ಬೆಂಗಳೂರು: 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ಕೊಟ್ಟಿದ್ದಾರೆ. ವಿಧಾನಸೌಧದಲ್ಲಿ ನಡೆದ ಚಲನಚಿತ್ರೋತ್ಸವವನ್ನು ದೀಪ ಬೆಳಗುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಸಾಂಪ್ರದಾಯಿಕವಾಗಿ ಚಾಲನೆ ನೀಡಿದರು. ಇದೇ ವೇಳೆ ಚಲನಚಿತ್ರೋತ್ಸವದ ರಾಯಭಾರಿ ಪ್ರಕಾಶ್ ರಾಜ್ ಅವರು ಥೀಮ್ ಬಿಡುಗಡೆ ಮಾಡಿದರು. `ಸ್ತ್ರೀ ಎಂದರೆ ಅಷ್ಟೇ ಸಾಕೇ’ ಎಂಬ ಧ್ಯೇಯ ವಾಕ್ಯದೊಂದಿಗೆ ಚಿತ್ರೋತ್ಸವ ಪ್ರಾರಂಭವಾಗಿದೆ. ನಾಳೆಯಿಂದ ಚಲನಚಿತ್ರ ಪ್ರದರ್ಶನ ಆರಂಭವಾಗಲಿದ್ದು, ಫೆ.6ರವರೆಗೆ 65 ದೇಶಗಳ 225 ಚಿತ್ರಗಳು ಪ್ರದರ್ಶನವಾಗಲಿವೆ. …
Read More »Yearly Archives: 2026
ಜಿ ರಾಮ್ ಜಿ ಕಾಯ್ದೆ ಮೂಲಕ ಮಹಾತ್ಮ ಗಾಂಧಿ, ಕಾರ್ಮಿಕರ ಬದುಕಿನ ಹತ್ಯೆ: ಡಿಕೆಶಿ
ಬೆಂಗಳೂರು: ಕೇಂದ್ರ ಬಿಜೆಪಿ ಸರ್ಕಾರ ಜಿ ರಾಮ್ ಜಿ ನೂತನ ಕಾಯ್ದೆ ಮೂಲಕ ಮಹಾತ್ಮ ಗಾಂಧಿ ಹಾಗೂ ಕಾರ್ಮಿಕರ ಬದುಕನ್ನು ಸಾಯಿಸುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಜಿಲ್ಲೆಯ ಸರ್ಕಿಟ್ ಹೌಸ್‌ನಲ್ಲಿ ಮಾಧ್ಯಮಗಳ ಜೊತೆ ಮನರೇಗಾ ವಿಚಾರದ ಬಗ್ಗೆ ಮಾತನಾಡಿದ ಅವರು, ಖಂಡಿತವಾಗಿ ಮನರೇಗಾ ವಿಚಾರದಲ್ಲಿ ನಮ್ಮ ಹೋರಾಟ ಮುಂದುವರಿಯಲಿದೆ. ರೈತರ ವಿಚಾರದಲ್ಲಿ ಕಾಯ್ದೆಗಳನ್ನು ಯಾವ ರೀತಿ ಹಿಂಪಡೆದರೋ ಅದೇ ರೀತಿ ಇದನ್ನು ಹಿಂಪಡೆಯಬೇಕು. 6-7 ಸಾವಿರ ಕೋಟಿ …
Read More »ಕರ್ನಾಟಕ ಪೊಲೀಸರಿಗೆ ರಜೆ ಭಾಗ್ಯ – ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ
ಬೆಂಗಳೂರು: ಸಾರ್ವಜನಿಕರ ಸುರಕ್ಷತೆಗಾಗಿ ಸದಾ ಕಠಿಣ ಪರಿಸ್ಥಿತಿಗಳಲ್ಲಿ ಕೆಲಸ ನಿರ್ವಹಿಸುವ ರಾಜ್ಯ ಪೊಲೀಸ್ ಸಿಬ್ಬಂದಿಗೆ ರಾಜ್ಯ ಪೊಲೀಸ್ ಇಲಾಖೆ ಕುಟುಂಬದೊಂದಿಗೆ ಸಂತಸದ ಸಮಯ ಕಳೆಯಲು ರಜೆ ಭಾಗ್ಯ ಕಲ್ಪಿಸಿದೆ. ಹೌದು. ಕರ್ನಾಟಕ ಪೊಲೀಸ್ ಸಿಬ್ಬಂದಿಗೆ ತಮ್ಮ ಹುಟ್ಟುಹಬ್ಬ ಹಾಗೂ ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ನೀಡುವಂತೆ ಆದೇಶ ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುವ ಸಿಬ್ಬಂದಿ ತಮ್ಮ ಹುಟ್ಟುಹಬ್ಬ ಮತ್ತು …
