ಚಿಕ್ಕಬಳ್ಳಾಪುರ: ಉತ್ತರ ತಾಲೂಕಿನ ಕಾಡಯರಪ್ಪನಹಳ್ಳಿ ಬಳಿಯ ಖಾಸಗಿ ವಸತಿ ಶಾಲೆಯಲ್ಲಿ 12 ವರ್ಷದ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಗನ ಸಾವಿಗೆ ಶಾಲೆಯ ದೈಹಿಕ ಶಿಕ್ಷಕರ ಹಲ್ಲೆ ಹಾಗೂ ಅತಿಯಾದ ಒತ್ತಡವೇ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ಯಲಹಂಕ ತಾಲೂಕಿನ ಸುಬೇದಾರ್ ಪಾಳ್ಯದ ಗುರುಕಿರಣ್ ಮೃತ ವಿದ್ಯಾರ್ಥಿ. ಆತ ಕಾಡಯರಪ್ಪನಹಳ್ಳಿ ಬಳಿಯ ಸ್ಟರ್ಲಿಂಗ್ ಇಂಗ್ಲಿಷ್ ವಸತಿ ಶಾಲೆಯಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಇಂದು (ಜು.8) …
Read More »Yearly Archives: 2026
ಮದ್ವೆಯಾದ ಐದೇ ತಿಂಗಳಿಗೆ ಹೆಲ್ಮೆಟ್‌ನಿಂದ ಹೊಡೆದು ಪತ್ನಿಯ ಹತ್ಯೆಗೈದ ಪತಿ
ಹುಬ್ಬಳ್ಳಿ: ಪತ್ನಿಯನ್ನು ಹೆಲ್ಮೆಟ್‌ನಿಂದ ಹೊಡೆದು ಪತಿ ಕೊಲೆ ಮಾಡಿದ ಘಟನೆ ಹುಬ್ಬಳ್ಳಿ ಹೊರವಲಯ ತಾರಿಹಾಳ ಗ್ರಾಮದಲ್ಲಿ ನಡೆದಿದೆ. ಮೂಲತಃ ನವಲಗುಂದ ತಾಲೂಕಿನ ಇಬ್ರಾಹಿಂಪುರ ಗ್ರಾಮದ ನಾಗರತ್ನ ಹಳೆಮನಿ (19) ಕೊಲೆಯಾದ ಪತ್ನಿ. ಶಿವರಾಜ್ ಕೊಲೆ ಮಾಡಿದ ಪತಿ ಎನ್ನಲಾಗಿದೆ. ಮಾಹಿತಿಯ ಪ್ರಕಾರ, ಕಳೆದ ಫೆಬ್ರವರಿಯಲ್ಲಿ ವಿವಾಹವಾಗಿದ್ದ ಈ ದಂಪತಿ ತಾರಿಹಾಳ ಗ್ರಾಮದಲ್ಲಿ ವಾಸವಾಗಿದ್ದರು. ಇಂದು ಬೆಳಿಗ್ಗೆ ಗಂಡ-ಹೆಂಡತಿ ನಡುವಿನ ವಾಗ್ವಾದ ಶುರುವಾಗಿತ್ತು. ಬಳಿಕ ಗಲಾಟೆ ತಾರಕಕ್ಕೇರಿದ್ದು, ಪತಿ ಶಿವರಾಜ್ ಹೆಲ್ಮೆಟ್‌ನಿಂದ …
Read More »ಚನ್ನಪಟ್ಟಣ ತಹಶೀಲ್ದಾರ್ ಮೇಲಿನ ಹಲ್ಲೆ ಪ್ರಕರಣ ಪರಿಶೀಲನೆ; ಕ್ರಮದ ಭರವಸೆ ನೀಡಿದ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಚನ್ನಪಟ್ಟಣ ತಹಶೀಲ್ದಾರ್ ಮೇಲಿನ ಹಲ್ಲೆ ಪ್ರಕರಣ ರಾಜ್ಯದಲ್ಲಿ ಚರ್ಚೆಯಾಗಿರುವ ಬೆನ್ನಲ್ಲೇ, ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚನ್ನಪಟ್ಟಣ ತಹಶೀಲ್ದಾರ್ ಮೇಲಿನ ಹಲ್ಲೆ ಪ್ರಕರಣ ಈಗ ನನ್ನ ಗಮನಕ್ಕೆ ಬಂದಿದೆ. ಮೊದಲು ಸಂಪೂರ್ಣ ಮಾಹಿತಿ ತರಿಸಿಕೊಳ್ಳುತ್ತೇನೆ. ಪರಿಶೀಲನೆ ನಡೆಸಿದ ಬಳಿಕ ಸೂಕ್ತ ಕ್ರಮ ಕೈಗೊಳ್ಳುತ್ತೇವೆ” ಎಂದು ಹೇಳಿದರು. ಹುಣಸೂರು ಶಾಸಕ …
