Breaking News

Yearly Archives: 2026

₹2.15 ಲಕ್ಷ ಮೌಲ್ಯದ ಹೆರಾಯಿನ್ ಜಪ್ತಿ; ಬೆಳಗಾವಿ ಪೊಲೀಸರಿಂದ ಓರ್ವನ ಬಂಧನ

ಬೆಳಗಾವಿ: ನಗರದಲ್ಲಿ ಅಕ್ರಮವಾಗಿ ಹೆರಾಯಿನ್ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಓರ್ವನನ್ನು ಬಂಧಿಸಿದ್ದಾರೆ. ಬಂಧಿತನಿಂದ ₹2.15 ಲಕ್ಷ ಮೌಲ್ಯದ ಹೆರಾಯಿನ್ ಸೇರಿದಂತೆ ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಬಂಧಿತನನ್ನು ಸಂದೀಪ ವಿಜಯ ಅನಗೋಳಕರ (27) ಎಂದು ಗುರುತಿಸಲಾಗಿದೆ. ಬೆಳಗಾವಿ ನಗರದ ಬಸವನಗಲ್ಲಿಯ ಸಾರ್ವಜನಿಕ ಸ್ಥಳದಲ್ಲಿ ಹೆರಾಯಿನ್ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ 10.77 ಗ್ರಾಂ …

Read More »

ಶಾಸಕ ಅಭಯ್ ಪಾಟೀಲ್ ವಿರುದ್ಧ ಕಾಂಗ್ರೆಸ್ ದೂರು

ಬೆಳಗಾವಿ: ದಕ್ಷಿಣ ಮತಕ್ಷೇತ್ರದ 2,598 ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವಂತೆ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಶಾಸಕ ಅಭಯ್ ಪಾಟೀಲ್ ವಿರುದ್ಧ ಕಾಂಗ್ರೆಸ್ ನಗರ ಘಟಕ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಈ ಕುರಿತು ಶಾಹಾಪುರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿರುವ ಕಾಂಗ್ರೆಸ್ ಮುಖಂಡರು, ಅಭಯ್ ಪಾಟೀಲ್ ಅವರು 2,598 ಮತದಾರರನ್ನು ನಕಲಿ ಮತದಾರರೆಂದು ಗುರುತಿಸಿ, ಅವರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುವಂತೆ ಮನವಿ ಮಾಡಿದ್ದಾರೆ …

Read More »

ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ MRI ಸ್ಕ್ಯಾನಿಂಗ್ ಇಲ್ಲದೆ ಬಡರೋಗಿಗಳ ಪರದಾಟ

ಹಾವೇರಿ: ಜಿಲ್ಲಾಸ್ಪತ್ರೆಯಲ್ಲೇ ಸೆಂಟರ್ ಸ್ಥಾಪಿಸಿ ತಿಂಗಳು ಕಳೆದಿದ್ದರೂ MRI ಸ್ಕ್ಯಾನಿಂಗ್ ಸೌಲಭ್ಯ ಇಲ್ಲದ ಕಾರಣ, ಪ್ರತಿದಿನ ಚಿಕಿತ್ಸೆಗೆ ಬರುವ ರೋಗಿಗಳು ಪರದಾಡುವಂತಾಗಿದೆ. ಜಿಲ್ಲಾಸ್ಪತ್ರೆಗೆ ಪ್ರತಿದಿನ ನೂರಾರು ಬಡರೋಗಿಗಳು ಚಿಕಿತ್ಸೆಗಾಗಿ ಬರುತ್ತಾರೆ. ಆದರೆ, ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ MRI ಸ್ಕ್ಯಾನಿಂಗ್ ಸೌಲಭ್ಯ ಇಲ್ಲದ ಕಾರಣ, ರೋಗಿಗಳು ದೂರದ ಹುಬ್ಬಳ್ಳಿ, ಧಾರವಾಡ, ಶಿವಮೊಗ್ಗ ಹಾಗೂ ಚಿತ್ರದುರ್ಗಕ್ಕೆ ತೆರಳಿ ಸ್ಕ್ಯಾನಿಂಗ್ ಮಾಡಿಸಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದೀಗ ಜಿಲ್ಲಾಸ್ಪತ್ರೆಯಲ್ಲೇ MRI ಸ್ಕ್ಯಾನಿಂಗ್ ಸೆಂಟರ್ ಸ್ಥಾಪಿಸಿ ತಿಂಗಳು ಕಳೆದಿದ್ದರೂ, …

