ಬೆಂಗಳೂರು: ಒಂದನೇ ತರಗತಿ ದಾಖಲಾತಿಗೆ ಆರು ವರ್ಷ (6 Years) ತುಂಬಿರಬೇಕೆಂಬ ಕಡ್ಡಾಯ ನಿಯಮದಲ್ಲಿ ಸರ್ಕಾರ ಈ ವರ್ಷವೂ 60 ದಿನಗಳ ವಿನಾಯಿತಿ ನೀಡಿ ಮಹತ್ವದ ತೀರ್ಮಾನ ಕೈಗೊಂಡಿದೆ. ವಿಧಾನಸಭೆಯಲ್ಲಿಂದು ಈ ಸಂಬಂಧ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಘೋಷಣೆ ಮಾಡಿದರು. ಒಂದನೇ ತರಗತಿಗೆ ದಾಖಲಾಗಲು ಆರು ವರ್ಷ ತುಂಬಿರಬೇಕೆಂಬ ನಿಯಮದಲ್ಲಿ 2026-27 ನೇ ವರ್ಷದ ಶೈಕ್ಷಣಿಕ ವರ್ಷದಲ್ಲಿ 60 ದಿನಗಳ ಸಡಿಲಿಕೆ ಕೊಡುವ ತೀರ್ಮಾನ ಮಾಡಲಾಗಿದೆ ಎಂದು …
Read More »Yearly Archives: 2026
ತೈಲ ಅಭಾವ – ಬೀದರ್‌ನಲ್ಲಿ 7ಕ್ಕೂ ಅಧಿಕ ಪೆಟ್ರೋಲ್ ಬಂಕ್ ಕ್ಲೋಸ್
ಬೀದರ್: ಇರಾನ್ ಮತ್ತು ಇಸ್ರೆಲ್ ವಾರ್ ಯುದ್ಧದ ಪರಿಣಾಮ ಗಡಿ ಜಿಲ್ಲೆ ಬೀದರ್‌ನ ಕೆಲವು ಬಂಕ್‌ಗಳಲ್ಲಿ ಪೆಟ್ರೋಲ್ ಅಭಾವ ಸೃಷ್ಟಿಯಾಗಿ ಬಂಕ್‌ಗಳು ಕ್ಲೋಸ್ ಆಗಿವೆ. ತೈಲ ಕೊರತೆ ವದಂತಿ ಹಿನ್ನೆಲೆ ಜನ ಮುಗಿಬಿದ್ದು ಪೆಟ್ರೋಲ್, ಡಿಸೇಲ್ ಖರೀದಿಸಿದ್ದು, ಬೀದರ್ ನಗರದ ಬಸವೇಶ್ವರ ವೃತದ ಬಳಿ ಇರುವ ನಯಾರಾ ಪೆಟ್ರೋಲ್ ಬಂಕ್ ಸೇರಿದಂತೆ 7ಕ್ಕೂ ಅಧಿಕ ಬಂಕ್‌ಗಳಲ್ಲಿ ಪೆಟ್ರೋಲ್, ಡಿಸೇಲ್ ಖಾಲಿಯಾಗಿ ಬಂಕ್‌ಗಳನ್ನು ಬಂದ್ ಮಾಡಲಾಗಿದೆ. ಬುಧವಾರ ರಾತ್ರಿಯಿಂದಲೇ ಪೆಟ್ರೋಲ್, ಡಿಸೇಲ್ …
Read More »ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ, ತನಿಖೆಯಲ್ಲಿ ನಟಿಯೊಬ್ಬರು ಹನಿಟ್ರ್ಯಾಪ್ ಮಾಡಿರೋದು ಪತ್ತೆ..!!