Read More »ಉಗ್ರ ಸಂಘಟನೆಗಳ ಜೊತೆ ನಂಟು – ಬಳ್ಳಾರಿಯ ಅಬ್ದುಲ್ ಸಲಾಮ್ ಮನೆ ಮೇಲೆ ಎನ್‌ಐಎ ದಾಳಿ
ಬಳ್ಳಾರಿ: ಕೌಲ್ ಬಜಾರ್ ನಿವಾಸಿ ಅಬ್ದುಲ್ ಸಲಾಮ್ ಮನೆ ಮೇಲೆ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಇಂದು ದಿಢೀರ್ ದಾಳಿ ನಡೆಸಿದ್ದಾರೆ. ಶೋಧ ಕಾರ್ಯ ನಡೆಸಿದ ಅಧಿಕಾರಿಗಳ ತಂಡ ಮಹತ್ವದ ಮೊಬೈಲ್ ಫೋನ್ ಅನ್ನು ವಶಕ್ಕೆ ಪಡೆದಿದೆ. ಆನ್‌ಲೈನ್ ಮೂಲಕ ಧರ್ಮ ಪ್ರಚೋದನೆ ಹಾಗೂ ಮೂಲಭೂತವಾದವನ್ನು ಹರಡಿ, ನಿಷೇಧಿತ ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ ಆರೋಪದ ಹಿನ್ನೆಲೆಯಲ್ಲಿಆಂಧ್ರಪ್ರದೇಶದ ಎನ್‌ಟಿಆರ್ ಜಿಲ್ಲೆಯಲ್ಲಿ ರೆಹಮತುಲ್ಲ ಷರಿಫ್ ಎಂಬಾತನ ವಿರುದ್ಧ ದಾಖಲಾಗಿತ್ತು. ತನಿಖೆಯ ವೇಳೆ …
Read More »ನಡೆದುಕೊಂಡು ಹೋಗುತ್ತಿದ್ದಾಗ ಲಾರಿ ಡಿಕ್ಕಿ – ವಿದ್ಯಾರ್ಥಿನಿ ಗ್ರೇಟ್ ಎಸ್ಕೇಪ್
ತುಮಕೂರು: ಲಾರಿಯೊಂದು ನಿಯಂತ್ರಣ ತಪ್ಪಿ ಮೊದಲು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬಳಿಕ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದರೂ ವಿದ್ಯಾರ್ಥಿನಿ ಬದುಕುಳಿದ ಘಟನೆ ತುಮಕೂರು ಜಿಲ್ಲೆಯ ತಿಪಟೂರು ನಗರದ ಐಬಿ ಸರ್ಕಲ್‌ನಲ್ಲಿ ನಡೆದಿದೆ. ವೇಗವಾಗಿ ಬಂದ ಲಾರಿ ನಿಯಂತ್ರಣ ಕಳೆದುಕೊಂಡು ಮೊದಲು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಗುದ್ದಿದೆ. ಲಾರಿಯ ಚಕ್ರ ವಿದ್ಯಾರ್ಥಿನಿಯ ಮೇಲೆ ಹರಿಯದೆ, ವಾಹನದ ಮಧ್ಯಭಾಗದಲ್ಲಿ …
Read More »ಅಂಬುಲೆನ್ಸ್‌ಗೆ ದಾರಿ ಬಿಡದೆ ವೀಲಿಂಗ್ – 6 ಅಪ್ರಾಪ್ತರು ಪೊಲೀಸರ ವಶಕ್ಕೆ