Read More »ಯಳ್ಳೂರ ಗ್ರಾಮದ ವಿವಿಧ ಸಂಘಟನೆಗಳಿಂದ ಡಾ. ಪ್ರಭಾಕರ್ ಕೋರೆ ಅವರಿಗೆ ಅಭಿನಂದನಾ ಸನ್ಮಾನ
ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ್ ಕೋರೆ ಅವರಿಗೆ ‘ಪದ್ಮಶ್ರೀ’ ಪುರಸ್ಕಾರ ಲಭಿಸಿದ ಹಿನ್ನೆಲೆಯಲ್ಲಿ, ಯಳ್ಳೂರ ಗ್ರಾಮದ ವಿವಿಧ ಸಂಘಟನೆಗಳ ವತಿಯಿಂದ ಅವರಿಗೆ ಆತ್ಮೀಯ ಸನ್ಮಾನ ಹಮ್ಮಿಕೊಳ್ಳಲಾಗಿತ್ತು. ಗ್ರಾಮದ ಮುಖಂಡರು ಕೋರೆ ಅವರ ನಿವಾಸಕ್ಕೆ ತೆರಳಿ ಗೌರವ ಸಲ್ಲಿಸಿದರು. ಸಾಹಿತ್ಯ, ಶಿಕ್ಷಣ ಹಾಗೂ ಸಮಾಜಸೇವೆಯಲ್ಲಿ ಗಣನೀಯ ಸಾಧನೆ ಮಾಡಿರುವ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ್ ಕೋರೆ ಅವರಿಗೆ ದೇಶದ ಪ್ರತಿಷ್ಠಿತ ‘ಪದ್ಮಶ್ರೀ’ ಪ್ರಶಸ್ತಿ ಘೋಷಣೆಯಾದ ಹಿನ್ನೆಲೆಯಲ್ಲಿ, ಯಳ್ಳೂರ …
Read More »ಸರ್ಕಾರದಿಂದ ಮಹತ್ವದ ಆದೇಶ: ಕರ್ನಾಟಕ ನೌಕರರು ಈ ಬಟ್ಟೆ ಧರಿಸುವುದು ಕಡ್ಡಾಯ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ಬಟ್ಟೆ ಬಳಕೆ ಕಡ್ಡಾಯಗೊಳಿಸಲಾಗಿದೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಪ್ರತಿ ತಿಂಗಳ ಮೊದಲ ಶನಿವಾರ ಖಾದಿ ಬಟ್ಟೆ ಧರಿಸಲು ನಿರ್ಧರಿಸಲಾಗಿದೆ. ಏಪ್ರಿಲ್ 24ರಂದು ಈ ಯೋಜನೆಗೆ ಚಾಲನೆ ದೊರೆಯಲಿದೆ. ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ನಿಗಮ-ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಅನುದಾನಿತ ಸಂಸ್ಥೆಗಳ ಅಧಿಕಾರಿ, ನೌಕರರು ಸ್ವಯಂ …
Read More »ಜಲಜೀವನ್ ಮಿಷನ್‌ನಲ್ಲಿ ಅಕ್ರಮ – ತಾಂತ್ರಿಕ ಸಮಿತಿ ರಚಿಸಿ ತನಿಖೆಗೆ ಆಗ್ರಹಿಸಿದ ಗೋವಿಂದ ಕಾರಜೋಳ