Read More »

ಚುನಾವಣಾ ಆಯೋಗದ ಕಚೇರಿ ಮುಂದೆ ನಾನು ಪ್ರತಿಭಟನೆ ಮಾಡಿಯೇ ಇಲ್ಲ: ಡಿಕೆಶಿ

ಬೆಂಗಳೂರು: ನಾನು ನಿನ್ನೆ (ಅ.1) ಚುನಾವಣಾ ಆಯೋಗದ ಮುಂದೆ ಪ್ರತಿಭಟನೆ ಮಾಡಿಯೇ ಇಲ್ಲ. ಮಾಧ್ಯಮದವರು ಅದನ್ನು ಪ್ರತಿಭಟನೆ ಅಂತ ತೋರಿಸಿದರೆ ನಾನೇನು ಮಾಡಲಿ ಎಂದು ಸಿಎಂ ಡಿ.ಕೆ ಶಿವಕುಮಾರ್‌ ಹಳಿದ್ದಾರೆ. ನಗರದಲ್ಲಿ  ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ, ನಮ್ಮ ಹಕ್ಕುಗಳನ್ನು ಪ್ರಶ್ನೆ ಮಾಡುವುದಕ್ಕೆ ಹೋಗಿದ್ದೆ ಅಷ್ಟೇ. ಆಗಿರುವ ಅನ್ಯಾಯವನ್ನು ಸರಿಪಡಿಸಿ ಅಂತ ಅಲ್ಲೇ ಕುಳಿತುಕೊಂಡಿದ್ದೆ. ಎಫ್ಐಆರ್ ಮಾಡುವುದಿದ್ದರೆ ನನ್ನ ಮೇಲೆ ಮಾಡಲಿ ತೊಂದರೆ ಇಲ್ಲ‌ ಎಂದಿದ್ದಾರೆ. ಕಾನೂನು …

Read More »

ನೀವೆಲ್ಲ ಗಲಾಟೆ ಮಾಡೋಕೆ ಬಂದಿದ್ದೀರಾ? – ಶ್ರೇಯಸ್‌ ಪಟೇಲ್ ಬೆಂಬಲಿಗರ ಮೇಲೆ ಶಿವಲಿಂಗೇಗೌಡ ಗರಂ

ಹಾಸನ: ಸಂಸದ ಶ್ರೇಯಸ್‌ ಪಟೇಲ್‌ ಅವರ ಬೆಂಬಲಿಗರು ಕಾಂಗ್ರೆಸ್‌ನ  ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಗಲಾಟೆ ಮಾಡಿದ್ದಕ್ಕೆ ಸಚಿವ ಶಿವಲಿಂಗೇಗೌಡ  ಅವರು ಗರಂ ಆಗಿದ್ದಾರೆ. ನೀವೆಲ್ಲ ಇಲ್ಲಿಗೆ ಗಲಾಟೆ ಮಾಡಲು ಬಂದಿದ್ದೀರಾ? ನಾನು ಇಂತಹದ್ದನ್ನು ತುಂಬಾ ನೋಡಿದ್ದೀನಿ ಸುಮ್ಮನೆ ಕುಳಿತುಕೊಳ್ಳಿ ಎಂದು ಸಿಟ್ಟನ್ನು ಹೊರಹಾಕಿದ್ದಾರೆ. ಹಾಸನ ನಗರದ ಬಿಎಂ ರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪಕ್ಷದ ನೂತನ ಜಿಲ್ಲಾಧ್ಯಕ್ಷ ಜಿ.ಬಿ.ಶಶಿಧರ್ ಅವರ ಪ್ರದಗ್ರಹಣ ಸಮಾರಂಭದಲ್ಲಿ ಈ ಜಟಾಪಟಿ ನಡೆದಿದೆ. ಕಾರ್ಯಕ್ರಮದಲ್ಲಿ …

Read More »

