Breaking News

Yearly Archives: 2026

ಗೃಹ ಸಚಿವರೇ ಅಸಹಾಯಕರಾಗಿದ್ದಾರೆ: ಅಕ್ರಮ ಮರಳು ಸಾಗಣೆಗೆ ಹೈಕೋರ್ಟ್ ತೀವ್ರ ಕಳವಳ, ಸರ್ಕಾರಕ್ಕೆ ನೋಟಿಸ್

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಸಾಗಣೆ ಪ್ರಕರಣಗಳ ಬಗ್ಗೆ ಕರ್ನಾಟಕ ಹೈಕೋರ್ಟ್  ಗಂಭೀರ ಕಳವಳ ವ್ಯಕ್ತಪಡಿಸಿದೆ. ಈ ವಿಚಾರದಲ್ಲಿ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ  ದಾಖಲಿಸಿಕೊಂಡಿರುವ ಹೈಕೋರ್ಟ್, ಅಕ್ರಮ ಮರಳು ಗಣಿಗಾರಿಕೆನಿಯಂತ್ರಣಕ್ಕೆ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದೆ. ವಿಧಾನಸಭೆಯಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ನೀಡಿದ್ದ ಹೇಳಿಕೆಯನ್ನು ಉಲ್ಲೇಖಿಸಿದ ನ್ಯಾಯಾಲಯ, ‘ಅಕ್ರಮ ಮರಳು ಸಾಗಣೆಯನ್ನು ತಡೆಯಲು ಗೃಹ ಸಚಿವರೇ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ ಎಂದರೆ …

Read More »

ಅನುಮಾನಾಸ್ಪದ ವಸ್ತು ಸ್ಫೋಟ – ಬಾಲಕ ಸೇರಿ ಮೂವರ ಸ್ಥಿತಿ ಗಂಭೀರ

ಬೀದರ್: ಅನುಮಾನಾಸ್ಪದ ವಸ್ತುವೊಂದು ಸ್ಫೋಟಗೊಂಡು ಓರ್ವ ಬಾಲಕ ಹಾಗೂ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಹುಮ್ನಾಬಾದ್ ತಾಲೂಕಿನ ಮೋಳಕೇರಾ ಗ್ರಾಮದಲ್ಲಿ ನಡೆದಿದೆ. ಮೂವರ ಮುಖ, ಮೈ, ಕೈ ಸುಟ್ಟಿದ್ದು ಎಲ್ಲರನ್ನೂ ಬ್ರೀಮ್ಸ್ ಆಸ್ಪತ್ರೆ ದಾಖಲಿಸಲಾಗಿದೆ. ಅನ್ವರ್ ಪಷಾ ಎಂಬ ಯುವಕನ ಸ್ಥಿತಿ ಗಂಭೀರವಾಗಿದ್ದು, ಆತನನ್ನು ಹೆಚ್ಚಿನ ಚಿಕಿತ್ಸೆಗೆ ಹೈದ್ರಾಬಾದ್‌ಗೆ ರವಾನೆ ಮಾಡಲಾಗಿದೆ. ವಸ್ತು ಬ್ಲಾಸ್ಟ್‌ ಆದಾಗ ಪಕ್ಕದಲ್ಲೇ ಆರು ಜನ ಮಕ್ಕಳು ಮತ್ತು ಇಬ್ಬರು ಯುವರು ನಿಂತಿದ್ದರು ಎಂದು ತಿಳಿದು …

Read More »