ನವದೆಹಲಿ: ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿ ಕರ್ನಾಟಕದಲ್ಲಾಗಿರುವ ಅಕ್ರಮಗಳಿಗೆ ಸಂಬಂಧಿಸಿದಂತೆ ತಾಂತ್ರಿಕ ತಜ್ಞರ ಸಮಿತಿ ರಚಿಸಿ ತನಿಖೆ ನಡೆಸಬೇಕು ಎಂದು ಚಿತ್ರದುರ್ಗದ ಸಂಸದ ಗೋವಿಂದ ಕಾರಜೋಳ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಲೋಕಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು, ಜಲ ಜೀವನ್ ಮಿಷನ್‌ನಲ್ಲಿ ಕರ್ನಾಟಕದಲ್ಲಿ ಈವರೆಗೂ 169 ದೂರುಗಳು ಬಂದಿವೆ. ಈ ಸಂಬಂಧ ಮನವಿ ಮಾಡಿದರೂ ಅಕ್ರಮ ದೂರುಗಳ ಮೇಲೆ ಕರ್ನಾಟಕ ರಾಜ್ಯ ಸರ್ಕಾರ ಯಾವುದೇ ಕ್ರಮ …
Read More »ಗುತ್ತಿಗೆದಾರರಿಗೆ 38 ಸಾವಿರ ಕೋಟಿ ಬಾಕಿ, ಒಂದು ವಾರ ಕೆಲಸ ನಿಲ್ಲಿಸಿ ಪ್ರತಿಭಟನೆ: ಮಂಜುನಾಥ್ ಎಚ್ಚರಿಕೆ
ಬೆಂಗಳೂರು: ಗುತ್ತಿಗೆದಾರರಿಗೆ 38 ಸಾವಿರ ಕೋಟಿ ಬಾಕಿ ಇದೆ. ಸರ್ಕಾರ ನಮ್ಮ ಸಮಸ್ಯೆ ಬಗೆಹರಿಸಿಲ್ಲ. ಮಾ.5 ರಂದು ಬೃಹತ್ ಪ್ರತಿಭಟನೆ ಮಾಡ್ತಿದ್ದೇವೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಮಂಜುನಾಥ್ ತಿಳಿಸಿದರು. ಚಾಮರಾಜಪೇಟೆ ಕ್ಷೇತ್ರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗುತ್ತಿಗೆದಾರರಿಗೆ 38 ಸಾವಿರ ಕೋಟಿ ಬಾಕಿ ಇದೆ. ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಯಶಸ್ವಿಯಾಗಿ ಎರಡೂವರೆ ವರ್ಷ ಪೂರೈಸಿದ್ದಾರೆ. ಗುತ್ತಿಗೆದಾರರ ಸಮಸ್ಯೆಗಳನ್ನು ಬಗೆಹರಿಸಿಲ್ಲ. ಸಿಎಂಗೆ ಹಲವು ಬಾರಿ ಮನವಿ ಮಾಡಿದ್ರೂ …
Read More »ಮಹಿಳಾ ನೌಕರರಿಗೆ ಋತುಚಕ್ರ ರಜೆ ನೀಡಲು ಶಿಕ್ಷಣ ಇಲಾಖೆ ಆದೇಶ
ಬೆಂಗಳೂರು: ಸರ್ಕಾರದಿಂದ ಉದ್ಯೋಗಸ್ಥ ಮಹಿಯರಿಗೆ ಋತುಚಕ್ರ ರಜೆ ನೀಡಲು ಆದೇಶ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯಲ್ಲಿ ಕಡ್ಡಾಯವಾಗಿ ಋತುಚಕ್ರ ರಜೆ ನೀಡುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಶಾಲಾ ಶಿಕ್ಷಣ ಇಲಾಖೆ ಆಯುಕ್ತರಿಂದ ರಜೆ ನೀಡಲು ಆದೇಶ ಹೊರಡಿಸಿದ್ದು, ಋತುಚಕ್ರ ರಜೆಗೆ ಷರತ್ತು ವಿಧಿಸಲಾಗಿದೆ. ಷರತ್ತುಗಳೇನು? 1.ಮಹಿಳಾ ನೌಕರರು ಆಯಾ ತಿಂಗಳ ‘ಋತುಚಕ್ರ ರಜೆ’ಯನ್ನು ಆಯಾ ತಿಂಗಳಿನಲ್ಲಿಯೇ ಬಳಸಿಕೊಳ್ಳುವುದು. ಹಿಂದಿನ ತಿಂಗಳ ‘ಋತುಚಕ್ರ ರಜೆ’ಯನ್ನು ಮುಂದಿನ ತಿಂಗಳಿಗೆ ವಿಸ್ತರಿಸಲು ( ಅವಕಾಶವಿರುವುದಿಲ್ಲ. …