ಉದ್ಯಮಿ ಸಿಜೆ ರಾಯ್ ಆತ್ಮ**ತ್ಯೆ ಪ್ರಕರಣ, ತನಿಖೆಯಲ್ಲಿ ನಟಿಯೊಬ್ಬರು ಹನಿಟ್ರ್ಯಾಪ್ ಮಾಡಿರೋದು ಪತ್ತೆಯಾಗಿದೆ. ಉದ್ಯಮಿ ಬಳಿಯಿಂದ ಹಣಕ್ಕೆ ಬೇಡಿಕೆ ಇಟ್ಟಿರುವ ಬಗ್ಗ ಸಾಕ್ಷ್ಯಗಳು ಲಭ್ಯವಾಗಿದೆ. ಈ ಕುರಿತು ಸ್ಫೋಟಕ ವರದಿ ಇಲ್ಲಿದೆ. ಬೆಂಗಳೂರು (ಮಾ.25) ಉದ್ಯಮಿ ಸಿಜೆ ರಾಯ್ ದುರಂತ ಅಂತ್ಯ ಪ್ರಕರಣವನ್ನು ವಿಶೇಷ ತನಿಖಾ ದಳ ಪೊಲೀಸರು ನಡೆಸುತ್ತಿದ್ದಾರೆ. ಸಾವಿರಾರು ಕೋಟಿ ರೂಪಾಯಿ ವ್ಯವಹಾರ ನಡೆಸುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಸಿಜೆ ರಾಯ್ ಬೆಂಗಳೂರಿನ ಲ್ಯಾಂಗ್‌ಫೋರ್ಡ್ ರಸ್ತೆಯಲ್ಲಿರುವ ಕಚೇರಿಯಲ್ಲಿ …
Read More »ಮುಡಾ ಹಗರಣ ಕೇಸ್ – ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್ ತುರ್ತು ನೋಟಿಸ್
ಬೆಂಗಳೂರು: ಮುಡಾ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಪತ್ನಿ ಪಾರ್ವತಿ ಅವರಿಗೆ ಕರ್ನಾಟಕ ಹೈಕೋರ್ಟ್ ತುರ್ತು ನೋಟಿಸ್ ನೀಡಿದೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ನೀಡಿದ್ದ ʻಬಿ ರಿಪೋರ್ಟ್ʼ ಅನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಒಪ್ಪಿ, ಅಂಗೀಕರಿಸಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಪ್ರಶ್ನಿಸಿ, ಮುಡಾ ಕೇಸ್‌ನ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಈ ದೂರನ್ನಾಧರಿಸಿ ಹೈಕೋರ್ಟ್ ಪ್ರತಿವಾದಿಗಳಿಗೆ ತುರ್ತು …
Read More »ಏಕಾಗ್ರತೆ ಇಟ್ಟುಕೊಳ್ಳಲು ಪರಮಾತ್ಮನ ಸಾಾತ್ಕಾರದಿಂದ ಸಾಧ್ಯ
ಯರಗಟ್ಟಿ: ಸದಾ ಚಂಚಲತೆಯಿಂದ ಕೂಡಿದ ಮನುಷ್ಯನ ಮನಸ್ಸುನ್ನು ಏಕಾಗ್ರತೆಯಲ್ಲಿ ಇಟ್ಟುಕೊಳ್ಳಲು ನಿರಂತರ ಪ್ರಯತ್ನ, ಸಾಧನೆ, ಪರಮಾತ್ಮನ ಸಾಾತ್ಕಾರದಿಂದ ಮಾತ್ರ ಸಾಧ್ಯ ಎಂದು ಇಂಚಲದ ಡಾ.ಶಿವಾನಂದ ಭಾರತಿ ಸ್ವಾಮೀಜಿ ಹೇಳಿದರು. ತಾಲೂಕಿನ ರೈನಾಪುರ ಗ್ರಾಮದ ಶ್ರದ್ಧಾನಂದ ಆಶ್ರಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಮಹಾ ಜಪಯ ಕಾರ್ಯಕ್ರಮ ಹಾಗೂ 18ನೇ ವೇದಾಂತ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರತಿಯೊಬ್ಬರೂ ಗುರುವಿನ ಮಾರ್ಗದರ್ಶನ, ಸತ್ಸಂಗಗಳ ಮೂಲಕ ಬದುಕನ್ನು ಹಸನು ಮಾಡಿಕೊಂಡು ಮನಸ್ಸನ್ನು ನಿರ್ಮಲವಾಗಿ ಇಟ್ಟುಕೊಳ್ಳಬೇಕು ಎಂದರು. ಶಿಂದೋಗಿ ಮುಕ್ತಾನಂದ …
