದೇಶವ್ಯಾಪಿಯ ಎಲ್ಲಾ ಪ್ರಾಂತ ಪ್ರಚಾರಕರು …
Read More »ಕಲ್ಲು ಕ್ವಾರಿ ದುರಂತ – ಮೃತರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಲಿ: ಹೆಚ್‌ಡಿಕೆ
ಬೆಂಗಳೂರು: ಕಲ್ಲು ಕ್ವಾರಿ ದುರಂತದಲ್ಲಿ ಮೃತರಾದವರ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ ಕೊಡಬೇಕು ಅಂತ ಕೇಂದ್ರ ಸಚಿವ ಕುಮಾರಸ್ವಾಮಿಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಕುರಿತು Xನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಬೆಂಗಳೂರು ದಕ್ಷಿಣ ತಾಲೂಕಿನ ಮಾದಪಟ್ಟಣದಲ್ಲಿ ಕಲ್ಲು ಕ್ವಾರಿಯ ಬಂಡೆ ಕುಸಿದು ಏಳು ಜನ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ನನಗೆ ಅತೀವ ನೋವುಂಟು ಮಾಡಿದೆ. ಮೃತಪಟ್ಟ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ ಹಾಗೂ ಗಾಯಗೊಂಡವರು ಆದಷ್ಟು ಬೇಗ ಗುಣಮುಖರಾಗಲಿ ಎಂದು …
Read More »ಬದುಕು ಕಟ್ಟಿಕೊಳ್ಳಲು ಬಂದಿದ್ದ ಯಾದಗಿರಿ ಕಾರ್ಮಿಕ ಕಲ್ಲು ಕ್ವಾರಿ ದುರಂತದಲ್ಲಿ ಸಾವು
ಯಾದಗಿರಿ: ಬದುಕು ಕಟ್ಟಿಕೊಳ್ಳಲು ಹೋಗಿದ್ದ ಯಾದಗಿರಿ ಕಾರ್ಮಿಕನೋರ್ವ ಕಲ್ಲು ಕ್ವಾರಿ ದುರಂತದಲ್ಲಿ ಸಾವನ್ನಪ್ಪಿದ್ದಾರೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ನಡಿಹಾಳ ದೇವಸು ನಾಯಕ ತಾಂಡಾದ ನಿವಾಸಿ ರಾಮು ನಾಯಕ (೪೫ ) ಮೃತ ದುರ್ದೈವಿ. ಮೃತ ಕಾರ್ಮಿಕ 4 ವರ್ಷ ಹಿಂದೆ ಯಾದಗಿರಿಯಿಂದ ಬೆಂಗಳೂರಿಗೆ ವಲಸೆ ಬಂದಿದ್ದರು. ಆದರೆ ಇಂದು (ಜು.2) ಮಾದಪಟ್ಟಣದ ಕಲ್ಲು ಕ್ವಾರಿಯಲ್ಲಿ ಬಿಹಾರ ಮೂಲದ ಕಾರ್ಮಿಕರ ಜೊತೆ ಕೆಲಸ ಮಾಡುತ್ತಿದ್ದಾಗ ಬಂಡೆ ಕುಸಿದಿದ್ದು, ಪರಿಣಾಮ ಸಾವನ್ನಪ್ಪಿದ್ದಾರೆ.
Read More »ಸತೀಶ್ ಕಡತನಮಲೆಗೆ ಶಾಕ್ – ಬಿಜೆಪಿಯಿಂದ 6 ವರ್ಷ ಉಚ್ಚಾಟನೆ
ಬೆಂಗಳೂರು: ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ, ಬಮೂಲ್ ನಿರ್ದೇಶಕ ಸತೀಶ್ ಕಡತನಮಲೆ ಅವರನ್ನು ಭಾರತೀಯ ಜನತಾ ಪಾರ್ಟಿ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಕಾಲ ಉಚ್ಚಾಟನೆ ಮಾಡಿದೆ. ಪಕ್ಷ ವಿರೋಧಿ ಚಟುವಟಿಕೆ ಹಾಗೂ ಪಕ್ಷದ ಶಿಸ್ತು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಈ ಕಠಿಣ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ಬಿಜೆಪಿ ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷರಾದ ಲಿಂಗರಾಜ ಪಾಟೀಲ್ ಅವರು ಉಚ್ಚಾಟಿಸಿ ಆದೇಶ ಪ್ರಕಟಿಸಿದ್ದಾರೆ. ಉಚ್ಚಾಟಿಸಿದ್ದು ಯಾಕೆ? ಯಲಹಂಕ ಶಾಸಕ …
Read More »ಕಲ್ಲು ಕ್ವಾರಿ ದುರಂತ – ಅಧಿಕೃತ ವರದಿ ಬಂದ ಬಳಿಕ ಕ್ರಮಗಳ ಬಗ್ಗೆ ತೀರ್ಮಾನ: ಡಿಕೆಶಿ
ಬೆಂಗಳೂರು: ಮಾಗಡಿ ರಸ್ತೆ ಬಳಿ ಕಲ್ಲು ಕ್ವಾರಿ ದುರಂತದಲ್ಲಿ 7 ಮಂದಿ ಮೃತಪಟ್ಟಿರುವ ಪ್ರಕರಣದ ಬಗ್ಗೆ ಅಧಿಕೃತ ಮಾಹಿತಿ ಪಡೆದ ನಂತರ ಕೈಗೊಳ್ಳಬೇಕಾಗಿರುವ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ ಮಾಡಲಾಗುವುದು ಎಂದು ಸಿಎಂ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೊಲೀಸ್ ಅಧಿಕಾರಿಗಳು, ಗಣಿ ಹಾಗೂ ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ದುರಂತ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಸ್ಫೋಟದಿಂದಾಗಿ ಈ ದುರಂತ ಸಂಭವಿಸಿಲ್ಲ ಎಂಬ …