Read More »ಯುರೋಪಿಯನ್ ಒಕ್ಕೂಟದ ಜೊತೆಗೆ ಒಪ್ಪಂದ ಆತ್ಮವಿಶ್ವಾಸಿ ಭಾರತಕ್ಕೆ ಮೈಲುಗಲ್ಲು: ಮೋದಿ ಬಣ್ಣನೆ
ನವದೆಹಲಿ: ಭಾರತ-ಯುರೋಪಿಯನ್ ಯೂನಿಯನ್ ನಡುವೆ ಮುಕ್ತ ವಾಣಿಜ್ಯ ಒಪ್ಪಂದ ಜಾರಿಗೆ ಬಂದಿದ್ದು, ಇದು ‘ಆತ್ಮವಿಶ್ವಾಸಿ ಭಾರತಕ್ಕೆ ಮೈಲುಗಲ್ಲು’ ಎಂದು ಪ್ರಧಾನಿ ನರೇಂದ್ರ ಮೋದಿ ವರ್ಣಿಸಿದರು. ಭಾರತೀಯ ಉದ್ಯಮಗಳು ಈ ಅವಕಾಶವನ್ನು ಬಳಸಿಕೊಂಡು ಗುಣಮಟ್ಟದ ಉತ್ಪನ್ನಗಳನ್ನು ಯುರೋಪಿಯನ್ ಒಕ್ಕೂಟದ 27 ದೇಶಗಳಿಗೆ ಒದಗಿಸಬೇಕು ಎಂದು ಒತ್ತಾಯಿಸಿದರು. ಸಂಸತ್ತಿನ ಬಜೆಟ್ ಅಧಿವೇಶನದ ಎರಡನೇ ದಿನದಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಹೊಸ ಮಾರುಕಟ್ಟೆ ತೆರೆದಿದ್ದು, ಭಾರತೀಯ ಉತ್ಪನ್ನಗಳ ಗುಣಮಟ್ಟ ಮತ್ತು ‘ಬ್ರ್ಯಾಂಡ್ ಇಂಡಿಯಾ’ವನ್ನು …
Read More »ಅಮೆರಿಕ ಸುಂಕ ಹೇರಿದ್ರೂ ರಫ್ತು ಹೆಚ್ಚಳ, 11 ತಿಂಗಳಿಗೆ ಆಮದು ಮಾಡುವಷ್ಟು ವಿದೇಶಿ ವಿನಿಮಯ ಮೀಸಲು
ನವದೆಹಲಿ: 2027 ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆ 6.8%-7.2% ರಷ್ಟು ಬೆಳೆಯುವ ನಿರೀಕ್ಷೆಯಿದೆ ಎಂದು ಆರ್ಥಿಕ ಸಮೀಕ್ಷೆ ಹೇಳಿದೆ. ಫೆ.1 ರಂದು ಬಜೆಟ್ ಮಂಡನೆಯಾಗಲಿರುವ ಹಿನ್ನೆಲೆಯಲ್ಲಿ ಸಂಪ್ರದಾಯದಂತೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಲೋಕಸಭೆಯಲ್ಲಿ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದರು. ಆರ್ಥಿಕ ಸಮೀಕ್ಷೆಯಲ್ಲಿ ಏನಿದೆ? – ಜಾಗತಿಕ ವ್ಯಾಪಾರ ಅನಿಶ್ಚಿತತೆಯ ಹಿನ್ನೆಲೆಯಲ್ಲಿ, ಭಾರತದ ಒಟ್ಟು ರಫ್ತುಗಳು (ಸರಕು ಮತ್ತು ಸೇವೆಗಳು) 2025ರ ಹಣಕಾಸು ವರ್ಷದಲ್ಲಿ ದಾಖಲೆಯ 825.3 ಬಿಲಿಯನ್ ಡಾಲರ್‌ಗೆ …
Read More »
Laxmi News 24×7