Read More »ವಿದ್ಯಾರ್ಥಿಗಳು ಸೇವಾ ಮನೋಭಾವ ರೂಢಿಸಿಕೊಳ್ಳಿ
ನೇಸರಗಿ: ವಿದ್ಯಾರ್ಥಿಗಳು ಸೇವಾ ಮನೋಭಾವ ರೂಢಿಸಿಕೊಳ್ಳುವ ಮೂಲಕ ಸಮಾಜಮುಖಿ ಕಾರ್ಯ ಕೈಗೊಳ್ಳಬೇಕು ಎಂದು ಪ್ರೊ.ಮಹಾಂತೇಶ ಅವ್ವಕ್ಕನವರ ಹೇಳಿದರು. ಸಮೀಪದ ಮತ್ತಿಕೊಪ್ಪ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ನೇಸರಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರ ಉದ್ಘಾಟಿಸಿ ಮಾತನಾಡಿ, ಇಂದಿನ ದಿನಮಾನಗಳಲ್ಲಿ ವಿದ್ಯಾರ್ಥಿಗಳು ನಿರಂತರ ಅಧ್ಯಯನ ಹಾಗೂ ಶಿಕ್ಷಕರ ಮಾರ್ಗದರ್ಶನ ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು. ಪ್ರಾಚಾರ್ಯ ಡಾ.ಕೀರನಾಯ್ಕ ಗಡ್ಡಿಗೌಡರ ಮಾತನಾಡಿದರು. ಯೋಜನಾಧಿಕಾರಿ ಎಸ್.ಎಸ್.ಚವತ್ರಿಮಠ, ಗ್ರಾಪಂ …
Read More »ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ನಿರಂತರ ಪರಿಶ್ರಮ ಅಗತ್ಯ
ಗುರ್ಲಾಪುರ: ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ನಿರಂತರ ಪರಿಶ್ರಮ ಅಗತ್ಯ ಎಂದು ಭಗೀರಥ ಯುವತಿ ಮಂಡಲದ ಅಧ್ಯೆ ಕಸ್ತೂರಿ ಹೆಗ್ಗಾನಿ ಹೇಳಿದರು. ಗ್ರಾಮದಲ್ಲಿ ಕೇಂದ್ರ ಕ್ರೀಡಾ ಸಚಿವಾಲಯ, ಮೈ ಭಾರತ ಕೇಂದ್ರ, ಜೈ ಕರ್ನಾಟಕ ಅಂಗವಿಕಲರ ಗ್ರಾಮೀಣ ಅಭಿವೃದ್ಧಿ ಸಂ ಹಾಗೂ ಸಂಗೊಳ್ಳಿ ರಾಯಣ್ಣ ಕ್ರೀಡಾ ಯುವಕ ಸಂ ಹಾಗೂ ಮೈ ಭಾರತ ಯುವ ಮಂಡಳ ಸಂಯುಕ್ತಾಶ್ರಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ವಿಕಾಸ್ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಂಟನೆ ಜಿಲ್ಲಾಧ್ಯ ಸಿದ್ಧಣ್ಣ ದುರದುಂಡಿ ಮಾತನಾಡಿ, …
Read More »ರಾಜೀವ ಗಾಂಧಿ ಯೂನಿವರ್ಸಿಟಿಗೆ ಮೂರನೇ ರ್ಯಾಂಕ್ ಪಡೆದ ಡಾ.ಸ್ನೇಹಾ
ಬೈಲಹೊಂಗಲ: ನಗರದ ಕಡಬಿ ಗಲ್ಲಿಯ ಡಾ.ಸ್ನೇಹಾ ಮಲ್ಲಿಕಾರ್ಜುನ ಅಂಗಡಿ ಅವರು ಬೆಂಗಳೂರು ಮೆಡಿಕಲ್ ಕಾಲೇಜ್ ಮತ್ತು ರಿಸರ್ಚ್ ಇನ್ಸಿಟ್ಯೂಟ್ನಲ್ಲಿ ಎಂಸಿಎಚ್ ಪೀಡಿಯಾಟ್ರಿಕ್ ಸರ್ಜರಿ ಕೋರ್ಸ್ನಲ್ಲಿ ಉತ್ತಮ ಲಿತಾಂಶ ಪಡೆದು ರಾಜೀವ ಗಾಂಧಿ ಯೂನಿವರ್ಸಿಟಿಗೆ ಮೂರನೇ ರ್ಯಾಂಕ್ ಪಡೆದಿದ್ದಾರೆ. ತಂದೆ ಡಾ.ಮಲ್ಲಿಕಾರ್ಜುನ ಅಂಗಡಿ ಹಾಗೂ ತಾಯಿ ಡಾ.ವಿದ್ಯಾ ದುಗಾನಿ ಕಳೆದ 45 ವರ್ಷಗಳಿಂದ ಆರೋಗ್ಯ ಸೇವೆ ನೀಡುತ್ತಿದ್ದಾರೆ.