ಸಾಗರ | ಬ್ರೇಕ್‌ ಫೇಲ್‌ ಆಗಿ ಮನೆ ಮೇಲೆ ಬಿದ್ದ ಪ್ರವಾಸಿ ಬಸ್ – 8 ಮಹಿಳೆಯರಿಗೆ ಗಾಯ

ಶಿವಮೊಗ್ಗ: ಪ್ರವಾಸಕ್ಕೆ ಬಂದಿದ್ದ ಬಸ್ ಬ್ರೇಕ್‌ ಫೇಲ್‌ ಆಗಿ ಮನೆಯೊಂದರ ಮೇಲೆ ಬಿದ್ದ ಘಟನೆ ಸಾಗರ  ತಾಲೂಕಿನ ಹೊಸಕೊಪ್ಪ ಸಮೀಪದ ಹಲಕೊಟ್ಟಿಗೆ ಕ್ರಾಸ್ ಬಳಿ ನಡೆದಿದೆ. ಘಟನೆಯಲ್ಲಿ 7-8 ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ರಕ್ಷಣೆ ಮಾಡಿದ್ದಾರೆ. ದಾವಣಗೆರೆಯ ನಿಟ್ಟುವಳ್ಳಿಯ ಗಾರ್ಮೆಂಟ್ಸ್ ಒಂದರಲ್ಲಿ ಕೆಲಸ ಮಾಡುತ್ತಿದ್ದ 24 ಜನ ಮಹಿಳಾ ಪ್ರವಾಸಿಗರು ಕೊಲ್ಲೂರು- ಸಿಗಂದೂರು- ಬಳೆ ಪದ್ಮಾವತಿ ದೇವಸ್ಥಾನಕ್ಕೆ ಬಂದಿದ್ದರು. ಬಳೆ ಪದ್ಮಾವತಿ …

Read More »

ಕಸ ವಿಂಗಡನೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು – ತುಂಡು ತುಂಡಾದ ದೇಹ

ಚಿಕ್ಕಬಳ್ಳಾಪುರ: ಕಸ ವಿಂಗಡನೆ ಯಂತ್ರಕ್ಕೆ  ಸಿಲುಕಿ ಮಹಿಳೆ ಸಾವನ್ನಪ್ಪಿದ ಘಟನೆ ದೊಡ್ಡಬಳ್ಳಾಪುರದ ಎಂಎಸ್‌ಜಿಪಿ ಘಟಕದಲ್ಲಿ ನಡೆದಿದೆ. ಕಾಡತಿಪ್ಪೂರು ಮೂಲದ ಅರಸಮ್ಮ(45) ಮೃತ ದುರ್ದೈವಿ. ಯಂತ್ರದ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಮಹಿಳೆ ಸಿಲುಕಿ ಸಾವನ್ನಪ್ಪಿದ್ದಾರೆ. ಯಂತ್ರಕ್ಕೆ ಮಹಿಳೆ ಸಿಲುಕಿದ ಪರಿಣಾಮ, ಕೈ ಕಾಲು ತುಂಡಾಗಿ ಬಿದ್ದಿದ್ದವು. ಮಹಿಳೆ ಈ ಘಟಕದಲ್ಲಿ ಕಳೆದ ಮೂರ್ನಾಲ್ಕು ವರ್ಷದಿಂದ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಬೆಂಗಳೂರಿನ ಕಸವನ್ನ ತಂದು ಈ ಘಟಕದಲ್ಲಿ ವಿಂಗಡಣೆ ಮಾಡಲಾಗುತ್ತಿತ್ತು. …

Read More »

ಪರಿಷ್ಕರಣೆ ಬಳಿಕ 1 ತಿಂಗಳಲ್ಲಿ 1.37 ಲಕ್ಷ ಮತದಾರರ ಹೆಚ್ಚಳ – ರಾಜ್ಯದಲ್ಲಿ 84,900 ಫಾರ್ಮ್‌ 7 ಸಲ್ಲಿಕೆ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡುಬಂದಿದ್ದು, ಒಟ್ಟು ಮತದಾರರ ಸಂಖ್ಯೆ 4,49,81,740ಕ್ಕೆ ತಲುಪಿದೆ ಎಂದು ರಾಜ್ಯ ಚುನಾವಣಾ ಆಯೋಗ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಸೆಪ್ಟೆಂಬರ್ 25ರವರೆಗೆ ರಾಜ್ಯದಲ್ಲಿ 4,48,44,080 ಇದ್ದ ಮತದಾರರ ಸಂಖ್ಯೆ, ಪರಿಷ್ಕರಣೆ ಮತ್ತು ನೋಟಿಸ್ ಪ್ರಕ್ರಿಯೆಯ ಬಳಿಕ 1,37,660ರಷ್ಟು ಹೆಚ್ಚಾಗಿದೆ. ಪ್ರಸ್ತುತ ಮತದಾರರ ಪಟ್ಟಿಯಲ್ಲಿ ಪುರುಷರಿಗಿಂತ ಮಹಿಳಾ ಮತದಾರರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಒಟ್ಟು 2,26,60,092 ಮಹಿಳಾ ಮತದಾರರಿದ್ದರೆ, ಪುರುಷ ಮತದಾರರ ಸಂಖ್ಯೆ 2,23,18,784 ಆಗಿದೆ. …