40,000 ರೂ. ಲಂಚ ಪಡೆಯುವಾಗ ರೆಡ್‌ಹ್ಯಾಂಡಾಗಿ ‘ಲೋಕಾ’ ಬಲೆಗೆ ಬಿದ್ದ ಪಿಎಸ್‌ಐ

ತುಮಕೂರು: ಪ್ರಕರಣವೊಂದರಲ್ಲಿ ವಶಪಡಿಸಿಕೊಂಡಿದ್ದ ವಾಹನ ಬಿಡುಗಡೆ ಮಾಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ತುಮಕೂರು ಗ್ರಾಮಾಂತರ ಪಿಎಸ್‌ಐ  ಚೇತನ್ ಕುಮಾರ್ ಲೋಕಾಯುಕ್ತ  ಬಲೆಗೆ ಬಿದ್ದಿದ್ದಾರೆ. ಬೆಂಗಳೂರು ಮೂಲದ ವಕೀಲರ ವಾಹನ ಇದಾಗಿದ್ದು, ವಾಹನ ಬಿಡುಗಡೆಗೆ 1 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ನಿನ್ನೆ ರಾತ್ರಿ 11:30 ರ ಸುಮಾರಿಗೆ ಕ್ಯಾತಸಂದ್ರ ಬಳಿಯ ನಮಸ್ತೆ ತುಮಕೂರು ಹೋಟೆಲ್‌ನಲ್ಲಿ 40 ಸಾವಿರ ರೂ. ಲಂಚ ಪಡದುಕೊಳ್ಳುತ್ತಿದ್ದಾಗ ಪಿಎಸ್‌ಐ ಚೇತನ್ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಇನಾOಗೋವನಕೊಪ್ಪ ಗ್ರಾಮದ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ …

Read More »

ನಟ ಯಶ್‌ ತಾಯಿ ಹಾಸನ ಸೈಟ್‌ ಜಟಾಪಟಿ – ಕಾಂಪೌಂಡ್‌ ಕೆಡವಿದ್ದ ಮಾಲೀಕನ ಜೊತೆ ವಾಗ್ವಾದ

ಹಾಸನ: ರಾಕಿಂಗ್ ಸ್ಟಾರ್ ಯಶ್  ತಾಯಿ ಮನೆ ಸಮೀಪದ ನಿವೇಶನ ಮಾಲೀಕತ್ವ‌ ಜಟಾಪಟಿ ಮತ್ತೆ ಸುದ್ದಿಯಾಗಿದೆ. ಯಶ್‌ ತಾಯಿ ಮನೆ ಬಳಿಯ ಕಾಂಪೌಂಡ್‌ ಕೆಡವಿಸಿದ್ದ ಮಾಲೀಕನ ಜೊತೆ ಪುಷ್ಪಾ ಅರುಣ್‌ಕುಮಾರ್‌  ವಾಗ್ವಾದ ನಡೆಸಿದ್ದಾರೆ. ಸೈಟ್ ಬಳಿ ಆಗಮಿಸಿರುವ ಯಶ್ ತಾಯಿ ಪುಷ್ಪಾ ಕಾಂಪೌಂಡ್‌ ನಿರ್ಮಾಣಕ್ಕೆ ಮುಂದಾಗಿದ್ದರು. ಇದೇ ವೇಳೆ ಸೈಟ್ ಬಳಿ ದೇವರಾಜು ಆಗಮಿಸಿದ್ದಾರೆ. ದೇವರಾಜು ಅವರಿಗೆ ದಾಖಲೆಗಳನ್ನು ತೋರಿಸು ಎಂದ ಪುಷ್ಪಾ ಅವರು ಕೇಳಿದ್ದಾರೆ. ಈ ವೇಳೆ ಇಬ್ಬರ …

Read More »

ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲ: ಮೈಸೂರಲ್ಲಿ ದಾಳಿ ಬೆನ್ನಲ್ಲೇ ಅಶೋಕ್ ವಾಗ್ದಾಳಿ