Read More »ಮುರಗೋಡ ದುರ್ಗಾದೇವಿ ಜಾತ್ರಾ ಮಹೋತ್ಸವ ಆರಂಭ
ಮುರಗೋಡ: ಗ್ರಾಮದ ದುರ್ಗಾದೇವಿ ಜಾತ್ರಾ ಮಹೋತ್ಸವ ಆರಂಭಗೊಂಡಿದ್ದು, ಮಾ.30ರವರೆಗೆ ಜರುಗಲಿದೆ. ದುರ್ಗಾದೇವಿಯ ದ್ವಾರ ಬಾಗಿಲು ಪೂಜೆ ನೆರವೇರಿಸುವ ಮೂಲಕ ಜಾತ್ರೆಗೆ ಚಾಲನೆ ನೀಡಲಾಯಿತು. ಮಾ.25ರಂದು ಬಸವೇಶ್ವರ ದೇವರಿಗೆ ವಿಶೇಷ ಪೂಜೆ, ಅಭಿಷೇಕ ಹಾಗೂ ಮಹಾಮಂಗಳಾರತಿ ನೆರವೇರಿಸಲಾಗುವುದು. ಮಾ.26ರಂದು ವಿವಿಧ ಕಲಾ ಹಾಗೂ ಭಜನಾ ತಂಡದಿಂದ ಭಜನೆ ಜಾಗರಣೆ ಕಾರ್ಯಕ್ರಮ ಜರುಗಲಿದೆ. ಮಾ.27ರಂದು ಬೆಳಗ್ಗೆ ದುರ್ಗಾದೇವಿಗೆ ಅಭಿಷೇಕ, ಸಹಸ್ರ ಬಿಲ್ವಾರ್ಚನೆ ಹಾಗೂ ಮಹಾಮಂಗಳಾರತಿ ಸಲ್ಲಿಸಲಾಗುವುದು. ಸಂಜೆ 5 ಗಂಟೆಗೆ ವಿವಿಧ ವಾದ್ಯ …
Read More »ಜಿಲ್ಲೆಯಾದ್ಯಂತ ಪೆಟ್ರೋಲ್, ಡಿಸೆಲ್, ಅಡುಗೆ ಅನಿಲ ಸಮಸ್ಯೆ ಇಲ್ಲ
ಜಿಲ್ಲೆಯಾದ್ಯಂತ ಪೆಟ್ರೋಲ್, ಡಿಸೆಲ್, ಅಡುಗೆ ಅನಿಲ (ಗ್ಯಾಸ್ ಸಿಲೆಂಡರ್) ಸಮಸ್ಯೆ ಇಲ್ಲ. ಮನೆ, ಅಂಗಡಿಯಲ್ಲಿ ಅಕ್ರಮವಾಗಿ ಪೆಟ್ರೋಲ್ ಸಂಗ್ರಹಿಸಿಕೊಳ್ಳುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಮೊಹಮ್ಮ ರೋಷನ್ ಎಚ್ಚರಿಸಿದರು. ನಗರದ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೆಟ್ರೋಲ್, ಡಿಸೆಲ್, ಸಿಲೆಂಡರ್ ಅಭಾವ ಎಂದು ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ವದಂತಿ ಹಬ್ಬಿಸುವವರ ವಿರುದ್ಧ ಕೇಸ್ ದಾಖಲಿಸಲು ಸೂಚಿಸಲಾಗಿದೆ. ಹೀಗಾಗಿ ಜನಸಾಮಾನ್ಯರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. …
Read More »
Laxmi News 24×7