ಬೆಂಗಳೂರು: ಅಂಬುಲೆನ್ಸ್‌ಗೆ ದಾರಿ ಬಿಡದೆ ನಡುರಸ್ತೆಯಲ್ಲೇ ವೀಲಿಂಗ್ ಮಾಡಿ ಪುಂಡಾಟ ಮೆರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಶವಂತಪುರ ಸಂಚಾರಿ ಪೊಲೀಸರು ಆರು ಅಪ್ರಾಪ್ತರನ್ನು ವಶಕ್ಕೆ ಪಡೆದಿದ್ದಾರೆ. ಜುಲೈ 4ರ ಮಧ್ಯರಾತ್ರಿ ಈ ಘಟನೆ ನಡೆದಿತ್ತು. ಕೆಲ ಯುವಕರು ರಸ್ತೆಯ ಮಧ್ಯೆ ವೀಲಿಂಗ್ ಮಾಡುತ್ತಾ ಅಂಬುಲೆನ್ಸ್‌ಗೂ ದಾರಿ ಬಿಡದೆ ವಾಹನ ಸಂಚಾರಕ್ಕೆ ಅಡ್ಡಿಯಾಗಿದ್ದರು. ಈ ದೃಶ್ಯಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಯಶವಂತಪುರ ಸಂಚಾರಿ …
Read More »ಕಮಲ್ ಹಾಸನ್ ಕನ್ನಡ ಹೇಳಿಕೆ ವಿವಾದ; ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಕೇಸ್ ವರ್ಗಾವಣೆ
ಬೆಂಗಳೂರು: ಕನ್ನಡ ಭಾಷೆ ಕುರಿತು ನಟ ಕಮಲ್ ಹಾಸನ್ ನೀಡಿದ್ದ ಹೇಳಿಕೆ ವಿವಾದಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ದೂರನ್ನು ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲಾಗಿದೆ. 2025ರ ಮೇ ತಿಂಗಳಲ್ಲಿ ‘ಥಗ್ ಲೈಫ್’ ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮದಲ್ಲಿ ಕಮಲ್ ಹಾಸನ್ ʼತಮಿಳು ಭಾಷೆಯೇ ಕನ್ನಡ ಭಾಷೆಯ ತಾಯಿʼ ಎಂಬ ಅರ್ಥದಲ್ಲಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ರಾಜ್ಯದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಈ ಸಂಬಂಧ ಮೊದಲು ಕನಕಪುರ …
Read More »ಫುಟ್‌ಪಾತ್ ತೆರವು ಕಾರ್ಯಾಚರಣೆ ವಿರುದ್ಧ ಸಿಡಿದೆದ್ದ ಬೀದಿ ಬದಿ ವ್ಯಾಪಾರಿಗಳು – ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ
ಬೆಂಗಳೂರು: ಸರ್ಕಾರದ ವಿರುದ್ಧ ಸಿಡಿದೆದ್ದಿರೋ ಬೀದಿ ಬದಿ ವ್ಯಾಪಾರಿಗಳು , ತೆರವು ಕಾರ್ಯ ನಿಲ್ಲಿಸುವಂತೆ ಒತ್ತಾಯಿಸಿ ಇಂದು ಬಂದ್‌ಗೆ ಕರೆ ಕೊಟ್ಟಿದ್ದಾರೆ. ವ್ಯಾಪಾರ ವಹಿವಾಟು ಸ್ತಬ್ಧಗೊಳಿಸಿ ಹೋರಾಟಕ್ಕೆ ಮುಂದಾಗಿದ್ದಾರೆ. ಫುಟ್‌ಪಾತ್ ಒತ್ತುವರಿ ತೆರವಿನ ವಿರುದ್ಧ ಸಿಡಿದೆದ್ದಿರೋ ಬೀದಿಬದಿ ವ್ಯಾಪಾರಿಗಳು, ಕೂಡಲೇ ಸರ್ಕಾರ ಆದೇಶ ಹಿಂಪಡೆದು, ತೆರವು ಕಾರ್ಯ ನಿಲ್ಲಿಸುವಂತೆ ಒತ್ತಾಯಿಸಿ ಇಂದು ಬೃಹತ್ ಹೋರಾಟಕ್ಕೆ ಕರೆ ಕೊಟ್ಟಿದ್ದಾರೆ. ಹೀಗಾಗಿ ಇಂದು ತಮ್ಮ ವ್ಯಾಪಾರ ವಹಿವಾಟುಗಳನ್ನು ಬಂದ್ ಮಾಡಿ ಪ್ರತಿಭಟನೆಗೆ ಸಜ್ಜಾಗಿದ್ದಾರೆ. …