ಬೆಂಗಳೂರು: ಮೈಸೂರಿನಲ್ಲಿ ಗುಪ್ತವಾಗಿ ಡ್ರಗ್ಸ್ ತಯಾರಿಸುತ್ತಿದ್ದ ಘಟಕವನ್ನು ದೆಹಲಿ ಎನ್​​ಸಿಬಿ ಪತ್ತೆ ಮಾಡಿರುವ ಬೆನ್ನಲ್ಲೇ ಕರ್ನಾಟಕ ಕಾಂಗ್ರೆಸ್  ಸರ್ಕಾರದ ವಿರುದ್ಧ ಪ್ರತಿಪಕ್ಷ ನಾಯಕ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಗೃಹ ಸಚಿವ ಡಾ. ಜಿ ಪರಮೇಶ್ವರ ಮಾತ್ರ, ಮೈಸೂರಿನಲ್ಲಿ ಪತ್ತೆಯಾಗಿರುವುದು ಫಿನಾಯಿಲ್ ಫ್ಯಾಕ್ಟರಿ. ಅಲ್ಲಿ ಡ್ರಗ್ಸ್ ತಯಾರು ಮಾಡುವ ಯಾವುದೇ ವಸ್ತುಗಳು ಸಿಕ್ಕಿಲ್ಲ ಎಂದು ಸಮರ್ಥನೆ ಮಾಡಿಕೊಂಡಿದ್ದರು. ಈ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಾಮಾಜಕ ಮಾಧ್ಯಮ ಎಕ್ಸ್​ನಲ್ಲಿ ಆಕ್ರೋಶ ವ್ಯಕ್ತಪಡಿಸಿರುವ …

Read More »

ಅನುಮಾನಾಸ್ಪದ ರೀತಿಯಲ್ಲಿ 4 ಮಂದಿ ಕೂಲಿ ಕಾರ್ಮಿಕರು ಸಾವು

ಬೆಂಗಳೂರು ಗ್ರಾಮಾಂತರ: ಅನುಮಾನಾಸ್ಪದ ರೀತಿಯಲ್ಲಿ ನಾಲ್ವರು ಕೂಲಿ ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಹೊಸಕೋಟೆ  ತಾಲೂಕಿನ ಮುತ್ಸಂದ್ರ ಗ್ರಾಮದಲ್ಲಿ ನಡೆದಿದೆ. ರೂಮ್‌ನಲ್ಲಿ ನಾಲ್ವರು ಸಹ ಮಲಗಿದ್ದಂತೆಯೇ ಮೃತಪಟ್ಟಿದ್ದಾರೆ. ಮುತ್ಸಂದ್ರ ಗ್ರಾಮದ ಛೋಟಾಸಾಬ್ ಎನ್ನುವವರಿಗೆ ಸೇರಿದ ಲೇಬರ್ ಶೆಡ್‌ನಲ್ಲಿ ದುರ್ಘಟನೆ ಸಂಭವಿಸಿದೆ. ಮೃತರು ಅಸ್ಸಾಂ ರಾಜ್ಯದ ಮೂಲದವರು. ಕೋಕಾಕೋಲಾ ವೇರ್‌ಹೌಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಸೂಲಿಬೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಲ್ಕು ಜನರ ಸಾವಿಗೆ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. …

Read More »

40,000 ಕೋಟಿ ವಂಚನೆ; RCOM ಮಾಜಿ ಅಧ್ಯಕ್ಷನ ಬಂಧಿಸಿದ ಇ.ಡಿ

ನವದೆಹಲಿ: 40 ಸಾವಿರ ಕೋಟಿ ರೂ. ಬ್ಯಾಂಕ್‌ ವಂಚನೆ ಪ್ರಕರಣದಲ್ಲಿ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್‌ನ  ಮಾಜಿ ಅಧ್ಯಕ್ಷ ಪುನೀತ್‌ ಗಾರ್ಗ್‌  ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಆಗಸ್ಟ್ 21 ರಂದು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120-ಬಿ (ಕ್ರಿಮಿನಲ್ ಪಿತೂರಿ), 406 (ಕ್ರಿಮಿನಲ್ ನಂಬಿಕೆ ಉಲ್ಲಂಘನೆ), ಮತ್ತು 420 (ವಂಚನೆ) ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಅಪರಾಧಗಳನ್ನು ಆರೋಪಿಸಿ ಸಿಬಿಐ ಎಫ್‌ಐಆರ್ ದಾಖಲಿಸಿತ್ತು. ಪುನೀತ್ ಗಾರ್ಗ್ ಅವರು ಆರ್‌ಸಿಒಎಂ …