Read More »

ಕಿಡ್ನ್ಯಾಪ್‌ ನಾಟಕವಾಡಿ 90 ಲಕ್ಷಕ್ಕೆ ಡಿಮ್ಯಾಂಡ್‌ – ತಂದೆಗೆ ಯಾಮಾರಿಸಲು ಯತ್ನಿಸಿದ ಮಗ ಅರೆಸ್ಟ್‌

ಬೆಂಗಳೂರು: ಕಿಡ್ನ್ಯಾಪ್‌  ನಾಟಕವಾಡಿ ತಂದೆಗೆ 90 ಲಕ್ಷ ರೂ. ಬೇಡಿಕೆ ಇಟ್ಟಿದ್ದ ಮಗನನ್ನು ಆರ್‌.ಆರ್‌ ನಗರ ಪೊಲೀಸರು  ಬಂಧಿಸಿದ್ದಾರೆ. ಮನೀಷ್ (40) ಬಂಧಿತ ಆರೋಪಿಯಾಗಿದ್ದಾನೆ. ಈತ ತನ್ನ ತಂದೆ ಮನೋಹರ್ ಪಟೇಲ್ (62) ಅವರಿಗೆ ಸ್ನೇಹಿತರ ಮೂಲಕ ತನ್ನದೇ ನಂಬರ್‌ನಿಂದ ವಾಟ್ಸಾಪ್ ಕರೆ ಮಾಡಿಸಿ, ನಿಮ್ಮ ಮಗನನ್ನು ಕಿಡ್ನ್ಯಾಪ್‌ ಮಾಡಿದ್ದೇವೆ ಎಂದು ಹೇಳಿಸಿದ್ದ. ಅಲ್ಲದೇ 90 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದ. ಹಿಂದಿನ ದಿನ ಹಣದ ವ್ಯವಹಾರಕ್ಕೆಂದು ರೈಲಿನಲ್ಲಿ …

Read More »

ಶಿಕಾರಿಗೆ ತೆರಳಿದ್ದಾಗ ಮಿಸ್‌ಫೈರ್ – ಯುವಕ ಸಾವು, ಮೂವರ ಬಂಧನ, ಮೂವರು ನಾಪತ್ತೆ

ಚಿಕ್ಕಮಗಳೂರು: ರಾತ್ರಿ ವೇಳೆ ಶಿಕಾರಿಗೆ  ತೆರಳಿದ್ದಾಗ ಮಿಸ್‌ಫೈರ್ ಆಗಿ ಯುವಕ ಸಾವನ್ನಪ್ಪಿರುವ ಘಟನೆ ಕೊಪ್ಪ  ತಾಲೂಕಿನ ಕಾಡಂಚಿನ ಗ್ರಾಮವಾದ ಕಡೇಮನೆಯಲ್ಲಿ ನಡೆದಿದೆ. ಗ್ರಾಮದ ಚೇತನ್ ಗುಂಡು ಬಿದ್ದು ಸಾವನ್ನಪ್ಪಿದ ಯುವಕ. ಸೆ.30 ರ ರಾತ್ರಿ 7 ಜನ ಸ್ನೇಹಿತರು ಅರಣ್ಯಕ್ಕೆ ಬೇಟೆ ತೆರಳಿದ್ದರು. ಬೇಟೆ ವೇಳೆ ಪ್ರಾಣಿ ಮೇಲೆ ಗುಂಡು ಹಾರಿಸುವಾಗ ಮಿಸ್ ಫೈರ್ ಆಗಿ ಜೊತೆಗಿದ್ದ ಚೇತನ್‌ಗೆ ಗುಂಡು ಬಿದ್ದಿದೆ. ಜೊತೆಗಿದ್ದ ಸ್ನೇಹಿತರು ಕೂಡಲೇ ಆತನನ್ನ ಜಯಪುರ ಆಸ್ಪತ್ರೆಗೆ …

Read More »