Read More »ಟ್ರಕ್, ಕಾರು ಆಯ್ತು ಇದೀಗ ಫ್ಲೈ ಬಸ್ ಸರದಿ – ಬೆಂ-ಮೈ ಎಕ್ಸ್‌ಪ್ರೆಸ್ ವೇಯಲ್ಲಿ ಪುಡಿ ರೌಡಿಗಳ ಹಾವಳಿ
ಮಂಡ್ಯ: ಜಿಲ್ಲೆಯಲ್ಲಿ ಪುಡಿ ರೌಡಿಗಳ ದೌರ್ಜನ್ಯ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸಾರ್ವಜನಿಕರ ಸುರಕ್ಷತೆಗೆ ಧಕ್ಕೆಯುಂಟಾಗಿದೆ. ವಾರದ ಅಂತರದಲ್ಲಿ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ನಡೆದಿರುವ ಮೂರನೇ ಪ್ರಕರಣ ಇದಾಗಿದ್ದು, ಮೆಡಿಸನ್ ಟ್ರಕ್ ಹಾಗೂ ಕಾರಿನ ಮೇಲಿನ ದಾಳಿಯ ಬೆನ್ನಲ್ಲೇ ಇದೀಗ ಕೆಎಸ್‌ಆರ್‌ಟಿಸಿಯ ಪ್ರತಿಷ್ಠಿತ ಫ್ಲೈ ಬಸ್ ಚಾಲಕ ಮತ್ತು ನಿರ್ವಾಹಕನ ಮೇಲೆ ಪುಂಡರು ಹಲ್ಲೆ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಂದು ಮಧ್ಯರಾತ್ರಿ ನಡೆದಿದ್ದೇನು? ಕಳೆದ ಎರಡು ದಿನಗಳ ಹಿಂದೆ …
Read More »ಹಾಸನದಲ್ಲಿ ಮಳೆಯಬ್ಬರ – ಹೇಮಾವತಿ ಜಲಾಶಯದ ಒಳಹರಿವು ಹೆಚ್ಚಳ
ಹಾಸನ: ಜಿಲ್ಲೆಯಲ್ಲಿ ವರಣನ ಅಬ್ಬರ ಮುಂದುವರಿದಿದ್ದು, ಸಕಲೇಶಪುರ, ಆಲೂರು, ಬೇಲೂರು, ಅರಕಲಗೂಡು ಭಾಗಗಳಲ್ಲಿ ಬಾರಿ ಗಾಳಿಯೊಂದಿಗೆ ನಿರಂತರವಾಗಿ ಮಳೆಯಾಗುತ್ತಿದೆ. ಇತ್ತ ಪಕ್ಕದ ಚಿಕ್ಕಮಗಳೂರು ಜಿಲ್ಲೆ, ಮೂಡಿಗೆರೆ ಭಾಗದಲ್ಲೂ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ ಜೀವನದಿ ಹೇಮಾವತಿ ಜಲಾಶಯದ ಒಳಹರಿವಿನಲ್ಲಿ ಬಾರಿ ಏರಿಕೆಯಾಗಿದೆ. ಹಾಸನ ತಾಲೂಕಿನ, ಗೊರೂರಿನಲ್ಲಿರುವ ಹೇಮಾವತಿ ಜಲಾಶಯಕ್ಕೆ 16,593 ಕ್ಯೂಸೆಕ್ ಒಳಹರಿವಿದ್ದು, 300 ಕ್ಯೂಸೆಕ್ ನೀರನ್ನು ಹೊರಬಿಡಲಾಗುತ್ತಿದೆ. 37.103 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಹೇಮಾವತಿ …
Read More »
Laxmi News 24×7