Read More »

ಉದ್ಯಮಿ ಸಿಜೆ ರಾಯ್ ಮೊಬೈಲ್‌ನಲ್ಲಿದ್ಯಾ ಡೆತ್ ಸೀಕ್ರೆಟ್ – ರಿಕವರಿಗಾಗಿ ಸಿಐಡಿ ಸೈಬರ್ ಸೆಲ್‌ಗೆ ರವಾನೆ

ಬೆಂಗಳೂರು: ಉದ್ಯಮಿ ಸಿಜೆ ರಾಯ್  ಆತ್ಮಹತ್ಯೆಗೂ ಮುನ್ನ ಯಾರ ಜೊತೆಯಾದ್ರೂ ಮಾತನಾಡಿದ್ರಾ? ಅಥವಾ ಯಾರಿಗಾದರೂ ಮೆಸೇಜ್ ಕಳುಹಿಸಿದ್ರಾ? ಎಂದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಮೊಬೈಲ್‌ನ್ನು ಸಿಐಟಿ ಸೈಬರ್ ಸೆಲ್‌ಗೆ ರಿಕವರಿಗಾಗಿ ಕಳುಹಿಸಿದ್ದಾರೆ. ಕಾನ್ಫಿಡೆಂಟ್ ಗ್ರೂಪ್ ಮ್ಯಾನೇಜಿಂಗ್ ಡೈರೆಕ್ಟರ್ ದೂರಿನಲ್ಲಿ ತಿಳಿಸಿರುವಂತೆ ಆತ್ಮಹತ್ಯೆಗೂ ಮುನ್ನ ತಾಯಿ ಜೊತೆ ಮಾತನಾಡಬೇಕೆಂದು ರಾಯ್ ತಿಳಿಸಿದ್ದರು. ಜೊತೆಗೆ ಗನ್‌ಮ್ಯಾನ್ ಬಳಿ ಯಾರಿಗೂ ಒಳಗೆ ಬಿಡದಂತೆ ಹೇಳಿದ್ದರು. ಅದರಂತೆ ಆತ್ಮಹತ್ಯೆಗೂ ಮುನ್ನ ನಿಜಕ್ಕೂ ತಾಯಿ ಜೊತೆಗೆ ಮಾತನಾಡಿದ್ರಾ? …

Read More »

ಸಿಎಂ, ಡಿಸಿಎಂ ಫೋಟೋ ತಿರುಚಿ ಅವಹೇಳನಕಾರಿ ಪೋಸ್ಟ್: ಬಿಜೆಪಿ ಕರ್ನಾಟಕದ ಎಕ್ಸ್ ಖಾತೆ ವಿರುದ್ಧ ದೂರು

ಬೆಂಗಳೂರು: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರ ಕುರಿತು ಸುಳ್ಳು ಹಾಗೂ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿರುವ ಆರೋಪದಡಿ ಕರ್ನಾಟಕ ಬಿಜೆಪಿಯ ಎಕ್ಸ್ ಖಾತೆ ವಿರುದ್ಧ ದೂರು ದಾಖಲಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೇಸ್ ಸಮಿತಿ (ಕೆಪಿಸಿಸಿ)ಯ ವಕೀಲರ ಘಟಕ ಸೈಬರ್ ಕ್ರೈಂ ಠಾಣೆಗೆ ದೂರು ನೀಡಿದ್ದು ಎನ್‌ಸಿಆರ್ (ಗಂಭೀರವಲ್ಲದ) ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಿಜೆಪಿ ಕರ್ನಾಟಕ ಎಕ್ಸ್ ಖಾತೆಯಲ್ಲಿ ಜನವರಿ 29ರಂದು “ಕರ್ನಾಟಕವನ್ನು ಹಗಲಿರುಳು ಲೂಟಿ ಹೊಡೆಯುತ್ತಿರುವ ಸ್ಕ್ಯಾಮ್ …

Read More »