Read More »ಚಿಕ್ಕಮಗಳೂರು ಕೋರ್ಟ್‌ಗೆ ಬಾಂಬ್ ಬೆದರಿಕೆ – ಕಲಾಪ ನಿಲ್ಲಿಸದೇ ತಪಾಸಣೆಗೆ ಸೂಚಿಸಿದ ಜಡ್ಜ್
ಚಿಕ್ಕಮಗಳೂರು: ನಗರದ ಹೃದಯ ಭಾಗದಲ್ಲಿರೋ ಜಿಲ್ಲಾ ನ್ಯಾಯಾಲಯಕ್ಕೆ ದುಷ್ಕರ್ಮಿಗಳು ಬಾಂಬ್ ಬೆದರಿಕೆ ಹಾಕಿದ್ದಾರೆ. ಬೆದರಿಕೆಯ ನಡುವೆಯೇ ಕೋರ್ಟ್ ಕಲಾಪ ನಡೆದಿದೆ. ಮಧ್ಯಾಹ್ನ 1:30 ರಿಂದ 3:30ರ ಒಳಗೆ ಬಾಂಬ್ ಬ್ಲಾಸ್ಟ್ ಮಾಡುತ್ತೇವೆ ಎಂದು ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ. ಆದರೆ ಜಡ್ಜ್ ಕಲಾಪ ನಿಲ್ಲಿಸದೇ ಪೊಲೀಸರಿಗೆ ತಪಾಸಣೆ ನಡೆಸುವಂತೆ ಸೂಚಿಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳದಿಂದ ತಪಾಸಣೆ ನಡೆಯುತ್ತಿದೆ. ನ್ಯಾಯಾಲಯಕ್ಕೆ ಎಸ್‌ಪಿ ಜಿತೇಂದ್ರ ದಯಾಮ ಭೇಟಿ ನೀಡಿ, ಪೊಲೀಸ್ …
Read More »ಮೊಟ್ಟೆ ಖರೀದಿ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ – ಮೂವರು ಆರೋಪಿಗಳು ಅರೆಸ್ಟ್, ಇನ್ನೋರ್ವ ಪರಾರಿ
ಹಾವೇರಿ: ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಅಮಾಯಕ ವ್ಯಕ್ತಿಯೊಬ್ಬರ ಜೀವವನ್ನು ಬಲಿ ಪಡೆದಿರುವ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದಲ್ಲಿ ನಡೆದಿದೆ. ಮೊಟ್ಟೆ ಖರೀದಿ ವೇಳೆ ಹಣದ ವಿಚಾರವಾಗಿ ಆರಂಭವಾದ ವಾಗ್ವಾದ, ತಳ್ಳಾಟ ಹಲ್ಲೆಗೆ ತಿರುಗಿ, ಗೂಡಂಗಡಿ ನಡೆಸುತ್ತಿದ್ದ 55 ವರ್ಷದ ಶಿವಾಜಿರಾವ್ ಬೈರೋಜಿ ಸಾವನ್ನಪ್ಪಿದ್ದಾರೆ. ಪ್ರಕರಣದ ಸಂಬಂಧ ನಾಲ್ವರು ಯುವಕರ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಬಂಧನಕ್ಕೆ ವಿಶೇಷ …
Read More »ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಬಳ್ಳಾರಿ ಕಾಮುಕ ಉಪನ್ಯಾಸಕ ಅರೆಸ್ಟ್
ಬಳ್ಳಾರಿ: ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಕಾರ ನೀಡಿ ಸನ್ಮಾರ್ಗದಲ್ಲಿ ನಡೆಸಬೇಕಾದ ಉಪನ್ಯಾಸಕನೊಬ್ಬನೇ ತನ್ನ ಕಾಮದ ಹಸಿವಿಗಾಗಿ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಳಸಿಕೊಂಡು ದ್ರೋಹ ಬಗೆದಿರುವ ಆಘಾತಕಾರಿ ಘಟನೆ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ. ಮದುವೆಯಾಗಿ ಎರಡು ಮಕ್ಕಳಿದ್ದರೂ ವಿದ್ಯಾರ್ಥಿನಿಯ ಜೀವನದ ಜೊತೆ ಆಟವಾಡಿದ ಕಾಮುಕ ಉಪನ್ಯಾಸಕನನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಬಳ್ಳಾರಿ ನಗರದ ಖಾಸಗಿ ಕಾಲೇಜೊಂದರ ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕ ರವಿಕಿರಣ್ ಬಂಧಿತ ಆರೋಪಿಯಾಗಿದ್ದಾನೆ. ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಯನ್ನೇ ಈತ ಟಾರ್ಗೆಟ್ ಮಾಡಿದ್ದನು. 2025 ರಲ್ಲಿ …
Read More »
Laxmi News 24×7